Hardik Pandya: ಐಪಿಎಲ್ ಆರಂಭಕ್ಕೂ ಮುನ್ನ ಮುಂಬೈ ಇಂಡಿಯನ್ಸ್ ಅಭಿಮಾನಿಗಳಿಗೆ ಗುಡ್ ನ್ಯೂಸ್..!
ಮುಂಬೈ: 2024ರ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿ ಆರಂಭಕ್ಕೆ ದಿನಗಣನೆ ಶುರುವಾಗಿದೆ. ಹೀಗಿರುವಾಗಲೇ 5 ಬಾರಿಯ ಚಾಂಪಿಯನ್ ಮುಂಬೈ ಇಂಡಿಯನ್ಸ್ ಅಭಿಮಾನಿಗಳ ಪಾಲಿಗೆ ಸಿಹಿ ಸುದ್ದಿಯೊಂದು ಹೊರಬಿದ್ದಿದೆ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ.
ಮುಂಬೈ ಇಂಡಿಯನ್ಸ್ ತಂಡದ ನೂತನ ನಾಯಕ ಹಾರ್ದಿಕ್ ಪಾಂಡ್ಯ ಸಾಕಷ್ಟು ಸಮಯದ ಬಳಿಕ ಕೊನೆಗೂ ಸ್ಪರ್ಧಾತ್ಮಕ ಕ್ರಿಕೆಟ್‌ಗೆ ಮರಳಲು ಸಜ್ಜಾಗಿದ್ದಾರೆ. ಇದು ಮುಂಬೈ ಇಂಡಿಯನ್ಸ್ ಅಭಿಮಾನಿಗಳ ಪಾಲಿಗೆ ಗುಡ್ ನ್ಯೂಸ್ ಸಿಕ್ಕಂತಾಗಿದೆ.
ಟೀಂ ಇಂಡಿಯಾ ಆಲ್ರೌಂಡರ್ 2019ರ ಐಸಿಸಿ ಏಕದಿನ ವಿಶ್ವಕಪ್ ಟೂರ್ನಿಯ ಗ್ರೂಪ್ ಹಂತದ ಬಾಂಗ್ಲಾದೇಶ ಎದುರಿನ ಪಂದ್ಯದ ವೇಳೆ ಪಾದದ ಗಾಯಕ್ಕೆ ತುತ್ತಾಗಿದ್ದರು. ಇದಾದ ಬಳಿಕ ಪಾಂಡ್ಯ ಅಂತಾರಾಷ್ಟ್ರೀಯ ಕ್ರಿಕೆಟ್‌ನಿಂದ ಹೊರಬಿದ್ದಿದ್ದಾರೆ.
ವಿಶ್ವಕಪ್ ಬಳಿಕ ತವರಿನಲ್ಲಿ ನಡೆದ ಆಸ್ಟ್ರೇಲಿಯಾ ಎದುರಿನ 5 ಪಂದ್ಯಗಳ ಟಿ20 ಸರಣಿ, ದಕ್ಷಿಣ ಆಫ್ರಿಕಾ ಎದುರಿನ ಮೂರು ಪಂದ್ಯಗಳ ಟಿ20 ಸರಣಿಯಿಂದಲೂ ಹೊರಬಿದ್ದಿದ್ದರು. ಪಾಂಡ್ಯ ಅನುಪಸ್ಥಿತಿಯಲ್ಲಿ ಸೂರ್ಯಕುಮಾರ್ ಯಾದವ್ ಭಾರತ ತಂಡವನ್ನು ಮುನ್ನಡೆಸಿದ್ದರು.
ಇದೀಗ 17ನೇ ಆವೃತ್ತಿಯ ಐಪಿಎಲ್ ಟೂರ್ನಿ ಆರಂಭಕ್ಕೂ ಮುನ್ನ ಹಾರ್ದಿಕ್ ಪಾಂಡ್ಯ, ಡಿವೈ ಪಾಟೀಲ್ ಟಿ20 ಟೂರ್ನಮೆಂಟ್‌ನಲ್ಲಿ ರಿಲಯನ್ಸ್ 1 ತಂಡವನ್ನು ಮುನ್ನಡೆಸುವ ಮೂಲಕ ಸ್ಪರ್ಧಾತ್ಮಕ ಕ್ರಿಕೆಟ್‌ಗೆ ಮರಳಲು ಸಜ್ಜಾಗಿದ್ದಾರೆ.
ಹಾರ್ದಿಕ್ ಪಾಂಡ್ಯ ಮುನ್ನಡೆಸಲಿರುವ ರಿಲಯನ್ಸ್ 1 ತಂಡದಲ್ಲಿ ತಿಲಕ್ ವರ್ಮಾ, ನೆಹಾಲ್ ವಧೇರಾ, ಆಕಾಶ್ ಮಧ್ವಾಲ್ ಹಾಗೂ ಪೀಯೂಸ್ ಚಾವ್ಲಾ ಸ್ಥಾನ ಪಡೆದಿದ್ದಾರೆ. ಈ ಎಲ್ಲಾ ಆಟಗಾರರು ಮುಂಬೈ ಇಂಡಿಯನ್ಸ್ ತಂಡದಲ್ಲೂ ಸ್ಥಾನ ಪಡೆದಿದ್ದಾರೆ.
2024ರ ಐಪಿಎಲ್ ಟೂರ್ನಿಗೂ ಮುನ್ನ ಕಳೆದ ನವೆಂಬರ್‌ನಲ್ಲಿ ಮುಂಬೈ ಇಂಡಿಯನ್ಸ್ ಫ್ರಾಂಚೈಸಿಯು, ಹಾರ್ದಿಕ್ ಪಾಂಡ್ಯ ಅವರನ್ನು ಟ್ರೇಡ್ ಮೂಲಕ ತನ್ನತ್ತ ಸೆಳೆದುಕೊಂಡಿತು. ಇದರ ಜತೆಗೆ ರೋಹಿತ್ ಶರ್ಮಾರನ್ನು ಕೆಳಗಿಳಿಸಿ ಹಾರ್ದಿಕ್ ಪಾಂಡ್ಯಗೆ ಮುಂಬೈ ಇಂಡಿಯನ್ಸ್ ನಾಯಕ ಪಟ್ಟ ಕಟ್ಟಿದೆ.
2024ರ ಐಪಿಎಲ್ ಟೂರ್ನಿಗೂ ಮುನ್ನ ಕಳೆದ ನವೆಂಬರ್‌ನಲ್ಲಿ ಮುಂಬೈ ಇಂಡಿಯನ್ಸ್ ಫ್ರಾಂಚೈಸಿಯು, ಹಾರ್ದಿಕ್ ಪಾಂಡ್ಯ ಅವರನ್ನು ಟ್ರೇಡ್ ಮೂಲಕ ತನ್ನತ್ತ ಸೆಳೆದುಕೊಂಡಿತು. ಇದರ ಜತೆಗೆ ರೋಹಿತ್ ಶರ್ಮಾರನ್ನು ಕೆಳಗಿಳಿಸಿ ಹಾರ್ದಿಕ್ ಪಾಂಡ್ಯಗೆ ಮುಂಬೈ ಇಂಡಿಯನ್ಸ್ ನಾಯಕ ಪಟ್ಟ ಕಟ್ಟಿದೆ.