IPL 2021: ಮುಂಬೈ ಇಂಡಿಯನ್ಸ್ ಎದುರಿನ ಪಂದ್ಯಕ್ಕೆ RCB ತಂಡದಲ್ಲಿ ಎರಡು ಬದಲಾವಣೆ?
ದುಬೈ: 14ನೇ ಆವೃತ್ತಿಯ ಐಪಿಎಲ್(IPL 2021) ಟೂರ್ನಿಯ 39ನೇ ಪಂದ್ಯದಲ್ಲಿಂದು ಹಾಲಿ ಚಾಂಪಿಯನ್ ಮುಂಬೈ ಇಂಡಿಯನ್ಸ್(Mumbai Indians) ಹಾಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು(Royal Challengers Bangalore) ತಂಡಗಳು ಮುಖಾಮುಖಿಯಾಗುತ್ತಿದ್ದು, ಈ ಹೈವೋಲ್ಟೇಜ್ ಪಂದ್ಯಕ್ಕೆ ದುಬೈನ ಅಂತಾರಾಷ್ಟ್ರೀಯ ಮೈದಾನ ಆತಿಥ್ಯವನ್ನು ವಹಿಸಿದೆ. ಸತತ 2 ಸೋಲುಗಳಿಂದ ಕಂಗೆಟ್ಟಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಇಂದಿನ ಮುಂಬೈ ವಿರುದ್ದದ ಪಂದ್ಯಕ್ಕೆ ಎರಡು ಮಹತ್ತರ ಬದಲಾವಣೆಯೊಂದಿಗೆ ಕಣಕ್ಕಿಳಿಯುವ ಸಾಧ್ಯತೆ ದಟ್ಟವಾಗಿದೆ. ಮುಂಬೈ ಎದುರಿನ ಪಂದ್ಯಕ್ಕೆ ಆರ್‌ಸಿಬಿ ಸಂಭಾವ್ಯ ತಂಡ ಹೀಗಿದೆ ನೋಡಿ

1. ದೇವದತ್ ಪಡಿಕ್ಕಲ್: ಆರಂಭಿಕ ಎಡಗೈ ಬ್ಯಾಟ್ಸ್‌ಮನ್. ಕಳೆದ ಪಂದ್ಯದಲ್ಲಿ ಆಕರ್ಷಕ ಅರ್ಧಶತಕ ಸಿಡಿಸುವ ಮೂಲಕ ಮಿಂಚಿದ್ದ ಪಡಿಕ್ಕಲ್ ಇಂದೂ ಸಹಾ ದೊಡ್ಡ ಇನಿಂಗ್ಸ್ ಆಡಬೇಕಿದೆ.
2. ವಿರಾಟ್ ಕೊಹ್ಲಿ: ತಂಡದ ನಾಯಕ ಹಾಗೂ ರನ್ ಮಷೀನ್. ಕೊಹ್ಲಿ ಸಹಾ ಸಿಎಸ್‌ಕೆ ಎದುರು ಅರ್ಧಶತಕ ಸಿಡಿಸಿ ಫಾರ್ಮ್‌ಗೆ ಮರಳಿದ್ದು, ರೋಹಿತ್ ಪಡೆ ಎದುರು ಅಬ್ಬರಿಸಲು ಎದುರು ನೋಡುತ್ತಿದ್ದಾರೆ
3. ಶ್ರೀಕರ್ ಭರತ್: ವಿಕೆಟ್ ಕೀಪರ್ ಬ್ಯಾಟ್ಸ್‌ಮನ್ ಶ್ರೀಕರ್‌ಗೆ ಕಳೆದ ಪಂದ್ಯದಲ್ಲಿ ಬ್ಯಾಟಿಂಗ್ ಮಾಡುವ ಅವಕಾಶ ಸಿಕ್ಕಿರಲಿಲ್ಲ. ಇಂದಿನ ಪಂದ್ಯದಲ್ಲಿ ಭರತ್‌ಗೆ ಮತ್ತೊಂದು ಅವಕಾಶ ಸಿಗುವ ಸಾಧ್ಯತೆಯಿದೆ.
4. ಗ್ಲೆನ್ ಮ್ಯಾಕ್ಸ್‌ವೆಲ್: ಕಳೆದೆರಡು ಪಂದ್ಯಗಳಲ್ಲಿ ಬ್ಯಾಟಿಂಗ್ ವೈಫಲ್ಯ ಅನುಭವಿಸಿದ್ದ ಆಸೀಸ್ ಆಲ್ರೌಂಡರ್ ಇಂದಿನ ಪಂದ್ಯದಲ್ಲಾದರೂ ಅಬ್ಬರಿಸುತ್ತಾರಾ ಎನ್ನುವುದನ್ನು ಕಾದು ನೋಡಬೇಕಿದೆ
5. ಎಬಿ ಡಿವಿಲಿಯರ್ಸ್: ಎಬಿಡಿ ಕೂಡಾ ಕಳೆದೆರಡು ಪಂದ್ಯಗಳಲ್ಲಿ ನಿರೀಕ್ಷಿತ ಪ್ರದರ್ಶನ ತೋರಿಲ್ಲ. ಯಾವುದೇ ಕ್ಷಣದಲ್ಲಾದರೂ ಅಬ್ಬರಿಸುವ ಸಾಮರ್ಥ್ಯವಿರುವ ಎಬಿಡಿ ಮೇಲೆ ಅಭಿಮಾನಿಗಳು ಎಂದಿನಂತೆ ಬೆಟ್ಟದಷ್ಟು ನಿರೀಕ್ಷೆ ಇಟ್ಟುಕೊಂಡಿದ್ದಾರೆ.
6. ಟಿಮ್ ಡೇವಿಡ್: ಕಳೆದ ಪಂದ್ಯದಲ್ಲಿ ಪಾದಾರ್ಪಣೆ ಮಾಡಿದ್ದ ಟಿಮ್ ಡೆವಿಡ್ ಕಮಾಲ್ ಮಾಡಿರಲಿಲ್ಲ. ಹೀಗಿದ್ದೂ ಇಂದಿನ ಪಂದ್ಯದಲ್ಲಿ ಡೇವಿಡ್‌ಗೆ ಇನ್ನೊಂದು ಅವಕಾಶ ಸಿಗುವ ಸಾಧ್ಯತೆಯಿದೆ
7. ಕೈಲ್ ಜೇಮಿಸನ್: ಕಳೆದ ಪಂದ್ಯದಲ್ಲಿ ಜೇಮಿಸನ್‌ಗೆ ವಿಶ್ರಾಂತಿ ನೀಡಲಾಗಿತ್ತು. ಆದರೆ ಹಸರಂಗ ಸಾಕಷ್ಟು ದುಬಾರಿಯಾಗಿರುವ ಹಿನ್ನೆಲೆಯಲ್ಲಿ ಲಂಕಾ ಆಲ್ರೌಂಡರ್ ಬದಲಿಗೆ ಜೇಮಿಸನ್ ತಂಡ ಕೂಡಿಕೊಳ್ಳುವುದು ಬಹುತೇಕ ಖಚಿತ ಎನಿಸಿದೆ.
8. ಶಹಬಾಜ್ ಅಹಮ್ಮದ್: ಅದೇ ರೀತಿ ಕಳೆದ ಪಂದ್ಯದಲ್ಲಿ ನವದೀಪ್ ಸೈನಿ ಕೂಡಾ ಸಾಕಷ್ಟು ದುಬಾರಿಯಾಗಿದ್ದರು. ಸೈನಿ ಬದಲಿಗೆ ಶಹಬಾಜ್ ಅಹಮ್ಮದ್ ಇಂದಿನ ಪಂದ್ಯದಲ್ಲಿ ತಂಡ ಕೂಡಿಕೊಳ್ಳುವ ಸಾಧ್ಯತೆಯಿದೆ
9. ಹರ್ಷಲ್ ಪಟೇಲ್: ಆರ್‌ಸಿಬಿ ಡೆತ್ ಓವರ್ ಸ್ಪೆಷಲಿಸ್ಟ್ ಹರ್ಷಲ್ ಪಟೇಲ್ ಮತ್ತೊಮ್ಮೆ ತಮ್ಮ ಹಳೆಯ ಖದರ್ ತೋರಿಸಲು ಸಜ್ಜಾಗಿದ್ದಾರೆ. ಬಲಿಷ್ಠ ಮುಂಬೈ ಬ್ಯಾಟರ್‌ಗಳೆದುರು ಹರ್ಷಲ್ ಪಟೇಲ್‌ಗೆ ಅಗ್ನಿ ಪರೀಕ್ಷೆ ಎನಿಸಿದೆ
10. ಮೊಹಮ್ಮದ್ ಸಿರಾಜ್: ಆರ್‌ಸಿಬಿ ವೇಗದ ಅಸ್ತ್ರ. ಇತ್ತೀಚಿನ ದಿನಗಳಲ್ಲಿ ಮೊನಚಾದ ದಾಳಿ ಸಂಘಟಿಸುತ್ತಾ ಬಂದಿರುವ ಮೊಹಮ್ಮದ್ ಸಿರಾಜ್ ಪವರ್ ಪ್ಲೇ ಬೌಲಿಂಗ್‌ನಲ್ಲೇ ವಿಕೆಟ್ ಕಬಳಿಸಿದರೆ ಆರ್‌ಸಿಬಿಗೆ ಯಶಸ್ಸು ದಕ್ಕಬಹುದು
11. ಯುಜುವೇಂದ್ರ ಚಹಲ್: ಆರ್‌ಸಿಬಿ ತಂಡದ ಅನುಭವಿ ಲೆಗ್‌ಸ್ಪಿನ್ನರ್. ಬೌಲಿಂಗ್‌ನಲ್ಲಿ ಕೊಂಚ ದುಬಾರಿಯಾಗುತ್ತಿದ್ದರೂ ಸಹಾ ಅಗತ್ಯ ಸಂದರ್ಭದಲ್ಲಿ ವಿಕೆಟ್ ಕಬಳಿಸುವ ಸಾಮರ್ಥ್ಯ ಚಹಲ್‌ಗಿದೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.