ಸ್ಪರ್ಧಾತ್ಮಕ ಕ್ರಿಕೆಟ್‌ಗೆ ಮರಳುತ್ತಿದ್ದಾರೆ ಶಮಿ: ಯಾವಾಗ ಅಂತೇ..?
Mohammed Shami: ಭಾರತ ತಂಡದ ಸ್ಟಾರ್ ವೇಗದ ಬೌಲರ್ ಮೊಹಮ್ಮದ್ ಶಮಿ ಕಳೆದ ವರ್ಷ ತವರಿನಲ್ಲಿ ನಡೆದ ಏಕದಿನ ವಿಶ್ವಕಪ್ ಬಳಿಕ ಪಾದದ ಗಾಯದಿಂದಾಗಿ ಆಟದಿಂದ ಹೊರಗುಳಿದಿದ್ದರು. ಚಿಕಿತ್ಸೆಗಾಗಿ ಲಂಡನ್‌ಗೆ ಹೋಗಿದ್ದರು.
ಭಾರತ ತಂಡದ ಸ್ಟಾರ್ ವೇಗದ ಬೌಲರ್ ಮೊಹಮ್ಮದ್ ಶಮಿ ಸುಮಾರು ಒಂದು ವರ್ಷದಿಂದ ಕ್ರಿಕೆಟ್‌ನಿಂದ ದೂರವಿದ್ದಾರೆ. ಆದರೆ ಈಗ ಕ್ರಿಕೆಟ್ ಪ್ರಿಯರಿಗೆ ಗುಡ್ ನ್ಯೂಸ್ ನೀಡಿದ್ದಾರೆ. ಅಕ್ಟೋಬರ್‌ನಲ್ಲಿ ಆರಂಭವಾಗಲಿರುವ ರಣಜಿ ಟ್ರೋಫಿಯೊಂದಿಗೆ ಕ್ರಿಕೆಟ್‌ಗೆ ಮರಳುವ ಸಾಧ್ಯತೆಯಿದೆ.
Mohammed Shami, Shami
ಕಳೆದ ವರ್ಷ ನಡೆದ ಏಕದಿನ ವಿಶ್ವಕಪ್‌ನಲ್ಲಿ ಕೊನೆಯ ಬಾರಿಗೆ ಭಾರತವನ್ನು ಪ್ರತಿನಿಧಿಸಿದ್ದ ಶಮಿ. ಟೂರ್ನಿಯ ವೇಳೆಯಲ್ಲೇ ಪಾದದ ಗಾಯಕ್ಕೆ ಒಳಗಾಗಿದ್ದರು. ಹೀಗಾಗಿ ಟೂರ್ನಿ ಮುಗಿಯುತ್ತಿದ್ದಂತೆಯೇ ಚಿಕಿತ್ಸೆಗಾಗಿ ಲಂಡನ್‌ಗೆ ತೆರಳಿದ್ದರು. ಅಲ್ಲಿಂದ ಬಂದ ನಂತರ ಬಂಗಾಳದ ವೇಗದ ಬೌಲರ್ ಬೆಂಗಳೂರಿನ ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿ (ಎನ್‌ಸಿಎ)ಯಲ್ಲಿ ಪುನಶ್ಚೇತನ ಶಿಬಿರದಲ್ಲಿ ಪಾಲ್ಗೊಂಡಿದ್ದಾರೆ.
ಪಿಟಿಐ ವರದಿಗಳ ಪ್ರಕಾರ. ಮುಂಬರುವ ರಣಜಿ ಟ್ರೋಫಿ ಟೂರ್ನಿಯಲ್ಲಿ ಶಮಿ ಬಂಗಾಳ ಪರ ಆಡಲಿದ್ದಾರೆ. ಅಕ್ಟೋಬರ್ 11 ರಂದು ಉತ್ತರ ಪ್ರದೇಶದ ವಿರುದ್ಧ ನಡೆಯಲಿರುವ ಮೊದಲ ರಣಜಿ ಟ್ರೋಫಿ ಪಂದ್ಯದಲ್ಲಿ, ಅಕ್ಟೋಬರ್ 18 ರಂದು ಕೋಲ್ಕತ್ತಾದಲ್ಲಿ ಬಿಹಾರದ ವಿರುದ್ಧ ನಡೆಯಲಿರುವ ಮುಂದಿನ ಪಂದ್ಯದಲ್ಲಿ ಆಡಲಿದ್ದಾರೆ ಎಂದು ವರದಿಯಾಗಿದೆ
ನ್ಯೂಜಿಲೆಂಡ್ ಟೆಸ್ಟ್ ಸರಣಿಯು ಅಕ್ಟೋಬರ್ 19 ರಿಂದ ಬೆಂಗಳೂರಿನಲ್ಲಿ ಆರಂಭವಾಗಲಿದೆ. ನಂತರ ಪುಣೆ (ಅಕ್ಟೋಬರ್ 24), ಮುಂಬೈ (ನವೆಂಬರ್ 1) ನಲ್ಲಿ ಟೆಸ್ಟ್ ಪಂದ್ಯಗಳು ನಡೆಯಲಿವೆ. ಬೆಂಗಳೂರಿನ ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿ (ಎನ್‌ಸಿಎ)ಯಲ್ಲಿ ಷಮಿ ತಮ್ಮ ಆರ್‌ಟಿಪಿ ದಿನಚರಿಯೊಂದಿಗೆ (ರಿಟರ್ನ್ ಟು ಪ್ಲೇ) ಪ್ರಾರಂಭಿಸಿದ್ದಾರೆ
ಶಮಿ ದುಲೀಪ್ ಟ್ರೋಫಿಯಲ್ಲಿ ಆಡುತ್ತಾರೆ ಎಂದು ಭಾವಿಸಲಾಗಿತ್ತು. ಆದರೆ, ದುಲೀಪ್ ಟ್ರೋಫಿ ಸಮಯದಲ್ಲಿ ಅವರು ಫಿಟ್ ಆಗುವ ಸಾಧ್ಯತೆಯಿಲ್ಲ ಮತ್ತು ಆಯ್ಕೆದಾರರು ಅವರನ್ನು ಅಗತ್ಯಕ್ಕಿಂತ ಮುಂಚಿತವಾಗಿ ಆಡಿಸುವ ಮೂಲಕ ಯಾವುದೇ ಅಪಾಯಕಾರಿ ಅವಕಾಶಗಳನ್ನು ತೆಗೆದುಕೊಳ್ಳಬಾರದು ಎಂದು ಸಂಬಂಧಪಟ್ಟ ಮೂಲಗಳು ತಿಳಿಸಿವೆ. ಆಸ್ಟ್ರೇಲಿಯಾದಲ್ಲಿ ನಡೆಯಲಿರುವ ಐದು ಟೆಸ್ಟ್ ಪಂದ್ಯಗಳಿಗೆ ಭಾರತದ ಮೂವರು ವೇಗದ ಬೌಲರ್‌ಗಳು - ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಶಮಿ ಮತ್ತು ಮೊಹಮ್ಮದ್ ಸಿರಾಜ್ - ಫಿಟ್ ಆಗಿರುವುದು ಮುಖ್ಯ ಎಂದು ಅವರು ಒತ್ತಿ ಹೇಳಿದರು. ಶಮಿ ಇದುವರೆಗೆ 64 ಟೆಸ್ಟ್ ಪಂದ್ಯಗಳಲ್ಲಿ ಆಡಿ 6 ಬಾರಿ ಐದು ವಿಕೆಟ್‌ಗಳೊಂದಿಗೆ ಒಟ್ಟು 229 ವಿಕೆಟ್‌ಗಳನ್ನು ಪಡೆದಿದ್ದಾರೆ.