- Home
- Sports
- Cricket
- ನ್ಯೂಜಿಲೆಂಡ್ ಎದುರಿನ ಎರಡನೇ ಟಿ20 ಪಂದ್ಯಕ್ಕೆ ಭಾರತ ಸಂಭಾವ್ಯ ತಂಡ ಪ್ರಕಟ; ಎರಡು ಮಹತ್ವದ ಬದಲಾವಣೆ ಫಿಕ್ಸ್!
ನ್ಯೂಜಿಲೆಂಡ್ ಎದುರಿನ ಎರಡನೇ ಟಿ20 ಪಂದ್ಯಕ್ಕೆ ಭಾರತ ಸಂಭಾವ್ಯ ತಂಡ ಪ್ರಕಟ; ಎರಡು ಮಹತ್ವದ ಬದಲಾವಣೆ ಫಿಕ್ಸ್!
ಕ್ರೈಸ್ಟ್ಚರ್ಚ್: ಭಾರತ ಹಾಗೂ ನ್ಯೂಜಿಲೆಂಡ್ ನಡುವಿನ ಎರಡನೇ ಟಿ20 ಪಂದ್ಯವು ಇದೇ ಅಕ್ಟೋಬರ್ 24ರಂದು ಆರಂಭವಾಗಲಿದೆ ಈ ಪಂದ್ಯದಲ್ಲಿ ಟೀಂ ಇಂಡಿಯಾ ಎರಡು ಮಹತ್ವದ ಬದಲಾವಣೆಗಳೊಂದಿಗೆ ಕಣಕ್ಕಿಳಿಯುವುದು ಖಚಿತವಾಗಿದೆ. ಎರಡನೇ ಟಿ20 ಪಂದ್ಯಕ್ಕೆ ಭಾರತ ಸಂಭಾವ್ಯ ತಂಡ ಇಲ್ಲಿದೆ.

ಟಿ20 ಸರಣಿಯಲ್ಲಿ ಟೀಂ ಇಂಡಿಯಾ ಶುಭಾರಂಭ
ನ್ಯೂಜಿಲೆಂಡ್ ಎದುರಿನ ಮೊದಲ ಟಿ20 ಪಂದ್ಯದಲ್ಲಿ ಟೀಂ ಇಂಡಿಯಾ 4 ವಿಕೆಟ್ಗಳ ರೋಚಕ ಜಯ ಸಾಧಿಸುವ ಮೂಲಕ ಸರಣಿಯಲ್ಲಿ ಶುಭಾರಂಭ ಮಾಡಿದೆ. ಇದರ ಹೊರತಾಗಿಯೂ ಟೀಂ ಇಂಡಿಯಾ ಎರಡನೇ ಟಿ20 ಪಂದ್ಯದಲ್ಲಿ ಎರಡು ಪ್ರಮುಖ ಬದಲಾವಣೆಗಳೊಂದಿಗೆ ಕಣಕ್ಕಿಳಿಯುವುದು ಬಹುತೇಕ ಖಚಿತ ಎನ್ನಲಾಗಿದೆ.
ಇಶಾನ್ ಕಿಶನ್ ಬದಲಿಗೆ ವೈಭವ್ ಸೂರ್ಯವಂಶಿಗೆ ಚಾನ್ಸ್
ಹೌದು, ತೊಡೆಸಂದಿನ ಸ್ನಾಯು ಸೆಳೆತಕ್ಕೆ ಒಳಗಾಗಿರುವ ಎಡಗೈ ಸ್ಪೋಟಕ ಬ್ಯಾಟರ್ ಇಶಾನ್ ಕಿಶನ್ ಇದೀಗ, ಎರಡನೇ ಟಿ20 ಪಂದ್ಯದಿಂದ ಹೊರಬಿದ್ದಿದ್ದಾರೆ. ಹೀಗಾಗಿ ಇಶಾನ್ ಕಿಶನ್ ಬದಲಿಗೆ 15 ವರ್ಷದ ಯುವ ಬ್ಯಾಟರ್ ವೈಭವ್ ಸೂರ್ಯವಂಶಿ ಇದೀಗ ಭಾರತ ಆಡುವ ಹನ್ನೊಂದರ ಬಳಗದಲ್ಲಿ ಸ್ಥಾನ ಪಡೆಯಲಿದ್ದಾರೆ. ಈ ಕುರಿತಂತೆ ಟೀಂ ಇಂಡಿಯಾ ಬ್ಯಾಟಿಂಗ್ ಕೋಚ್ ಸೀತಾಂಶು ಕೋಟಕ್ ಕೂಡಾ ಸುಳಿವು ಬಿಟ್ಟುಕೊಟ್ಟಿದ್ದಾರೆ.
ಭಾರತದ ಬ್ಯಾಟಿಂಗ್ ವಿಭಾಗ
ಹೀಗಾದಲ್ಲಿ ಸಂಜು ಸ್ಯಾಮ್ಸನ್ ಹಾಗೂ ಅಭಿಷೇಕ್ ಶರ್ಮಾ ಇನ್ನಿಂಗ್ಸ್ ಆರಂಭಿಸಲಿದ್ದು, ಮೂರನೇ ಕ್ರಮಾಂಕದಲ್ಲಿ ವೈಭವ್ ಸೂರ್ಯವಂಶಿ ಮೈದಾನಕ್ಕಿಳಿಯಲಿದ್ದಾರೆ. ಇನ್ನು ನಾಲ್ಕನೇ ಕ್ರಮಾಂಕದಲ್ಲಿ ನಾಯಕ ಶ್ರೇಯಸ್ ಅಯ್ಯರ್, ಐದನೇ ಕ್ರಮಾಂಕದಲ್ಲಿ ತಿಲಕ್ ವರ್ಮಾ ಹಾಗೂ ಆರನೇ ಕ್ರಮಾಂಕದಲ್ಲಿ ನಮನ್ ಧೀರ್ ಹಾಗೂ ಏಳನೇ ಕ್ರಮಾಂಕದಲ್ಲಿ ಅಕ್ಷರ್ ಪಟೇಲ್ ಸ್ಥಾನ ಪಡೆಯುವುದು ಬಹುತೇಕ ಕನ್ಫರ್ಮ್ ಆಗಿದೆ.
ರೆಡಿ ಬದಲಿಗೆ ದುಬೆಗೆ ಚಾನ್ಸ್?
ಇನ್ನು ಆಲ್ರೌಂಡರ್ ವಿಭಾಗದಲ್ಲೂ ಒಂದು ಬದಲಾವಣೆಗಳಾಗುವ ಸಾಧ್ಯತೆಯಿದೆ. ಕಳೆದ ಪಂದ್ಯದಲ್ಲಿ ನಿತೀಶ್ ಕುಮಾರ್ ರೆಡ್ಡಿ 4 ಓವರ್ ಬೌಲಿಂಗ್ ಮಾಡಿ 10ರ ಎಕನಮಿಯಲ್ಲಿ 40 ರನ್ ಚಚ್ಚಿಸಿಕೊಂಡಿದ್ದರು. ಇದರ ಜತೆಗೆ ಯಾವುದೇ ವಿಕೆಟ್ ಕಬಳಿಸಲು ಯಶಸ್ವಿಯಾಗಿರಲಿಲ್ಲ. ಹೀಗಾಗಿ ಎರಡನೇ ಪಂದ್ಯದಲ್ಲಿ ನಿತೀಶ್ ಕುಮಾರ್ ರೆಡ್ಡಿಗೆ ವಿಶ್ರಾಂತಿ ನೀಡಿ ಮತ್ತೋರ್ವ ಸ್ಟಾರ್ ಆಲ್ರೌಂಡರ್ ಶಿವಂ ದುಬೆಗೆ ಟೀಮ್ ಮ್ಯಾನೇಜ್ಮೆಂಟ್ ಆಡುವ ಹನ್ನೊಂದರ ಬಳಗದಲ್ಲಿ ಸ್ಥಾನ ನೀಡುವ ಸಾಧ್ಯತೆಯಿದೆ.
ಬೌಲಿಂಗ್ ವಿಭಾಗ
ಇನ್ನುಳಿದಂತೆ ಬೌಲಿಂಗ್ ವಿಭಾಗದಲ್ಲಿ ಹೆಚ್ಚಿನ ಬದಲಾವಣೆಗಳಾಗುವ ಸಾಧ್ಯತೆಯಿದ್ದು, ಭುವನೇಶ್ವರ್ ಕುಮಾರ್, ಅರ್ಶದೀಪ್ ಸಿಂಗ್ ಜತೆಗೆ ಮಯಾಂಕ್ ಯಾದವ್ ಮತ್ತೊಮ್ಮೆ ವೇಗದ ಬೌಲರ್ಗಳಾಗಿ ತಂಡದಲ್ಲಿ ಸ್ಥಾನ ಉಳಿಸಿಕೊಳ್ಳುವ ನಿರೀಕ್ಷೆಯಿದೆ.
ಎರಡನೇ ಟಿ20 ಪಂದ್ಯಕ್ಕೆ ಸಂಭಾವ್ಯ ಬಲಿಷ್ಠ ಭಾರತ ತಂಡ ಹೀಗಿದೆ:
ಸಂಜು ಸ್ಯಾಮ್ಸನ್(ವಿಕೆಟ್ ಕೀಪರ್), ಅಭಿಷೇಕ್ ಶರ್ಮಾ, ವೈಭವ್ ಸೂರ್ಯವಂಶಿ, ಶ್ರೇಯಸ್ ಅಯ್ಯರ್(ನಾಯಕ), ತಿಲಕ್ ವರ್ಮಾ, ನಮನ್ ಧೀರ್, ಶಿವಂ ದುಬೆ, ಅಕ್ಷರ್ ಪಟೇಲ್, ಭುವನೇಶ್ವರ್ ಕುಮಾರ್, ಅರ್ಶದೀಪ್ ಸಿಂಗ್, ಮಯಾಂಕ್ ಯಾದವ್.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗೂ ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.








