ಗಂಡು ಮಗುವಿನ ತಂದೆಯಾದ ಜಯ್ ಶಾ; ಅಜ್ಜನಾದ ಖುಷಿಯಲ್ಲಿ ಅಮಿತ್ ಶಾ
ಕೇಂದ್ರ ಗೃಹ ಸಚಿವ ಅಮಿತ್ ಶಾ ಪುತ್ರ, ಬಿಸಿಸಿಐ ಕಾರ್ಯದರ್ಶಿ ಜಯ್ ಶಾ ಗಂಡು ಮಗುವಿನ ತಂದೆಯಾಗಿದ್ದಾರೆ.ಜಯ್ ಶಾ ಅವರಿಗೆ ಈಗಾಗಲೇ ಎರಡು ಹೆಣ್ಣು ಮಕ್ಕಳಿವೆ.

ಐಸಿಸಿ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಳ್ಳಲು ಸಿದ್ಧರಾಗಿರುವ ಬಿಸಿಸಿಐ ಕಾರ್ಯದರ್ಶಿ ಜಯ್ ಶಾ ಮನೆಯಲ್ಲಿ ಸಂಭ್ರಮದ ವಾತಾವರಣ ಮನೆ ಮಾಡಿದೆ.
ಐಪಿಎಲ್-2025ರ ಮೆಗಾ ಹರಾಜು ನಡೆಯುತ್ತಿರುವ ಸಂದರ್ಭದಲ್ಲಿ ಜಯ್ ಶಾ ಮನೆಗೆ ಪುಟ್ಟ ಅತಿಥಿಯ ಆಗಮನವಾಗಿದೆ. ಹೌದು, ಜಯ್ ಶಾ ಅವರು ಗಂಡು ಮಗುವಿನ ತಂದೆಯಾಗಿದ್ದಾರೆ. ಈಗಾಗಲೇ ಜಯ್ ಶಾ ಅವರಿಗೆ ಇಬ್ಬರು ಹೆಣ್ಣು ಮಕ್ಕಳಿದ್ದಾರೆ.
ಐಪಿಎಲ್ ಮೆಗಾ ಹರಾಜಿನಲ್ಲಿ ಕಾರ್ಯದರ್ಶಿ ಜಯ್ ಶಾ ಮತ್ತು ಅಧ್ಯಕ್ಷ ರೋಜರ್ ಬಿನ್ನಿ ಸೇರಿದಂತೆ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಎಲ್ಲಾ ಅಧಿಕಾರಿಗಳು ಜೆಡ್ಡಾದಲ್ಲಿ ಹಾಜರಿದ್ದಾರೆ. ಮೆಗಾ ಹರಾಜಿನ ಸಂದರ್ಭದಲ್ಲಿ ಬಿಸಿಸಿಐ ಕಾರ್ಯದರ್ಶಿ ಜೈ ಶಾ ಮನೆಗೆ ಪುಟ್ಟ ಅತಿಥಿಯ ಆಗಮನವಾಗಿದೆ.
ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) 2025ರ ಮೆಗಾ ಹರಾಜು ಪ್ರಕ್ರಿಯೆ ಸೌದಿ ಅರೇಬಿಯಾದ ಜೆಡ್ಡಾದಲ್ಲಿ ನಡೆಯುತ್ತಿದೆ. ಫ್ರಾಂಚೈಸಿಗಳು ಆಟಗಾರರನ್ನು ಹರಾಜು ಹಾಕುತ್ತಿವೆ. ರಿಷಬ್ ಪಂತ್ ಮತ್ತು ಶ್ರೇಯಸ್ ಅಯ್ಯರ್ ಎಲ್ಲಾ ದಾಖಲೆಗಳನ್ನು ಮುರಿದಿದ್ದಾರೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.