- Home
- Sports
- Cricket
- IPL 2023: ಕೆಕೆಆರ್ ಎದುರಿನ ಪಂದ್ಯಕ್ಕೆ RCB ತಂಡದಲ್ಲಿ ಒಂದು ಮಹತ್ವದ ಬದಲಾವಣೆ..! ಯಾರಿಗೆ ಸಿಗುತ್ತೆ ಸ್ಥಾನ?
IPL 2023: ಕೆಕೆಆರ್ ಎದುರಿನ ಪಂದ್ಯಕ್ಕೆ RCB ತಂಡದಲ್ಲಿ ಒಂದು ಮಹತ್ವದ ಬದಲಾವಣೆ..! ಯಾರಿಗೆ ಸಿಗುತ್ತೆ ಸ್ಥಾನ?
ಕೋಲ್ಕತಾ(ಏ.06): 16ನೇ ಆವೃತ್ತಿಯ ಐಪಿಎಲ್ ಟೂರ್ನಿಯ 9ನೇ ಪಂದ್ಯದಲ್ಲಿಂದು ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಕೋಲ್ಕತಾ ನೈಟ್ ರೈಡರ್ಸ್ ತಂಡಗಳು ಮುಖಾಮುಖಿಯಾಗುತ್ತಿದ್ದು, ಈ ಹೈವೋಲ್ಟೇಜ್ ಪಂದ್ಯಕ್ಕೆ ಇಲ್ಲಿನ ಈಡನ್ ಗಾರ್ಡನ್ಸ್ ಮೈದಾನ ಆತಿಥ್ಯವನ್ನು ವಹಿಸಿದೆ. ಕೆಕೆಆರ್ ಎದುರಿನ ಪಂದ್ಯಕ್ಕೆ ಆರ್‌ಸಿಬಿ ತಂಡವು ಒಂದು ಮಹತ್ವದ ಬದಲಾವಣೆಯೊಂದಿಗೆ ಕಣಕ್ಕಿಳಿಯುವುದು ನಿಚ್ಚಳವಾಗಿದೆ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ.

1. ಫಾಫ್ ಡು ಪ್ಲೆಸಿಸ್:
ಆರ್‌ಸಿಬಿ ತಂಡದ ನಾಯಕ ಫಾಫ್, ಮುಂಬೈ ಎದುರಿನ ಮೊದಲ ಪಂದ್ಯದಲ್ಲಿ ಸಿಡಿಲಬ್ಬರದ ಅರ್ಧಶತಕ ಸಿಡಿಸಿ ಮಿಂಚಿದ್ದರು. ಇದರ ಜತೆಗೆ ನಾಯಕನಾಗಿಯೂ ಸೈ ಎನಿಸಿಕೊಂಡಿದ್ದರು. ಫಾಫ್ ಅದೇ ಲಯ ಮುಂದುವರೆಸಿಕೊಂಡು ಹೋಗಲು ಎದುರು ನೋಡುತ್ತಿದ್ದಾರೆ.
2. ವಿರಾಟ್ ಕೊಹ್ಲಿ:
ಮಾಜಿ ನಾಯಕ ವಿರಾಟ್ ಕೊಹ್ಲಿ, ಅಜೇಯ ಅರ್ಧಶತಕ ಸಿಡಿಸುವ ಮೂಲಕ ತಂಡವನ್ನು ಗೆಲುವಿನ ದಡ ಸೇರಿಸಿದ್ದರು. ಕೊಹ್ಲಿ ಉತ್ತಮ ಲಯದಲ್ಲಿದ್ದು, ಕೆಕೆಆರ್ ಬೌಲರ್‌ಗಳ ಮೇಲೆ ಸವಾರಿ ಮಾಡಲು ಸಜ್ಜಾಗಿದ್ದಾರೆ.
3. ಗ್ಲೆನ್ ಮ್ಯಾಕ್ಸ್‌ವೆಲ್:
ಆಸ್ಟ್ರೇಲಿಯಾ ಮೂಲದ ತಾರಾ ಆಲ್ರೌಂಡರ್, ಮ್ಯಾಕ್ಸ್‌ವೆಲ್, ಮೊದಲ ಪಂದ್ಯದಲ್ಲೇ ಸ್ಪೋಟಕ ಬ್ಯಾಟಿಂಗ್ ನಡೆಸಿ ತಾವೆಂಥ ಅಪಾಯಕಾರಿ ಬ್ಯಾಟರ್ ಎನ್ನುವ ಎಚ್ಚರಿಕೆ ನೀಡಿದ್ದಾರೆ. ಮ್ಯಾಕ್ಸಿ ಮೇಲೆ ಆರ್‌ಸಿಬಿ ತಂಡವು ಸಾಕಷ್ಟು ನಿರೀಕ್ಷೆಯಿಟ್ಟಿದೆ.
4. ಮಿಚೆಲ್ ಬ್ರೇಸ್‌ವೆಲ್:
ನ್ಯೂಜಿಲೆಂಡ್ ಬ್ಯಾಟಿಂಗ್ ಆಲ್ರೌಂಡರ್ ಬ್ರೇಸ್‌ವೆಲ್, ಮೊದಲ ಪಂದ್ಯದಲ್ಲಿ ಬ್ಯಾಟಿಂಗ್ ಮಾಡುವ ಅವಕಾಶ ಸಿಕ್ಕಿರಲಿಲ್ಲ. ಆದರೆ ಬೌಲಿಂಗ್‌ನಲ್ಲಿ 2 ಓವರ್ ಬೌಲಿಂಗ್ ಮಾಡಿ 16 ರನ್ ನೀಡಿ ಪ್ರಮುಖ ಒಂದು ವಿಕೆಟ್ ಕಬಳಿಸಿದ್ದರು.
5. ಶಹಬಾಜ್ ಅಹಮ್ಮದ್:
ಬೌಲಿಂಗ್ ಆಲ್ರೌಂಡರ್ ಆಗಿ ಗುರುತಿಸಿಕೊಂಡಿರುವ ಶಹಬಾಜ್ ಅಹಮ್ಮದ್ ಕಳೆದ ಪಂದ್ಯದಲ್ಲಿ ಬೌಲಿಂಗ್ ಹಾಗೂ ಬ್ಯಾಟಿಂಗ್ ಮಾಡಲು ಅವಕಾಶ ಸಿಕ್ಕಿರಲಿಲ್ಲ. ಇದೀಗ ಎರಡನೇ ಪಂದ್ಯದಲ್ಲಿ ಶಹಬಾಜ್‌ಗೆ ಬೌಲಿಂಗ್ ಮಾಡುವ ಅವಕಾಶ ಸಿಗುವ ಸಾಧ್ಯತೆಯಿದೆ.
6. ದಿನೇಶ್ ಕಾರ್ತಿಕ್:
ಅನುಭವಿ ವಿಕೆಟ್ ಕೀಪರ್ ಬ್ಯಾಟರ್ ದಿನೇಶ್ ಕಾರ್ತಿಕ್, ಮ್ಯಾಚ್ ಫಿನಿಶರ್ ಪಾತ್ರವನ್ನು ನಿಭಾಯಿಸುತ್ತಾ ಬಂದಿದ್ದಾರೆ. ಮೊದಲ ಪಂದ್ಯದಲ್ಲಿ ಖಾತೆ ತೆರೆಯುವ ಮುನ್ನವೇ ವಿಕೆಟ್ ಒಪ್ಪಿಸಿದ್ದ ಡಿಕೆ, ಇದೀಗ ಜವಾಬ್ದಾರಿ ಆಟವಾಡಬೇಕಿದೆ.
7. ಡೇವಿಡ್ ವಿಲ್ಲಿ:
ಇಂಗ್ಲೆಂಡ್ ಎಡಗೈ ವೇಗಿ ರೀಸ್ ಟಾಪ್ಲೆ, ಮೊದಲ ಪಂದ್ಯದ ವೇಳೆ ಗಾಯಗೊಂಡು, ಇದೀಗ ಎರಡನೇ ಪಂದ್ಯಕ್ಕೆ ಅಲಭ್ಯರಾಗಿದ್ದಾರೆ. ಹೀಗಾಗಿ ಟಾಪ್ಲೆ ಬದಲಿಗೆ ಇಂಗ್ಲೆಂಡ್‌ನ ಮತ್ತೋರ್ವ ವೇಗಿ ಡೇವಿಡ್ ವಿಲ್ಲಿ, ಆರ್‌ಸಿಬಿ ತಂಡ ಕೂಡಿಕೊಳ್ಳುವ ಸಾಧ್ಯತೆಯಿದೆ.
8. ಹರ್ಷಲ್ ಪಟೇಲ್:
ಆರ್‌ಸಿಬಿ ತಂಡದ ಡೆತ್ ಓವರ್ ಸ್ಪೆಷಲಿಸ್ಟ್ ಆಗಿ ಗುರುತಿಸಿಕೊಂಡಿರುವ ಹರ್ಷಲ್ ಪಟೇಲ್, ಮೊದಲ ಪಂದ್ಯದಲ್ಲಿ 4 ಓವರ್‌ನಲ್ಲಿ 1 ವಿಕೆಟ್ ಕಬಳಿಸಿ 43 ರನ್ ನೀಡಿ ದುಬಾರಿಯಾಗಿದ್ದರು. ಹರ್ಷಲ್, ಇದೀಗ ಎರಡನೇ ಪಂದ್ಯದಲ್ಲಿ ಕಮ್‌ಬ್ಯಾಕ್ ಮಾಡುವ ವಿಶ್ವಾಸದಲ್ಲಿದ್ದಾರೆ.
9. ಆಕಾಶ್‌ದೀಪ್:
ಬಿಹಾರ ಮೂಲದ ಬಲಗೈ ವೇಗಿ ಆಕಾಶ್‌ದೀಪ್, ಮೊದಲ ಪಂದ್ಯದಲ್ಲೇ ರೋಹಿತ್ ಶರ್ಮಾ ವಿಕೆಟ್ ಕಬಳಿಸಿ ಆರ್‌ಸಿಬಿಗೆ ಆರಂಭಿಕ ಮುನ್ನಡೆ ಒದಗಿಸಿಕೊಟ್ಟಿದ್ದರು. ಇದೀಗ ಅದೇ ಲಯ ಮುಂದುವರೆಸಿಕೊಂಡು ಹೋಗಲು ಆಕಾಶ್‌ದೀಪ್ ಎದುರು ನೋಡುತ್ತಿದ್ದಾರೆ.
10. ಕರ್ಣ್ ಶರ್ಮಾ:
ನೀಳ ಕಾಯದ ಸ್ಪಿನ್ನರ್ ಕರ್ಣ್ ಶರ್ಮಾ, ಮೊದಲ ಪಂದ್ಯದಲ್ಲಿ ಮುಂಬೈನ ಎರಡು ವಿಕೆಟ್ ಕಬಳಿಸುವ ಮೂಲಕ ಯಶಸ್ವಿ ಬೌಲರ್ ಆಗಿ ಹೊರಹೊಮ್ಮಿದ್ದರು. ಕರ್ಣ್ ಶರ್ಮಾ ಮೇಲೆ ಆರ್‌ಸಿಬಿ ಈ ಬಾರಿ ಸಾಕಷ್ಟು ವಿಶ್ವಾಸವಿಟ್ಟಿದೆ.
11. ಮೊಹಮ್ಮದ್ ಸಿರಾಜ್:
ಆರ್‌ಸಿಬಿ ತಂಡದ ನಂಬಿಗಸ್ಥ ವೇಗಿ ಸಿರಾಜ್, ಮೊದಲ 3 ಓವರ್‌ಗಳಲ್ಲಿ ಶಿಸ್ತುಬದ್ದ ದಾಳಿ ಮೂಲಕ ಮುಂಬೈ ಬ್ಯಾಟರ್‌ಗಳು ತಬ್ಬಿಬ್ಬಾಗುವಂತೆ ಮಾಡಿದ್ದರು. ಇದೀಗ ಸಿರಾಜ್, ಕೆಕೆಆರ್ ಬ್ಯಾಟರ್‌ಗಳನ್ನು ಕಾಡುವ ವಿಶ್ವಾಸದಲ್ಲಿದ್ದಾರೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.