ಐಪಿಎಲ್ ತಂಡಗಳ ಬ್ರ್ಯಾಂಡ್ ವ್ಯಾಲ್ಯೂ ಪ್ರಕಟ; ನಿಮ್ಮ ಫೇವರೇಟ್ ತಂಡ ಯಾವ ಸ್ಥಾನದಲ್ಲಿದೆ ನೋಡಿ
ಬೆಂಗಳೂರು: 2025ನೇ ಸಾಲಿನ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯು ಯಶಸ್ವಿಯಾಗಿ ಮುಕ್ತಾಯವಾದ ಬೆನ್ನಲ್ಲೇ ಎಲ್ಲಾ ತಂಡಗಳ ಬ್ರ್ಯಾಂಡ್ ವ್ಯಾಲ್ಯೂ ಪ್ರಕಟವಾಗಿದೆ. ಯಾವ ತಂಡವು ಯಾವ ಸ್ಥಾನದಲ್ಲಿದೆ ಎನ್ನುವುದನ್ನು ನೋಡೋಣ ಬನ್ನಿ

10. ಲಖನೌ ಸೂಪರ್ ಜೈಂಟ್ಸ್(122 ಮಿಲಿಯನ್)
ರಿಷಭ್ ಪಂತ್ ನಾಯಕತ್ವದ ಲಖನೌ ಸೂಪರ್ ಜೈಂಟ್ಸ್ ತಂಡವು ಕೇವಲ ಆರು ಗೆಲುವುಗಳೊಂದಿಗೆ 12 ಅಂಕ ಗಳಿಸಿ ಏಳನೇ ಸ್ಥಾನ ಪಡೆಯುವ ಮೂಲಕ ನಿರಾಸೆ ಅನುಭವಿಸಿತ್ತು.
09. ಪಂಜಾಬ್ ಕಿಂಗ್ಸ್(141 ಮಿಲಿಯನ್ ಡಾಲರ್)
ಟೂರ್ನಿಯಲ್ಲಿ ಅದ್ಭುತ ಪ್ರದರ್ಶನ ತೋರುವ ಮೂಲಕ ಶ್ರೇಯಸ್ ಅಯ್ಯರ್ ನೇತೃತ್ವದ ಪಂಜಾಬ್ ಕಿಂಗ್ಸ್ ತಂಡವು ಗ್ರೂಪ್ ಹಂತದ ಅಂತ್ಯದ ವೇಳೆಗೆ ಅಗ್ರಸ್ಥಾನ ಪಡೆದಿತ್ತು. ಆದರೆ ಫೈನಲ್‌ನಲ್ಲಿ ಮುಗ್ಗರಿಸುವ ಮೂಲಕ ಚೊಚ್ಚಲ ಐಪಿಎಲ್ ಟ್ರೋಫಿ ಗೆಲ್ಲುವ ಅವಕಾಶವನ್ನು ಕೈಚೆಲ್ಲಿತು.
08. ಗುಜರಾತ್ ಟೈಟಾನ್ಸ್(142 ಮಿಲಿಯನ್ ಡಾಲರ್)
ಶುಭ್‌ಮನ್ ಗಿಲ್ ನೇತೃತ್ವದ ಗುಜರಾತ್ ಟೈಟಾನ್ಸ್ ಕೂಡಾ ಈ ಬಾರಿಯ ಐಪಿಎಲ್ ಟೂರ್ನಿಯಲ್ಲಿ ಅದ್ಭುತ ಪ್ರದರ್ಶನ ತೋರಿತಾದರೂ, ಎಲಿಮಿನೇಟರ್ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್‌ಗೆ ಶರಣಾಗುವ ಮೂಲಕ ನಾಲ್ಕನೇ ಸ್ಥಾನಕ್ಕೆ ತೃಪ್ತಿಪಟ್ಟುಕೊಂಡಿತು. ಇದೀಗ ಗುಜರಾತ್ 142 ಮಿಲಿಯನ್ ಡಾಲರ್ ಬ್ರ್ಯಾಂಡ್ ವ್ಯಾಲ್ಯೂದೊಂದಿಗೆ 8ನೇ ಸ್ಥಾನದಲ್ಲಿದೆ.
07. ರಾಜಸ್ಥಾನ ರಾಯಲ್ಸ್ (146 ಮಿಲಿಯನ್ ಡಾಲರ್)
ಚೊಚ್ಚಲ ಆವೃತ್ತಿಯ ಐಪಿಎಲ್ ಚಾಂಪಿಯನ್ ರಾಜಸ್ಥಾನ ರಾಯಲ್ಸ್ ತಂಡವು ಈ ಬಾರಿಯ ಐಪಿಎಲ್ ಟೂರ್ನಿಯಲ್ಲಿ ನಿರಾಶಾದಾಯಕ ಪ್ರದರ್ಶನ ತೋರಿತು. ಟೂರ್ನಿಯಲ್ಲಿ ಕೇವಲ 4 ಗೆಲುವು ಕಂಡ ರಾಜಸ್ಥಾನ, 9ನೇ ಸ್ಥಾನ ಪಡೆದು ಟೂರ್ನಿಯಿಂದ ಹೊರಬಿದ್ದಿತು.
06. ಡೆಲ್ಲಿ ಕ್ಯಾಪಿಟಲ್ಸ್(152 ಮಿಲಿಯನ್ ಡಾಲರ್):
ಅಕ್ಷರ್ ಪಟೇಲ್ ನೇತೃತ್ವದ ಡೆಲ್ಲಿ ಕ್ಯಾಪಿಟಲ್ಸ್ ತಂಡವು ಕೂದಲೆಳೆ ಅಂತರದಲ್ಲಿ ಪ್ಲೇ ಆಫ್‌ಗೇರುವ ಅವಕಾಶವಂಚಿತರಾಗಿ ಅಂಕಪಟ್ಟಿಯಲ್ಲಿ 5ನೇ ಸ್ಥಾನದೊಂದಿಗೆ ತಂಡ ತನ್ನ ಅಭಿಯಾನ ಮುಗಿಸಿತು. ಇನ್ನು ಡೆಲ್ಲಿ ತನ್ನ ಬ್ರ್ಯಾಂಡ್ ವ್ಯಾಲ್ಯೂ ವಿಚಾರದಲ್ಲಿ 6ನೇ ಸ್ಥಾನದಲ್ಲಿದೆ.
05. ಸನ್‌ರೈಸರ್ಸ್ ಹೈದರಾಬಾದ್(154 ಮಿಲಿಯನ್ ಡಾಲರ್):
ಪ್ಯಾಟ್ ಕಮಿನ್ಸ್ ನೇತೃತ್ವದ ಸನ್‌ರೈಸರ್ಸ್ ಹೈದರಾಬಾದ್ ತಂಡವು 6 ಗೆಲುವು ಸಹಿತ 13 ಅಂಕಗಳೊಂದಿಗೆ ಅಂಕಪಟ್ಟಿಯಲ್ಲಿ 6ನೇ ಸ್ಥಾನ ಪಡೆಯಿತು. 154 ಮಿಲಿಯನ್ ಡಾಲರ್ ಬ್ರ್ಯಾಂಡ್ ವ್ಯಾಲ್ಯೂ ಹೊಂದಿರುವ ಆರೆಂಜ್ ಆರ್ಮಿ ಅತ್ಯಂತ ಮೌಲ್ಯಯುತ ತಂಡಗಳ ಪಟ್ಟಿಯಲ್ಲಿ 5ನೇ ಸ್ಥಾನದಲ್ಲಿದೆ.
04. ಕೋಲ್ಕತಾ ನೈಟ್ ರೈಡರ್ಸ್ (227 ಮಿಲಿಯನ್ ಡಾಲರ್):
ಮೂರು ಬಾರಿಯ ಐಪಿಎಲ್ ಚಾಂಪಿಯನ್ ಕೋಲ್ಕತಾ ನೈಟ್ ರೈಡರ್ಸ್, ಈ ಬಾರಿ ಕೇವಲ 5 ಗೆಲುವು ಸಹಿತ 12 ಅಂಕಗಳನ್ನು ಗಳಿಸಿ ಅಂಕಪಟ್ಟಿಯಲ್ಲಿ 8ನೇ ಸ್ಥಾನ ಪಡೆಯಿತು. ಬ್ರ್ಯಾಂಡ್ ವ್ಯಾಲ್ಯೂ ವಿಚಾರದಲ್ಲಿ ಕೆಕೆಆರ್ 227 ಮಿಲಿಯನ್ ಡಾಲರ್‌ಗಳೊಂದಿಗೆ 4ನೇ ಸ್ಥಾನದಲ್ಲಿದೆ.
03. ಚೆನ್ನೈ ಸೂಪರ್ ಕಿಂಗ್ಸ್ (235 ಮಿಲಿಯನ್ ಡಾಲರ್)
ಐದು ಬಾರಿಯ ಐಪಿಎಲ್ ಚಾಂಪಿಯನ್, ಮಹೇಂದ್ರ ಸಿಂಗ್ ಧೋನಿ ನೇತೃತ್ವದ ಚೆನ್ನೈ ಸೂಫರ್ ಕಿಂಗ್ಸ್ ತಂಡವು ಈ ಬಾರಿ ಕೇವಲ 4 ಗೆಲುವು ಸಹಿತ 8 ಅಂಕಗಳೊಂದಿಗೆ ಅಂಕಪಟ್ಟಿಯಲ್ಲಿ ಕೊನೆಯ ಸ್ಥಾನ ಪಡೆಯಿತು. ಹೀಗಿದ್ದೂ 235 ಮಿಲಿಯನ್ ಡಾಲರ್ ಬ್ರ್ಯಾಂಡ್ ವ್ಯಾಲ್ಯೂದೊಂದಿಗೆ ಸಿಎಸ್‌ಕೆ ಮೂರನೇ ಸ್ಥಾನದಲ್ಲಿದೆ.
02. ಮುಂಬೈ ಇಂಡಿಯನ್ಸ್ (242 ಮಿಲಿಯನ್ ಡಾಲರ್)
ಹಾರ್ದಿಕ್ ಪಾಂಡ್ಯ ನೇತೃತ್ವದ ಮುಂಬೈ ಇಂಡಿಯನ್ಸ್ ಟೂರ್ನಿಯಲ್ಲಿ ಅದ್ಭುತ ಪ್ರದರ್ಶನ ತೋರಿ ಪ್ಲೇ ಆಫ್‌ಗೇರಿತ್ತು.ಆದರೆ ಎರಡನೇ ಕ್ವಾಲಿಫೈಯರ್ ಪಂದ್ಯದಲ್ಲಿ ಪಂಜಾಬ್ ಎದುರು ಮುಗ್ಗರಿಸುವ ಮೂಲಕ ಮೂರನೇ ಸ್ಥಾನಕ್ಕೆ ತೃಪ್ತಿಪಟ್ಟುಕೊಂಡಿತ್ತು. ಬ್ರ್ಯಾಂಡ್ ವ್ಯಾಲ್ಯೂ ವಿಚಾರದಲ್ಲಿ 242 ಮಿಲಿಯನ್ ಡಾಲರ್‌ನೊಂದಿಗೆ ಎರಡನೇ ಸ್ಥಾನದಲ್ಲಿದೆ.
01. ರಾಯಲ್ ಚಾಲೆಂಜರ್ಸ್ ಬೆಂಗಳೂರು (269 ಮಿಲಿಯನ್ ಡಾಲರ್)
ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಅಸಾಧಾರಣ ಪ್ರದರ್ಶನದೊಂದಿಗೆ ಚೊಚ್ಚಲ ಟ್ರೋಫಿ ಗೆಲ್ಲುವಲ್ಲಿ ಯಶಸ್ವಿಯಾಗಿದೆ. ಇದರ ಜತೆಗೆ ಬ್ರ್ಯಾಂಡ್ ವ್ಯಾಲ್ಯೂ ವಿಚಾರದಲ್ಲೂ ಎಲ್ಲಾ ಫ್ರಾಂಚೈಸಿ ಹಿಂದಿಕ್ಕಿ 269 ಮಿಲಿಯನ್ ಡಾಲರ್‌ಗಳೊಂದಿಗೆ ಮೊದಲ ಸ್ಥಾನಕ್ಕೆ ಲಗ್ಗೆಯಿಡುವಲ್ಲಿ ಯಶಸ್ವಿಯಾಗಿದೆ.