MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಗ್ಯಾಲರಿ
  • ಮನರಂಜನೆ
  • ಜ್ಯೋತಿಷ್ಯ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ಕ್ರೀಡೆ
  • ಜೀವನಶೈಲಿ
  • ವಾಣಿಜ್ಯ
  • Home
  • Sports
  • Cricket
  • ಪಂಜಾಬ್ ಎದುರಿನ ಹೈವೋಲ್ಟೇಜ್ ಪಂದ್ಯಕ್ಕೆ ಆರ್‌ಸಿಬಿ ತಂಡದಲ್ಲಿ 2 ಮೇಜರ್ ಚೇಂಜ್!

ಪಂಜಾಬ್ ಎದುರಿನ ಹೈವೋಲ್ಟೇಜ್ ಪಂದ್ಯಕ್ಕೆ ಆರ್‌ಸಿಬಿ ತಂಡದಲ್ಲಿ 2 ಮೇಜರ್ ಚೇಂಜ್!

ಮುಲ್ಲಾನ್‌ಪುರ: 18ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ ಕ್ವಾಲಿಫೈಯರ್ 1ರಲ್ಲಿ ಚೊಚ್ಚಲ ಟ್ರೋಫಿ ಕನವರಿಕೆಯಲ್ಲಿರುವ ಪಂಜಾಬ್ ಕಿಂಗ್ಸ್ ಹಾಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಗಳು ಮುಖಾಮುಖಿಯಾಗಲಿವೆ. ಈ ಪಂದ್ಯದಲ್ಲಿ ಆರ್‌ಸಿಬಿ 2 ಬದಲಾವಣೆಯೊಂದಿಗೆ ಕಣಕ್ಕಿಳಿಯುವ ಸಾಧ್ಯತೆ ದಟ್ಟವಾಗಿದೆ. 

2 Min read
Author : Naveen Kodase
| Updated : May 29 2025, 07:58 AM IST
Share this Photo Gallery
  • FB
  • TW
  • Linkdin
  • Whatsapp
110
Image Credit : ANI

2016ರ ಬಳಿಕ ಐಪಿಎಲ್ ಟೂರ್ನಿಯಲ್ಲಿ ಫೈನಲ್ ಪ್ರವೇಶಿಸಲು ಕನಸು ಕಾಣುತ್ತಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಇಂದು ಕ್ವಾಲಿಫೈಯರ್ 1 ಪಂದ್ಯದಲ್ಲಿ ಬಲಿಷ್ಠ ಪಂಜಾಬ್ ಕಿಂಗ್ಸ್ ತಂಡವನ್ನು ಎದುರಿಸುತ್ತಿದೆ.

210
Image Credit : INSTA

ಕಳೆದ ಪಂದ್ಯದಲ್ಲಿ ಆರ್‌ಸಿಬಿ ತಂಡವು ಲಖನೌ ಸೂಪರ್ ಜೈಂಟ್ಸ್ ಎದುರು ದಾಖಲೆಯ 228 ರನ್‌ಗಳ ಗುರಿಯನ್ನು ಯಶಸ್ವಿಯಾಗಿ ಬೆನ್ನತ್ತಿ ಅಂಕಪಟ್ಟಿಯಲ್ಲಿ ಎರಡನೇ ಸ್ಥಾನ ಪಡೆಯುವಲ್ಲಿ ಯಶಸ್ವಿಯಾಗಿದೆ.

310
Image Credit : ANI

ಇದೀಗ 18ನೇ ಆವೃತ್ತಿಯ ಐಪಿಎಲ್ ಟೂರ್ನಿಯಲ್ಲಿ ಫೈನಲ್ ಪ್ರವೇಶಿಸುವ ನಿಟ್ಟಿನಲ್ಲಿ ಮಹತ್ವದ ಪಂದ್ಯ ಎನಿಸಿಕೊಂಡಿರುವ ಈ ಪಂದ್ಯದಲ್ಲಿ ಆರ್‌ಸಿಬಿ ತಂಡವು ಎರಡು ಪ್ರಮುಖ ಬದಲಾವಣೆಯೊಂದಿಗೆ ಕಣಕ್ಕಿಳಿಯುವ ಸಾಧ್ಯತೆ ದಟ್ಟವಾಗಿದೆ.

410
Image Credit : ANI

ಅಗ್ರಕ್ರಮಾಂಕದಲ್ಲಿ ಸ್ಪೋಟಕ ಬ್ಯಾಟರ್ ಫಿಲ್ ಸಾಲ್ಟ್ ಹಾಗೂ ವಿರಾಟ್ ಕೊಹ್ಲಿ ಕಣಕ್ಕಿಳಿಯಲಿದ್ದಾರೆ. ಇದರಲ್ಲಿ ಯಾವುದೇ ವ್ಯತ್ಯಾಸವಿಲ್ಲ. ಕಳೆದ ಪಂದ್ಯದಂತೆ ಈ ಬಾರಿಯು ಈ ಜೋಡಿ ಉತ್ತಮ ಆರಂಭ ಒದಗಿಸಿಕೊಡಬೇಕಿದೆ.

510
Image Credit : ANI

ಇನ್ನು ಮಧ್ಯಮ ಕ್ರಮಾಂಕದಲ್ಲಿ ನಾಯಕ ರಜತ್ ಪಾಟೀದಾರ್ ಫಾರ್ಮ್‌ಗೆ ಮರಳಬೇಕಿದೆ. ಕಳೆದೆರಡು ಪಂದ್ಯಗಳಲ್ಲಿ ಇಂಪ್ಯಾಕ್ಟ್ ಆಟಗಾರನಾಗಿ ಕಣಕ್ಕಿಳಿದಿದ್ದ ಪಾಟೀದಾರ್, ಇಂದು ಪೂರ್ಣ ಪ್ರಮಾಣದ ಆಟಗಾರನಾಗಿ ಕಾಣಿಸಿಕೊಳ್ಳಲಿದ್ದಾರೆ.

610
Image Credit : ANI

ಇನ್ನು ಮಯಾಂಕ್ ಅಗರ್‌ವಾಲ್ ಇಂಪ್ಯಾಕ್ಟ್ ಆಟಗಾರನಾಗಿ ಕಾಣಿಸಿಕೊಳ್ಳುವ ಸಾಧ್ಯತೆಯಿದ್ದು, ಮತ್ತೊಂದು ಉಪಯುಕ್ತ ಇನ್ನಿಂಗ್ಸ್ ಆಡಲು ಸಜ್ಜಾಗಿದ್ದಾರೆ. ಇವರ ಜತೆ ವಿಕೆಟ್ ಕೀಪರ್ ಬ್ಯಾಟರ್ ಜಿತೇಶ್ ಶರ್ಮಾ ಸೇರಿಕೊಂಡರೆ ಬೆಂಕಿ-ಬಿರುಗಾಳಿ ಜತೆಯಾದಂತೆ ಆಗಲಿದೆ.

710
Image Credit : ANI

ಕಳೆದ ಪಂದ್ಯದಲ್ಲಿ ಟಿಮ್ ಡೇವಿಡ್ ಬದಲಿಗೆ ಇಂಗ್ಲೆಂಡ್‌ನ ಲಿಯಾಮ್ ಲಿವಿಂಗ್‌ಸ್ಟೋನ್ ತಂಡ ಕೂಡಿಕೊಂಡಿದ್ದರು. ಆದರೆ ಮೊದಲ ಎಸೆತದಲ್ಲೇ ವಿಕೆಟ್ ಒಪ್ಪಿಸಿ ನಿರಾಸೆ ಮೂಡಿಸಿದ್ದರು. ಹೀಗಾಗಿ ಇಂದು ಲಿವಿಂಗ್‌ಸ್ಟೋನ್ ಬದಲಿಗೆ ಟಿಮ್ ಡೇವಿಡ್ ತಂಡ ಕೂಡಿಕೊಳ್ಳುವ ಸಾಧ್ಯತೆಯಿದೆ.

810
Image Credit : Instagram

ಇನ್ನುಳಿದಂತೆ ಆಲ್ರೌಂಡರ್‌ಗಳಾದ ರೊಮ್ಯಾರಿಯೋ ಶೆಫರ್ಡ್ ಹಾಗೂ ಕೃನಾಲ್ ಪಾಂಡ್ಯ ಯಾವುದೇ ಕ್ಷಣದಲ್ಲಿ ಬೇಕಿದ್ದರೂ ತಂಡಕ್ಕೆ ಆಸರೆಯಾಗಬಲ್ಲ ಆಟಗಾರರಾಗಿದ್ದು, ಈ ಇಬ್ಬರೂ ತಂಡದಲ್ಲಿ ಸ್ಥಾನ ಪಡೆಯುವುದು ಬಹುತೇಕ ಖಚಿತ ಎನಿಸಿಕೊಂಡಿದೆ.

910
Image Credit : ANI

ಇನ್ನು ಬೌಲಿಂಗ್ ವಿಭಾಗದಲ್ಲಿ ಕಳೆದ ಪಂದ್ಯದಲ್ಲಿ ನುವಾನ್ ತುಷಾರ ಮಾರಕ ದಾಳಿ ನಡೆಸಿ ಗಮನ ಸೆಳೆದಿದ್ದರು. ಹೀಗಿದ್ದೂ ಇಂದಿನ ಪಂದ್ಯಕ್ಕೆ ಅಸೀಸ್ ವೇಗಿ ಜೋಶ್ ಹೇಜಲ್‌ವುಡ್ ಸಂಪೂರ್ಣ ಫಿಟ್ ಅಗಿದ್ದು, ತಂಡ ಕೂಡಿಕೊಳ್ಳಲು ರೆಡಿಯಾಗಿದ್ದಾರೆ. ಹೀಗಾಗಿ ತುಷಾರ ಅನಿವಾರ್ಯವಾಗಿ ಹೊರಗುಳಿಯಬೇಕಾಗಬಹುದು.

1010
Image Credit : ANI

ಇನ್ನುಳಿದಂತೆ ಬೌಲಿಂಗ್ ವಿಭಾಗದಲ್ಲಿ ಮತ್ತೆ ಯಾವುದೇ ಬದಲಾವಣೆಯಾಗುವ ಸಾಧ್ಯತೆ ಕಡಿಮೆ. ಯಶ್ ದಯಾಳ್, ಭುವನೇಶ್ವರ್ ಕುಮಾರ್ ಹಾಗೂ ಸುಯಾಶ್ ಶರ್ಮಾ ತಮ್ಮ ಬತ್ತಳಿಕೆಯಲ್ಲಿರುವ ಎಲ್ಲಾ ಅಸ್ತ್ರಗಳನ್ನು ಪ್ರಯೋಗಿಸಲು ರೆಡಿಯಾಗಿದ್ದಾರೆ.

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

About the Author

NK
Naveen Kodase
ನವೀನ್ ಕೊಡಸೆ ಏಷ್ಯಾನೆಟ್ ಕನ್ನಡದಲ್ಲಿ ಮುಖ್ಯ ಉಪಸಂಪಾದಕ. ಕಳೆದ 9 ವರ್ಷಗಳಿಂದಲೂ ಮಾಧ್ಯಮ ಜಗತ್ತಿನಲ್ಲಿದ್ದೇನೆ. ಅಪ್ಪಟ ಮಲೆನಾಡಿನ ಹುಡುಗ. ಕುವೆಂಪು ವಿವಿಯ ಪತ್ರಿಕೋದ್ಯಮ ಪದವಿ ಇದೆ. ರಾಜ್‌ ನ್ಯೂಸ್‌ ಮೂಲಕ ಮಾಧ್ಯಮ ಲೋಕಕ್ಕೆ ಕಾಲಿಟ್ಟವನು. ಡಿಜಿಟಲ್‌ ಮಾಧ್ಯಮ ಲೋಕದಲ್ಲಿ ಪಳಗಿದರೂ, ಕಲಿಯೋದಿದೆ ಅಪಾರ. ಕ್ರೀಡೆ, ರಾಜಕೀಯ, ಸಾಹಿತ್ಯದಲ್ಲಿದೆ ಆಸಕ್ತಿ. ಕ್ರೀಡಾ ಸುದ್ದಿಯೇ ನನ್ನ ಜೀವಾಳ.
ಕ್ರಿಕೆಟ್
ಐಪಿಎಲ್
ಆರ್‌ಸಿಬಿ
ಪಂಜಾಬ್ ಕಿಂಗ್ಸ್

Latest Videos
Recommended Stories
Recommended image1
ಬೆಂಗಳೂರಲ್ಲಿ ಆಡೋದಾದ್ರೆ ಜ.27ಕ್ಕೆ ಮೊದಲು ಹೇಳಿ: ಆರ್‌ಸಿಬಿಗೆ ಬಿಸಿಸಿಐ ಖಡಕ್ ಡೆಡ್‌ಲೈನ್
Recommended image2
ಬಾಬರ್‌, ರಿಜ್ವಾನ್‌, ಶಾಹಿನ್‌ ಸೇರಿದಂತೆ 12ಕ್ಕೂ ಅಧಿಕ ಪಾಕ್‌ ಕ್ರಿಕೆಟಿಗರಿಗೆ 100 ಕೋಟಿ ವಂಚಿಸಿ ಎಸ್ಕೇಪ್‌ ಆದ ಉದ್ಯಮಿ!
Recommended image3
'ಹೌದು ಆರ್‌ಸಿಬಿ ಟೀಮ್‌ ಖರೀದಿಗೆ ದೊಡ್ಡ ಮೊತ್ತದ ಬಿಡ್‌ ಮಾಡಿದ್ದೇನೆ..' ಖಚಿತಪಡಿಸಿದ ಬಿಲಿಯನೇರ್‌!
News
kannada newslatest kannada newskarnataka newsbengaluru newsMysore newsindia news in kannadainternational news in kannada
Entertainment News
Kannada Cinema Newskannada movies reviewsandalwood newskannada tv shows
Sports News
sports news in kannadacricket news in kannadaOther Sports News in Kannada
Business News
Business news in kannadashare market news in kannadabusiness ideas in kannada
Science & Technology
technology news in kannadamobile tech newsscience and tech news
Astrology
rashi bhavishya in kannadadina bhavishyavara bhavishyavastu shastra in kannadakarnataka festivals
Lifestyle
Lifestyle news in kannadafood recipes in kannadahealth tips in kannadakitchen tips in kannada
Education & Career
job news in kannadaPrivate Jobsbank jobs in karnatakaGovernment jobs in karnatakaCentral Govt Jobs in KannadaIT Jobs
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2025 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved