MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಗ್ಯಾಲರಿ
  • ಮನರಂಜನೆ
  • ಜ್ಯೋತಿಷ್ಯ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ಕ್ರೀಡೆ
  • ಜೀವನಶೈಲಿ
  • ವಾಣಿಜ್ಯ
  • Home
  • Sports
  • Cricket
  • IPL 2021: 56 ಲೀಗ್ ಪಂದ್ಯಗಳ ಬಳಿಕ ಬಯಲಾಯ್ತು ಟಾಪ್ 4 ತಂಡಗಳು; ಇಲ್ಲಿದೆ ನೋಡಿ ಪ್ಲೇ ಆಫ್‌ ವೇಳಾಪಟ್ಟಿ..!

IPL 2021: 56 ಲೀಗ್ ಪಂದ್ಯಗಳ ಬಳಿಕ ಬಯಲಾಯ್ತು ಟಾಪ್ 4 ತಂಡಗಳು; ಇಲ್ಲಿದೆ ನೋಡಿ ಪ್ಲೇ ಆಫ್‌ ವೇಳಾಪಟ್ಟಿ..!

ದುಬೈ: 14ನೇ ಆವೃತ್ತಿಯ ಐಪಿಎಲ್ (IPL 2021) ಟೂರ್ನಿಯ ಲೀಗ್ ಹಂತದ ಪಂದ್ಯಗಳು ಮುಕ್ತಾಯವಾಗಿದ್ದು, ಅಗ್ರ 4 ತಂಡಗಳು ಪ್ಲೇ ಆಫ್‌ಗೆ ಲಗ್ಗೆಯಿಡುವಲ್ಲಿ ಯಶಸ್ವಿಯಾಗಿವೆ. ಪ್ಲೇ-ಆಫ್‌ (Play Off) ನಾಕೌಟ್ ಪಂದ್ಯಗಳು ಅಕ್ಟೋಬರ್ 10ರಿಂದ ಆರಂಭವಾಗಲಿವೆ. ಬರೋಬ್ಬರಿ 5 ದಿನಗಳ ಕಾಲ ಭರ್ಜರಿ ಪ್ಲೇ ಆಫ್ ಪಂದ್ಯಗಳು ನಡೆಯಲಿವೆ. ಲೀಗ್ ಹಂತದಲ್ಲಿ 56 ಪಂದ್ಯಗಳು ಅತ್ಯಂತ ಯಶಸ್ವಿಯಾಗಿ ಜರುಗಿದ್ದು, ಡೆಲ್ಲಿ ಕ್ಯಾಪಿಟಲ್ಸ್‌ (Delhi Capitals), ಚೆನ್ನೈ ಸೂಪರ್ ಕಿಂಗ್ಸ್ (Chennai Super Kings) , ರಾಯಲ್ ಚಾಲೆಂಜರ್ಸ್ ಬೆಂಗಳೂರು (Royal Challengers Bangalore) ಹಾಗೂ ಕೋಲ್ಕತ ನೈಟ್‌ ರೈಡರ್ಸ್ (Kolkata Knight Riders) ತಂಡಗಳು ಪ್ಲೇ ಆಫ್‌ಗೆ ಲಗ್ಗೆಯಿಡುವಲ್ಲಿ ಯಶಸ್ವಿಯಾಗಿವೆ. ಇದೀಗ ಯಾವ ತಂಡವು ಪ್ಲೇ ಆಫ್‌ನಲ್ಲಿ ಮತ್ತೆ ಯಾವ ತಂಡವನ್ನು ಎಲ್ಲಿ? ಯಾವಾಗ ಎದುರಿಸಲಿವೆ ಎನ್ನುವ ನಿಮ್ಮ ಕುತೂಹಲಕ್ಕೆ ಇಲ್ಲಿದೆ ನೋಡಿ ಉತ್ತರ.

2 Min read
Author : Suvarna News | Asianet News
Published : Oct 09 2021, 06:51 PM IST
Share this Photo Gallery
  • FB
  • TW
  • Linkdin
  • Whatsapp
17
ಲೀಗ್ ಪಂದ್ಯಗಳು ಮುಕ್ತಾಯದ ಬಳಿಕ ಅಂಕಪಟ್ಟಿ

ಲೀಗ್ ಪಂದ್ಯಗಳು ಮುಕ್ತಾಯದ ಬಳಿಕ ಅಂಕಪಟ್ಟಿ

14ನೇ ಆವೃತ್ತಿಯ ಐಪಿಎಲ್ ಟೂರ್ನಿಯಲ್ಲಿ ಕಳೆದ ಆವೃತ್ತಿಯ ರನ್ನರ್ ಅಪ್ ಡೆಲ್ಲಿ ಕ್ಯಾಪಿಟಲ್ಸ್ ತಂಡವು 14 ಪಂದ್ಯಗಳನ್ನಾಡಿ 10 ಗೆಲುವುಗಳೊಂದಿಗೆ 20 ಅಂಕಗಳ ಸಹಿತ ಅಂಕಪಟ್ಟಿಯಲ್ಲಿ ಅಗ್ರಸ್ಥಾನ ಕಾಯ್ದುಕೊಂಡಿದೆ. ಇನ್ನು ಚೆನ್ನೈ ಸೂಪರ್‌ ಕಿಂಗ್ಸ್ 14 ಪಂದ್ಯಗಳಲ್ಲಿ 9 ಗೆಲುವು ಸಹಿತ 18 ಅಂಕಗಳೊಂದಿಗೆ ಎರಡನೇ ಸ್ಥಾನದಲ್ಲಿದೆ. 

27

ಇನ್ನು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಕೂಡಾ 14 ಪಂದ್ಯಗಳಲ್ಲಿ 9 ಗೆಲುವು ಸಾಧಿಸಿ 18 ಅಂಕ ಪಡೆದಿದೆಯಾದರೂ, ನೆಟ್‌ ರನ್‌ರೇಟ್‌ನಲ್ಲಿ ಕೊಂಚ ಹಿನ್ನೆಡೆ ಅನುಭವಿಸಿದ್ದರಿಂದ ಮೂರನೇ ಸ್ಥಾನದಲ್ಲಿದೆ. ಇನ್ನು ಇಯಾನ್ ಮಾರ್ಗನ್ ನೇತೃತ್ವದ ಕೆಕೆಆರ್ ತಂಡವು 14 ಪಂದ್ಯಗಳಲ್ಲಿ 7 ಗೆಲುವು ದಾಖಲಿಸುವ ಮೂಲಕ 14 ಅಂಕಗಳ ಸಹಿತ ಅಂಕಪಟ್ಟಿಯಲ್ಲಿ 4ನೇ ಸ್ಥಾನ ಪಡೆದು ಪ್ಲೇ ಆಫ್‌ ಸ್ಥಾನ ಖಚಿತ ಪಡಿಸಿಕೊಂಡಿದೆ.

Photo Credit-iplt20.com

37
ಪ್ಲೇ ಆಫ್‌ನಲ್ಲಿ ಮುಖಾಮುಖಿ

ಪ್ಲೇ ಆಫ್‌ನಲ್ಲಿ ಮುಖಾಮುಖಿ

ಐಪಿಎಲ್‌ 2021 ಟೂರ್ನಿಯ ಮೊದಲ ಪ್ಲೇ ಆಫ್‌ ಪಂದ್ಯವು ಅಕ್ಟೋಬರ್ 10 ರಂದು ಸಂಜೆ 7.30 ಆರಂಭವಾಗಲಿದ್ದು, ಮೊದಲ ಕ್ವಾಲಿಫೈಯರ್ ಪಂದ್ಯದಲ್ಲಿ ಅಂಕಪಟ್ಟಿಯಲ್ಲಿ ಮೊದಲೆರಡು ಸ್ಥಾನದಲ್ಲಿರುವ ಡೆಲ್ಲಿ ಕ್ಯಾಪಿಟಲ್ಸ್ ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ತಂಡಗಳು ಕಾದಾಡಲಿವೆ. ಈ ಹೈವೋಲ್ಟೆಜ್ ಪಂದ್ಯಕ್ಕೆ ದುಬೈ ಅಂತಾರಾಷ್ಟ್ರೀಯ ಮೈದಾನ ಆತಿಥ್ಯ ವಹಿಸಿದೆ. ಈ ಪಂದ್ಯದಲ್ಲಿ ಗೆಲುವು ಸಾಧಿಸಿದ ತಂಡವು ನೇರವಾಗಿ ಫೈನಲ್‌ಗೆ ಲಗ್ಗೆಯಿಟ್ಟರೆ, ಸೋತ ತಂಡವು ಎರಡನೇ ಕ್ವಾಲಿಫೈಯರ್ ಪಂದ್ಯಕ್ಕೆ ಅರ್ಹತೆ ಪಡೆಯಲಿದೆ.


(photo Source- www.iplt20.com)

47
<p>RCB vs KKR</p>

<p>RCB vs KKR</p>

ಇದಾದ ಬಳಿಕ ಅಕ್ಟೋಬರ್ 11ರಂದು ಸಂಜೆ 7.30ಕ್ಕೆ ಎಲಿಮಿನೇಟರ್ ಪಂದ್ಯವು ನಡೆಯಲಿದೆ. ಈ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಕೋಲ್ಕತ ನೈಟ್ ರೈಡರ್ಸ್ ತಂಡಗಳು ಸೆಣಸಾಡಲಿದ್ದು, ಈ ಪಂದ್ಯಕ್ಕೆ ಶಾರ್ಜಾ ಮೈದಾನ ಆತಿಥ್ಯವನ್ನು ವಹಿಸಿದೆ.

57
<p>RCB IPL Trophy</p>

<p>RCB IPL Trophy</p>

ಎಲಿಮಿನೇಟರ್ ಪಂದ್ಯದಲ್ಲಿ ಗೆಲುವು ಸಾಧಿಸಿದ ತಂಡವು ಎರಡನೇ ಕ್ವಾಲಿಫೈಯರ್ ಪಂದ್ಯವನ್ನಾಡಲು ಅರ್ಹತೆಯನ್ನು ಪಡೆದರೆ, ಸೋತ ತಂಡವು ಅಧಿಕೃತವಾಗಿ ಟೂರ್ನಿಯಿಂದ ಹೊರಬೀಳಲಿವೆ. ಹೀಗಾಗಿ ಎರಡು ತಂಡಗಳು ಗೆಲುವಿಗಾಗಿ ಜಿದ್ದಾಜಿದ್ದಿನ ಪೈಪೋಟಿ ನಡೆಸಲಿವೆ.

67

ಇನ್ನು ಅಕ್ಟೋಬರ್ 12ರಂದು ಯಾವುದೇ ಪಂದ್ಯಗಳು ಇರುವುದಿಲ್ಲ. ಒಂದು ದಿನದ ಬಿಡುವಿನ ಬಳಿಕ ಅಕ್ಟೋಬರ್ 13ರಂದು ಎರಡನೇ ಕ್ವಾಲಿಫೈಯರ್ ಪಂದ್ಯವು ಜರುಗಲಿದ್ದು, ಈ ಪಂದ್ಯದಲ್ಲಿ ಮೊದಲ ಕ್ವಾಲಿಫೈಯರ್‌ನಲ್ಲಿ ಸೋತ ತಂಡ ಹಾಗೂ ಎಲಿಮಿನೇಟರ್ ಪಂದ್ಯದಲ್ಲಿ ಗೆಲುವು ಸಾಧಿಸಿದ ತಂಡಗಳು ಸೆಣಸಾಟ ನಡೆಸಲಿವೆ. ಈ ಪಂದ್ಯದಲ್ಲಿ ಗೆಲುವು ಸಾಧಿಸಿದ ತಂಡವು ಫೈನಲ್‌ಗೆ ಲಗ್ಗೆಯಿಟ್ಟರೆ, ಸೋತ ತಂಡ ಟೂರ್ನಿಯಿಂದ ಹೊರಬೀಳಲಿದೆ. ಈ ಪಂದ್ಯವು ಸಂಜೆ 7.30 ಕ್ಕೆ ಶಾರ್ಜಾ ಕ್ರಿಕೆಟ್ ಮೈದಾನದಲ್ಲಿ ಆರಂಭವಾಗಲಿದೆ.

(photo source- iplt20.com)

77

ಅಕ್ಟೋಬರ್ 15ರ ಸಂಜೆ 7.30ಕ್ಕೆ 14ನೇ ಆವೃತ್ತಿಯ ಐಪಿಎಲ್ ಟೂರ್ನಿಯ ಫೈನಲ್ ಪಂದ್ಯವು ಆರಂಭವಾಗಲಿದ್ದು, ಪ್ರಶಸ್ತಿಗಾಗಿ ಪೈಪೋಟಿ ನಡೆಸಲಿವೆ. ಈ ಮಹತ್ವದ ಪಂದ್ಯಕ್ಕೆ ದುಬೈನ ಅಂತಾರಾಷ್ಟ್ರೀಯ ಮೈದಾನ ಆತಿಥ್ಯವನ್ನು ವಹಿಸಲಿದೆ. ಅಕ್ಟೋಬರ್ 15ರಂದು ಆರ್‌ಸಿಬಿ, ಡೆಲ್ಲಿ, ಕೆಕೆಆರ್ ಅಥವಾ ಸಿಎಸ್‌ಕೆ ಈ ನಾಲ್ಕು ತಂಡಗಳ ಪೈಕಿ ಒಂದು ತಂಡ ಐಪಿಎಲ್ ಚಾಂಪಿಯನ್ ಆಗಿ ಹೊರಹೊಮ್ಮಲಿದೆ. 

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

About the Author

SN
Suvarna News

Latest Videos
Recommended Stories
Recommended image1
ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ RCB ಮ್ಯಾಚ್ ಫಿಕ್ಸ್ ಆಯ್ತು; ಆದ್ರೆ ಕಾಲ್ತುಳಿತದಲ್ಲಿ ಸತ್ತ 11 ಜನರ ಕೇಸ್ ಏನಾಯ್ತು?
Recommended image2
ಅರ್ಜುನ್ ತೆಂಡೂಲ್ಕರ್ ಸಾನಿಯಾ ಮೆಹಂದಿ ಸೆರಮನಿ ಮೊದಲ ವಿಡಿಯೋ ಬಹಿರಂಗ
Recommended image3
ಡ್ಯಾಡಿ ಡ್ಯೂಟಿ, ಲಂಡನ್‌ನಲ್ಲಿ ಪ್ರತಿ ದಿನ ಮಗನ ಶಾಲೆಗೆ ಕರೆದುಕೊಂಡು ಹೋಗ್ತಾರೆ ಕೊಹ್ಲಿ
News
kannada newslatest kannada newskarnataka newsbengaluru newsMysore newsindia news in kannadainternational news in kannada
Entertainment News
Kannada Cinema Newskannada movies reviewsandalwood newskannada tv shows
Sports News
sports news in kannadacricket news in kannadaOther Sports News in Kannada
Business News
Business news in kannadashare market news in kannadabusiness ideas in kannada
Science & Technology
technology news in kannadamobile tech newsscience and tech news
Astrology
rashi bhavishya in kannadadina bhavishyavara bhavishyavastu shastra in kannadakarnataka festivals
Lifestyle
Lifestyle news in kannadafood recipes in kannadahealth tips in kannadakitchen tips in kannada
Education & Career
job news in kannadaPrivate Jobsbank jobs in karnatakaGovernment jobs in karnatakaCentral Govt Jobs in KannadaIT Jobs
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2026 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved