- Home
- Sports
- Cricket
- IPL 2026: ಗುಜರಾತ್-ರಾಜಸ್ಥಾನ ನಡುವಿನ ಕ್ವಾಲಿಫೈಯರ್ ಪಂದ್ಯಕ್ಕೆ ಮಳೆ ವಿಲನ್ ಆಗುತ್ತಾ? ಹೇಗಿದೆ ನ್ಯೂ ಚಂಡೀಗಢ ಹವಾಮಾನ ವರದಿ?
IPL 2026: ಗುಜರಾತ್-ರಾಜಸ್ಥಾನ ನಡುವಿನ ಕ್ವಾಲಿಫೈಯರ್ ಪಂದ್ಯಕ್ಕೆ ಮಳೆ ವಿಲನ್ ಆಗುತ್ತಾ? ಹೇಗಿದೆ ನ್ಯೂ ಚಂಡೀಗಢ ಹವಾಮಾನ ವರದಿ?
ಮುಲ್ಲನ್‌ಪುರ: 2026ರ ಐಪಿಎಲ್ ಟೂರ್ನಿಯ ಕ್ವಾಲಿಫೈಯರ್-2 ಪಂದ್ಯದಲ್ಲಿಂದು ರಾಜಸ್ಥಾನ ರಾಯಲ್ಸ್ ಹಾಗೂ ಗುಜರಾತ್ ಟೈಟಾನ್ಸ್ ತಂಡಗಳು ಮುಖಾಮುಖಿಯಾಗಲಿವೆ. ಆದರೆ ಈ ಪಂದ್ಯಕ್ಕೆ ಮಳೆ ಅಡ್ಡಿಪಡಿಸುವ ಸಾಧ್ಯತೆಯಿದೆ ಎನ್ನಲಾಗುತ್ತಿದೆ. ಬನ್ನಿ ಸದ್ಯ ನ್ಯೂ ಚಂಡೀಗಢದಲ್ಲಿ ಹವಾಮಾನ ಪರಿಸ್ಥಿತಿ ಹೇಗಿದೆ ನೋಡೋಣ.

ಗುಜರಾತ್-ರಾಜಸ್ಥಾನ ಕ್ವಾಲಿಫೈಯರ್-2 ಪಂದ್ಯಕ್ಕೆ ಕ್ಷಣಗಣನೆ
ಐಪಿಎಲ್ ಕ್ವಾಲಿಫೈಯರ್-2 ಪಂದ್ಯದಲ್ಲಿಂದು ಗುಜರಾತ್ ಟೈಟಾನ್ಸ್ ಹಾಗೂ ರಾಜಸ್ಥಾನ ರಾಯಲ್ಸ್ ತಂಡಗಳು ಕಾದಾಡಲಿವೆ. ಈ ಹೈವೋಲ್ಟೇಜ್ ಪಂದ್ಯಕ್ಕೆ ನ್ಯೂ ಚಂಡೀಗಢದ ಮಹಾರಾಜ್ ಯುದುವೀಂದ್ರ ಸಿಂಗ್ ಇಂಟರ್‌ನ್ಯಾಷನಲ್ ಕ್ರಿಕೆಟ್ ಸ್ಟೇಡಿಯಂ ಆತಿಥ್ಯ ವಹಿಸಿದೆ. ಉಭಯ ತಂಡಗಳು ಫೈನಲ್‌ಗೇರಲು ಕೊನೆಯ ಅವಕಾಶ ಇದಾಗಿದ್ದು, ಜಿದ್ದಾಜಿದ್ದಿನ ಪೈಪೋಟಿ ನಿರೀಕ್ಷಿಸಲಾಗಿದೆ. ಆದರೆ ಈ ಪಂದ್ಯಕ್ಕೆ ಮಳೆ ಅಡ್ಡಿಯಾಗುವ ಆತಂಕ ಎದುರಾಗಿದೆ. ಇವತ್ತಿನ ಅಲ್ಲಿಯ ಹವಾಮಾನ ವರದಿ ಹೇಗಿದೆ ತಿಳಿಯೋಣ ಬನ್ನಿ.
ನ್ಯೂ ಚಂಡೀಗಢದ ಹವಾಮಾನ ವರದಿ ಏನು?
ನ್ಯೂ ಚಂಡೀಗಢದ ವಾತಾವರಣ ಪಂದ್ಯ ಆಯೋಜನೆಗೆ ಸೂಕ್ತವಾಗಿದೆ ಎಂದು ಹವಾಮಾನ ಇಲಾಖೆ ಖಚಿತಪಡಿಸಿದೆ. ಭಾರತೀಯ ಹವಾಮಾನ ಇಲಾಖೆ ಪ್ರಕಾರ ಪಂಜಾಬ್‌ನಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಆದರೆ ನ್ಯೂ ಚಂಡೀಗಢದಲ್ಲಿ ಮಳೆ ಸಾಧ್ಯತೆ ಕಡಿಮೆಯಿದೆ ಎಂದು ತಿಳಿಸಿದೆ. ಇದಷ್ಟೇ ಅಲ್ಲದೇ ಮುಲ್ಲನ್‌ಪುರ್‌ನಲ್ಲಿ 30 ಡಿಗ್ರಿ ಸೆಲ್ಸಿಯಸ್ ತಾಪಮಾನ ಇರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಒಂದು ವೇಳೆ ಮಳೆಯಿಂದ ಪಂದ್ಯ ರದ್ದಾದ್ರೆ ಪರಿಣಾಮ ಏನು?
ಕ್ವಾಲಿಫೈಯರ್-2 ಪಂದ್ಯಕ್ಕೆ ಮಳೆ ಅಡ್ಡಿಪಡಿಸುವ ಸಾಧ್ಯತೆ ಇದೆ. ಒಂದು ವೇಳೆ ಅಚಾನಕ್ ಪಂದ್ಯಕ್ಕೆ ಮಳೆ ಅಡ್ಡಿಪಡಿಸಿ ಪಂದ್ಯ ರದ್ದಾದರೇ, ಲೀಗ್ ಹಂತ ಅಂತ್ಯದ ವೇಳೆಗೆ ಅಂಕಪಟ್ಟಿಯಲ್ಲಿ ಎರಡನೇ ಸ್ಥಾನ ಪಡೆದಿದ್ದ ಗುಜರಾತ್ ಟೈಟಾನ್ಸ್ ನೇರವಾಗಿ ಫೈನಲ್‌ಗೆ ಎಂಟ್ರಿ ಕೊಡಲಿದೆ.
ಗುಜರಾತ್ ಟೈಟಾನ್ಸ್-ರಾಜಸ್ಥಾನ ರಾಯಲ್ಸ್ ನಡುವಿನ ಕ್ವಾಲಿಫೈಯರ್ ಮ್ಯಾಚ್ ಎಷ್ಟು ಗಂಟೆಯಿಂದ ಆರಂಭ?
ಗುಜರಾತ್ ಟೈಟಾನ್ಸ್ ಹಾಗೂ ರಾಜಸ್ಥಾನ ರಾಯಲ್ಸ್ ನಡುವಿನ ಕ್ವಾಲಿಫೈಯರ್-2 ಮ್ಯಾಚ್ ಭಾರತೀಯ ಕಾಲಮಾನ ಸಂಜೆ 7.30ರಿಂದ ಆರಂಭವಾಗಲಿದೆ. 7 ಗಂಟೆಗೆ ಟಾಸ್ ಪ್ರಕ್ರಿಯೆ ಶುರುವಾಗಲಿದೆ. ಈ ಪಂದ್ಯದ ನೇರ ಪ್ರಸಾರವನ್ನು ಸ್ಟಾರ್ ಸ್ಪೋರ್ಟ್ಸ್ ಹಾಗೂ ಜಿಯೋ ಹಾಟ್‌ಸ್ಟಾರ್‌ನಲ್ಲಿ ವೀಕ್ಷಿಸಬಹುದಾಗಿದೆ.
ಗುಜರಾತ್ ಟೈಟಾನ್ಸ್ ಸಂಭಾವ್ಯ ಆಟಗಾರರ ಪಟ್ಟಿ:
ಸಾಯಿ ಸುದರ್ಶನ್, ಶುಭ್‌ಮನ್ ಗಿಲ್(ನಾಯಕ), ಜೋಸ್ ಬಟ್ಲರ್(ವಿಕೆಟ್ ಕೀಪರ್), ನಿಶಾಂತ್ ಸಿಂಧು, ವಾಷಿಂಗ್ಟನ್ ಸುಂದರ್, ಜೇಸನ್ ಹೋಲ್ಡರ್, ರಾಹುಲ್ ತೆವಾಟಿಯಾ, ರಶೀದ್ ಖಾನ್, ಅರ್ಶದ್ ಖಾನ್/ಸಾಯಿ ಕಿಶೋರ್, ಕಗಿಸೋ ರಬಾಡ, ಮೊಹಮ್ಮದ್ ಸಿರಾಜ್, ಪ್ರಸಿದ್ದ್ ಕೃಷ್ಣ.
ರಾಜಸ್ಥಾನ ರಾಯಲ್ಸ್ ಸಂಭಾವ್ಯ ಆಟಗಾರರ ಪಟ್ಟಿ:
ಯಶಸ್ವಿ ಜೈಸ್ವಾಲ್, ವೈಭವ್ ಸೂರ್ಯವಂಶಿ, ಧ್ರುವ್ ಜುರೆಲ್(ವಿಕೆಟ್ ಕೀಪರ್), ರಿಯಾನ್ ಪರಾಗ್(ನಾಯಕ), ಡೊನೊವನ್ ಪೆರೆರಿಯಾ, ದಶುನ್ ಶನಕ, ರವೀಂದ್ರ ಜಡೇಜಾ, ಜೋಫ್ರಾ ಆರ್ಚರ್, ನಂದ್ರೆ ಬರ್ಗರ್, ಯಶ್ ರಾಜ್ ಪೂಂಜ, ಬ್ರಿಜೇಶ್ ಶರ್ಮಾ, ಸುಶಾಂತ್ ಮಿಶ್ರಾ/ತುಷಾರ್ ದೇಶಪಾಂಡೆ/ರವಿ ಬಿಷ್ಣೋಯಿ
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

