ಭಾರತ-ಇಂಗ್ಲೆಂಡ್ ಟಿ20 ಸರಣಿ: ಟಿವಿ, ಮೊಬೈಲ್‌ನಲ್ಲಿ ಎಲ್ಲಿ ನೋಡ್ಬೋದ್?
ಭಾರತ-ಇಂಗ್ಲೆಂಡ್ ನಡುವಿನ ಟಿ20 ಸರಣಿ ನಾಳೆ ಆರಂಭವಾಗುತ್ತಿದೆ. ಪಂದ್ಯಗಳು ಯಾವಾಗ ಶುರು, ಯಾವ ಟಿವಿಯಲ್ಲಿ ನೋಡಬಹುದು ಅನ್ನೋ ಸಂಪೂರ್ಣ ಮಾಹಿತಿ ಇಲ್ಲಿದೆ.

Team India
ಆಸ್ಟ್ರೇಲಿಯಾ ಪ್ರವಾಸದಲ್ಲಿ 5 ಟೆಸ್ಟ್ ಪಂದ್ಯಗಳ ಸರಣಿಯಲ್ಲಿ ಆಡಿದ ಭಾರತ ತಂಡ ಕೇವಲ ಒಂದು ಪಂದ್ಯದಲ್ಲಿ ಮಾತ್ರ ಗೆಲುವು ಸಾಧಿಸಿ, 3 ಪಂದ್ಯಗಳಲ್ಲಿ ಸೋಲು ಕಂಡಿತು. ಒಂದು ಪಂದ್ಯ ಡ್ರಾ ಆಯಿತು. ತಂಡದ ಸೋಲಿಗೆ ಕಾರಣರಾದ ನಾಯಕ ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ ಮತ್ತು ಕೋಚ್ ಗೌತಮ್ ಗಂಭೀರ್ ವಿರುದ್ಧ ತೀವ್ರ ಟೀಕೆಗಳು ವ್ಯಕ್ತವಾಗಿವೆ.
ಭಾರತ ಇಂಗ್ಲೆಂಡ್ ಟಿ20 ಸರಣಿ
ಮುಂದಿನ ತಿಂಗಳು 'ಮಿನಿ ವಿಶ್ವಕಪ್' ಎಂದೇ ಕರೆಯಲ್ಪಡುವ ಚಾಂಪಿಯನ್ಸ್ ಟ್ರೋಫಿ ಆರಂಭವಾಗಲಿದೆ. ಅದಕ್ಕೂ ಮುನ್ನ ಭಾರತ ತಂಡ ತವರಿನಲ್ಲಿ ಇಂಗ್ಲೆಂಡ್ ವಿರುದ್ಧ 5 ಟಿ20 ಮತ್ತು 3 ಏಕದಿನ ಪಂದ್ಯಗಳ ಸರಣಿಯಲ್ಲಿ ಆಡಲಿದೆ. ಭಾರತ-ಇಂಗ್ಲೆಂಡ್ ನಡುವಿನ ಮೊದಲ ಟಿ20 ಪಂದ್ಯ (ಜನವರಿ 22) ಕೋಲ್ಕತ್ತಾದ ಈಡನ್ ಗಾರ್ಡನ್ಸ್‌ನಲ್ಲಿ ನಡೆಯಲಿದೆ.
ಯಾವ್ಯಾವ ದಿನ?
2ನೇ ಟಿ20 ಪಂದ್ಯ ಜನವರಿ 25 ರಂದು ಚೆನ್ನೈನ ಚೆಪಾಕ್‌ನಲ್ಲಿ ನಡೆಯಲಿದೆ. 3ನೇ ಟಿ20 ಪಂದ್ಯ ಜನವರಿ 28 ರಂದು ರಾಜ್‌ಕೋಟ್‌ನಲ್ಲಿ, 4ನೇ ಟಿ20 ಪಂದ್ಯ ಜನವರಿ 31 ರಂದು ಪುಣೆಯಲ್ಲಿ ಮತ್ತು 5ನೇ ಪಂದ್ಯ ಫೆಬ್ರವರಿ 2 ರಂದು ಮುಂಬೈನಲ್ಲಿ ನಡೆಯಲಿವೆ.
50 ಓವರ್‌ಗಳ ಏಕದಿನ ಸರಣಿಯ ಮೊದಲ ಪಂದ್ಯ ಫೆಬ್ರವರಿ 6 ರಂದು ನಾಗ್ಪುರದಲ್ಲಿ ನಡೆಯಲಿದೆ. 2ನೇ ಏಕದಿನ ಪಂದ್ಯ ಫೆಬ್ರವರಿ 9 ರಂದು ಕಟಕ್‌ನಲ್ಲಿ ಮತ್ತು 3ನೇ ಏಕದಿನ ಪಂದ್ಯ ಫೆಬ್ರವರಿ 12 ರಂದು ಅಹಮದಾಬಾದ್‌ನಲ್ಲಿ ನಡೆಯಲಿದೆ.
ಯಾವ ಟಿವಿಯಲ್ಲಿ ನೋಡ್ಬೋದು?
ಭಾರತ-ಇಂಗ್ಲೆಂಡ್ ನಡುವಿನ ಟಿ20 ಪಂದ್ಯಗಳು ಭಾರತೀಯ ಕಾಲಮಾನ ಸಂಜೆ 7 ಗಂಟೆಗೆ ಆರಂಭವಾಗಲಿವೆ. ಏಕದಿನ ಪಂದ್ಯಗಳು ಮಧ್ಯಾಹ್ನ 1.30ಕ್ಕೆ ಶುರುವಾಗುತ್ತವೆ. ಈ ಟಿ20 ಮತ್ತು ಏಕದಿನ ಸರಣಿಯ ಎಲ್ಲಾ ಪಂದ್ಯಗಳನ್ನು ಸ್ಟಾರ್ ಸ್ಪೋರ್ಟ್ಸ್ ವಾಹಿನಿಗಳಲ್ಲಿ ವೀಕ್ಷಿಸಬಹುದು. ಸ್ಟಾರ್ ಸ್ಪೋರ್ಟ್ಸ್ ಕನ್ನಡ ವಾಹಿನಿಯಲ್ಲಿ ಕನ್ನಡ ಕಾಮೆಂಟ್ರಿಯೊಂದಿಗೆ ಪಂದ್ಯಗಳನ್ನು ಆನಂದಿಸಬಹುದು. ಇದಲ್ಲದೆ, ಡಿಸ್ನಿ+ ಹಾಟ್‌ಸ್ಟಾರ್ ಓಟಿಟಿ ವೇದಿಕೆಯಲ್ಲಿಯೂ ಪಂದ್ಯಗಳ ನೇರ ಪ್ರಸಾರ ಇರಲಿದೆ.
ಭಾರತ ತಂಡದ ನಾಯಕ ಯಾರು?
ಈ ಸರಣಿ ಭಾರತ ತಂಡವನ್ನು ಈಗಾಗಲೇ ಪ್ರಕಟಿಸಲಾಗಿದೆ. ಟಿ20 ಸರಣಿಯಲ್ಲಿ ಸೂರ್ಯಕುಮಾರ್ ಯಾದವ್ ನಾಯಕರಾಗಿ ಮತ್ತು ಅಕ್ಷರ್ ಪಟೇಲ್ ಉಪನಾಯಕರಾಗಿ ನೇಮಕಗೊಂಡಿದ್ದಾರೆ.
ಭಾರತ ಟಿ20 ತಂಡದ ಆಟಗಾರರ ವಿವರ: ಸೂರ್ಯಕುಮಾರ್ ಯಾದವ್ (ನಾಯಕ), ಸಂಜು ಸ್ಯಾಮ್ಸನ್ , ಅಭಿಷೇಕ್ ಶರ್ಮಾ, ತಿಲಕ್ ವರ್ಮಾ, ಹಾರ್ದಿಕ್ ಪಾಂಡ್ಯ, ರಿಂಕು ಸಿಂಗ್, ನಿತೀಶ್ ಕುಮಾರ್ ರೆಡ್ಡಿ, ಅಕ್ಷರ್ ಪಟೇಲ್ (ಉಪನಾಯಕ), ಹರ್ಷಿತ್ ರಾಣಾ, ಅರ್ಷದೀಪ್ ಸಿಂಗ್, ಮೊಹಮ್ಮದ್ ಶಮಿ, ವರುಣ್ ಚಕ್ರವರ್ತಿ, ರವಿ ಬಿಷ್ಣೋಯ್, ವಾಷಿಂಗ್ಟನ್ ಸುಂದರ್ ಮತ್ತು ಧ್ರುವ್ ಜುರೆಲ್.
ಇಂಗ್ಲೆಂಡ್ ತಂಡದಲ್ಲಿ ಟಿ20 ಮತ್ತು ಏಕದಿನ ಎರಡೂ ಸರಣಿಗಳಿಗೂ ಜೋಸ್ ಬಟ್ಲರ್ ನಾಯಕರಾಗಿದ್ದಾರೆ. ಇಂಗ್ಲೆಂಡ್ ಟಿ20 ಮತ್ತು ಏಕದಿನ ತಂಡ: ಜೋಸ್ ಬಟ್ಲರ್ (ನಾಯಕ), ಹ್ಯಾರಿ ಬ್ರೂಕ್, ಬೆನ್ ಡಕೆಟ್, ಜಾಕೋಬ್ ಬೆಥೆಲ್, ಲಿಯಾಮ್ ಲಿವಿಂಗ್‌ಸ್ಟೋನ್, ರೆಹಾನ್ ಅಹ್ಮದ್, ಜೇಮಿ ಓವರ್ಟನ್, ಬ್ರೈಡನ್ ಕಾರ್ಸ್, ಜೇಮಿ ಸ್ಮಿತ್, ಫಿಲಿಪ್ ಸಾಲ್ಟ್, ಗಸ್ ಅಟ್ಕಿನ್ಸನ್, ಜೋಫ್ರಾ ಆರ್ಚರ್, ಆದಿಲ್ ರಶೀದ್, ಮಾರ್ಕ್ ವುಡ್ ಮತ್ತು ಸಾಕಿಬ್ ಮಹಮೂದ್.