IPL 2021: ಟಿ ನಟರಾಜನ್ ಸೇರಿ ಸನ್‌ರೈಸರ್ಸ್‌ನ 6 ಆಟಗಾರರಿಗೆ ಕೋವಿಡ್ ಪಾಸಿಟಿವ್..!
ದುಬೈ: ಬಹುನಿರೀಕ್ಷಿತ 14ನೇ ಆವೃತ್ತಿಯ ಐಪಿಎಲ್(IPL 2021) ಟೂರ್ನಿ ಯುಎಇ ಚರಣದ ಪಂದ್ಯಾವಳಿಗೆ ಅಧಿಕೃತ ಚಾಲನೆ ಸಿಕ್ಕಿದ್ದು, ಈಗಾಗಲೇ ಎರಡು ಪಂದ್ಯಗಳು ಯಶಸ್ವಿಯಾಗಿ ಜರುಗಿವೆ. ಹೀಗಿರುವಾಗಲೇ ಕೋವಿಡ್(COVID 19) ತನ್ನ ವಕ್ರದೃಷ್ಟಿಯನ್ನು ಮತ್ತೊಮ್ಮೆ ಐಪಿಎಲ್‌ನತ್ತ ಬೀರಿದ್ದು, ಸನ್‌ರೈಸರ್ಸ್ ಹೈದರಾಬಾದ್(SunRisers Hyderabad)ನ ಸ್ಟಾರ್ ವೇಗಿ ಟಿ. ನಟರಾಜನ್(T Natarajan) ಸೇರಿ ಆರು ಮಂದಿಗೆ ಕೋವಿಡ್ ದೃಢಪಟ್ಟಿದೆ. ಹೀಗಾಗಿ ಇಂದಿನ ಪಂದ್ಯ ನಡೆಯುತ್ತಾ ಎನ್ನುವ ಆತಂಕ ಅಭಿಮಾನಿಗಳಲ್ಲಿ ಮನೆ ಮಾಡಿದೆ. ನಿಮ್ಮೆಲ್ಲರ ಆತಂಕಗಳಿಗೆ ಇಲ್ಲಿದೆ ನೋಡಿ ಉತ್ತರ.NEWS - Sunrisers Hyderabad player tests positive; six close contacts isolated.More details here - https://t.co/sZnEBj13Vn #VIVOIPL— IndianPremierLeague (@IPL) September 22, 2021

14ನೇ ಆವೃತ್ತಿಯ ಐಪಿಎಲ್ ಟೂರ್ನಿಯ 33ನೇ ಪಂದ್ಯದಲ್ಲಿಂದು ಬಲಿಷ್ಠ ಡೆಲ್ಲಿ ಕ್ಯಾಪಿಟಲ್ಸ್ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ತಂಡಗಳು ಮುಖಾಮುಖಿಯಾಗಲಿದ್ದು, ಈ ಪಂದ್ಯ ಆರಂಭಕ್ಕೂ ಮುನ್ನ ಸನ್‌ರೈಸರ್ಸ್ ಹೈದರಾಬಾದ್ ಪಾಳಯದಿಂದ ಆಘಾತಕಾರಿಯಾದ ಸುದ್ದಿಯೊಂದು ಹೊರಬಿದ್ದಿದೆ,.
ಸನ್‌ರೈಸರ್ಸ್ ಹೈದರಾಬಾದ್ ತಂಡದ ಸ್ಟಾರ್ ವೇಗಿ ಟಿ. ನಟರಾಜನ್ ಅವರಿಗೆ ಕೋವಿಡ್ 19 ಸೋಂಕು ದೃಢಪಟ್ಟಿದ್ದು, ಇವರ ಜತೆ ಪ್ರಾಥಮಿಕ ಸಂಪರ್ಕ ಹೊಂದಿದ್ದ ಆರು ಮಂದಿಯೀಗ ಐಸೋಲೇಷನ್‌ಗೆ ಒಳಗಾಗಿದ್ದಾರೆ.
ಆಲ್ರೌಂಡರ್ ವಿಜಯ್ ಶಂಕರ್ ಹಾಗೂ ಐವರು ಸಹಾಯಕ ಸಿಬ್ಬಂದಿ ಟಿ ನಟರಾಜನ್ ಜತೆ ಪ್ರಾಥಮಿಕ ಸಂಪರ್ಕ ಹೊಂದಿದ್ದರು ಎಂದು ಗುರುತಿಸಲಾಗಿದೆ. RT-PCR ಟೆಸ್ಟ್ ವೇಳೆ ನಟರಾಜನ್‌ಗೆ ಕೋವಿಡ್ ದೃಢಪಟ್ಟಿದೆ ಎಂದು ಐಪಿಎಲ್ ಆಯೋಜಕರು ತಮ್ಮ ಪ್ರಕಟಣೆಯಲ್ಲಿ ತಿಳಿಸಿದೆ.
ಈ ಮೊದಲು ಭಾರತದಲ್ಲಿ ಆಯೋಜನೆಗೊಂಡಿದ್ದ ಐಪಿಎಲ್ ಟೂರ್ನಿಯ ವೇಳೆಯಲ್ಲೂ ಕೋವಿಡ್ ತನ್ನ ವಕ್ರದೃಷ್ಠಿ ಬೀರಿತ್ತು. ಬಯೋ ಬಬಲ್‌ನೊಳಗಿದ್ದ ಆಟಗಾರರು ಹಾಗೂ ಸಿಬ್ಬಂದಿಗೆ ಕೋವಿಡ್ ದೃಢಪಟ್ಟ ಬೆನ್ನಲ್ಲೇ ಮೇ.4ರಂದು ಐಪಿಎಲ್ ಟೂರ್ನಿಯನ್ನು ಅನಿರ್ದಿಷ್ಟಾವಧಿಗೆ ಮುಂದೂಡಿತ್ತು.
ಇದೀಗ ಸನ್‌ರೈಸರ್ಸ್ ತಂಡದ ಆರು ಆಟಗಾರರನ್ನು ಹೊರತುಪಡಿಸಿ ಉಳಿದೆಲ್ಲರಿಗೂ ಯಾವುದೇ ಸೋಂಕಿನ ಲಕ್ಷಣಗಳು ಕಂಡು ಬಂದಿಲ್ಲ ಎಂದು ವರದಿಯಾಗಿದೆ. ಉಳಿದೆಲ್ಲ ಆಟಗಾರರ RT-PCR ಟೆಸ್ಟ್ ವರದಿ ನೆಗೆಟಿವ್ ಬಂದಿದೆ.
ಹೀಗಾಗಿ ಸನ್‌ರೈಸರ್ಸ್ ಹೈದರಾಬಾದ್ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ನಡುವಿನ ಪಂದ್ಯವು ಈ ಹಿಂದೆ ನಿಗದಿಯಾದಂತೆ ಯಥಾ ಪ್ರಕಾರ ದುಬೈ ಅಂತಾರಾಷ್ಟ್ರೀಯ ಮೈದಾನದಲ್ಲಿ ಐಪಿಎಲ್ ಪಂದ್ಯ ನಡೆಯಲಿದ ಎಂದು ಐಪಿಎಲ್ ಆಯೋಜಕರು ತಮ್ಮ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.