IPL 2023: ಇಲ್ಲಿದೆ ನೋಡಿ ನಮ್ಮ RCB ತಂಡದ ಸಂಪೂರ್ಣ ವೇಳಾಪಟ್ಟಿ..!
ಬೆಂಗಳೂರು(ಫೆ.18): ಬಹುನಿರೀಕ್ಷಿತ 16ನೇ ಆವೃತ್ತಿಯ ಇಂಡಿಯನ್ ಸೂಪರ್ ಲೀಗ್ ಟೂರ್ನಿ ಆರಂಭಕ್ಕೆ ದಿನಗಣನೆ ಆರಂಭವಾಗಿದೆ. ಮಾರ್ಚ್ 31ರಿಂದ 2023ನೇ ಸಾಲಿನ ಐಪಿಎಲ್ ಟೂರ್ನಿ ಆರಂಭವಾಗಲಿದೆ. ಇನ್ನು ಫಾಫ್ ಡು ಪ್ಲೆಸಿಸ್ ನೇತೃತ್ವದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಏಪ್ರಿಲ್ 02ರಂದು ಮುಂಬೈ ಇಂಡಿಯನ್ಸ್ ವಿರುದ್ದ ಕಣಕ್ಕಿಳಿಯುವ ಮೂಲಕ ತನ್ನ ಅಭಿಯಾನವನ್ನು ಆರಂಭಿಸಲಿದೆ. 2023ನೇ ಸಾಲಿನ ಐಪಿಎಲ್ ಟೂರ್ನಿಯಲ್ಲಿ ಆರ್‌ಸಿಬಿ ತಂಡದ ಸಂಪೂರ್ಣ ವೇಳಾಪಟ್ಟಿ ಹೀಗಿದೆ ನೋಡಿ

ಮೊದಲ ಪಂದ್ಯ: ರಾಯಲ್ ಚಾಲೆಂಜರ್ಸ್ vs ಮುಂಬೈ ಇಂಡಿಯನ್ಸ್, ಏಪ್ರಿಲ್ 02
ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ತನ್ನ ಪಾಲಿನ ಮೊದಲ ಪಂದ್ಯವನ್ನು ಬೆಂಗಳೂರಿನ ಎಂ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ 5 ಬಾರಿಯ ಚಾಂಪಿಯನ್ ಮುಂಬೈ ಇಂಡಿಯನ್ಸ್ ವಿರುದ್ದ ಕಣಕ್ಕಿಳಿಯುವ ಮೂಲಕ ಅಭಿಯಾನ ಆರಂಭಿಸಲಿದೆ.
ಸಮಯ: ಸಂಜೆ 7.30ಕ್ಕೆ
ಎರಡನೇ ಪಂದ್ಯ: ರಾಯಲ್ ಚಾಲೆಂಜರ್ಸ್ ಬೆಂಗಳೂರು vs ಕೋಲ್ಕತಾ ನೈಟ್ ರೈಡರ್ಸ್, ಏಪ್ರಿಲ್ 06
ಆರ್‌ಸಿಬಿ ತಂಡವು ತನ್ನ ಪಾಲಿನ ಎರಡನೇ ಪಂದ್ಯವನ್ನು ಕೋಲ್ಕತಾದ ಈಡನ್ ಗಾರ್ಡನ್ಸ್ ಮೈದಾನದಲ್ಲಿ ಕೋಲ್ಕತಾ ನೈಟ್ ರೈಡರ್ಸ್ ವಿರುದ್ದ ಸೆಣಸಾಡಲಿದೆ.
ಸಮಯ: ಸಂಜೆ 7.30ಕ್ಕೆ
ಮೂರನೇ ಪಂದ್ಯ: ರಾಯಲ್ ಚಾಲೆಂಜರ್ಸ್ ಬೆಂಗಳೂರು vs ಲಖನೌ ಸೂಪರ್ ಜೈಂಟ್ಸ್, ಏಪ್ರಿಲ್ 10
ಆರ್‌ಸಿಬಿ ತಂಡವು ತನ್ನ ಪಾಲಿನ ಮೂರನೇ ಪಂದ್ಯದಲ್ಲಿ ಕೆ ಎಲ್ ರಾಹುಲ್ ನೇತೃತ್ವದ ಲಖನೌ ಸೂಪರ್ ಜೈಂಟ್ಸ್ ಎದುರು ಕಾದಾಡಲಿದೆ. ಈ ಹೈ ವೋಲ್ಟೇಜ್ ಪಂದ್ಯಕ್ಕೆ ಎಂ ಚಿನ್ನಸ್ವಾಮಿ ಮೈದಾನ ಆತಿಥ್ಯ ವಹಿಸಲಿದೆ.
ಸಮಯ: ಸಂಜೆ 7.30ಕ್ಕೆ
4ನೇ ಪಂದ್ಯ: ರಾಯಲ್ ಚಾಲೆಂಜರ್ಸ್ ಬೆಂಗಳೂರು vs ಡೆಲ್ಲಿ ಕ್ಯಾಪಿಟಲ್ಸ್, ಏಪ್ರಿಲ್ 15
ಫಾಫ್ ಡು ಪ್ಲೆಸಿಸ್ ನೇತೃತ್ವದ ಆರ್‌ಸಿಬಿ ತಂಡವು ತವರಿನಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು ಎದುರಿಸಲಿದೆ. ಇದು ಟೂರ್ನಿಯಲ್ಲಿ ಆರ್‌ಸಿಬಿ ಆಡಲಿರುವ ಮೊದಲ ಮಧ್ಯಾಹ್ನದ ಪಂದ್ಯವಾಗಿರಲಿದೆ.
ಸಮಯ: ಮಧ್ಯಾಹ್ನ 3.30
5ನೇ ಪಂದ್ಯ: ಚೆನ್ನೈ ಸೂಪರ್ ಕಿಂಗ್ಸ್ vs ರಾಯಲ್ ಚಾಲೆಂಜರ್ಸ್ ಬೆಂಗಳೂರು, ಏಪ್ರಿಲ್ 17
ಐಪಿಎಲ್‌ನ ಸಾಂಪ್ರದಾಯಿಕ ಎದುರಾಳಿಗಳೆಂದೇ ಬಿಂಬಿತವಾಗಿರುವ ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಗಳು ಬೆಂಗಳೂರಿನ ಎಂ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಕಾದಾಡಲಿವೆ.
ಸಮಯ: ಸಂಜೆ 7.30
6ನೇ ಪಂದ್ಯ: ಪಂಜಾಬ್ ಕಿಂಗ್ಸ್ vs ರಾಯಲ್ ಚಾಲೆಂಜರ್ಸ್ ಬೆಂಗಳೂರು, ಏಪ್ರಿಲ್ 20
ಚೊಚ್ಚಲ ಐಪಿಎಲ್ ಟ್ರೋಫಿ ಕನವರಿಕೆಯಲ್ಲಿರುವ ಪಂಜಾಬ್ ಕಿಂಗ್ಸ್ ಹಾಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಗಳು ಮೊಹಾಲಿಯಲ್ಲಿ ಮೊದಲ ಬಾರಿಗೆ ಮುಖಾಮುಖಿಯಾಗಲಿವೆ.
ಸಮಯ: ಮಧ್ಯಾಹ್ನ 3.30
7ನೇ ಪಂದ್ಯ: ರಾಯಲ್ ಚಾಲೆಂಜರ್ಸ್ ಬೆಂಗಳೂರು vs ರಾಜಸ್ಥಾನ ರಾಯಲ್ಸ್, ಏಪ್ರಿಲ್ 23
ಆರ್‌ಸಿಬಿ ತಂಡವು ಕಳೆದ ಆವೃತ್ತಿಯ ರನ್ನರ್ ಅಪ್ ರಾಜಸ್ಥಾನ ರಾಯಲ್ಸ್ ವಿರುದ್ದ ಕಾದಾಡಲಿದ್ದು, ಈ ಹೈವೋಲ್ಟೇಜ್ ಪಂದ್ಯಕ್ಕೆ ಬೆಂಗಳೂರಿನ ಎಂ ಚಿನ್ನಸ್ವಾಮಿ ಮೈದಾನ ಆತಿಥ್ಯ ವಹಿಸಲಿದೆ.
ಸಮಯ: ಮಧ್ಯಾಹ್ನ 3.30
8ನೇ ಪಂದ್ಯ: ರಾಯಲ್ ಚಾಲೆಂಜರ್ಸ್ ಬೆಂಗಳೂರು vs ಕೋಲ್ಕತಾ ನೈಟ್ ರೈಡರ್ಸ್, ಏಪ್ರಿಲ್ 26
ಆರ್‌ಸಿಬಿ ತಂಡವು ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಬಲಿಷ್ಠ ಕೋಲ್ಕತಾ ನೈಟ್ ರೈಡರ್ಸ್ ತಂಡವನ್ನು ಎದುರಿಸಲಿದೆ. ಟೂರ್ನಿಯಲ್ಲಿ ಎರಡನೇ ಬಾರಿಗೆ ಮುಖಾಮುಖಿಯಾಗಲಿವೆ.
ಸಮಯ: ಸಂಜೆ 7.30
9ನೇ ಪಂದ್ಯ: ಲಖನೌ ಸೂಪರ್ ಜೈಂಟ್ಸ್ vs ರಾಯಲ್ ಚಾಲೆಂಜರ್ಸ್ ಬೆಂಗಳೂರು, ಮೇ 01
ಆರ್‌ಸಿಬಿ ತಂಡವು ಎರಡನೇ ಬಾರಿಗೆ ಲಖನೌ ಸೂಪರ್ ಜೈಂಟ್ಸ್ ತಂಡವನ್ನು ಎದುರಿಸಲಿದ್ದು, ಈ ಬಾರಿ ತವರಿನಾಚೆ ಕೆ ಎಲ್ ರಾಹುಲ್ ಪಡೆ ಎದುರು ಕಾದಾಡಲಿದೆ.
ಸಮಯ: ಸಂಜೆ 7.30
10ನೇ ಪಂದ್ಯ: ಡೆಲ್ಲಿ ಕ್ಯಾಪಿಟಲ್ಸ್ vs ರಾಯಲ್ ಚಾಲೆಂಜರ್ಸ್ ಬೆಂಗಳೂರು, ಮೇ 06
ಚೊಚ್ಚಲ ಐಪಿಎಲ್ ಟ್ರೋಫಿ ಕನವರಿಕೆಯಲ್ಲಿರುವ ಡೆಲ್ಲಿ ಕ್ಯಾಪಿಟಲ್ಸ್ ತಂಡವು ತವರಿನಲ್ಲಿ ಆರ್‌ಸಿಬಿ ಸವಾಲನ್ನು ಎದುರಿಸಲಿದೆ.
ಸಮಯ: 7.30
11ನೇ ಪಂದ್ಯ: ಮುಂಬೈ ಇಂಡಿಯನ್ಸ್ vs ರಾಯಲ್ ಚಾಲೆಂಜರ್ಸ್ ಬೆಂಗಳೂರು, ಮೇ 09
ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ತವರಿನಾಚೆ ಮುಂಬೈ ಇಂಡಿಯನ್ಸ್ ಎದುರು ಎರಡನೇ ಬಾರಿಗೆ ಕಾದಾಡಲಿದೆ.
ಸಮಯ: 7.30ಕ್ಕೆ
12ನೇ ಪಂದ್ಯ: ರಾಜಸ್ಥಾನ ರಾಯಲ್ಸ್ vs ರಾಯಲ್ ಚಾಲೆಂಜರ್ಸ್ ಬೆಂಗಳೂರು
ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಜೈಪುರದಲ್ಲಿ ಚೊಚ್ಚಲ ಆವೃತ್ತಿಯ ಐಪಿಎಲ್ ಚಾಂಪಿಯನ್ ರಾಜಸ್ಥಾನ ರಾಯಲ್ಸ್ ತಂಡವನ್ನು ಎದುರಿಸಲಿದೆ.
ಸಮಯ: ಮಧ್ಯಾಹ್ನ 3.30
13. ಸನ್‌ರೈಸರ್ಸ್ ಹೈದರಾಬಾದ್ vs ರಾಯಲ್ ಚಾಲೆಂಜರ್ಸ್ ಬೆಂಗಳೂರು, ಮೇ 18
ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಮೊದಲ ಬಾರಿಗೆ ಟೂರ್ನಿಯಲ್ಲಿ ಮೊದಲ ಬಾರಿಗೆ ಸನ್‌ರೈಸರ್ಸ್ ಹೈದರಾಬಾದ್ ತಂಡವನ್ನು ಎದುರಿಸಲಿದ್ದು, ಈ ಪಂದ್ಯಕ್ಕೆ ಹೈದರಾಬಾದ್ ಆತಿಥ್ಯವನ್ನು ವಹಿಸಲಿದೆ.
ಸಮಯ: ಸಂಜೆ 7.30
14. ರಾಯಲ್ ಚಾಲೆಂಜರ್ಸ್ ಬೆಂಗಳೂರು vs ಗುಜರಾತ್ ಟೈಟಾನ್ಸ್, ಮೇ 21
ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಲೀಗ್ ಹಂತದಲ್ಲಿ ತನ್ನ ಪಾಲಿನ ಕಡೆಯ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಗುಜರಾತ್ ಟೈಟಾನ್ಸ್ ತಂಡವನ್ನು ಎದುರಿಸಲಿದೆ. ಈ ಪಂದ್ಯಕ್ಕೆ ಬೆಂಗಳೂರಿನ ಎಂ ಚಿನ್ನಸ್ವಾಮಿ ಸ್ಟೇಡಿಯಂ ಆತಿಥ್ಯವನ್ನು ವಹಿಸಲಿದೆ.
ಸಮಯ: 7.30