Cricket in Olympics: ಅಮೆರಿಕದಲ್ಲಿ 2024ರ ಟಿ20 ವಿಶ್ವಕಪ್ ಟೂರ್ನಿ..?
ಸಿಡ್ನಿ: ಕ್ರಿಕೆಟ್ (Cricket) ಕ್ರೀಡೆಯನ್ನು ಒಲಿಂಪಿಕ್ಸ್‌ಗೆ (Olympics) ಸೇರ್ಪಡೆಗೊಳಿಸಲು ಅಂತಾರಾಷ್ಟ್ರೀಯ ಕ್ರಿಕೆಟ್ ಸಮಿತಿ ತೆರೆಮರೆಯಲ್ಲಿ ಕಸರತ್ತು ನಡೆಸಲಾರಂಭಿಸಿದೆ. ಇದರ ಭಾಗವಾಗಿ 2024ರ ಐಸಿಸಿ ಟಿ20 ವಿಶ್ವಕಪ್ (ICC T20 World Cup) ಟೂರ್ನಿಯನ್ನು ಅಮೆರಿಕದಲ್ಲಿ ಆಯೋಜಿಸಲು ಚಿಂತನೆ ನಡೆಸಲಾಗುತ್ತಿದೆ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ.
2028ರ ಲಾಸ್ ಏಂಜಲೀಸ್ ಒಲಿಂಪಿಕ್ಸ್‌ಗೆ ಕ್ರಿಕೆಟ್ ಸೇರ್ಪಡೆಗೊಳಿಸುವ ಗುರಿ ಹೊಂದಿರುವ ಐಸಿಸಿ, 2024ರ ಟಿ20 ವಿಶ್ವಕಪ್ ಟೂರ್ನಿಯ ಆತಿಥ್ಯವನ್ನು ಅಮೆರಿಕಾಕ್ಕೆ ನೀಡಲು ಚಿಂತನೆ ನಡೆಸಿದೆ ಎಂದು ಮಾಧ್ಯಮಗಳು ವರದಿ ಮಾಡಿವೆ.
ಅಮೆರಿಕಾ ಹಾಗೂ ವೆಸ್ಟ್‌ಇಂಡೀಸ್ ಕ್ರಿಕೆಟ್ ಮಂಡಳಿಗಳು ಜಂಟಿಯಾಗಿ ಟೂರ್ನಿಯನ್ನು ಆಯೋಜಿಸುವ ಸಾಧ್ಯತೆ ಇದೆ. ವರದಿ ಪ್ರಕಾರ, ಐಸಿಸಿ 2024ರಲ್ಲಿ ಅಮೆರಿಕಾದಲ್ಲಿ ಟಿ20 ವಿಶ್ವಕಪ್ ಆಯೋಜಿಸಿ ಜಾಗತಿಕವಾಗಿ ಕ್ರಿಕೆಟ್‌ಗೆ ಮತ್ತಷ್ಟು ಪ್ರಚಾರ ನೀಡುವ ಉದ್ದೇಶ ಹೊಂದಿದೆ.
ಐಸಿಸಿಯು 2028ರ ಒಲಿಂಪಿಕ್ಸ್‌ಗೆ ಕ್ರಿಕೆಟನ್ನು ಸೇರಿಸಲು ಈಗಾಗಲೇ ಬಿಡ್ ಸಲ್ಲಿಸಿದೆ. ಅಮೆರಿಕಾದಲ್ಲಿ ಟಿ20 ವಿಶ್ವಕಪ್ ಆಯೋಜಿಸಿದರೆ ಒಲಿಂಪಿಕ್ಸ್‌ಗೆ ಕ್ರಿಕೆಟ್ ಸೇರ್ಪಡೆಗೊಳಿಸುವ ಐಸಿಸಿ ಉದ್ದೇಶಕ್ಕೆ ಪೂರಕವಾಗಲಿದೆ
2024ರ ಟಿ20 ವಿಶ್ವಕಪ್‌ನಲ್ಲಿ 16ರ ಬದಲು 20 ತಂಡಗಳು ಸ್ಪರ್ಧಿಸುವ ನಿರೀಕ್ಷೆ ಇದ್ದು, ಒಟ್ಟು ಪಂದ್ಯಗಳು 55ಕ್ಕೆ ಏರಿಕೆ ಆಗುವ ಸಾಧ್ಯತೆ ಇದೆ ಎಂದು ವರದಿಯಾಗಿದೆ
2024ರಿಂದ 2031ರ ಅವಧಿಯಲ್ಲಿ ಐಸಿಸಿಯು ಜಾಗತಿಕ ಮಟ್ಟದಲ್ಲಿ ಹಲವಾರು ಟೂರ್ನಿಗಳನ್ನು ಆಯೋಜಿಸಲು ಚಿಂತನೆ ನಡೆಸುತ್ತಿದೆ. ಒಂದು ವೇಳೆ 2024ರಲ್ಲಿ ಅಮೆರಿಕದಲ್ಲಿ ಟಿ20 ವಿಶ್ವಕಪ್ ಆಯೋಜಿಸಿದರೆ, 2028ರಲ್ಲಿ ಅಮೆರಿಕಾದ ಲಾಸ್ ಏಂಜಲೀಸ್‌ನ ಒಲಿಂಪಿಕ್ಸ್‌ನಲ್ಲಿ ಕ್ರಿಕೆಟ್ ಸೇರ್ಪಡೆ ಸುಲಭವಾಗಲಿದೆ ಎನ್ನುವುದು ಐಸಿಸಿ ಲೆಕ್ಕಾಚಾರವಾಗಿದೆ.
olympics and cricket
ಸದ್ಯ 2022ರ ಐಸಿಸಿ ಟಿ20 ವಿಶ್ವಕಪ್ ಟೂರ್ನಿಗೆ ಆಸ್ಟ್ರೇಲಿಯಾ ಆತಿಥ್ಯವನ್ನು ವಹಿಸಲಿದೆ. 2022ರ ಅಕ್ಟೋಬರ್ 16ರಿಂದ ನವೆಂಬರ್13ರ ವರೆಗೂ ಆಸ್ಪ್ರೇಲಿಯಾದಲ್ಲಿ ಟಿ20 ವಿಶ್ವಕಪ್ ನಿಗದಿಯಾಗಿದೆ.