MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಗ್ಯಾಲರಿ
  • ಮನರಂಜನೆ
  • ಜ್ಯೋತಿಷ್ಯ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ಕ್ರೀಡೆ
  • ಜೀವನಶೈಲಿ
  • ವಾಣಿಜ್ಯ
  • Home
  • Sports
  • Cricket
  • MS Dhoni turns 41: ಕ್ಯಾಪ್ಟನ್ ಕೂಲ್ ಧೋನಿ ಕುರಿತಾದ 5 ಇಂಟ್ರೆಸ್ಟಿಂಗ್ ಸಂಗತಿಗಳು..!

MS Dhoni turns 41: ಕ್ಯಾಪ್ಟನ್ ಕೂಲ್ ಧೋನಿ ಕುರಿತಾದ 5 ಇಂಟ್ರೆಸ್ಟಿಂಗ್ ಸಂಗತಿಗಳು..!

ಬೆಂಗಳೂರು: ಕ್ರಿಕೆಟ್ ಜಗತ್ತು ಕಂಡ ಅತ್ಯಂತ ಯಶಸ್ವಿ ನಾಯಕ, ಕ್ಯಾಪ್ಟನ್ ಕೂಲ್ ಖ್ಯಾತಿಯ ಮಹೇಂದ್ರ ಸಿಂಗ್ ಧೋನಿ ಇಂದು(ಜು.7) ತಮ್ಮ 41ನೇ ವಸಂತಕ್ಕೆ ಕಾಲಿರಿಸಿದ್ದಾರೆ. ಭಾರತಕ್ಕೆ ಮೂರು ಐಸಿಸಿ ಟ್ರೋಫಿ ಗೆದ್ದ ಏಕೈಕ ನಾಯಕನ ಕುರಿತಾದ 5 ಇಂಟ್ರೆಸ್ಟಿಂಗ್ ಸಂಗತಿಗಳನ್ನು ನಾವು ನಿಮ್ಮ ಮುಂದಿಡುತ್ತಿದ್ದೇವೆ ನೋಡಿ. 

2 Min read
Author : Naveen Kodase
Published : Jul 07 2022, 11:01 AM IST
Share this Photo Gallery
  • FB
  • TW
  • Linkdin
  • Whatsapp
16

ಟೀಂ ಇಂಡಿಯಾ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ, ಕ್ರಿಕೆಟ್ ಜಗತ್ತು ಕಂಡಂತಹ ಅತ್ಯಂತ ಯಶಸ್ವಿ ನಾಯಕ ಎಂದೇ ಗುರುತಿಸಿಕೊಂಡಿದ್ದಾರೆ. ವಿಕೆಟ್ ಕೀಪರ್ ಬ್ಯಾಟರ್‌ ಆಗಿ ಟೀಂ ಇಂಡಿಯಾಗೆ ಎಂಟ್ರಿ ಕೊಟ್ಟಿದ್ದ ಧೋನಿ, ತನ್ನ ತಾಳ್ಮೆಯ ನಾಯಕತ್ವದ ಮೂಲಕವೇ ಭಾರತಕ್ಕೆ ಐಸಿಸಿ ಟಿ20 ವಿಶ್ವಕಪ್, ಐಸಿಸಿ ಏಕದಿನ ವಿಶ್ವಕಪ್ ಹಾಗೂ ಐಸಿಸಿ ಚಾಂಪಿಯನ್ಸ್ ಟ್ರೋಫಿ ಗೆದ್ದುಕೊಡುವಲ್ಲಿ ಯಶಸ್ವಿಯಾಗಿದ್ದರು. ಧೋನಿ ಹುಟ್ಟುಹಬ್ಬದ ಸಂದರ್ಭದಲ್ಲಿ ಏಷ್ಯಾನೆಟ್ ಸುವರ್ಣ ನ್ಯೂಸ್. ಕಾಂ ಕ್ಯಾಪ್ಟನ್ ಕೂಲ್ ಬಗ್ಗೆ ಕೆಲವೊಂದು ಇಂಟ್ರೆಸ್ಟಿಂಗ್ ಸಂಗತಿಗಳನ್ನು ನಿಮ್ಮ ಮುಂದಿಡುತ್ತಿದ್ದೇವೆ ನೋಡಿ.

26

1. ಧೋನಿ ಭಾರತಕ್ಕೆ ಸಿಕ್ಕಿದ್ದು ಹೇಗೆ?

2003ರಲ್ಲಿ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಯು(ಬಿಸಿಸಿಐ) ಸಣ್ಣ ನಗರಗಳಲ್ಲಿನ ಪ್ರತಿಭಾನ್ವಿತ ಆಟಗಾರರನ್ನು ಹುಡುಕುವ ಪ್ರಯತ್ನ ಆರಂಭಿಸಿತು. ಈ ಸಂದರ್ಭದಲ್ಲಿ ಧೋನಿ ಜಾರ್ಖಂಡ್‌ನ ಜೆಮ್ಶೆಡ್‌ಪುರದಲ್ಲಿ ಭರ್ಜರಿ ಪ್ರದರ್ಶನ ನೀಡುತ್ತಿದ್ದರು. ಇದನ್ನು ಗಮನಿಸಿದ ಟೀಂ ಇಂಡಿಯಾ ಮಾಜಿ ಕ್ರಿಕೆಟಿಗ ಪ್ರಕಾಶ್ ಪೊಡ್ಡರ್ ಎನ್ನುವವರು ಧೋನಿ ಪ್ರತಿಭೆಯನ್ನು ಗುರುತಿಸಿ ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿಗೆ ಶಿಫಾರಸು ಮಾಡಿದರು. ಮುಂದೆ ನಡೆದದ್ದು ಇತಿಹಾಸ.
 

36
Image credit: Wikimedia Commons

Image credit: Wikimedia Commons

2. ಧೋನಿಯನ್ನು ಅರಸಿ ಬಂದಿವೆ ರಾಜೀವ್ ಗಾಂಧಿ ಖೇಲ್ ರತ್ನ, ಪದ್ಮಶ್ರೀ ಹಾಗೂ ಪದ್ಮಭೂಷಣ ಪ್ರಶಸ್ತಿ

ಕ್ರೀಡಾ ಕ್ಷೇತ್ರದಲ್ಲಿ ಅತ್ಯುನ್ನತ ಸಾಧನೆ ತೋರುವ ಆಟಗಾರರಿಗೆ ನೀಡಲಾಗುವ ರಾಜೀವ್ ಗಾಂಧಿ ಖೇಲ್ ರತ್ನ ಪ್ರಶಸ್ತಿ(ಈಗ ಮೇಜರ್ ಧ್ಯಾನ್ ಚಂದ್ ಪ್ರಶಸ್ತಿ), ಅತ್ಯುನ್ನತ ನಾಗರೀಕ ಪ್ರಶಸ್ತಿಗಳಾದ ಪದ್ಮಶ್ರೀ, ಪದ್ಮಭೂಷಣ ಪ್ರಶಸ್ತಿಗಳಿಗೆ ಮಹೇಂದ್ರ ಸಿಂಗ್ ಧೋನಿ ಪಾತ್ರರಾಗಿದ್ದಾರೆ. 2007ರಲ್ಲಿ ಭಾರತ ತಂಡಕ್ಕೆ ಟಿ20 ವಿಶ್ವಕಪ್ ಗೆದ್ದ ಬಳಿಕ ನಾಯಕರಾಗಿದ್ದ ಧೋನಿಗೆ ಖೇಲ್ ರತ್ನ ಪ್ರಶಸ್ತಿ ನೀಡಲಾಗಿತ್ತು. ಇದಾದ ಕೆಲ ವರ್ಷಗಳ ಬಳಿಕ ಪದ್ಮಶ್ರೀ ಹಾಗೂ ಅಂತಾರಾಷ್ಟ್ರೀಯ ಕ್ರಿಕೆಟ್ ವೃತ್ತಿಜೀವನದ ಕೊನೆಯ ಹಂತದಲ್ಲಿ ಮಹಿಗೆ ಪದ್ಮಭೂಷಣ ಪ್ರಶಸ್ತಿ ನೀಡಿ ಗೌರವಿಸಲಾಗಿದೆ.
 

46

3. ಚೊಚ್ಚಲ ಆವೃತ್ತಿಯ ಐಪಿಎಲ್ ಟೂರ್ನಿಯ ಅತ್ಯಂತ ದುಬಾರಿ ಆಟಗಾರ ಮಹೇಂದ್ರ ಸಿಂಗ್ ಧೋನಿ

2008ರಲ್ಲಿ ಆರಂಭವಾದ ಚೊಚ್ಚಲ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್(ಐಪಿಎಲ್) ಟೂರ್ನಿಯಲ್ಲಿ ದುಬಾರಿ ಮೊತ್ತಕ್ಕೆ ಹರಾಜಾದ ಆಟಗಾರ ಎನ್ನುವ ಹೆಗ್ಗಳಿಕೆಯೂ ಧೋನಿಗಿದೆ. ಚೆನ್ನೈ ಸೂಪರ್ ಕಿಂಗ್ಸ್ ಫ್ರಾಂಚೈಸಿಯು ಧೋನಿಯನ್ನು ಸುಮಾರು 1.5 ಮಿಲಿಯನ್ ಅಮೆರಿಕನ್ ಡಾಲರ್(11.46 ಕೋಟಿ ರುಪಾಯಿ) ನೀಡಿ ಐಕಾನ್ ಆಟಗಾರನನ್ನಾಗಿ ಆಯ್ಕೆ ಮಾಡಿಕೊಂಡಿತ್ತು. ಧೋನಿ ನಾಯಕತ್ವದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡವು 4 ಬಾರಿ ಐಪಿಎಲ್ ಚಾಂಪಿಯನ್ ಆಗಿ ಹೊರಹೊಮ್ಮಿದೆ.
 

56

4. ಭಾರತೀಯ ಸೇನೆ ಜತೆ ಧೋನಿ ಅವಿನಾಭಾವ ಸಂಬಂಧ

ಕ್ಯಾಪ್ಟನ್ ಕೂಲ್ ಖ್ಯಾತಿಯ ಧೋನಿ ಭಾರತೀಯ ಸೇನೆ ಜತೆ ಅವಿನಾಭಾವ ಸಂಬಂಧ ಹೊಂದಿದ್ದಾರೆ. 2011ರಲ್ಲಿ ಗೌರವ ಲೆಫ್ಟಿನೆಂಟ್ ಕರ್ನಲ್ ಹುದ್ದೆ ಅಲಂಕರಿಸಿದ ಭಾರತದ ಮೊದಲ ಕ್ರಿಕೆಟಿಗ ಎನ್ನುವ ಹಿರಿಮೆಗೆ ಧೋನಿ ಪಾತ್ರರಾಗಿದ್ದರು. ಧೋನಿ ಆಗಾಗ ಭಾರತೀಯ ಸೇನಾ ಕ್ಯಾಂಪ್‌ಗಳಿಗೆ ಭೇಟಿ ನೀಡುತ್ತಲೇ ಇರುತ್ತಾರೆ. ಇನ್ನು 2019ರ ಐಸಿಸಿ ಏಕದಿನ ವಿಶ್ವಕಪ್ ಬಳಿಕ ಧೋನಿ 15 ದಿನಗಳ ಕಾಲ ಜಮ್ಮು ಮತ್ತು ಕಾಶ್ಮೀರದಲ್ಲಿ ಭಾರತೀಯ ಪ್ರಾದೇಶಿಕ ಸೇನೆ ಜತೆ ಕಾರ್ಯ ನಿರ್ವಹಿಸುವ ಮೂಲಕ ಹಲವು ಯುವಕರಿಗೆ ಮಾದರಿಯಾಗಿದ್ದರು. 

66

5. ಹಲವು ಕ್ರೀಡಾಕ್ಷೇತ್ರಗಳಲ್ಲಿ ಬಂಡವಾಳ ಹೂಡಿಕೆ ಮಾಡಿದ್ದಾರೆ ಧೋನಿ

ಎರಡು ವಿಶ್ವಕಪ್ ವಿಜೇತ ತಂಡದ ನಾಯಕ ಮಹೇಂದ್ರ ಸಿಂಗ್ ಧೋನಿ, ಭಾರತದ ಹಲವು ಕ್ರೀಡಾ ತಂಡದ ಮಾಲೀಕರಾಗಿದ್ದಾರೆ ಅಥವಾ ತಂಡದಲ್ಲಿ ಬಂಡವಾಳ ಹೂಡಿಕೆ ಮಾಡಿದ್ದಾರೆ. ಇವುಗಳ ಪೈಕಿ ಇಂಡಿಯನ್ ಸೂಪರ್ ಲೀಗ್ ಫುಟ್ಬಾಲ್ ಟೂರ್ನಿಯಲ್ಲಿ ಚೆನ್ನೈಯಿನ್ ಎಫ್‌ಸಿ, ಹಾಕಿ ಇಂಡಿಯಾ ಲೀಗ್‌ನಲ್ಲಿ ರಾಂಚಿ ರೇಸ್, ಸೂಪರ್‌ಸ್ಪೋರ್ಟ್ಸ್‌ ವರ್ಲ್ಡ್‌ ಚಾಂಪಿಯನ್‌ಶಿಪ್‌ನಲ್ಲಿ ಮಹಿ ರೇಸಿಂಗ್ ಟೀಂ ಇಂಡಿಯಾ ತಂಡಗಳಲ್ಲಿ ಹೂಡಿಕೆ ಮಾಡಿದ್ದಾರೆ. ಇದರ ಜತೆಗೆ ತನ್ನದೇ ಆದ ಫಾರ್ಮ್‌ಹೌಸ್ ಮಾಡಿ ವಿವಿಧ ತರಕಾರಿ, ಹಣ್ಣುಹಂಪಲು. ಪಶುಸಂಗೋಪನೆ ಮಾಡುತ್ತಿದ್ದಾರೆ. ಇದರ ಜತೆಗೆ ಕೆಲ ತಿಂಗಳ ಹಿಂದಷ್ಟೇ ದೇಶದ ಅತಿದೊಡ್ಡ ಡ್ರೋಣ್ ಕಂಪನಿಯಾದ ಗರುಡಾ ಏರೋಸ್ಪೇಸ್‌ ಸಂಸ್ಥೆಯ ರಾಯಭಾರಿಯಾಗಿ ನೇಮಕವಾಗಿದ್ದು, ಈ ಸಂಸ್ಥೆಯಲ್ಲಿಯೂ ಹೂಡಿಕೆ ಮಾಡಿದ್ದಾರೆ.

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

About the Author

NK
Naveen Kodase
ನವೀನ್ ಕೊಡಸೆ ಏಷ್ಯಾನೆಟ್ ಕನ್ನಡದಲ್ಲಿ ಮುಖ್ಯ ಉಪಸಂಪಾದಕ. ಕಳೆದ 9 ವರ್ಷಗಳಿಂದಲೂ ಮಾಧ್ಯಮ ಜಗತ್ತಿನಲ್ಲಿದ್ದೇನೆ. ಅಪ್ಪಟ ಮಲೆನಾಡಿನ ಹುಡುಗ. ಕುವೆಂಪು ವಿವಿಯ ಪತ್ರಿಕೋದ್ಯಮ ಪದವಿ ಇದೆ. ರಾಜ್‌ ನ್ಯೂಸ್‌ ಮೂಲಕ ಮಾಧ್ಯಮ ಲೋಕಕ್ಕೆ ಕಾಲಿಟ್ಟವನು. ಡಿಜಿಟಲ್‌ ಮಾಧ್ಯಮ ಲೋಕದಲ್ಲಿ ಪಳಗಿದರೂ, ಕಲಿಯೋದಿದೆ ಅಪಾರ. ಕ್ರೀಡೆ, ರಾಜಕೀಯ, ಸಾಹಿತ್ಯದಲ್ಲಿದೆ ಆಸಕ್ತಿ. ಕ್ರೀಡಾ ಸುದ್ದಿಯೇ ನನ್ನ ಜೀವಾಳ.
ಕ್ರಿಕೆಟ್
ಟೀಮ್ ಇಂಡಿಯಾ
ಎಂ.ಎಸ್. ಧೋನಿ
ಹುಟ್ಟುಹಬ್ಬ

Latest Videos
Recommended Stories
Recommended image1
ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ RCB ಮ್ಯಾಚ್ ಫಿಕ್ಸ್ ಆಯ್ತು; ಆದ್ರೆ ಕಾಲ್ತುಳಿತದಲ್ಲಿ ಸತ್ತ 11 ಜನರ ಕೇಸ್ ಏನಾಯ್ತು?
Recommended image2
ಅರ್ಜುನ್ ತೆಂಡೂಲ್ಕರ್ ಸಾನಿಯಾ ಮೆಹಂದಿ ಸೆರಮನಿ ಮೊದಲ ವಿಡಿಯೋ ಬಹಿರಂಗ
Recommended image3
ಡ್ಯಾಡಿ ಡ್ಯೂಟಿ, ಲಂಡನ್‌ನಲ್ಲಿ ಪ್ರತಿ ದಿನ ಮಗನ ಶಾಲೆಗೆ ಕರೆದುಕೊಂಡು ಹೋಗ್ತಾರೆ ಕೊಹ್ಲಿ
News
kannada newslatest kannada newskarnataka newsbengaluru newsMysore newsindia news in kannadainternational news in kannada
Entertainment News
Kannada Cinema Newskannada movies reviewsandalwood newskannada tv shows
Sports News
sports news in kannadacricket news in kannadaOther Sports News in Kannada
Business News
Business news in kannadashare market news in kannadabusiness ideas in kannada
Science & Technology
technology news in kannadamobile tech newsscience and tech news
Astrology
rashi bhavishya in kannadadina bhavishyavara bhavishyavastu shastra in kannadakarnataka festivals
Lifestyle
Lifestyle news in kannadafood recipes in kannadahealth tips in kannadakitchen tips in kannada
Education & Career
job news in kannadaPrivate Jobsbank jobs in karnatakaGovernment jobs in karnatakaCentral Govt Jobs in KannadaIT Jobs
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2026 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved