- Home
- Sports
- Cricket
- 12 ವರ್ಷಗಳ ನಂತರ ಚಾಂಪಿಯನ್ಸ್ ಟ್ರೋಫಿ, 10 ತಿಂಗಳಲ್ಲಿ 2 ಐಸಿಸಿ ಟ್ರೋಫಿ ಗೆದ್ದ ರೋಹಿತ್ ಶರ್ಮಾ ಪಡೆ!
12 ವರ್ಷಗಳ ನಂತರ ಚಾಂಪಿಯನ್ಸ್ ಟ್ರೋಫಿ, 10 ತಿಂಗಳಲ್ಲಿ 2 ಐಸಿಸಿ ಟ್ರೋಫಿ ಗೆದ್ದ ರೋಹಿತ್ ಶರ್ಮಾ ಪಡೆ!
12 ವರ್ಷಗಳ ಸುದೀರ್ಘ ಕಾಯುವಿಕೆಯ ನಂತರ, ಭಾರತ ಕ್ರಿಕೆಟ್ ತಂಡ ಚಾಂಪಿಯನ್ಸ್ ಟ್ರೋಫಿ ಗೆದ್ದಿದೆ. ಫೈನಲ್‌ನಲ್ಲಿ ನ್ಯೂಜಿಲೆಂಡ್ ತಂಡವನ್ನ ಸೋಲಿಸಿ ರೋಹಿತ್ ಶರ್ಮಾ ನೇತೃತ್ವದ ಟೀಂ ಇಂಡಿಯಾ ಟ್ರೋಫಿ ಗೆದ್ದು ಇತಿಹಾಸ ಸೃಷ್ಟಿಸಿದೆ!

ಫೋಟೋ ಕ್ರೆಡಿಟ್: AFP
IND vs NZ ಚಾಂಪಿಯನ್ಸ್ ಟ್ರೋಫಿ 2025: ಭಾರತ ತಂಡ ಇತಿಹಾಸ ಸೃಷ್ಟಿಸಿದೆ. ನ್ಯೂಜಿಲೆಂಡ್ ಎದುರು ದುಬೈನಲ್ಲಿ ನಡೆದ ಫೈನಲ್‌ನಲ್ಲಿ ಅದ್ಭುತ ಗೆಲುವು ಸಾಧಿಸುವ ಮೂಲಕ ಮೂರನೇ ಬಾರಿಗೆ ಐಸಿಸಿ ಚಾಂಪಿಯನ್ಸ್ ಟ್ರೋಫಿ ಅಲಂಕರಿಸಿದೆ.
10 ತಿಂಗಳಲ್ಲಿ ಎರಡನೇ ಐಸಿಸಿ ಟೈಟಲ್ ಗೆದ್ದ ಭಾರತ!
ಟೀಂ ಇಂಡಿಯಾ ಕೇವಲ ಹತ್ತು ತಿಂಗಳ ಅಂತರದಲ್ಲಿ ಎರಡನೇ ಐಸಿಸಿ ಟ್ರೋಫಿ ಗೆಲ್ಲುವಲ್ಲಿ ಯಶಸ್ವಿಯಾಗಿದೆ. ಕಳೆದ ವರ್ಷ ರೋಹಿತ್ ಪಡೆ, ದಕ್ಷಿಣ ಆಫ್ರಿಕಾ ತಂಡವನ್ನು ಮಣಿಸಿ ಐಸಿಸಿ ಟಿ20 ವಿಶ್ವಕಪ್ ಟ್ರೋಫಿ ಜಯಿಸಿತ್ತು.
ಫೋರ್ ಬಾರಿಸಿ ಮ್ಯಾಚ್ ಗೆಲ್ಲಿಸಿದ ಜಡೇಜಾ!
ಟೀಂ ಇಂಡಿಯಾ ಸ್ಟಾರ್ ಆಲ್ರೌಂಡರ್ ಆಗಿ ಗುರುತಿಸಿಕೊಂಡಿರುವ ರವೀಂದ್ರ ಜಡೇಜಾ, ನ್ಯೂಜಿಲೆಂಡ್ ಎದುರು ಫೈನಲ್‌ನಲ್ಲಿ ಬೌಂಡರಿ ಬಾರಿಸುವ ಮೂಲಕ ತಂಡವನ್ನು ಗೆಲುವಿನ ದಡ ಸೇರಿಸಿದರು.
ರೋಹಿತ್-ಗಿಲ್ ಶತಕದ ಜೊತೆಯಾಟ!
252 ರನ್‌ಗಳ ಸವಾಲಿನ ಗುರಿ ಬೆನ್ನತ್ತಿದ ಟೀಂ ಇಂಡಿಯಾಗೆ ಆರಂಭಿಕರಾದ ನಾಯಕ ರೋಹಿತ್ ಶರ್ಮಾ ಹಾಗೂ ಶುಭ್‌ಮನ್ ಗಿಲ್ ಶತಕದ ಜತೆಯಾಟವಾಡುವ ಮೂಲಕ ಭದ್ರಬುನಾದಿ ಹಾಕಿಕೊಟ್ಟರು.
ನ್ಯೂಜಿಲೆಂಡ್ ಹೋರಾಟ ವ್ಯರ್ಥ!
ನ್ಯೂಜಿಲೆಂಡ್ ತಂಡವು ಸ್ಪರ್ಧಾತ್ಮಕ ಮೊತ್ತ ಕಲೆಹಾಕಿದ ಬಳಿಕ ಟೀಂ ಇಂಡಿಯಾಗೆ ಕಠಿಣ ಪೈಪೋಟಿ ನೀಡಿತು. ಆದರೆ ಕೊನೆಯಲ್ಲಿ ಕೆ ಎಲ್ ರಾಹುಲ್ ಹಾಗೂ ಜಡೇಜಾ ಯಾವುದೇ ಅಪಾಯವಿಲ್ಲದೇ ತಂಡಕ್ಕೆ ಗೆಲುವು ತಂದುಕೊಟ್ಟರು.