MalayalamNewsableKannadaKannadaPrabhaTeluguTamilBanglaHindiMarathiMyNation
Add Preferred SourceGoogle-icon
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಗ್ಯಾಲರಿ
  • ಮನರಂಜನೆ
  • ಜ್ಯೋತಿಷ್ಯ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ಕ್ರೀಡೆ
  • ಜೀವನಶೈಲಿ
  • ವಾಣಿಜ್ಯ
  • Home
  • Sports
  • Cricket
  • ಭಾರತ-ಇಂಗ್ಲೆಂಡ್ ಟಿ20 ಸರಣಿ ವೇಳಾಪಟ್ಟಿಯಲ್ಲಿ ಮಹತ್ವದ ಬದಲಾವಣೆ..! ಇದು ಬ್ರಿಟೀಷರ ನಾಡಲ್ಲಿ ಭಾರತೀಯರ ಹವಾ

ಭಾರತ-ಇಂಗ್ಲೆಂಡ್ ಟಿ20 ಸರಣಿ ವೇಳಾಪಟ್ಟಿಯಲ್ಲಿ ಮಹತ್ವದ ಬದಲಾವಣೆ..! ಇದು ಬ್ರಿಟೀಷರ ನಾಡಲ್ಲಿ ಭಾರತೀಯರ ಹವಾ

India vs England T20 Series 2026: Match Timings Revised: ಭಾರತ ಹಾಗೂ ಇಂಗ್ಲೆಂಡ್ ನಡುವಿನ ಐದು ಪಂದ್ಯಗಳ ಟಿ20 ಸರಣಿಯ ವೇಳಾಪಟ್ಟಿಯಲ್ಲಿ ಇದೀಗ ಮಹತ್ವದ ಬದಲಾವಣೆಗಳಾಗಿದೆ. ಭಾರತೀಯ ಕ್ರಿಕೆಟ್ ಫ್ಯಾನ್ಸ್‌ಗೋಸ್ಕರ ಪಂದ್ಯ ಆಯೋಜನೆಯಲ್ಲಿ ಮಹತ್ವದ ಬದಲಾವಣೆ ಮಾಡಲಾಗಿದೆ. 

2 Min read
Author : Naveen Kodase
Published : Jun 09 2026, 06:45 PM IST
Share this Photo Gallery
  • FB
  • TW
  • Linkdin
  • Whatsapp
16
ಭಾರತ ಇಂಗ್ಲೆಂಡ್ ನಡುವಿನ ಟಿ20 ಸರಣಿ ವೇಳಾಪಟ್ಟಿಯಲ್ಲಿ ಬದಲಾವಣೆ
Image Credit : X@BCCI

ಭಾರತ-ಇಂಗ್ಲೆಂಡ್ ನಡುವಿನ ಟಿ20 ಸರಣಿ ವೇಳಾಪಟ್ಟಿಯಲ್ಲಿ ಬದಲಾವಣೆ

ಭಾರತ ಹಾಗೂ ಇಂಗ್ಲೆಂಡ್‌ ನಡುವೆ ಇಂಗ್ಲೆಂಡ್‌ನಲ್ಲಿ ನಡೆಯಲಿರುವ 5 ಪಂದ್ಯಗಳ ಟಿ20 ಸರಣಿಯ ಪೈಕಿ ಮೂರು ಪಂದ್ಯಗಳು ನಿಗದಿತ ಅವಧಿಗಿಂತ ಒಂದು ಗಂಟೆ ಮೊದಲೇ ಆರಂಭಿಸಲು ಇಂಗ್ಲೆಂಡ್‌ ಮತ್ತು ವೇಲ್ಸ್‌ ಕ್ರಿಕೆಟ್‌ ಮಂಡಳಿ(ಇಸಿಬಿ) ನಿರ್ಧರಿಸಿದೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred
26
ಭಾರತೀಯರ ಬೇಡಿಕೆಗೆ ಮಂಡಿಯೂರಿದ ಬ್ರಿಟೀಷರು
Image Credit : Getty

ಭಾರತೀಯರ ಬೇಡಿಕೆಗೆ ಮಂಡಿಯೂರಿದ ಬ್ರಿಟೀಷರು

ಈ ಮೊದಲು ಭಾರತ ಹಾಗೂ ಇಂಗ್ಲೆಂಡ್ ನಡುವಿನ ಪಂದ್ಯಗಳು ಭಾರತೀಯ ಕಾಲಮಾನ ರಾತ್ರಿ 11 ಗಂಟೆಗೆ(ಸ್ಥಳೀಯ ಕಾಲಮಾನ ಸಂಜೆ 6.30ಕ್ಕೆ) ಆರಂಭಗೊಳ್ಳಬೇಕಿತ್ತು. ಆದರೆ ರಾತ್ರಿ ತಡವಾಗಿ ಆರಂಭಗೊಂಡರೆ ಭಾರತದಲ್ಲಿ ಪಂದ್ಯ ವೀಕ್ಷಿಸುವವರ ಸಂಖ್ಯೆ ಕಡಿಮೆಯಾಗಲಿದೆ. ಇದರಿಂದ ಪ್ರಸಾರಕರಿಗೆ ನಷ್ಟವಾಲಿದೆ. ಇದೇ ಕಾರಣಕ್ಕಾಗಿ ಬ್ರಿಟೀಷರು ಭಾರತೀಯರ ಬೇಡಿಕೆಗೆ ಮಂಡಿಯೂರಿದ್ದಾರೆ.

Related Articles

Related image1
ಅಫ್ಘಾನ್ ಸದ್ದಡಗಿಸಿದ ಭಾರತ: ಟೆಸ್ಟ್ ಕ್ರಿಕೆಟ್ ಇತಿಹಾಸದಲ್ಲಿಯೇ ಅತಿದೊಡ್ಡ ಗೆಲುವು ದಾಖಲಿಸಿದ ಟೀಂ ಇಂಡಿಯಾ
Related image2
ಟೀಂ ಇಂಡಿಯಾಗೆ ಎಂಟ್ರಿ ಕೊಟ್ಟ ವೈಭವ್ ಸೂರ್ಯವಂಶಿ! 15 ವರ್ಷದ ಆಟಗಾರನಿಗೆ ಒಂದು ಮ್ಯಾಚ್‌ಗೆ ಸಿಗೋ ಸಂಬಳ ಎಷ್ಟು?
36
ಮೂರು ಪಂದ್ಯಗಳು ಒಂದು ಗಂಟೆ ಮುಂಚಿತವಾಗಿ ಆರಂಭ
Image Credit : Getty

ಮೂರು ಪಂದ್ಯಗಳು ಒಂದು ಗಂಟೆ ಮುಂಚಿತವಾಗಿ ಆರಂಭ

ಹೀಗಾಗಿ ಪ್ರಸಾರಕರು, ಇಸಿಬಿ, ಬಿಸಿಸಿಐ ನಡುವಿನ ಮಾತುಕತೆ ಬಳಿಕ ಪಂದ್ಯವನ್ನು 1 ಗಂಟೆ ಮೊದಲೇ ಆರಂಭಿಸಲು ನಿರ್ಧರಿಸಲಾಗಿದೆ. ಹೊಸ ವೇಳಾಪಟ್ಟಿ ಪ್ರಕಾರ ಪಂದ್ಯ ಭಾರತೀಯ ಕಾಲಮಾನ ರಾತ್ರಿ 10 ಗಂಟೆಗೆ(ಸ್ಥಳೀಯ ಕಾಲಮಾನ ಸಂಜೆ 5.30) ಆರಂಭಗೊಳ್ಳಲಿದೆ. ಈ ಪಂದ್ಯಗಳು ಭಾರತದಲ್ಲಿ ಸೋನಿ ಸ್ಪೋರ್ಟ್ಸ್‌ನಲ್ಲಿ ನೇರ ಪ್ರಸಾರವಾಗಲಿದೆ.

46
ಭಾರತ-ಇಂಗ್ಲೆಂಡ್ ನಡುವೆ ಐದು ಪಂದ್ಯಗಳ ಟಿ20 ಸರಣಿ
Image Credit : SOCIAL MEDIA

ಭಾರತ-ಇಂಗ್ಲೆಂಡ್ ನಡುವೆ ಐದು ಪಂದ್ಯಗಳ ಟಿ20 ಸರಣಿ

ಭಾರತ ಹಾಗೂ ಇಂಗ್ಲೆಂಡ್ ನಡುವಿನ ಐದು ಪಂದ್ಯಗಳ ಸರಣಿಯ ಪಂದ್ಯಗಳು ಜುಲೈ 1, 4, 7, 9 ಹಾಗೂ 11ರಂದು ನಡೆಯಲಿವೆ. ಈ ಪಂದ್ಯಗಳ ಪೈಕಿ ಒಂದು, ಮೂರು ಹಾಗೂ ನಾಲ್ಕನೇ ಟಿ20 ಪಂದ್ಯಗಳು ಒಂದು ಗಂಟೆ ಮುಂಚಿತವಾಗಿ ಆರಂಭವಾಗಲಿದೆ.

56
ಏಕದಿನ ಸರಣಿಯ ಎಲ್ಲಾ ಟಿಕೆಟ್‌ ಸೋಲ್ಡೌಟ್:
Image Credit : insta/indiancricketteam, englandcricket

ಏಕದಿನ ಸರಣಿಯ ಎಲ್ಲಾ ಟಿಕೆಟ್‌ ಸೋಲ್ಡೌಟ್:

ಇನ್ನು ಭಾರತ-ಇಂಗ್ಲೆಂಡ್ ನಡುವಿನ ಐದು ಪಂದ್ಯಗಳ ಟಿ20 ಸರಣಿ ಮೊದಲು ಆರಂಭವಾಗಲಿದ್ದು, ಇದಾದ ಬಳಿಕ ಮೂರು ಪಂದ್ಯಗಳ ಏಕದಿನ ಸರಣಿ ಶುರುವಾಗಲಿದೆ. ಏಕದಿನ ಸರಣಿಯಲ್ಲಿ ವಿರಾಟ್ ಕೊಹ್ಲಿ ಹಾಗೂ ರೋಹಿತ್ ಶರ್ಮಾ ಕಣಕ್ಕಿಳಿಯುತ್ತಿರುವುದರಿಂದ ಏಕದಿನ ಸರಣಿಯ ಎಲ್ಲಾ ಟಿಕೆಟ್‌ಗಳು ಸೋಲ್ಡೌಟ್ ಆಗಿವೆ. ಆದರೆ ಟಿ20 ಸರಣಿಯ ಟಿಕೆಟ್‌ಗಳು ಇನ್ನೂ ಲಭ್ಯವಿವೆ.

66
ವೈಭವ್, ಕೊಹ್ಲಿ ಮೇಲೆ ಎಲ್ಲರ ಕಣ್ಣು:
Image Credit : RR and IPL

ವೈಭವ್, ಕೊಹ್ಲಿ ಮೇಲೆ ಎಲ್ಲರ ಕಣ್ಣು:

ಐರ್ಲೆಂಡ್ ಹಾಗೂ ಇಂಗ್ಲೆಂಡ್ ಎದುರಿನ ಟಿ20 ಸರಣಿಯಲ್ಲಿ ಭಾರತದ ಯುವ ಕ್ರಿಕೆಟಿಗ ವೈಭವ್ ಸೂರ್ಯವಂಶಿ ಕಣಕ್ಕಿಳಿಯುತ್ತಿದ್ದಾರೆ. ಐಪಿಎಲ್‌ನಲ್ಲಿ ಅಬ್ಬರಿಸಿರುವ ವೈಭವ್, ಭಾರತ ಸೀನಿಯರ್ಸ್ ತಂಡದಲ್ಲಿ ಯಾವ ರೀತಿ ಪ್ರದರ್ಶನ ತೋರಲಿದ್ದಾರೆ ಎನ್ನುವ ಕುತೂಹಲ ಜೋರಾಗಿದೆ. ಇನ್ನೊಂದೆಡೆ ವಿರಾಟ್ ಕೊಹ್ಲಿ, ಆಫ್ಘಾನ್ ಎದುರಿನ ಸರಣಿಯಿಂದ ಹೊರಗುಳಿದಿದ್ದು, ಇಂಗ್ಲೆಂಡ್ ಎದುರಿನ ಏಕದಿನ ಸರಣಿಗೆ ಕಮ್‌ಬ್ಯಾಕ್ ಮಾಡುವ ವಿಶ್ವಾಸದಲ್ಲಿದ್ದಾರೆ. ಹೀಗಾಗಿ ಈ ಇಬ್ಬರ ಮೇಲೆ ಕ್ರಿಕೆಟ್ ಅಭಿಮಾನಿಗಳ ಕಣ್ಣಿದೆ.

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

About the Author

NK
Naveen Kodase
ನವೀನ್ ಕೊಡಸೆ ಏಷ್ಯಾನೆಟ್ ಕನ್ನಡದಲ್ಲಿ ಮುಖ್ಯ ಉಪಸಂಪಾದಕ. ಕಳೆದ 9 ವರ್ಷಗಳಿಂದಲೂ ಮಾಧ್ಯಮ ಜಗತ್ತಿನಲ್ಲಿದ್ದೇನೆ. ಅಪ್ಪಟ ಮಲೆನಾಡಿನ ಹುಡುಗ. ಕುವೆಂಪು ವಿವಿಯ ಪತ್ರಿಕೋದ್ಯಮ ಪದವಿ ಇದೆ. ರಾಜ್‌ ನ್ಯೂಸ್‌ ಮೂಲಕ ಮಾಧ್ಯಮ ಲೋಕಕ್ಕೆ ಕಾಲಿಟ್ಟವನು. ಡಿಜಿಟಲ್‌ ಮಾಧ್ಯಮ ಲೋಕದಲ್ಲಿ ಪಳಗಿದರೂ, ಕಲಿಯೋದಿದೆ ಅಪಾರ. ಕ್ರೀಡೆ, ರಾಜಕೀಯ, ಸಾಹಿತ್ಯದಲ್ಲಿದೆ ಆಸಕ್ತಿ. ಕ್ರೀಡಾ ಸುದ್ದಿಯೇ ನನ್ನ ಜೀವಾಳ.
ಕ್ರಿಕೆಟ್
ಟೀಮ್ ಇಂಡಿಯಾ
ಇಂಗ್ಲೆಂಡ್ ಕ್ರಿಕೆಟ್
ವಿರಾಟ್ ಕೊಹ್ಲಿ
Latest Videos
Recommended Stories
Recommended image1
ಟೀಂ ಇಂಡಿಯಾಗೆ ಎಂಟ್ರಿ ಕೊಟ್ಟ ವೈಭವ್ ಸೂರ್ಯವಂಶಿ! 15 ವರ್ಷದ ಆಟಗಾರನಿಗೆ ಒಂದು ಮ್ಯಾಚ್‌ಗೆ ಸಿಗೋ ಸಂಬಳ ಎಷ್ಟು?
Recommended image2
ಐರ್ಲೆಂಡ್, ಇಂಗ್ಲೆಂಡ್ ಎದುರಿನ ಟಿ20 ಸರಣಿಯಿಂದ ಕೊನೆಯ ಕ್ಷಣದಲ್ಲಿ ಸ್ಟಾರ್ ಕ್ರಿಕೆಟಿಗ ಔಟ್; ಕನ್ನಡಿಗನಿಗೆ ಜಾಕ್‌ಪಾಟ್
Recommended image3
ಪೀರಿಯಡ್ಸ್‌ ವೇಳೆ ಆಟ ಇದ್ರೆ ಮಹಿಳಾ ಕ್ರಿಕೆಟರ್ಸ್‌ಗೆ ಕಷ್ಟ, ಅಂದು Smriti Mandhana ರನ್ನು ಹೊರಗೆ ಹಾಕಿದ್ದ ಅಂಪೈರ್
Related Stories
Recommended image1
ಅಫ್ಘಾನ್ ಸದ್ದಡಗಿಸಿದ ಭಾರತ: ಟೆಸ್ಟ್ ಕ್ರಿಕೆಟ್ ಇತಿಹಾಸದಲ್ಲಿಯೇ ಅತಿದೊಡ್ಡ ಗೆಲುವು ದಾಖಲಿಸಿದ ಟೀಂ ಇಂಡಿಯಾ
Recommended image2
ಟೀಂ ಇಂಡಿಯಾಗೆ ಎಂಟ್ರಿ ಕೊಟ್ಟ ವೈಭವ್ ಸೂರ್ಯವಂಶಿ! 15 ವರ್ಷದ ಆಟಗಾರನಿಗೆ ಒಂದು ಮ್ಯಾಚ್‌ಗೆ ಸಿಗೋ ಸಂಬಳ ಎಷ್ಟು?
News
kannada newslatest kannada newskarnataka newsbengaluru newsMysore newsindia news in kannadainternational news in kannada
Entertainment News
Kannada Cinema Newskannada movies reviewsandalwood newskannada tv shows
Sports News
sports news in kannadacricket news in kannadaOther Sports News in Kannada
Business News
Business news in kannadashare market news in kannadabusiness ideas in kannada
Science & Technology
technology news in kannadamobile tech newsscience and tech news
Astrology
rashi bhavishya in kannadadina bhavishyavara bhavishyavastu shastra in kannadakarnataka festivals
Lifestyle
Lifestyle news in kannadafood recipes in kannadahealth tips in kannadakitchen tips in kannada
Education & Career
job news in kannadaPrivate Jobsbank jobs in karnatakaGovernment jobs in karnatakaCentral Govt Jobs in KannadaIT Jobs
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2026 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved