- Home
- Sports
- Cricket
- ಇಂದು ಅಬ್ಬರಿಸಲು ರೆಡಿಯಾದ ವೈಭವ್ ಸೂರ್ಯವಂಶಿ; ಇವತ್ತಿನ ಮ್ಯಾಚ್ ರಾತ್ರಿ 10 ಗಂಟೆಗಲ್ಲ, ಈ ಸಮಯಕ್ಕೆ ಪಂದ್ಯ ಆರಂಭವಾಗುತ್ತೆ!
ಇಂದು ಅಬ್ಬರಿಸಲು ರೆಡಿಯಾದ ವೈಭವ್ ಸೂರ್ಯವಂಶಿ; ಇವತ್ತಿನ ಮ್ಯಾಚ್ ರಾತ್ರಿ 10 ಗಂಟೆಗಲ್ಲ, ಈ ಸಮಯಕ್ಕೆ ಪಂದ್ಯ ಆರಂಭವಾಗುತ್ತೆ!
ಸೌಥಾಂಪ್ಟನ್: ಭಾರತ ಹಾಗೂ ಇಂಗ್ಲೆಂಡ್ ನಡುವಿನ ಐದನೇ ಹಾಗೂ ಕೊನೆಯ ಟಿ20 ಪಂದ್ಯ ಆರಂಭಕ್ಕೆ ಕ್ಷಣಗಣನೆ ಶುರುವಾಗಿದೆ. ಕಳೆದ ಪಂದ್ಯದಂತೆ ಈ ಪಂದ್ಯವು ರಾತ್ರಿ 10 ಗಂಟೆಗೆ ಆರಂಭವಾಗುವುದಿಲ್ಲ. ಅಷ್ಟಕ್ಕೂ ಈ ಮ್ಯಾಚ್ ಎಷ್ಟು ಗಂಟೆಗೆ ಆರಂಭವಾಗುತ್ತೆ? ವೈಭವ್ ಸೂರ್ಯವಂಶಿ ಆಡ್ತಾರಾ ನೋಡೋಣ ಬನ್ನಿ.

ಇಂದು ಭಾರತ-ಇಂಗ್ಲೆಂಡ್ ಐದನೇ ಟಿ20 ಮ್ಯಾಚ್:
ಇಂಗ್ಲೆಂಡ್ ವಿರುದ್ಧ ಈಗಾಗಲೇ ಸರಣಿ ಕಳೆದುಕೊಂಡಿರುವ ಭಾರತ ಶನಿವಾರ 5ನೇ ಹಾಗೂ ಕೊನೆ ಟಿ20 ಪಂದ್ಯದಲ್ಲಿ ಕಣಕ್ಕಿಳಿಯಲಿದೆ. ಶ್ರೇಯಸ್ ಅಯ್ಯರ್ ನಾಯಕತ್ವದ ತಂಡ ವೈಟ್‌ವಾಶ್‌ನಿಂದ ಪಾರಾಗಲು ಹೋರಾಡಬೇಕಿದೆ. ಸದ್ಯ ಆತಿಥೇಯ ಇಂಗ್ಲೆಂಡ್ ತಂಡವು 5 ಪಂದ್ಯಗಳ ಸರಣಿಯಲ್ಲಿ 3-0 ಮುನ್ನಡೆ ಸಾಧಿಸಿದೆ. ಮೊದಲ ಟಿ20 ಪಂದ್ಯವು ಮಳೆಯಿಂದ ರದ್ದಾಗಿತ್ತು.
ನಂ.1 ಸ್ಥಾನ ಕಳೆದುಕೊಳ್ಳುವ ಭೀತಿಯಲ್ಲಿ ಟೀಂ ಇಂಡಿಯಾ!
ಒಂದು ವೇಳೆ ಇಂದಿನ ಪಂದ್ಯವನ್ನೂ ಸೋತರೇ, ಸೋತರೆ ಐರ್ಲೆಂಡ್, ಇಂಗ್ಲೆಂಡ್‌ನ ಒಟ್ಟು 7 ಪಂದ್ಯಗಳಲ್ಲಿ ಒಂದೂ ಗೆಲುವಿಲ್ಲದೆ ತವರಿಗೆ ಮರಳುವುದರ ಜೊತೆಗೆ ವಿಶ್ವ ರ್‍ಯಾಂಕಿಂಗ್‌ನಲ್ಲಿ ಅಗ್ರಸ್ಥಾನವನ್ನು ಕಳೆದುಕೊಳ್ಳಲಿದೆ. ಅಲ್ಲದೆ, ಇಂಗ್ಲೆಂಡ್ ತಂಡ ಭಾರತವನ್ನು ಹಿಂದಿಕ್ಕಿ ನಂ.1 ಸ್ಥಾನಕ್ಕೇರಲಿದೆ. ಸದ್ಯ ಭಾರತ 269, ಇಂಗ್ಲೆಂಡ್ 267 ರೇಟಿಂಗ್ ಅಂಕ ಹೊಂದಿದೆ. ಆಸ್ಟ್ರೇಲಿಯಾ 260 ರೇಟಿಂಗ್ ಅಂಕದೊಂದಿಗೆ 3ನೇ ಸ್ಥಾನದಲ್ಲಿದೆ.
ಮೊದಲ ಗೆಲುವಿನ ನಿರೀಕ್ಷೆಯಲ್ಲಿ ಶ್ರೇಯಸ್ ಅಯ್ಯರ್ ಪಡೆ
ಭಾರತ ತಂಡವು ಶ್ರೇಯಸ್ ಅಯ್ಯರ್ ನಾಯಕತ್ವದಲ್ಲಿ ಮೊದಲ ಟಿ20 ಗೆಲುವಿನ ನಿರೀಕ್ಷೆಯಲ್ಲಿದೆ. ಇನ್ನೊಂದೆಡೆ ಇಂಗ್ಲೆಂಡ್ ತಂಡವು ಟಿ20 ಸರಣಿಯನ್ನು ಕ್ಲೀನ್‌ಸ್ವೀಪ್ ಮಾಡಲು ತುದಿಗಾಲಿನಲ್ಲಿ ನಿಂತಿದೆ. ಹೀಗಾಗಿ ಇಂದಿನ ಮ್ಯಾಚ್ ಸಾಕಷ್ಟು ಪೈಪೋಟಿಯಿಂದ ಕೂಡಿರುವ ನಿರೀಕ್ಷೆಯಿದೆ.
ಎಲ್ಲರ ಕಣ್ಣು ವೈಭವ್ ಸೂರ್ಯವಂಶಿ ಮೇಲೆ:
15 ವರ್ಷದ ವೈಭವ್ ಸೂರ್ಯವಂಶಿ, ಇಂಗ್ಲೆಂಡ್ ಎದುರು ಆಡಿದ ಮೊದಲ ಮೂರು ಪಂದ್ಯಗಳಲ್ಲಿ ದೊಡ್ಡ ಮೊತ್ತ ಕಲೆಹಾಕಲು ವಿಫಲವಾಗಿದ್ದರು. 3 ಪಂದ್ಯಗಳಿಂದ ವೈಭವ್ ಕೇವಲ 42 ರನ್ ಗಳಿಸಲಷ್ಟೇ ಶಕ್ತರಾಗಿದ್ದರು. 15 ರನ್ ಗಳಿಸಿದ್ದೇ ವೈಭವ್ ಅವರ ಈವರೆಗಿನ ಗರಿಷ್ಠ ಸ್ಕೋರ್ ಎನಿಸಿಕೊಂಡಿದೆ. ಇದೀಗ ಇಂಗ್ಲೆಂಡ್ ಎದುರಿನ ಕೊನೆಯ ಟಿ20 ಪಂದ್ಯದಲ್ಲಾದರೂ ವೈಭವ್ ಸೂರ್ಯವಂಶಿ ಅಬ್ಬರಿಸುತ್ತಾರಾ ಎನ್ನುವ ಕುತೂಹಲ ಅಭಿಮಾನಿಗಳಲ್ಲಿ ಜೋರಾಗಿದೆ.
ಪಂದ್ಯದ ಸಮಯ ಬದಲು:
ಇಂಗ್ಲೆಂಡ್ ಎದುರಿನ ಮೂರನೇ ಹಾಗೂ ನಾಲ್ಕನೇ ಟಿ20 ಪಂದ್ಯವು ಭಾರತೀಯ ಕಾಲಮಾನ ರಾತ್ರಿ 10 ಗಂಟೆಗೆ ಆರಂಭವಾಗಿತ್ತು. ಇದೀಗ ಇಂದು ಸೌಥಾಂಪ್ಟನ್‌ನಲ್ಲಿ ನಡೆಯಲಿರುವ ಐದನೇ ಹಾಗೂ ಕೊನೆಯ ಟಿ20 ಪಂದ್ಯವು ಭಾರತೀಯ ಕಾಲಮಾನ 7 ಗಂಟೆಗೆ ಸರಿಯಾಗಿ ಆರಂಭವಾಗಲಿದೆ. ಇದಕ್ಕೂ ಅರ್ಧ ಗಂಟೆ ಮುಂಚಿತವಾಗಿ ಅಂದರೆ 6.30ಕ್ಕೆ ಟಾಸ್ ಪ್ರಕ್ರಿಯೆ ನಡೆಯಲಿದೆ.
ಭಾರತ-ಇಂಗ್ಲೆಂಡ್ ಐದನೇ ಟಿ20 ಮ್ಯಾಚ್ ಎಲ್ಲಿ ವೀಕ್ಷಿಸಬಹುದು?
ಭಾರತ ಹಾಗೂ ಇಂಗ್ಲೆಂಡ್ ನಡುವಿನ ಐದನೇ ಹಾಗೂ ಕೊನೆಯ ಟಿ20 ಪಂದ್ಯವನ್ನು ಭಾರತದಲ್ಲಿ ಸೋನಿ ಸ್ಪೋರ್ಟ್ಸ್ ನೆಟ್‌ವರ್ಕ್‌ನಲ್ಲಿ ವೀಕ್ಷಿಸಬಹುದಾಗಿದೆ. ಇದಷ್ಟೇ ಅಲ್ಲದೇ ಮೊಬೈಲ್‌ನಲ್ಲಿ ಜಿಯೋ ಹಾಟ್‌ಸ್ಟಾರ್‌ನಲ್ಲಿಯೂ ವೀಕ್ಷಿಸಬಹುದಾಗಿದೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

