MalayalamNewsableKannadaKannadaPrabhaTeluguTamilBanglaHindiMarathiMyNation
Add Preferred SourceGoogle-icon
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಗ್ಯಾಲರಿ
  • ಮನರಂಜನೆ
  • ಜ್ಯೋತಿಷ್ಯ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ಕ್ರೀಡೆ
  • ಜೀವನಶೈಲಿ
  • ವಾಣಿಜ್ಯ
TRENDING :
Bigg Boss Kannada 13
ECI Internal Rift
Bay of Bengal Cyclone
India's Highest Civilian Award
Today's Horoscope
Satish Jarkiholi ED Probe
YouTuber Madhu Gowda
Karnataka Assembly Drama
Karnataka BJP vs Congress
India Rich List 2026
Indian Education System
Vande Bharat Express Arasikere
  • Home
  • Sports
  • Cricket
  • IPL Retention 2022: ಆರ್‌ಸಿಬಿಯಿಂದ ಇಬ್ಬರು, ಸಿಎಸ್‌ಕೆ, ಮುಂಬೈ ನಾಲ್ವರು ಆಟಗಾರರ ರೀಟೈನ್‌..?

IPL Retention 2022: ಆರ್‌ಸಿಬಿಯಿಂದ ಇಬ್ಬರು, ಸಿಎಸ್‌ಕೆ, ಮುಂಬೈ ನಾಲ್ವರು ಆಟಗಾರರ ರೀಟೈನ್‌..?

ಮುಂಬೈ: ಇಂಡಿಯನ್‌ ಪ್ರೀಮಿಯರ್‌ ಲೀಗ್‌(ಐಪಿಎಲ್‌)ನ (IPL 2022) 15ನೇ ಆವೃತ್ತಿಗೆ ಸಿದ್ಧತೆಗಳು ಶುರುವಾಗಿವೆ. ರಾಯಲ್‌ ಚಾಲೆಂಜ​ರ್ಸ್‌ ಬೆಂಗಳೂರು(ಆರ್‌ಸಿಬಿ) (RCB), ಚೆನ್ನೈ ಸೂಪರ್‌ ಕಿಂಗ್ಸ್‌ (CSK), ಮುಂಬೈ ಇಂಡಿಯನ್ಸ್‌(Mumbai Indians), ಕೋಲ್ಕತಾ ನೈಟ್‌ ರೈಡ​ರ್ಸ್‌(KKR), ರಾಜಸ್ಥಾನ್‌ ರಾಯಲ್ಸ್‌ (Rajasthan Royals) ಹಾಗೂ ಡೆಲ್ಲಿ ಕ್ಯಾಪಿಟಲ್ಸ್‌ (Delhi Capitals) ತಂಡಗಳು ಆಟಗಾರರ ರಿಟೈನ್‌ ಪ್ರಕ್ರಿಯೆಯನ್ನು ಪೂರ್ಣಗೊಳಿಸಿದ್ದು, ಅಧಿಕೃತ ಘೋಷಣೆ ಮಾತ್ರ ಬಾಕಿ ಉಳಿದಿದೆ ಎಂದು ಮೂಲಗಳು ತಿಳಿಸಿವೆ. ಪಂಜಾಬ್‌ ಮತ್ತು ಹೈದರಾಬಾದ್‌ ತಂಡಗಳು ಯಾವ ಆಟಗಾರರನ್ನು ಉಳಿಸಿಕೊಳ್ಳಲಿವೆ ಎಂಬ ಕುತೂಹಲ ಹೆಚ್ಚಿದೆ. ನವೆಂಬರ್ 30ರೊಳಗೆ ಉಳಿಸಿಕೊಳ್ಳಲಿರುವ ಆಟಗಾರರ ಪಟ್ಟಿಯನ್ನು (ಹಳೆಯ 8) ತಂಡಗಳು ಬಿಸಿಸಿಐಗೆ ಸಲ್ಲಿಸಬೇಕಾಗಿದೆ.

1 Min read
Author : Suvarna News
Published : Nov 27 2021, 01:38 PM IST
Share this Photo Gallery
  • FB
  • TW
  • Linkdin
  • Whatsapp
17

ಮಹೇಂದ್ರ ಸಿಂಗ್ ಧೋನಿ ನೇತೃತ್ವದ ಹಾಲಿ ಚಾಂಪಿಯನ್‌ ಚೆನ್ನೈ ಸೂಪರ್ ಕಿಂಗ್ಸ್‌ ನಾಲ್ವರು ಆಟಗಾರರನ್ನು ರೀಟೈನ್ ಮಾಡಿಕೊಳ್ಳಲು ಮುಂದಾಗಿದೆ. ತನ್ನ ಯಶಸ್ವಿ ನಾಯಕ ಮಹೇಂದ್ರ ಸಿಂಗ್ ಧೋನಿ, ಸ್ಟಾರ್ ಆಲ್ರೌಂಡರ್ ರವೀಂದ್ರ ಜಡೇಜಾ, ಮೋಯಿನ್ ಅಲಿ ಹಾಗೂ ಯುವ ಪ್ರತಿಭಾನ್ವಿತ ಬ್ಯಾಟರ್ ಋತುರಾಜ್ ಗಾಯಕ್ವಾಡ್ ಅವರನ್ನು ರೀಟೈನ್ ಮಾಡಿಕೊಳ್ಳಲಿದೆ ಎಂದು ವರದಿಯಾಗಿದೆ
 

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred
27

ಡೆಲ್ಲಿ ಕ್ಯಾಪಿಟಲ್ಸ್ ಫ್ರಾಂಚೈಸಿಯು ನಾಯಕ ರಿಷಭ್ ಪಂತ್, ಆಲ್ರೌಂಡರ್ ಅಕ್ಷರ್ ಪಟೇಲ್, ಆರಂಭಿಕ ಬ್ಯಾಟರ್ ಪೃಥ್ವಿ ಶಾ ಹಾಗೂ ವೇಗದ ಬೌಲರ್ ಏನ್ರಿಚ್ ನೊಕಿಯೆ ಅವರನ್ನು ರೀಟೈನ್ ಮಾಡಿಕೊಳ್ಳಲಿದೆ ಎನ್ನಲಾಗುತ್ತಿದೆ

37

ಮುಂಬೈನಲ್ಲೇ ಉಳಿಯಲಿದ್ದಾರೆ ರೋಹಿತ್, ಬುಮ್ರಾ ಸೇರಿದಂತೆ ನಾಲ್ವರು ಪ್ರಮುಖ ಆಟಗಾರರು. ತಂಡದ ಯಶಸ್ವಿ ನಾಯಕ ರೋಹಿತ್ ಶರ್ಮಾ, ವೇಗದ ಅಸ್ತ್ರ ಜಸ್ಪ್ರೀತ್ ಬುಮ್ರಾ, ವಿಕೆಟ್ ಕೀಪರ್‌ ಇಶಾನ್ ಕಿಶನ್‌ ಹಾಗೂ ಆಲ್ರೌಂಡರ್ ಕೀರನ್ ಪೊಲ್ಲಾರ್ಡ್‌ ಹಾರ್ದಿಕ್ ಪಾಂಡ್ಯರನ್ನು ರೀಟೈನ್ ಮಾಡಿಕೊಳ್ಳಲು ಒಲವು  ತೋರಿದೆ.

47

ಕೆಕೆಆರ್‌ ತಂಡದಿಂದ ನಾಲ್ವರು ಆಟಗಾರರನ್ನು ರೀಟೈನ್‌ ಮಾಡಲು ಮುಂದಾಗಿದೆ ಎನ್ನಲಾಗಿದೆ. ಸ್ಟಾರ್ ಆಲ್ರೌಂಡರ್‌ಗಳಾದ ಸುನಿಲ್ ನರೈನ್, ಆಂಡ್ರೆ ರಸೆಲ್‌, ವೆಂಕಟೇಶ್ ಅಯ್ಯರ್ ಹಾಗೂ ಮಿಸ್ಟ್ರಿ ಸ್ಪಿನ್ನರ್ ವರುಣ್ ಚಕ್ರವರ್ತಿ ತನ್ನಲ್ಲೇ ಉಳಿಸಿಕೊಳ್ಳಲು ಕೆಕೆಆರ್ ಫ್ರಾಂಚೈಸಿ ಆಲೋಚಿಸಿದೆ.

57

ರಾಜಸ್ಥಾನ ರಾಯಲ್ಸ್‌ ಕೇವಲ ಇಬ್ಬರು ಆಟಗಾರರನ್ನು ರೀಟೈನ್ ಮಾಡಲು ಮುಂದಾಗಿದೆ. ತಂಡದ ನಾಯಕ ಸಂಜು ಸ್ಯಾಮ್ಸನ್‌ ಹಾಗೂ ವೇಗಿ ಜೋಫ್ರಾ ಆರ್ಚರ್‌ ಅವರನ್ನು ತನ್ನಲ್ಲೇ ಉಳಿಸಿಕೊಳ್ಳಲು ರಾಯಲ್ಸ್‌ ಒಲವು ತೋರಿದೆ ಎನ್ನಲಾಗುತ್ತಿದೆ

67

ಬೆಂಗಳೂರು ಮೂಲದ ಫ್ರಾಂಚೈಸಿಯಾದ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ತಂಡವು ಮಾಜಿ ನಾಯಕ ವಿರಾಟ್ ಕೊಹ್ಲಿ ಹಾಗೂ ಆಸ್ಟ್ರೇಲಿಯಾದ ಆಲ್ರೌಂಡರ್ ಗ್ಲೆನ್‌ ಮ್ಯಾಕ್ಸ್‌ವೆಲ್ ಅವರನ್ನು ಮಾತ್ರ ರೀಟೈನ್ ಮಾಡಲು ಒಲವು ತೋರಿದೆ ಎನ್ನಲಾಗುತ್ತಿದೆ.

77

ಹರ್ಷಲ್ ಪಟೇಲ್‌, ಮೊಹಮ್ಮದ್ ಸಿರಾಜ್ ಹಾಗೂ ಯುಜುವೇಂದ್ರ ಚಹಲ್ ಅವರ ಪೈಕಿ ಇಬ್ಬರನ್ನು ರೀಟೈನ್‌ ಮಾಡಿಕೊಂಡರೇ ಆರ್‌ಸಿಬಿ ಒಟ್ಟು 4 ಆಟಗಾರರಿಂದ 42 ಕೋಟಿ ರುಪಾಯಿ ಖರ್ಚಾಗಲಿದೆ. ಹೀಗಾಗಿ ಹರಾಜಿನಲ್ಲಿ ತಮಗೆ ಬೇಕಾದ ಆಟಗಾರರ ಖರೀದಿಗೆ ಆರ್‌ಸಿಬಿ ಒಲವು ತೋರಿದೆ ಎನ್ನಲಾಗುತ್ತಿದೆ

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

About the Author

SN
Suvarna News
ಕ್ರಿಕೆಟ್
ಇಂಡಿಯನ್ ಪ್ರೀಮಿಯರ್ ಲೀಗ್ ಆಟಗಾರರ ಹರಾಜು
ಆರ್‌ಸಿಬಿ
ವಿರಾಟ್ ಕೊಹ್ಲಿ
 

Latest Videos
Recommended Stories
Recommended image1
ಸಚಿನ್ ತೆಂಡೂಲ್ಕರ್ ಮತ್ತೊಂದು ದಾಖಲೆ ನುಚ್ಚುನೂರು; ಕೇವಲ 521 ಇನ್ನಿಂಗ್ಸ್‌ನಲ್ಲೇ ಹೊಸ ದಾಖಲೆ ಬರೆದ ಜೋ ರೂಟ್..! ಆದ್ರೂ ಕೊಹ್ಲಿ ರೆಕಾರ್ಡ್ ಸೇಫ್
Recommended image2
BCCI Chief Selector: ಅಜಿತ್ ಅಗರ್ಕರ್ ರಾಜೀನಾಮೆ ಖಚಿತ..! ಹೊಸ ಅಪ್‌ಡೇಟ್ ಕೊಟ್ಟ ಬಿಸಿಸಿಐ, ಯಾರಾಗ್ತಾರೆ ಮುಂದಿನ ಚೀಫ್ ಸೆಲೆಕ್ಟರ್?
Recommended image3
Cricket: ಕೊಹ್ಲಿ ಜೊತೆ ಗಲಾಟೆ, ಬೂಮ್ರಾಗೆ ಸಿಕ್ಸರ್ ಬಾರಿಸಿದ್ದ ಆಸೀಸ್ ಪಂಟರ್‌ಗೆ ಭಾರತದ ವೇಗಿ ತುಷಾರ್ ದೇಶಪಾಂಡೆ ತಕ್ಕ ಶಾಸ್ತಿ!
News
kannada newslatest kannada newskarnataka newsbengaluru newsMysore newsindia news in kannadainternational news in kannada
Entertainment News
Kannada Cinema Newskannada movies reviewsandalwood newskannada tv shows
Sports News
sports news in kannadacricket news in kannadaOther Sports News in Kannada
Business News
Business news in kannadashare market news in kannadabusiness ideas in kannada
Science & Technology
technology news in kannadamobile tech newsscience and tech news
Astrology
rashi bhavishya in kannadadina bhavishyavara bhavishyavastu shastra in kannadakarnataka festivals
Lifestyle
Lifestyle news in kannadafood recipes in kannadahealth tips in kannadakitchen tips in kannada
Education & Career
job news in kannadaPrivate Jobsbank jobs in karnatakaGovernment jobs in karnatakaCentral Govt Jobs in KannadaIT Jobs
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2026 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved