KKR ಎದುರು ಆರ್‌ಸಿಬಿ ಸೋಲಿಗೆ ಕಾರಣಗಳೇನು..? ಇಲ್ಲಿದೆ ಇಂಟ್ರೆಸ್ಟಿಂಗ್ ಡೀಟೈಲ್ಸ್
ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ತವರಿನಲ್ಲಿ ಕೋಲ್ಕತಾ ನೈಟ್ ರೈಡರ್ಸ್ ಎದುರು ಹೀನಾಯ ಸೋಲು ಅನುಭವಿಸಿದೆ. ಈ ಸೋಲಿಗೆ ಕಾರಣವೇನು ಎನ್ನುವುದರ ಇಂಟ್ರೆಸ್ಟಿಂಗ್ ಡೀಟೈಲ್ಸ್ ಇಲ್ಲಿದೆ ನೋಡಿ.

ಬೆಂಗಳೂರಿನ ಎಂ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ಕೆಕೆಆರ್ ಹಾಗೂ ಆರ್‌ಸಿಬಿ ನಡುವಿನ ಪಂದ್ಯದಲ್ಲಿ ಶ್ರೇಯಸ್ ಅಯ್ಯರ್ ನೇತೃತ್ವದ ಕೋಲ್ಕತಾ ನೈಟ್ ರೈಡರ್ಸ್ ತಂಡವು 7 ವಿಕೆಟ್‌ಗಳ ಸುಲಭ ಗೆಲುವು ಸಾಧಿಸಿದೆ.
ಇದರೊಂದಿಗೆ 17ನೇ ಆವೃತ್ತಿಯ ಐಪಿಎಲ್ ಟೂರ್ನಿಯಲ್ಲಿ ತವರಿನಲ್ಲಿ ಸೋಲಿನ ಶಾಕ್ ಅನುಭವಿಸಿದ ಕುಖ್ಯಾತಿಗೆ ಫಾಫ್ ಡು ಪ್ಲೆಸಿಸ್ ನೇತೃತ್ವದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಪಾತ್ರವಾಗಿದೆ
ಇನ್ನು ಈ ಗೆಲುವಿನೊಂದಿಗೆ ಕೋಲ್ಕತಾ ನೈಟ್ ರೈಡರ್ಸ್ ತಂಡವು ಅಂಕಪಟ್ಟಿಯಲ್ಲಿ ಎರಡನೇ ಸ್ಥಾನಕ್ಕೆ ಜಿಗಿದರೆ, ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಆರನೇ ಸ್ಥಾನದಲ್ಲೇ ಮುಂದುವರೆದಿದೆ. ಕೆಕೆಆರ್ ಎದುರು ಆರ್‌ಸಿಬಿ ಸೋಲಿಗೆ ಕಾರಣವೇನು ಎನ್ನುವುದನ್ನು ನೋಡುವುದಾದರೇ...
1. ಆರಂಭದಲ್ಲೇ ವಿಕೆಟ್ ಪತನ
ಆರ್‌ಸಿಬಿ ತಂಡವು ಕೆಕೆಆರ್ ಎದುರು ಉತ್ತಮ ಆರಂಭ ಪಡೆಯಲು ವಿಫಲವಾಯಿತು. ನಾಯಕ ಫಾಫ್ ಡು ಪ್ಲೆಸಿಸ್ ಕೇವಲ 8 ರನ್ ಗಳಿಸಿ ವಿಕೆಟ್ ಒಪ್ಪಿಸಿದ್ದು, ತಂಡದ ಬೃಹತ್ ಮೊತ್ತ ಕಲೆಹಾಕುವ ಅವಕಾಶ ಕೈಜಾರುವಂತೆ ಮಾಡಿತು.
2. ರಜತ್ ಪಾಟೀದಾರ್, ಅನೂಜ್ ರಾವತ್ ವೈಪಲ್ಯ
ಮಧ್ಯಮ ಕ್ರಮಾಂಕದ ಬ್ಯಾಟರ್‌ಗಳಾದ ರಜತ್ ಪಾಟೀದಾರ್ ಹಾಗೂ ಅನೂಜ್ ರಾವತ್ ಮತ್ತೊಮ್ಮೆ ಕೆಕೆಆರ್ ಎದುರು ವೈಪಲ್ಯ ಅನುಭವಿಸಿದರು. ಇವರಿಬ್ಬರು ಅಬ್ಬರಿಸಿದ್ದರೆ ಆರ್‌ಸಿಬಿ 200ರ ರನ್ ಗಡಿ ದಾಟಬಹುದಿತ್ತು.
3. ದುಬಾರಿಯಾದ ಆರ್‌ಸಿಬಿ ವೇಗಿಗಳು:
ಆರ್‌ಸಿಬಿಯ ತ್ರಿವಳಿ ವೇಗಿಗಳಾದ ಮೊಹಮ್ಮದ್ ಸಿರಾಜ್, ಯಶ್ ದಯಾಳ್ ಹಾಗೂ ಅಲ್ಜಾರಿ ಜೋಸೆಫ್ 10+ ಎಕಾನಮಿಯಲ್ಲಿ ರನ್ ಬಿಟ್ಟುಕೊಟ್ಟಿದ್ದು, ತಂಡಕ್ಕೆ ನುಂಗಲಾರದ ತುತ್ತಾಗಿ ಪರಿಣಮಿಸಿತು.
4. ಆಲ್ರೌಂಡರ್ ಮ್ಯಾಕ್ಸ್‌ವೆಲ್ ಕಳಪೆ ಆಟ
ಗ್ಲೆನ್ ಮ್ಯಾಕ್ಸ್‌ವೆಲ್ ಮೊದಲ ಮೂರು ಪಂದ್ಯಗಳಲ್ಲಿ ನಿರೀಕ್ಷೆಯ ಭಾರ ಹೊರುವಲ್ಲಿ ವಿಫಲವಾಗಿದ್ದು, ಆರ್‌ಸಿಬಿ ಹಿನ್ನಡೆಗೆ ಕಾರಣ ಎನಿಸಿದೆ. ಕೆಕೆಆರ್ ಎದುರು ಸಿಕ್ಕ ಜೀವದಾನಗಳನ್ನು ಸದುಪಯೋಗ ಪಡಿಸಿಕೊಳ್ಳಲು ಮ್ಯಾಕ್ಸಿ ವಿಫಲವಾದರು. ಇದು ಕೂಡಾ ಆರ್‌ಸಿಬಿ ಸೋಲಿಗೆ ಪ್ರಮುಖ ಕಾರಣ.
5. ಬದಲಾವಣೆ ಮನಸ್ಸು ಮಾಡದ ಆರ್‌ಸಿಬಿ
ಆರ್‌ಸಿಬಿ ತಂಡದಲ್ಲಿ ಸ್ಪೋಟಕ ಆಟಗಾರ ವಿಲ್ ಜೇಕ್ಸ್ ಹಾಗೂ ವೇಗಿ ಲಾಕಿ ಫರ್ಗ್ಯೂಸನ್ ಅವರನ್ನು ಆಡುವ ಹನ್ನೊಂದರ ಬಳಗದಲ್ಲಿ ಸ್ಥಾನ ನೀಡಬೇಕು ಎನ್ನುವ ಕೂಗು ಕೇಳಿ ಬರುತ್ತಿದೆ. ಆದರೆ ಆರ್‌ಸಿಬಿ ಆ ಬಗ್ಗೆ ಮನಸ್ಸು ಮಾಡುತ್ತಿಲ್ಲ. ಅಲ್ಜಾರಿ ಜೋಸೆಫ್ ದುಬಾರಿಯಾಗುತ್ತಿದ್ದರೂ ಅವರಿಗೆ ಸ್ಥಾನ ನೀಡುತ್ತಿದೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.