IPL 2021: ಟಿ20 ಕ್ರಿಕೆಟಲ್ಲಿ ಹೊಸ ವಿಶ್ವ ದಾಖಲೆ ಬರೆದ ಪೊಲ್ಲಾರ್ಡ್!
ಅಬುಧಾಬಿ: ವೆಸ್ಟ್ ಇಂಡೀಸ್‌ನ ದೈತ್ಯ ಕ್ರಿಕೆಟಿಗ ಕೀರನ್ ಪೊಲ್ಲಾರ್ಡ್ (Kieron Pollard) ತಮ್ಮ ವಿಸ್ಪೋಟಕ ಬ್ಯಾಟಿಂಗ್ ಹಾಗೂ ಚಾಣಾಕ್ಷ ಮಧ್ಯದ ವೇಗದ ಬೌಲಿಂಗ್ ಮೂಲಕ ಸ್ಟಾರ್ ಆಲ್ರೌಂಡರ್ ಆಗಿ ಹೊರಹೊಮ್ಮಿದ್ದಾರೆ. ಇದೀಗ 14ನೇ ಆವೃತ್ತಿಯ ಐಪಿಎಲ್ (IPL 2021) ಟೂರ್ನಿಯ ಪಂಜಾಬ್ ಕಿಂಗ್ಸ್ ಹಾಗೂ ಮುಂಬೈ ಇಂಡಿಯನ್ಸ್ (Mumbai Indians) ನಡುವಿನ ಪಂದ್ಯದಲ್ಲಿ ಪೊಲ್ಲಾರ್ಡ್ ಟಿ20 ಕ್ರಿಕೆಟ್‌ನಲ್ಲಿ ಹೊಸ ವಿಶ್ವದಾಖಲೆಯೊಂದನ್ನು ನಿರ್ಮಿಸಿದ್ದಾರೆ. ಏನದು ಎನ್ನುವ ನಿಮ್ಮ ಕುತೂಹಲಕ್ಕೆ ಇಲ್ಲಿದೆ ನೋಡಿ ಉತ್ತರ

ಸತತ ಹ್ಯಾಟ್ರಿಕ್ ಸೋಲುಗಳಿಂದ ಕಂಗೆಟ್ಟಿದ್ದ ಹಾಲಿ ಐಪಿಎಲ್ ಚಾಂಪಿಯನ್ ಮುಂಬೈ ಇಂಡಿಯನ್ಸ್ ಪಂಜಾಬ್ ಕಿಂಗ್ಸ್ ಎದುರು ಭರ್ಜರಿ ಗೆಲುವು ಸಾಧಿಸುವ ಮೂಲಕ ಗೆಲುವಿನ ಲಯಕ್ಕೆ ಮರಳುವಲ್ಲಿ ಯಶಸ್ವಿಯಾಗಿದೆ.
ಕೆರಿಬಿಯನ್ ಮೂಲದ ದೈತ್ಯ ಆಲ್ರೌಂಡರ್ ಕೀರನ್ ಪೊಲ್ಲಾರ್ಡ್ ತಮ್ಮ ಆಲ್ರೌಂಡ್ ಪ್ರದರ್ಶನದ ಮೂಲಕ ಮುಂಬೈ ಇಂಡಿಯನ್ಸ್ ಇನ್ನೂ ಒಂದು ಓವರ್ ಬಾಕಿ ಇರುವಂತೆಯೇ 6 ವಿಕೆಟ್‌ಗಳ ಜಯ ಸಾಧಿಸುವಂತೆ ಮಾಡಿದರು.
ಇದೇ ಪಂದ್ಯದಲ್ಲಿ ಪೊಲ್ಲಾರ್ಡ್ ಟಿ20 ಕ್ರಿಕೆಟ್ ಇತಿಹಾಸದಲ್ಲಿ ಯಾರೂ ಮಾಡದ ಅಪರೂಪದ ವಿಶ್ವದಾಖಲೆಯೊಂದನ್ನು ನಿರ್ಮಿಸಿದ್ದಾರೆ. ಈ ಮೂಲಕ ಟಿ20 ಕ್ರಿಕೆಟ್‌ನಲ್ಲಿ ವಿಶ್ವದ ಶ್ರೇಷ್ಠ ಆಲ್ರೌಂಡರ್ ಅಗಿ ಹೊರಹೊಮ್ಮಿದ್ದಾರೆ
ಹೌದು, ಟಿ20 ಕ್ರಿಕೆಟ್‌ನ ಅತ್ಯಂತ ಜನಪ್ರಿಯ ಕ್ರಿಕೆಟಿಗರಲ್ಲಿ ಒಬ್ಬರಾದ ವೆಸ್ಟ್‌ಇಂಡೀಸ್‌ನ ಕೀರನ್ ಪೊಲ್ಲಾರ್ಡ್, ಈ ಮಾದರಿಯಲ್ಲಿ ಹೊಸ ವಿಶ್ವ ದಾಖಲೆ ಬರೆದಿದ್ದಾರೆ. 10000 ರನ್ ಗಳಿಸುವ ಜೊತೆ 300 ವಿಕೆಟ್ ಕಿತ್ತ ವಿಶ್ವದ ಮೊದಲ ಹಾಗೂ ಏಕೈಕ ಬೌಲರ್ ಎನ್ನುವ ಹಿರಿಮೆಗೆ ಅವರು ಪಾತ್ರರಾಗಿದ್ದಾರೆ.
ಮಂಗಳವಾರ ನಡೆದ ಪಂಜಾಬ್ ಕಿಂಗ್ಸ್ ವಿರುದ್ಧದ ಪಂದ್ಯದಲ್ಲಿ ಕೆ.ಎಲ್.ರಾಹುಲ್‌ರ ವಿಕೆಟ್ ಕಬಳಿಸುವ ಮೂಲಕ ಅವರು ಟಿ20 ಕ್ರಿಕೆಟ್ ಮಾದರಿಯಲ್ಲಿ 300 ವಿಕೆಟ್ ಮೈಲಿಗಲ್ಲನ್ನು ತಲುಪಿದರು.
ಕೀರನ್ ಪೊಲ್ಲಾರ್ಡ್ ಅಂತಾರಾಷ್ಟ್ರೀಯ ಕ್ರಿಕೆಟ್ ಜೊತೆ ವಿಶ್ವದ ವಿವಿಧ ದೇಶಗಳ 25 ಹೆಚ್ಚು ಫ್ರಾಂಚೈಸಿ ತಂಡಗಳ ಪರ ಒಟ್ಟು 565 ಟಿ20 ಪಂದ್ಯಗಳನ್ನು ಆಡಿದ್ದು 11,000ಕ್ಕೂ ಹೆಚ್ಚು ರನ್ ಗಳಿಸಿದ್ದು, 300 ವಿಕೆಟ್ ಕಬಳಿಸಿದ್ದಾರೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.