- Home
- Sports
- Cricket
- IPL 2026 ಟೂರ್ನಿಯಲ್ಲಿ ಅತಿ ದೊಡ್ಡ ಸಿಕ್ಸರ್ ಬಾರಿಸಿದ ಟಾಪ್-5 ಬ್ಯಾಟರ್‌ಗಳಿವರು! ವೈಭವ್ ಸೂರ್ಯವಂಶಿಗಿಲ್ಲ ಸ್ಥಾನ
IPL 2026 ಟೂರ್ನಿಯಲ್ಲಿ ಅತಿ ದೊಡ್ಡ ಸಿಕ್ಸರ್ ಬಾರಿಸಿದ ಟಾಪ್-5 ಬ್ಯಾಟರ್‌ಗಳಿವರು! ವೈಭವ್ ಸೂರ್ಯವಂಶಿಗಿಲ್ಲ ಸ್ಥಾನ
ಬೆಂಗಳೂರು: 2026ರ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯು ಯಶಸ್ವಿಯಾಗಿ ಮುಕ್ತಾಯವಾಗಿದೆ. ಈ ಟೂರ್ನಿಯು ಬ್ಯಾಟರ್‌ಗಳ ಆರ್ಭಟಕ್ಕೆ ಸಾಕ್ಷಿಯಾಯಿತು. ಇದರ ಜತೆಗೆ ಹಲವು ದಾಖಲೆಗಳು ನಿರ್ಮಾಣವಾದವು. ಬನ್ನಿ ನಾವಿಂದು ಐಪಿಎಲ್‌ನಲ್ಲಿ ಅತಿದೊಡ್ಡ ಸಿಕ್ಸರ್ ಬಾರಿಸಿದ ಟಾಪ್-5 ಬ್ಯಾಟರ್‌ಗಳು ಯಾರು ನೋಡೋಣ.

IPL 2026: ಅತಿದೊಡ್ಡ ಸಿಕ್ಸರ್ ಸಿಡಿಸಿದ ಟಾಪ್-5 ಬ್ಯಾಟರ್ಸ್
ಈ ಬಾರಿಯ ಐಪಿಎಲ್ ಟೂರ್ನಿಯಲ್ಲಿ ಸ್ಪೋಟಕ ಬ್ಯಾಟಿಂಗ್ ಮೂಲಕ ಹೆಚ್ಚು ಗಮನ ಸೆಳೆದಿದ್ದು 15 ವರ್ಷದ ಯುವ ಕ್ರಿಕೆಟಿಗ ವೈಭವ್ ಸೂರ್ಯವಂಶಿ. ರಾಜಸ್ಥಾನದ ಆರಂಭಿಕ ಬ್ಯಾಟರ್ ವೈಭವ್ ಸೂರ್ಯವಂಶಿ ಈ ಸೀಸನ್ ಐಪಿಎಲ್ ಟೂರ್ನಿಯಲ್ಲಿ ಅತಿಹೆಚ್ಚು ಸಿಕ್ಸರ್ ಸಿಡಿಸಿ ಹೊಸ ಮೈಲಿಗಲ್ಲು ನೆಟ್ಟಿದ್ದಾರೆ. ಆದರೆ ಅತಿದೊಡ್ಡ(ದೂರದ) ಸಿಕ್ಸರ್ ಸಿಡಿಸಿದ ಟಾಪ್-5 ಬ್ಯಾಟರ್ ಪಟ್ಟಿಯಲ್ಲಿ ವೈಭವ್‌ಗೆ ಸ್ಥಾನ ಸಿಕ್ಕಿಲ್ಲ. ಹಾಗಿದ್ರೆ ಈ ಸೀಸನ್ ಐಪಿಎಲ್‌ನಲ್ಲಿ ಅತಿದೊಡ್ಡ ಸಿಕ್ಸರ್ ಸಿಡಿಸಿದ ಟಾಪ್-5 ಬ್ಯಾಟರ್‌ಗಳು ಯಾರು ಎನ್ನುವುದನ್ನು ನೋಡೋಣ ಬನ್ನಿ.
5. ಕೂಪರ್ ಕಾನ್ಹೊಲಿ(ಪಂಜಾಬ್ ಕಿಂಗ್ಸ್): 103 ಮೀಟರ್ ಸಿಕ್ಸರ್
ಪಂಜಾಬ್ ಕಿಂಗ್ಸ್ ತಂಡಕ್ಕೆ ಸ್ಪೋಟಕ ಆರಂಭ ಒದಗಿಸಿಕೊಟ್ಟ ಬ್ಯಾಟರ್ ಕೂಪರ್ ಕಾನ್ಹೊಲಿ. ಇದೀಗ ಕಾನ್ಹೊಲಿ ಈ ಸೀಸನ್ ಐಪಿಎಲ್ ಟೂರ್ನಿಯಲ್ಲಿ ಅತಿದೊಡ್ಡ ಸಿಕ್ಸರ್ ಸಿಡಿಸಿದ ಬ್ಯಾಟರ್‌ಗಳ ಪಟ್ಟಿಯಲ್ಲಿ ಐದನೇ ಸ್ಥಾನ ಪಡೆದುಕೊಂಡಿದ್ದಾರೆ. ಕಾನ್ಹೊಲಿ ಸನ್‌ರೈಸರ್ಸ್ ಹೈದರಾಬಾದ್ ಎದುರು 103 ಮೀಟರ್ ದೂರದ ಸಿಕ್ಸರ್ ಸಿಡಿಸಿದ್ದರು.
4. ಜೇಕಬ್ ಬೆಥೆಲ್(ಆರ್‌ಸಿಬಿ): 104 ಮೀಟರ್ ಸಿಕ್ಸರ್
ಆರ್‌ಸಿಬಿ ಸ್ಟಾರ್ ಬ್ಯಾಟರ್ ಜೇಕಬ್ ಬೆಥೆಲ್, ಡೆಲ್ಲಿ ಕ್ಯಾಪಿಟಲ್ಸ್ ಎದುರು ಅರುಣ್ ಜೇಟ್ಲಿ ಮೈದಾನದಲ್ಲಿ 104 ಮೀಟರ್ ದೂರದ ಸಿಕ್ಸರ್ ಸಿಡಿಸುವ ಮೂಲಕ ಅತಿದೊಡ್ಡ ಸಿಕ್ಸರ್ ಸಿಡಿಸಿದ ಬ್ಯಾಟರ್‌ಗಳ ಪಟ್ಟಿಯಲ್ಲಿ ನಾಲ್ಕನೇ ಸ್ಥಾನ ಪಡೆದಿದ್ದಾರೆ.
3. ಡೇವಿಡ್ ಮಿಲ್ಲರ್(ಡೆಲ್ಲಿ ಕ್ಯಾಪಿಟಲ್ಸ್): 106 ಮೀಟರ್ ಸಿಕ್ಸರ್
ಡೆಲ್ಲಿ ಕ್ಯಾಪಿಟಲ್ಸ್ ತಂಡದ ಸ್ಪೋಟಕ ಬ್ಯಾಟರ್ ಡೇವಿಡ್ ಮಿಲ್ಲರ್ ಗುಜರಾತ್ ಟೈಟಾನ್ಸ್ ಎದುರು 106 ಮೀಟರ್ ಸಿಕ್ಸರ್ ಸಿಡಿಸುವ ಮೂಲಕ ಎಲ್ಲರ ಹುಬ್ಬೇರಿಸುವಂತೆ ಮಾಡಿದ್ದರು. ಅಹಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಮುಗಿಲೆತ್ತರದ ಸಿಕ್ಸರ್ ಸಿಡಿಸುವ ಮೂಲಕ ಮಿಲ್ಲರ್ ಈ ಪಟ್ಟಿಯಲ್ಲಿ ಮೂರನೇ ಸ್ಥಾನ ಪಡೆದುಕೊಂಡಿದ್ದಾರೆ.
2. ಟಿಮ್ ಡೇವಿಡ್(ಆರ್‌ಸಿಬಿ): 106 ಮೀಟರ್ ಸಿಕ್ಸರ್
ಆರ್‌ಸಿಬಿಯ ಸ್ಪೋಟಕ ಬ್ಯಾಟರ್ ಟಿಮ್ ಡೇವಿಡ್, ಚೆನ್ನೈ ಸೂಪರ್ ಕಿಂಗ್ಸ್ ಎದುರಿನ ಪಂದ್ಯದಲ್ಲಿ 106 ಮೀಟರ್ ಸಿಕ್ಸರ್ ಸಿಡಿಸುವ ಮೂಲಕ ಎಲ್ಲರೂ ಬೆಚ್ಚಿಬೀಳುವಂತೆ ಮಾಡಿದ್ದರು. ಅನ್ಸೂಲ್ ಕಂಬೋಜ್ ಬೌಲಿಂಗ್‌ನಲ್ಲಿ ಈ ದೊಡ್ಡ ಸಿಕ್ಸರ್ ಸಿಡಿಸಿ, ಈ ಸೀಸನ್‌ನ ಎರಡನೇ ಅತಿದೊಡ್ಡ ಸಿಕ್ಸರ್ ಸಿಡಿಸಿದ ಬ್ಯಾಟರ್ ಎನಿಸಿಕೊಂಡರು.
1.ತಿಲಕ್ ವರ್ಮಾ:(ಮುಂಬೈ ಇಂಡಿಯನ್ಸ್): 106 ಮೀಟರ್ ಸಿಕ್ಸರ್
ಮುಂಬೈ ಇಂಡಿಯನ್ಸ್ ತಂಡದ ಸ್ಟಾರ್ ಬ್ಯಾಟರ್ ತಿಲಕ್ ವರ್ಮಾ, ಪಂಜಾಬ್ ಕಿಂಗ್ಸ್‌ನ ಯುಜುವೇಂದ್ರ ಚಹಲ್ ಬೌಲಿಂಗ್‌ನಲ್ಲಿ 106 ಮೀಟರ್ ದೂರದ ಸಿಕ್ಸರ್ ಸಿಡಿಸುವ ಮೂಲಕ ಚೆಂಡು ಮೈದಾನದಾಚೆ ಕಳಿಸಿದ್ದರು. ಇದು ಈ ಸೀಸನ್ ಐಪಿಎಲ್‌ನ ಅತಿದೊಡ್ಡ ಸಿಕ್ಸರ್ ಎನಿಸಿಕೊಂಡಿದೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

