MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಗ್ಯಾಲರಿ
  • ಮನರಂಜನೆ
  • ಜ್ಯೋತಿಷ್ಯ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ಕ್ರೀಡೆ
  • ಜೀವನಶೈಲಿ
  • ವಾಣಿಜ್ಯ
  • Home
  • Sports
  • Cricket
  • T20 World Cup ಟೂರ್ನಿಗೆ ಟೀಂ ಇಂಡಿಯಾ ಆರಂಭಿಕರು ಯಾರು..?

T20 World Cup ಟೂರ್ನಿಗೆ ಟೀಂ ಇಂಡಿಯಾ ಆರಂಭಿಕರು ಯಾರು..?

ದುಬೈ: ಭಾರತ ತಂಡದ ನಾಯಕ ವಿರಾಟ್‌ ಕೊಹ್ಲಿ (Virat Kohli) ಸೋಮವಾರ ಐಸಿಸಿ ಟಿ20 ವಿಶ್ವಕಪ್‌ (T20 World Cup) ನಲ್ಲಿ ಟೀಂ ಇಂಡಿಯಾದ ಬ್ಯಾಟಿಂಗ್‌ ಸಂಯೋಜನೆ ಬಗ್ಗೆ ಸ್ಪಷ್ಟನೆ ನೀಡಿದರು. ಇಂಗ್ಲೆಂಡ್ ವಿರುದ್ದದ ಅಭ್ಯಾಸ ಪಂದ್ಯದ ಟಾಸ್ ವೇಳೆ ಹಲವು ಗೊಂದಲಗಳಿಗೆ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ತೆರೆ ಎಳೆದಿದ್ದಾರೆ. ಇದರ ಜತೆಗೆ ಟಿ20 ವಿಶ್ವಕಪ್‌ ಟೂರ್ನಿಯಲ್ಲಿ ಟೀಂ ಇಂಡಿಯಾ (Team India) ಮೊದಲ ಆಯ್ಕೆಯ ಆರಂಭಿಕರು ಯಾರು ಎನ್ನುವ ಬಗ್ಗೆಯೂ ತುಟಿಬಿಚ್ಚಿದ್ದಾರೆ. 

2 Min read
Author : Suvarna News | Asianet News
Published : Oct 19 2021, 10:05 AM IST
Share this Photo Gallery
  • FB
  • TW
  • Linkdin
  • Whatsapp
19

ವಿರಾಟ್ ಕೊಹ್ಲಿ ನಾಯಕತ್ವದ ಟೀಂ ಇಂಡಿಯಾ ಅಕ್ಟೋಬರ್ 24ರಿಂದ ಟಿ20 ವಿಶ್ವಕಪ್ ಟೂರ್ನಿಯಲ್ಲಿ ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನ ತಂಡವನ್ನು ಎದುರಿಸುವ ಮೂಲಕ ತನ್ನ ಅಭಿಯಾನವನ್ನು ಆರಂಭಿಸಲಿದೆ.
 

29

15 ಆಟಗಾರರ ತಂಡದಲ್ಲಿ ರೋಹಿತ್ ಶರ್ಮಾ, ಕೆ.ಎಲ್, ರಾಹುಲ್ ಹಾಗೂ ಇಶಾನ್ ಕಿಶನ್‌ ಹೀಗೆ ಮೂವರು ತಜ್ಞ ಆರಂಭಿಕ ಬ್ಯಾಟ್ಸ್‌ಮನ್‌ಗಳಿದ್ದು, ಈ ಪೈಕಿ ವಿಶ್ವಕಪ್ ಟೂರ್ನಿಯಲ್ಲಿ ಭಾರತ ಪರ ಇನಿಂಗ್ಸ್‌ ಆರಂಭಿಸುವವರು ಯಾರು ಎನ್ನುವುದು ಸಾಕಷ್ಟು ಚರ್ಚೆಗೆ ಕಾರಣವಾಗಿತ್ತು.

39

ಇದೀಗ ಇಂಗ್ಲೆಂಡ್ ವಿರುದ್ದದ ಅಭ್ಯಾಸ ಪಂದ್ಯದ ಟಾಸ್‌ ವೇಳೆ ವಿರಾಟ್ ಕೊಹ್ಲಿ, ಐಪಿಎಲ್‌ನಲ್ಲಿ ಇನ್ನಿಂಗ್ಸ್‌ ಆರಂಭಿಸಿದಂತೆ ವಿಶ್ವಕಪ್‌ನಲ್ಲಿ ತಾವು ಆರಂಭಿಕನಾಗಿ ಆಡುವುದಿಲ್ಲ. ರೋಹಿತ್‌ ಶರ್ಮಾ ಹಾಗೂ ಕೆ.ಎಲ್‌.ರಾಹುಲ್‌ ಆರಂಭಿಕರಾಗಿ ಕಣಕ್ಕಿಳಿಯಲಿದ್ದಾರೆ ಎಂದು ತಿಳಿಸಿದರು.

49

ಇದೇ ವೇಳೆ ತಾವು 3ನೇ ಕ್ರಮಾಂಕದಲ್ಲಿ ಆಡುವುದಾಗಿ ವಿರಾಟ್‌ ಮಾಹಿತಿ ನೀಡಿದರು. ಐಪಿಎಲ್‌ 14ನೇ ಆವೃತ್ತಿಯ ಭಾಗ-1ರ ವೇಳೆ ಕೊಹ್ಲಿ, ವಿಶ್ವಕಪ್‌ನಲ್ಲಿ ತಾವು ರೋಹಿತ್‌ ಜೊತೆ ಆರಂಭಿಕನಾಗಿ ಆಡಲಿದ್ದೇನೆ ಎಂದಿದ್ದರು. 
 

59

ಇತ್ತೀಚೆಗೆ ಮುಕ್ತಾಯಗೊಂಡ ಭಾಗ-2ರ ವೇಳೆ ತಮಗೆ ನಾಯಕ ಕೊಹ್ಲಿ ಆರಂಭಿಕನಾಗಿ ಆಡಲು ಸಿದ್ಧವಿರುವಂತೆ ಸೂಚಿಸಿದ್ದಾರೆ ಎಂದು ಇಶಾನ್‌ ಕಿಶನ್‌ ಬಹಿರಂಗಪಡಿಸಿದ್ದರು. ಹೀಗಾಗಿ, ಭಾರತ ತಂಡದ ಆರಂಭಿಕ ಜೋಡಿಯ ಬಗ್ಗೆ ಬಹಳಷ್ಟು ಚರ್ಚೆ ನಡೆಯುತ್ತಿತ್ತು. ಇದೀಗ ಕೊಹ್ಲಿ ಎಲ್ಲರ ಕುತೂಹಲಕ್ಕೆ ಉತ್ತರ ನೀಡಿದ್ದಾರೆ.

69

ಸೋಮವಾರ ಇಂಗ್ಲೆಂಡ್‌ ವಿರುದ್ಧದ ಅಭ್ಯಾಸ ಪಂದ್ಯಕ್ಕೂ ಮುನ್ನ ಟಾಸ್‌ ವೇಳೆ ಮಾತನಾಡಿದ ಕೊಹ್ಲಿ, ‘ಐಪಿಎಲ್‌ಗೂ ಮೊದಲು ಲೆಕ್ಕಾಚಾರ ಬೇರೆಯದ್ದೇ ಇತ್ತು. ಆದರೆ ಈಗ ರಾಹುಲ್‌ರನ್ನು ಬಿಟ್ಟು ಬೇರೆ ಆಯ್ಕೆಯತ್ತ ನೋಡುವುದು ಕಷ್ಟ. ರೋಹಿತ್‌ ನಿಸ್ಸಂದೇಹವಾಗಿ ಆರಂಭಿಕನ ಸ್ಥಾನದಲ್ಲಿ ಆಡಲಿದ್ದಾರೆ. ಅವರು ವಿಶ್ವ ಶ್ರೇಷ್ಠ ಆಟಗಾರ. ನಾನು 3ನೇ ಕ್ರಮಾಂಕದಲ್ಲಿ ಆಡುತ್ತೇನೆ. ಸದ್ಯಕ್ಕೆ ಇಷ್ಟು ಮಾತ್ರ ಹೇಳಬಲ್ಲೆ’ ಎಂದರು.
 

79

ಐಪಿಎಲ್‌ 14ನೇ ಆವೃತ್ತಿಯಲ್ಲಿ ರಾಹುಲ್‌ 628 ರನ್‌ಗಳೊಂದಿಗೆ ಗರಿಷ್ಠ ರನ್‌ ಗಳಿಸಿದ ಬ್ಯಾಟರ್‌ಗಳ ಪಟ್ಟಿಯಲ್ಲಿ 3ನೇ ಸ್ಥಾನ ಪಡೆದರು. ಅಲ್ಲದೇ ಟೂರ್ನಿಯಲ್ಲಿ ಅತಿಹೆಚ್ಚು ಸಿಕ್ಸರ್‌(30) ಸಿಡಿಸಿದರು.

89

ಇಂಗ್ಲೆಂಡ್ ವಿರುದ್ದದ ಅಭ್ಯಾಸ ಪಂದ್ಯದಲ್ಲಿ ರೋಹಿತ್ ಶರ್ಮಾಗೆ ವಿಶ್ರಾಂತಿ ನೀಡಲಾಗಿತ್ತು. ರೋಹಿತ್ ಶರ್ಮಾ ಅನುಪಸ್ಥಿತಿಯಲ್ಲಿ ಕೆ.ಎಲ್‌. ರಾಹುಲ್ ಹಾಗೂ ಇಶಾನ್‌ ಕಿಶನ್‌ ಟೀಂ ಇಂಡಿಯಾ ಆರಂಭಿಕರಾಗಿ ಕಣಕ್ಕಿಳಿದು ಅಕ್ಷರಶಃ ಅಬ್ಬರಿಸಿದ್ದಾರೆ.
(photo source- Getty)

99

ಅಭ್ಯಾಸ ಪಂದ್ಯದಲ್ಲಿ ಕನ್ನಡಿಗ ಕೆ.ಎಲ್‌. ರಾಹುಲ್ ಕೇವಲ 23 ಎಸೆತಗಳಲ್ಲಿ ಅರ್ಧಶತಕ ಬಾರಿಸಿ ವಿಕೆಟ್ ಒಪ್ಪಿಸಿದರೆ, ಇಶಾನ್ ಕಿಶನ್ 46 ಎಸೆತಗಳಲ್ಲಿ 7 ಬೌಂಡರಿ ಹಾಗೂ 3 ಸಿಕ್ಸರ್ ಸಹಿತ ಅಜೇಯ 70 ರನ್‌ ಬಾರಿಸಿ ಗಮನ ಸೆಳೆದಿದ್ದಾರೆ.
(photo source- Getty)

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

About the Author

SN
Suvarna News

Latest Videos
Recommended Stories
Recommended image1
ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ RCB ಮ್ಯಾಚ್ ಫಿಕ್ಸ್ ಆಯ್ತು; ಆದ್ರೆ ಕಾಲ್ತುಳಿತದಲ್ಲಿ ಸತ್ತ 11 ಜನರ ಕೇಸ್ ಏನಾಯ್ತು?
Recommended image2
ಅರ್ಜುನ್ ತೆಂಡೂಲ್ಕರ್ ಸಾನಿಯಾ ಮೆಹಂದಿ ಸೆರಮನಿ ಮೊದಲ ವಿಡಿಯೋ ಬಹಿರಂಗ
Recommended image3
ಡ್ಯಾಡಿ ಡ್ಯೂಟಿ, ಲಂಡನ್‌ನಲ್ಲಿ ಪ್ರತಿ ದಿನ ಮಗನ ಶಾಲೆಗೆ ಕರೆದುಕೊಂಡು ಹೋಗ್ತಾರೆ ಕೊಹ್ಲಿ
News
kannada newslatest kannada newskarnataka newsbengaluru newsMysore newsindia news in kannadainternational news in kannada
Entertainment News
Kannada Cinema Newskannada movies reviewsandalwood newskannada tv shows
Sports News
sports news in kannadacricket news in kannadaOther Sports News in Kannada
Business News
Business news in kannadashare market news in kannadabusiness ideas in kannada
Science & Technology
technology news in kannadamobile tech newsscience and tech news
Astrology
rashi bhavishya in kannadadina bhavishyavara bhavishyavastu shastra in kannadakarnataka festivals
Lifestyle
Lifestyle news in kannadafood recipes in kannadahealth tips in kannadakitchen tips in kannada
Education & Career
job news in kannadaPrivate Jobsbank jobs in karnatakaGovernment jobs in karnatakaCentral Govt Jobs in KannadaIT Jobs
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2026 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved