MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಕ್ರೀಡೆ
  • ವೀಡಿಯೋ
  • ಮನರಂಜನೆ
  • ಜೀವನಶೈಲಿ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ತಂತ್ರಜ್ಞಾನ
  • ವಾಣಿಜ್ಯ
  • Home
  • Sports
  • Cricket
  • IPL 2021 ಹೀಗಿತ್ತು ನೋಡಿ ಡೆಲ್ಲಿ ಕ್ಯಾಪಿಟಲ್ಸ್‌ ಪ್ಲೇ ಆಫ್‌ವರೆಗಿನ ಹಾದಿ..!

IPL 2021 ಹೀಗಿತ್ತು ನೋಡಿ ಡೆಲ್ಲಿ ಕ್ಯಾಪಿಟಲ್ಸ್‌ ಪ್ಲೇ ಆಫ್‌ವರೆಗಿನ ಹಾದಿ..!

ದುಬೈ: ರಿಷಭ್‌ ಪಂತ್‌ (Rishabh Pant) ನೇತೃತ್ವದ ಡೆಲ್ಲಿ ಕ್ಯಾಪಿಟಲ್ಸ್ (Delhi Capitals) ತಂಡವು 14ನೇ ಆವೃತ್ತಿಯ ಐಪಿಎಲ್ ಟೂರ್ನಿಯಲ್ಲಿ ಪ್ಲೇ ಆಫ್‌ ಪ್ರವೇಶಿಸಿದ ಎರಡನೇ ತಂಡ ಎನಿಸಿಕೊಂಡಿದೆ. ಕಳೆದ ಆವೃತ್ತಿಯಲ್ಲಿ ರನ್ನರ್ ಅಪ್ ಸ್ಥಾನಕ್ಕೆ ತೃಪ್ತಿಪಟ್ಟುಕೊಂಡಿದ್ದ ಡೆಲ್ಲಿ ತಂಡವು ಈ ಬಾರಿ ಚೊಚ್ಚಲ ಐಪಿಎಲ್ ಟ್ರೋಫಿ ಗೆಲ್ಲುವ ಕನವರಿಕೆಯಲ್ಲಿದೆ. 14 ಪಂದ್ಯಗಳ ಪೈಕಿ 9 ಪಂದ್ಯಗಳನ್ನು ಗೆದ್ದು ಅಂಕಪಟ್ಟಿಯಲ್ಲಿ ಟಾಪ್ 2 ಸ್ಥಾನ ಪಡೆದ ಡೆಲ್ಲಿ ತಂಡವು ಇದೀಗ ಚೆನ್ನೈ ಸೂಪರ್ ಕಿಂಗ್ಸ್ (Chennai Super Kings) ಎದುರು ಮೊದಲ ಕ್ವಾಲಿಫೈಯರ್ ಪಂದ್ಯವನ್ನಾಡಲು ಸಜ್ಜಾಗಿದೆ. ಡೆಲ್ಲಿ ತಂಡದ ಪ್ಲೇ ಆಫ್‌ವರೆಗಿನ ಪಯಣ ಹೇಗಿತ್ತು ನೋಡೋಣ ಬನ್ನಿ 

2 Min read
Suvarna News | Asianet News
Published : Oct 10 2021, 05:38 PM IST
Share this Photo Gallery
  • FB
  • TW
  • Linkdin
  • Whatsapp
114

ಮೊದಲ ಪಂದ್ಯ: ಏಪ್ರಿಲ್ 10

ಚೆನ್ನೈ ಸೂಪರ್ ಕಿಂಗ್ಸ್ ಎದುರು ಮುಂಬೈನ ವಾಂಖೆಡೆ ಮೈದಾನದಲ್ಲಿ ನಡೆದ ಪಂದ್ಯದಲ್ಲಿ ರಿಷಭ್ ಪಂತ್ ನೇತೃತ್ವದ ಡೆಲ್ಲಿ ಕ್ಯಾಪಿಟಲ್ಸ್ ತಂಡವು 7 ವಿಕೆಟ್‌ಗಳ ಭರ್ಜರಿ ಗೆಲುವು ಸಾಧಿಸುವ ಮೂಲಕ ಟೂರ್ನಿಯಲ್ಲಿ ಶುಭಾರಂಭ ಮಾಡಿತ್ತು.

214

ಎರಡನೇ ಪಂದ್ಯ: ಏಪ್ರಿಲ್ 15

ರಾಜಸ್ಥಾನ ರಾಯಲ್ಸ್ ಎದುರು ವಾಂಖೆಡೆ ಮೈದಾನದಲ್ಲಿ ನಡೆದ ಎರಡನೇ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡವು ಸಂಜು ಸ್ಯಾಮ್ಸನ್ ಪಡೆಗೆ 3 ವಿಕೆಟ್‌ಗಳಿಂದ ಶರಣಾಗುವ ಮೂಲಕ ನಿರಾಸೆ ಅನುಭವಿಸಿತ್ತು.
 

314

ಮೂರನೇ ಪಂದ್ಯ: ಏಪ್ರಿಲ್‌ 18

ಪಂಜಾಬ್ ಕಿಂಗ್ಸ್‌ ಎದುರು ಮುಂಬೈನ ವಾಂಖೆಡೆ ಮೈದಾನದಲ್ಲಿ ನಡೆದ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡವು 6 ವಿಕೆಟ್‌ಗಳ ಅಂತರದ ಗೆಲುವು ಸಾಧಿಸುವ ಮೂಲಕ ಪಂತ್ ಪಡೆ ಗೆಲುವಿನ ಹಳಿಗೆ ಮರಳಿತ್ತು.

414

4ನೇ ಪಂದ್ಯ: ಏಪ್ರಿಲ್‌ 20

ಹಾಲಿ ಚಾಂಪಿಯನ್ ಮುಂಬೈ ಇಂಡಿಯನ್ಸ್ ಎದುರು ಚೆನ್ನೈನ ಎಂ ಎ ಚಿದಂಬರಂ ಸ್ಟೇಡಿಯಂನಲ್ಲಿ ನಡೆದ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡವು 6 ವಿಕೆಟ್‌ಗಳ ಅಂತರದ ಗೆಲುವು ದಾಖಲಿಸಿತ್ತು.

514

5ನೇ ಪಂದ್ಯ: ಏಪ್ರಿಲ್ 25

ಸನ್‌ರೈಸರ್ಸ್ ಹೈದರಾಬಾದ್ ವಿರುದ್ದ ಚೆನ್ನೈನ ಚಿದಂಬರಂ ಸ್ಟೇಡಿಯಂನಲ್ಲಿ ನಡೆದ ಪಂದ್ಯ ಟೈ ಆಗಿತ್ತು. ಬಳಿಕ ನಡೆದ ಸೂಪರ್ ಓವರ್‌ನಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡವು ರೋಚಕ ಗೆಲುವು ಸಾಧಿಸಿತ್ತು. 
 

614

6ನೇ ಪಂದ್ಯ: ಏಪ್ರಿಲ್ 27

ರಾಯಲ್‌ ಚಾಲೆಂಜರ್ಸ್ ಬೆಂಗಳೂರು ವಿರುದ್ದ ಅಹಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆದ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡವು ಕೇವಲ 1 ರನ್‌ಗಳ ಅಂತರದ ರೋಚಕ ಸೋಲು ಅನುಭವಿಸಿತ್ತು.

714

7ನೇ ಪಂದ್ಯ: ಏಪ್ರಿಲ್‌ 29

ಕೋಲ್ಕತ ನೈಟ್ ರೈಡರ್ಸ್ ವಿರುದ್ದ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆದ ಪಂದ್ಯದಲ್ಲಿ ಪಂತ್ ನೇತೃತ್ವದ ಡೆಲ್ಲಿ ಕ್ಯಾಪಿಟಲ್ಸ್ ತಂಡವು 7 ವಿಕೆಟ್‌ಗಳ ಭರ್ಜರಿ ಗೆಲುವು ಸಾಧಿಸುವ ಮೂಲಕ ಮತ್ತೆ ಗೆಲುವಿನ ಹಳಿಗೆ ಮರಳಿತ್ತು.
 

814

8ನೇ ಪಂದ್ಯ: ಮೇ 02

ಪಂಜಾಬ್ ಕಿಂಗ್ಸ್ ಎದುರು ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆದ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಮತ್ತೊಮ್ಮೆ 7 ವಿಕೆಟ್‌ಗಳ ಭರ್ಜರಿ ಗೆಲುವು ಸಾಧಿಸುವ ಮೂಲಕ ತನ್ನ ಗೆಲುವಿನ ಲಯವನ್ನು ಮುಂದುವರೆಸಿಕೊಂಡಿತು.
 

914

9ನೇ ಪಂದ್ಯ: ಸೆಪ್ಟೆಂಬರ್ 22

ಸನ್‌ರೈಸರ್ಸ್‌ ಹೈದರಾಬಾದ್ ವಿರುದ್ದ ದುಬೈ ಅಂತಾರಾಷ್ಟ್ರೀಯ ಮೈದಾನದಲ್ಲಿ ನಡೆದ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡವು 8 ವಿಕೆಟ್‌ಗಳ ಭರ್ಜರಿ ಗೆಲುವು ಸಾಧಿಸಿ ಜಯದ ನಾಗಾಲೋಟ ಮುಂದುವರೆಸಿತ್ತು.
 

1014

10ನೇ ಪಂದ್ಯ: ಸೆಪ್ಟೆಂಬರ್ 25

ರಾಜಸ್ಥಾನ ರಾಯಲ್ಸ್ ಎದುರು ಅಬುಧಾಬಿಯ ಶೇಕ್ ಜಾಯೆದ್ ಮೈದಾನದಲ್ಲಿ ನಡೆದ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡವು 33 ರನ್‌ಗಳ ಅಂತರದ ಗೆಲುವು ದಾಖಲಿಸಿ ಬೀಗಿತು.

1114

11ನೇ ಪಂದ್ಯ: ಸೆಪ್ಟೆಂಬರ್ 28

ಕೋಲ್ಕತ ನೈಟ್ ರೈಡರ್ಸ್ ವಿರುದ್ದ ಶಾರ್ಜಾ ಕ್ರಿಕೆಟ್ ಮೈದಾನದಲ್ಲಿ ನಡೆದ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡವು ಕೆಕೆಆರ್‌ಗೆ 3 ವಿಕೆಟ್‌ಗಳಿಂದ ಶರಣಾಗಿತ್ತು.

1214

12ನೇ ಪಂದ್ಯ: ಅಕ್ಟೋಬರ್ 02

ಹಾಲಿ ಚಾಂಪಿಯನ್ ಮುಂಬೈ ಇಂಡಿಯನ್ಸ್ ವಿರುದ್ದ ಶಾರ್ಜಾ ಮೈದಾನದಲ್ಲಿ ನಡೆದ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡವು 4 ವಿಕೆಟ್‌ಗಳ ಭರ್ಜರಿ ಗೆಲುವು ಸಾಧಿಸುವುದರ ಜತೆಗೆ ತನ್ನ ಪ್ಲೇ ಆಫ್‌ ಸ್ಥಾನವನ್ನು ಖಚಿತಪಡಿಸಿಕೊಂಡಿತು.
 

1314

13ನೇ ಪಂದ್ಯ: ಅಕ್ಟೋಬರ್ 04

ಚೆನ್ನೈ ಸೂಪರ್ ಕಿಂಗ್ಸ್ ವಿರುದ್ದ ದುಬೈ ಅಂತಾರಾಷ್ಟ್ರೀಯ ಮೈದಾನದಲ್ಲಿ ನಡೆದ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡವು 3 ವಿಕೆಟ್‌ಗಳ ರೋಚಕ ಗೆಲುವು ಸಾಧಿಸಿತ್ತು.

(photo Source- www.iplt20.com)

1414

14ನೇ ಪಂದ್ಯ: ಅಕ್ಟೋಬರ್ 08

ಡೆಲ್ಲಿ ಪಾಲಿನ ಲೀಗ್ ಹಂತದ ಕೊನೆಯ ಪಂದ್ಯದಲ್ಲಿ ರಾಯಲ್ಸ್ ಚಾಲೆಂಜರ್ಸ್ ಬೆಂಗಳೂರು ತಂಡವು ಕೊನೆಯ ಎಸೆತದಲ್ಲಿ ರೋಚಕ ಗೆಲುವು ಸಾಧಿಸಿ, ಪಂತ್ ಪಡೆಗೆ ಶಾಕ್‌ ನೀಡಿತ್ತು.

 (Photo source- iplt20.com)

About the Author

SN
Suvarna News
Latest Videos
Recommended Stories
Related Stories
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2025 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved