- Home
- Sports
- Cricket
- ಟಿ20 ವಿಶ್ವಕಪ್ ಟೂರ್ನಿಗೂ ಮುನ್ನ ಆಸ್ಟ್ರೇಲಿಯಾಗೆ ದೊಡ್ಡ ಆಘಾತ; ಮಾರಕ ವೇಗಿ ಚುಟುಕು ಕ್ರಿಕೆಟ್‌ಗೆ ದಿಢೀರ್ ಗುಡ್‌ಬೈ!
ಟಿ20 ವಿಶ್ವಕಪ್ ಟೂರ್ನಿಗೂ ಮುನ್ನ ಆಸ್ಟ್ರೇಲಿಯಾಗೆ ದೊಡ್ಡ ಆಘಾತ; ಮಾರಕ ವೇಗಿ ಚುಟುಕು ಕ್ರಿಕೆಟ್‌ಗೆ ದಿಢೀರ್ ಗುಡ್‌ಬೈ!
ಬೆಂಗಳೂರು: 2026ರ ಜೂನ್ 01ರಿಂದ ಆರಂಭವಾಗಲಿರುವ ಐಸಿಸಿ ಟಿ20 ವಿಶ್ವಕಪ್ ಟೂರ್ನಿಗೂ ಮುನ್ನ ಆಸ್ಟ್ರೇಲಿಯಾ ತಂಡಕ್ಕೆ ಬಿಗ್ ಶಾಕ್ ಎದುರಾಗಿದೆ. ಆಸೀಸ್ ಮಾರಕ ವೇಗಿ ಮಿಚೆಲ್ ಸ್ಟಾರ್ಕ್ ದಿಢೀರ್ ಎನ್ನುವಂತೆ ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್‌ಗೆ ವಿದಾಯ ಘೋಷಿಸಿದ್ದಾರೆ.

ಕಳೆದೊಂದು ದಶಕದಿಂದ ಆಸೀಸ್ ವೇಗದ ಬೌಲಿಂಗ್ ಅಸ್ತ್ರವಾಗಿ ಗುರುತಿಸಿಕೊಂಡಿದ್ದ ಮಿಚೆಲ್ ಸ್ಟಾರ್ಕ್ ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್‌ನಿಂದ ದಿಢೀರ್ ನಿವೃತ್ತಿ ಘೋಷಿಸಿದ್ದಾರೆ.
ಆಸ್ಟ್ರೇಲಿಯಾ ಪರ 65 ಟಿ20 ಪಂದ್ಯಗಳಿಂದ 79 ವಿಕೆಟ್‌ಗಳನ್ನು ಪಡೆದಿರುವ ಸ್ಟಾರ್ಕ್, 2021ರಲ್ಲಿ ವಿಶ್ವಕಪ್ ಗೆದ್ದ ಆಸ್ಟ್ರೇಲಿಯಾ ತಂಡದ ಸದಸ್ಯರಾಗಿದ್ದರು.
ಟೆಸ್ಟ್ ಮತ್ತು ಏಕದಿನ ಕ್ರಿಕೆಟ್‌ನಲ್ಲಿ ಗಮನಹರಿಸುವುದಕ್ಕಾಗಿ ಟಿ20 ಕ್ರಿಕೆಟ್‌ನಿಂದ ನಿವೃತ್ತಿ ಹೊಂದುವುದಾಗಿ ಸ್ಟಾರ್ಕ್ ಸ್ಪಷ್ಟಪಡಿಸಿದ್ದಾರೆ.
ಇನ್ನು ಎಡಗೈ ಮಾರಕ ವೇಗಿ ಇದೇ ವೇಳೆ 2027ರ ಐಸಿಸಿ ಏಕದಿನ ವಿಶ್ವಕಪ್‌ನಲ್ಲಿ ಆಡುವ ಆಸೆಯನ್ನೂ ವ್ಯಕ್ತಪಡಿಸಿದ್ದಾರೆ. ಕಾಂಗರೂ ಪಡೆ 2023ರ ಏಕದಿನ ವಿಶ್ವಕಪ್ ಗೆಲ್ಲುವಲ್ಲಿ ಸ್ಟಾರ್ಕ್ ಪ್ರಮುಖ ಪಾತ್ರವಹಿಸಿದ್ದರು.
“ನಾನು ಟೆಸ್ಟ್ ಕ್ರಿಕೆಟ್‌ಗೆ ಹೆಚ್ಚಿನ ಪ್ರಾಮುಖ್ಯತೆ ನೀಡಲು ಬಯಸುತ್ತೇನೆ. ಆಸ್ಟ್ರೇಲಿಯಾ ಪರ ಆಡಿದ ಪ್ರತಿಯೊಂದು ಟಿ20 ಪಂದ್ಯವನ್ನೂ ನಾನು ಆನಂದಿಸಿದ್ದೇನೆ, ವಿಶೇಷವಾಗಿ 2021ರ ವಿಶ್ವಕಪ್. ನಾವು ಗೆದ್ದಿದ್ದರಿಂದ ಮಾತ್ರವಲ್ಲ, ತಂಡದ ಸದಸ್ಯರು ಮತ್ತು ಎಂಜಾಯ್ ಮಾಡಿದ ಪ್ರತಿ ಕ್ಷಣಗಳನ್ನು ನಾನು ಇಷ್ಟಪಡುತ್ತೇನೆ.” ಎಂದು ಸ್ಟಾರ್ಕ್ ಹೇಳಿದ್ದಾರೆ.
“ಭಾರತದ ಟೆಸ್ಟ್ ಪ್ರವಾಸ, ಆ್ಯಷಸ್ ಮತ್ತು 2027ರ ಏಕದಿನ ವಿಶ್ವಕಪ್ ಅನ್ನು ಗಮನದಲ್ಲಿಟ್ಟುಕೊಂಡು, ಫಿಟ್ ಆಗಿರುವುದು ಮತ್ತು ಉತ್ತಮ ಫಾರ್ಮ್‌ನಲ್ಲಿ ಮುಂದುವರಿಯುವುದು ಉತ್ತಮ ಆಯ್ಕೆ ಎಂದು ನಾನು ಭಾವಿಸುತ್ತೇನೆ ಎಂದು ಸ್ಟಾರ್ಕ್ ಹೇಳಿದ್ದಾರೆ.
ಇದಲ್ಲದೆ, ಮುಂದಿನ ವರ್ಷ ಭಾರತ ಹಾಗೂ ಶ್ರೀಲಂಕಾದಲ್ಲಿ ನಡೆಯಲಿರುವ ಟಿ20 ವಿಶ್ವಕಪ್‌ಗಾಗಿ ಹೊಸ ಬೌಲಿಂಗ್ ವಿಭಾಗವನ್ನು ಸಿದ್ಧಪಡಿಸಲು ತಂಡಕ್ಕೆ ಇದು ಸಮಯ ನೀಡುತ್ತದೆ” ಎಂದು ಅವರು ಹೇಳಿದರು.
ಮಿಚೆಲ್ ಸ್ಟಾರ್ಕ್ ದಿಢೀರ್ ಎನ್ನುವಂತೆ ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್‌ಗೆ ವಿದಾಯ ಹೇಳಿರುವುದು ಮುಂಬರುವ 2026ರ ಐಸಿಸಿ ಟಿ20 ವಿಶ್ವಕಪ್ ಟೂರ್ನಿಯಲ್ಲಿ ಆಸ್ಟ್ರೇಲಿಯಾ ತಂಡಕ್ಕೆ ದೊಡ್ಡ ಹಿನ್ನಡೆಯಾಗುವ ಸಾಧ್ಯತೆಯಿದೆ.