MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಕ್ರೀಡೆ
  • ವೀಡಿಯೋ
  • ಮನರಂಜನೆ
  • ಜೀವನಶೈಲಿ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ತಂತ್ರಜ್ಞಾನ
  • ವಾಣಿಜ್ಯ
  • Home
  • Sports
  • Cricket
  • IPL 2021: ರಾಜಸ್ಥಾನ ರಾಯಲ್ಸ್‌ ಎದುರಿನ ಪಂದ್ಯಕ್ಕೆ RCB ತಂಡದಲ್ಲಿ ಒಂದು ಬದಲಾವಣೆ?

IPL 2021: ರಾಜಸ್ಥಾನ ರಾಯಲ್ಸ್‌ ಎದುರಿನ ಪಂದ್ಯಕ್ಕೆ RCB ತಂಡದಲ್ಲಿ ಒಂದು ಬದಲಾವಣೆ?

ದುಬೈ: 14ನೇ ಆವೃತ್ತಿಯ ಐಪಿಎಲ್‌ (IPL 2021) ಟೂರ್ನಿಯ 43ನೇ ಪಂದ್ಯದಲ್ಲಿಂದು ರಾಯಲ್ ಚಾಲೆಂಜರ್ಸ್‌ ಬೆಂಗಳೂರು (Royal Challengers Bangalore) ತಂಡವು ದುಬೈ ಅಂತಾರಾಷ್ಟ್ರೀಯ ಮೈದಾನದಲ್ಲಿಂದು ರಾಜಸ್ಥಾನ ರಾಯಲ್ಸ್‌ (Rajasthan Royals) ತಂಡದ ಸವಾಲನ್ನು ಎದುರಿಸಲಿದೆ. ಪ್ಲೇ ಆಫ್‌ ಪ್ರವೇಶಿಸುವ ದೃಷ್ಟಿಯಿಂದ ಆರ್‌ಸಿಬಿ (RCB) ತಂಡದ ಪಾಲಿಗೆ ಈ ಪಂದ್ಯದ ಗೆಲುವು ಸಾಕಷ್ಟು ಮಹತ್ವದ್ದಾಗಿದೆ. ಹೀಗಾಗಿ ಇಂದಿನ ಪಂದ್ಯದಲ್ಲಿ ವಿರಾಟ್ ಕೊಹ್ಲಿ (Virat Kohli) ಒಂದು ಬದಲಾವಣೆಯೊಂದಿಗೆ ಕಣಕ್ಕಿಳಿಯುವ ಸಾಧ್ಯತೆಯಿದೆ. ಕಳೆದ ಪಂದ್ಯದಲ್ಲಿ ಗ್ಲೆನ್‌ ಮ್ಯಾಕ್ಸ್‌ವೆಲ್‌ (Glenn Maxwell) ಯಶಸ್ವಿಯಾಗಿ 4 ಓವರ್ ಬೌಲಿಂಗ್‌ ಮಾಡಿದ್ದರಿಂದ ಈ ಬಾರಿ ಓರ್ವ ಹೆಚ್ಚುವರಿ ಬ್ಯಾಟ್ಸ್‌ಮನ್‌ನೊಂದಿಗೆ ಆರ್‌ಸಿಬಿ ಕಣಕ್ಕಿಳಿಯುವ ಸಾಧ್ಯತೆಯಿದೆ. ರಾಜಸ್ಥಾನ ರಾಯಲ್ಸ್ ಎದುರಿನ ಪಂದ್ಯಕ್ಕೆ ಆರ್‌ಸಿಬಿ ಸಂಭಾವ್ಯ ತಂಡ ಹೀಗಿದೆ ನೋಡಿ

2 Min read
Suvarna News | Asianet News
Published : Sep 29 2021, 04:14 PM IST
Share this Photo Gallery
  • FB
  • TW
  • Linkdin
  • Whatsapp
111

1. ವಿರಾಟ್ ಕೊಹ್ಲಿ: ಕಳೆದೆರಡು ಪಂದ್ಯಗಳಲ್ಲಿ ಆಕರ್ಷಕ ಅರ್ಧಶತಕ ಬಾರಿಸುವ ಮೂಲಕ ಆತ್ಮವಿಶ್ವಾಸದಿಂದ ಬೀಗುತ್ತಿರುವ ಆರ್‌ಸಿಬಿ ತಂಡದ ನಾಯಕ ಕೊಹ್ಲಿ, ಇದೀಗ ಹ್ಯಾಟ್ರಿಕ್ ಅರ್ಧಶತಕ ಬಾರಿಸಲು ಎದುರು ನೋಡುತ್ತಿದ್ದಾರೆ.

211

2. ದೇವದತ್ ಪಡಿಕ್ಕಲ್‌: ಕರ್ನಾಟಕ ಮೂಲದ ಯುವ ಆರಂಭಿಕ ಬ್ಯಾಟ್ಸ್‌ಮನ್‌ ದೇವದತ್ ಪಡಿಕ್ಕಲ್‌ ಕೂಡಾ ಉತ್ತಮ ಫಾರ್ಮ್‌ನಲ್ಲಿದ್ದಾರೆ. ಕಳೆದ ಪಂದ್ಯದಲ್ಲಿ ಬ್ಯಾಟಿಂಗ್ ವೈಫಲ್ಯ ಅನುಭವಿಸಿದ್ದರೂ ಯಾವುದೇ ಕ್ಷಣದಲ್ಲಿ ಬೇಕಾದರೂ ಕಮ್‌ಬ್ಯಾಕ್‌ ಮಾಡುವ ಕ್ಷಮತೆ ಪಡಿಕ್ಕಲ್‌ಗಿದೆ.

311

3. ಕೆ.ಎಸ್‌. ಭರತ್: ಆರ್‌ಸಿಬಿ ವಿಕೆಟ್‌ ಕೀಪರ್‌ ಬ್ಯಾಟ್ಸ್‌ಮನ್‌ ಭರತ್ ಬಲಿಷ್ಠ ಮುಂಬೈ ಇಂಡಿಯನ್ಸ್‌ ಬೌಲಿಂಗ್ ಎದುರು ದಿಟ್ಟ ಪ್ರದರ್ಶನ ತೋರುವ ಮೂಲಕ ಗಮನ ಸೆಳೆದಿದ್ದರು. ಹೀಗಾಗಿ ಭರತ್ ಇಂದಿನ ಪಂದ್ಯದಲ್ಲೂ ಮೂರನೇ ಕ್ರಮಾಂಕದಲ್ಲಿ ಕಣಕ್ಕಿಳಿಯುವ ಸಾಧ್ಯತೆಯಿದೆ.

411

4. ಗ್ಲೆನ್‌ ಮ್ಯಾಕ್ಸ್‌ವೆಲ್: ಆರ್‌ಸಿಬಿ ತಂಡದ ಸ್ಟಾರ್ ಆಲ್ರೌಂಡರ್. ಮುಂಬೈ ಇಂಡಿಯನ್ಸ್‌ ಎದುರು ಆಕರ್ಷಕ ಅರ್ಧಶತಕ ಬಾರಿಸಿದ್ದಲ್ಲದೇ ಬೌಲಿಂಗ್‌ನಲ್ಲೂ ಸೈ ಎನಿಸಿಕೊಂಡಿರುವ ಮ್ಯಾಕ್ಸಿ ಮತ್ತೊಮ್ಮೆ ಮಿಂಚಿದರೆ ಆರ್‌ಸಿಬಿಗೆ ಗೆಲುವು ಕಟ್ಟಿಟ್ಟ ಬುತ್ತಿ.

511

5. ಎಬಿ ಡಿವಿಲಿಯರ್ಸ್‌: ಯುಎಇ ಚರಣದಲ್ಲಿ ಇದುವರೆಗೂ ಎಬಿಡಿ ಶೋ ನೋಡಲು ಸಿಕ್ಕಿಲ್ಲ. ಆದರೆ ಯಾವುದೇ ಕ್ಷಣದಲ್ಲಿ ಬೇಕಾದರೂ ಅಬ್ಬರಿಸಿ ಪಂದ್ಯದ ದಿಕ್ಕನ್ನೇ ಬದಲಾಯಿಸುವ ಸಾಮರ್ಥ್ಯ ಎಬಿ ಡಿವಿಲಿಯರ್ಸ್‌ಗಿದೆ.

611

6. ಟಿಮ್‌ ಡೇವಿಡ್‌: ಡೇನಿಯಲ್ ಕ್ರಿಶ್ಚಿಯನ್‌ ಕಳೆದ ಪಂದ್ಯದಲ್ಲಿ ಬ್ಯಾಟಿಂಗ್ ಇಲ್ಲವೇ ಬೌಲಿಂಗ್‌ನಲ್ಲಿ ಗಮನಾರ್ಹ ಪ್ರದರ್ಶನ ತೋರಿರಲಿಲ್ಲ. ಹೀಗಾಗಿ ಮಧ್ಯಮ ಕ್ರಮಾಂಕದ ಬ್ಯಾಟಿಂಗ್ ಮತ್ತಷ್ಟು ಭದ್ರಪಡಿಸಲು ಟಿಮ್ ಡೇವಿಡ್‌ಗೆ ಮತ್ತೊಂದು ಅವಕಾಶ ಸಿಗುವ ಸಾಧ್ಯತೆಯಿದೆ.

711

7. ಶಾಬಾಜ್ ಅಹಮ್ಮದ್‌: ಆರ್‌ಸಿಬಿಯ ಮತ್ತೋರ್ವ ಆಲ್ರೌಂಡರ್‌, ಬ್ಯಾಟಿಂಗ್, ಬೌಲಿಂಗ್ ಹಾಗೂ ಫೀಲ್ಡಿಂಗ್‌ನಲ್ಲಿ ತನ್ನದೇ ಆದ ಕಾಣಿಕೆ ನೀಡಬಲ್ಲ ಉಪಯುಕ್ತ ಆಟಗಾರ. ಕಳೆದ ಪಂದ್ಯದಲ್ಲಿ ಮಿಂಚಲು ಶಾಬಾಜ್‌ಗೆ ಸಾಧ್ಯವಾಗಿರಲಿಲ್ಲ.

811

8. ಹರ್ಷಲ್‌ ಪಟೇಲ್‌: ಮುಂಬೈ ಇಂಡಿಯನ್ಸ್ ವಿರುದ್ದ ಹ್ಯಾಟ್ರಿಕ್ ವಿಕೆಟ್ ಕಬಳಿಸಿ ಪಂದ್ಯ ಆರ್‌ಸಿಬಿಯತ್ತ ವಾಲುವಂತೆ ಮಾಡಿದ್ದ ಹರ್ಷಲ್‌ ಪಟೇಲ್‌ ಮತ್ತೊಮ್ಮೆ ಬೌಲಿಂಗ್‌ನಲ್ಲಿ ಮಿಂಚಲು ಎದುರು ನೋಡುತ್ತಿದ್ದಾರೆ.

911

9. ಕೈಲ್ ಜೇಮಿಸನ್‌: ನ್ಯೂಜಿಲೆಂಡ್ ಮೂಲದ ವೇಗದ ಬೌಲರ್‌. ಯುಎಇ ಚರಣದಲ್ಲಿ ಅಷ್ಟೇನು ಪರಿಣಾಮಕಾರಿ ಪ್ರದರ್ಶನವನ್ನು ಜೇಮಿಸನ್ ನೀಡಿಲ್ಲ. ಆರ್‌ಸಿಬಿ ಮ್ಯಾನೇಜ್‌ಮೆಂಟ್‌ ನಂಬಿಕೆ ಉಳಿಸಿಕೊಳ್ಳಲು ನೀಳಕಾಯದ ವೇಗಿ ಎದುರು ನೋಡುತ್ತಿದ್ದಾರೆ.

1011

10. ಮೊಹಮ್ಮದ್ ಸಿರಾಜ್‌: ಆರ್‌ಸಿಬಿ ತಂಡದ ವೇಗದ ಬೌಲಿಂಗ್ ಅಸ್ತ್ರ ಸಿರಾಜ್ ಇತ್ತೀಚಿನ ದಿನಗಳಲ್ಲಿ ಅತ್ಯಂತ ಪರಿಣಾಮಕಾರಿ ಬೌಲಿಂಗ್ ನಡೆಸುವ ಮೂಲಕ ಗಮನ ಸೆಳೆಯುತ್ತಿದ್ದಾರೆ. ಇದಷ್ಟೇ ಅಲ್ಲದೇ ರನ್‌ವೇಗಕ್ಕೂ ಕಡಿವಾಣ ಹಾಕುತ್ತಿರುವುದು ಆರ್‌ಸಿಬಿ ಪಾಲಿಗೆ ಒಳ್ಳೆಯ ಬೆಳವಣಿಗೆ

1111

11. ಯುಜುವೇಂದ್ರ ಚಹಲ್: ಆರ್‌ಸಿಬಿ ತಂಡದ ಸ್ಪಿನ್‌ ಬೌಲಿಂಗ್ ಅಸ್ತ್ರ. ಅಗತ್ಯ ಸಂದರ್ಭದಲ್ಲಿ ತಂಡಕ್ಕೆ ವಿಕೆಟ್ ಕಬಳಿಸಿಕೊಡಬಲ್ಲ ಚಹಲ್‌, ಮುಂಬೈ ವಿರುದ್ದ ಚಾಣಾಕ್ಷ ಬೌಲಿಂಗ್ ಪ್ರದರ್ಶನ ತೋರಿ 3 ವಿಕೆಟ್‌ ಕಬಳಿಸಿದ್ದರು.

About the Author

SN
Suvarna News

Latest Videos
Recommended Stories
Related Stories
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2025 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved