MalayalamNewsableKannadaKannadaPrabhaTeluguTamilBanglaHindiMarathiMyNation
Add Preferred SourceGoogle-icon
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಗ್ಯಾಲರಿ
  • ಮನರಂಜನೆ
  • ಜ್ಯೋತಿಷ್ಯ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ಕ್ರೀಡೆ
  • ಜೀವನಶೈಲಿ
  • ವಾಣಿಜ್ಯ
TRENDING :
Ganesh Chaturthi 2026 Date & Time
Ganesh Chaturthi Special Trains
Mangaluru Railway Zone
Duleep Trophy Final
US Open 2026
Yeshwantpur-Mangaluru Vande Bharat
BDA Amendment Act 2026
Koppal Govt School
Hassan-Belur Road Project
Bigg Boss Kannada 13
Tukaram Mundhe
Uppinangady Ganeshotsava Samiti
  • Home
  • Sports
  • Cricket
  • ಭಾರತ ಮಣಿಸಿ ವಿಶ್ವಕಪ್ ಗೆಲುವಿನ ಬೆನ್ನಲ್ಲೇ ಅಚ್ಚರಿ ನಿರ್ಧಾರ ಪ್ರಕಟಿಸಿದ ಪ್ಯಾಟ್ ಕಮಿನ್ಸ್‌..!

ಭಾರತ ಮಣಿಸಿ ವಿಶ್ವಕಪ್ ಗೆಲುವಿನ ಬೆನ್ನಲ್ಲೇ ಅಚ್ಚರಿ ನಿರ್ಧಾರ ಪ್ರಕಟಿಸಿದ ಪ್ಯಾಟ್ ಕಮಿನ್ಸ್‌..!

ಅಹಮದಾಬಾದ್(ನ.20): 2023ರ ಐಸಿಸಿ ಏಕದಿನ ವಿಶ್ವಕಪ್ ಟೂರ್ನಿಯಲ್ಲಿ ಪ್ಯಾಟ್ ಕಮಿನ್ಸ್ ನೇತೃತ್ವದ ಆಸ್ಟ್ರೇಲಿಯಾ ತಂಡವು ಚಾಂಪಿಯನ್ ಪಟ್ಟ ಅಲಂಕರಿಸುವಲ್ಲಿ ಯಶಸ್ವಿಯಾಗಿದೆ. ಇದರ ಬೆನ್ನಲ್ಲೇ ಚಾಂಪಿಯನ್ ತಂಡದ ನಾಯಕ ಪ್ಯಾಟ್ ಕಮಿನ್ಸ್‌, ಮಾಡಿದ ಮಹತ್ವದ ನಿರ್ಧಾರ ಈಗ ವೈರಲ್ ಆಗಲಾರಂಭಿಸಿದೆ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ. 

1 Min read
Author : Naveen Kodase
| Updated : Nov 21 2023, 09:15 AM IST
Share this Photo Gallery
  • FB
  • TW
  • Linkdin
  • Whatsapp
17

2023ರ ಐಸಿಸಿ ಏಕದಿನ ವಿಶ್ವಕಪ್ ಟೂರ್ನಿಯ ಫೈನಲ್‌ನಲ್ಲಿ ಭಾರತ ವಿರುದ್ದ 6 ವಿಕೆಟ್ ಭರ್ಜರಿ ಗೆಲುವು ಸಾಧಿಸಿದ ಆಸ್ಟ್ರೇಲಿಯಾ ತಂಡವು 6 ವಿಕೆಟ್ ಭರ್ಜರಿ ಗೆಲುವು ಸಾಧಿಸುವಲ್ಲಿ ಯಶಸ್ವಿಯಾಗಿದೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred
27

ವಿಶ್ವಕಪ್‌ನ ಮೊದಲ ಪಂದ್ಯದಲ್ಲಿ ಭಾರತ ವಿರುದ್ದ ಸೋಲು ಕಂಡಿದ್ದ ಆಸ್ಟ್ರೇಲಿಯಾ ತಂಡವು, ಫೈನಲ್‌ನಲ್ಲಿ ಭಾರತಕ್ಕೆ ತಿರುಗೇಟು ನೀಡುವಲ್ಲಿ ಯಶಸ್ವಿಯಾಗಿದೆ. ಆಸೀಸ್‌ ತಂಡವು ಆಲ್ರೌಂಡ್ ಪ್ರದರ್ಶನದ ಮೂಲಕ ಕಪ್ ಗೆಲ್ಲುವಲ್ಲಿ ಯಶಸ್ವಿಯಾಗಿದೆ.
 

37

ಇನ್ನು ವಿಶ್ವಕಪ್ ಗೆದ್ದ ಕೆಲವೇ ಗಂಟೆಗಳ ಬಳಿಕ ಆಸ್ಟ್ರೇಲಿಯಾ ತಂಡದ ನಾಯಕ ಪ್ಯಾಟ್ ಕಮಿನ್ಸ್ ನವೆಂಬರ್ 15ರಂದೇ ಮಾಡಿದ ಮಹತ್ವದ ತೀರ್ಮಾನ ಈಗ ವೈರಲ್ ಅಗುತ್ತಿದೆ. ಮುಂಬರುವ ಇಂಡಿಯನ್ ಪ್ರೀಮಿಯರ್ ಲೀಗ್‌ನಲ್ಲಿ ಪಾಲ್ಗೊಳ್ಳುವುದಿಲ್ಲ ಎಂದು ಘೋಷಿಸಿದ್ದಾರೆ ಎನ್ನುವ ಸುದ್ದಿ ವೈರಲ್ ಆಗಿದೆ.
 

47

ಮುಂಬರುವ ಆಷಸ್ ಟೆಸ್ಟ್ ಸರಣಿ ಹಾಗೂ 2024ರಲ್ಲಿ ನಡೆಯಲಿರುವ ಐಸಿಸಿ ಟಿ20 ವಿಶ್ವಕಪ್‌ ಟೂರ್ನಿಗೆ ಸೂಕ್ತ ಅಭ್ಯಾಸ ನಡೆಸುವ ಉದ್ದೇಶದಿಂದ ತಾವು ಮುಂಬರುವ ಐಪಿಎಲ್‌ನಲ್ಲಿ ಪಾಲ್ಗೊಳ್ಳುತ್ತಿಲ್ಲ ಎಂದು ಕಮಿನ್ಸ್ ಘೋಷಿಸಿದ್ದಾರೆ.

57

ಈ ಕುರಿತಂತೆ ನವೆಂಬರ್ 15ರಂದು ಟ್ವೀಟ್ ಮಾಡಿದ್ದ ಕಮಿನ್ಸ್‌, "ನಾನು ಮುಂದಿನ ವರ್ಷದ ಐಪಿಎಲ್‌ನಲ್ಲಿ ಪಾಲ್ಗೊಳ್ಳದೇ ಇರುವ ಕಠಿಣ ತೀರ್ಮಾನವನ್ನು ತೆಗೆದುಕೊಂಡಿದ್ದೇನೆ. ಮುಂದಿನ 12 ತಿಂಗಳುಗಳ ಕಾಲ ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಸಾಕಷ್ಟು ಟೆಸ್ಟ್ ಹಾಗೂ ಏಕದಿನ ಪಂದ್ಯಗಳ ವೇಳಾಪಟ್ಟಿ ಫಿಕ್ಸ್ ಆಗಿದೆ. ಹೀಗಾಗಿ ಆಷಸ್ ಹಾಗೂ ಏಕದಿನ ವಿಶ್ವಕಪ್‌ಗೂ ಮುನ್ನ ಕೊಂಚ ವಿಶ್ರಾಂತಿಯ ಅಗತ್ಯವಿದೆ ಎಂದು ಕಮಿನ್ಸ್ ಟ್ವೀಟ್ ಮಾಡಿದ್ದಾರೆ.

67

ಇದೀಗ ವಿಶ್ವಕಪ್ ಫೈನಲ್ ಪಂದ್ಯವನ್ನು ಗೆಲ್ಲುತ್ತಿದ್ದಂತೆ ಟ್ವೀಟ್ ಮಾಡಿರುವ ESPNcricinfo, ಪ್ಯಾಟ್ ಕಮಿನ್ಸ್‌  ಮುಂಬರುವ ಐಪಿಎಲ್‌ನಿಂದ ಹಿಂದೆ ಸರಿಯುವ ತ್ಯಾಗದ ನಿರ್ಧಾರಕ್ಕೆ ಬೆಲೆ ಸಿಕ್ಕಿದೆ. ಕಮಿನ್ಸ್ ನೇತೃತ್ವದಲ್ಲಿ ಆಸ್ಟ್ರೇಲಿಯಾ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್, ಆಷಸ್ ಹಾಗೂ ವಿಶ್ವಕಪ್ ಏಕದಿನ ಜಯಿಸಿದೆ ಎಂದು ಟ್ವೀಟ್ ಮಾಡಿದೆ.

77

ಪ್ಯಾಟ್ ಕಮಿನ್ಸ್‌ 2022ರಲ್ಲಿ ಕೊನೆಯ ಬಾರಿಗೆ ಇಂಡಿಯನ್ ಪ್ರೀಮಿಯರ್ ಲೀಗ್‌ನಲ್ಲಿ ಕೋಲ್ಕತಾ ನೈಟ್ ರೈಡರ್ಸ್‌ ತಂಡದ ಪರ ಕಣಕ್ಕಿಳಿದಿದ್ದರು. ಆದರೆ 2023ರ ಐಪಿಎಲ್‌ನಿಂದ ಹಿಂದೆ ಸರಿದಿದ್ದರು. ಇದೀಗ 2024ರ ಐಪಿಎಲ್‌ನಲ್ಲೂ ಕಮಿನ್ಸ್ ಪಾಲ್ಗೊಳ್ಳುತ್ತಿಲ್ಲ.

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

About the Author

NK
Naveen Kodase
ನವೀನ್ ಕೊಡಸೆ ಏಷ್ಯಾನೆಟ್ ಕನ್ನಡದಲ್ಲಿ ಮುಖ್ಯ ಉಪಸಂಪಾದಕ. ಕಳೆದ 9 ವರ್ಷಗಳಿಂದಲೂ ಮಾಧ್ಯಮ ಜಗತ್ತಿನಲ್ಲಿದ್ದೇನೆ. ಅಪ್ಪಟ ಮಲೆನಾಡಿನ ಹುಡುಗ. ಕುವೆಂಪು ವಿವಿಯ ಪತ್ರಿಕೋದ್ಯಮ ಪದವಿ ಇದೆ. ರಾಜ್‌ ನ್ಯೂಸ್‌ ಮೂಲಕ ಮಾಧ್ಯಮ ಲೋಕಕ್ಕೆ ಕಾಲಿಟ್ಟವನು. ಡಿಜಿಟಲ್‌ ಮಾಧ್ಯಮ ಲೋಕದಲ್ಲಿ ಪಳಗಿದರೂ, ಕಲಿಯೋದಿದೆ ಅಪಾರ. ಕ್ರೀಡೆ, ರಾಜಕೀಯ, ಸಾಹಿತ್ಯದಲ್ಲಿದೆ ಆಸಕ್ತಿ. ಕ್ರೀಡಾ ಸುದ್ದಿಯೇ ನನ್ನ ಜೀವಾಳ.
ಕ್ರಿಕೆಟ್
ಕೆಕೆಆರ್

Latest Videos
Recommended Stories
Recommended image1
CSK ತಂಡದ ಫ್ಲೆಮಿಂಗ್ ಜಾಗಕ್ಕೆ ಭಾರತದ ಮಾಜಿ ಕ್ರಿಕೆಟರ್, ಕಠಿಣ ಷರತ್ತು ವಿಧಿಸಿದ ಧೋನಿ
Recommended image2
Cricket: ಮೈಕ್ ಹೆಸ್ಸನ್ ಭಾರತದ ಏಜೆಂಟ್?": ಪಾಕ್ ಮಾಜಿ ಕ್ರಿಕೆಟಿಗ ರಶೀದ್ ಲತೀಫ್ ವಿಲಕ್ಷಣ ಆರೋಪ, 'ಧುರಂಧರ್' ಚಿತ್ರಕ್ಕೆ ಹೋಲಿಸಿ ಟ್ರೋಲ್!
Recommended image3
ಆಫ್ಘಾನಿಸ್ತಾನ ಎದುರಿನ ಟಿ20 ಸರಣಿಗೂ ಮುನ್ನ ಭಾರತಕ್ಕೆ ಶಾಕ್; ಸ್ಟಾರ್ ವೇಗಿ ಔಟ್, ಬದಲಿ ಆಟಗಾರನ ಘೋಷಣೆ!
News
kannada newslatest kannada newskarnataka newsbengaluru newsMysore newsindia news in kannadainternational news in kannada
Entertainment News
Kannada Cinema Newskannada movies reviewsandalwood newskannada tv shows
Sports News
sports news in kannadacricket news in kannadaOther Sports News in Kannada
Business News
Business news in kannadashare market news in kannadabusiness ideas in kannada
Science & Technology
technology news in kannadamobile tech newsscience and tech news
Astrology
rashi bhavishya in kannadadina bhavishyavara bhavishyavastu shastra in kannadakarnataka festivals
Lifestyle
Lifestyle news in kannadafood recipes in kannadahealth tips in kannadakitchen tips in kannada
Education & Career
job news in kannadaPrivate Jobsbank jobs in karnatakaGovernment jobs in karnatakaCentral Govt Jobs in KannadaIT Jobs
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2026 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved