ಇಂಗ್ಲೆಂಡ್ ವಿರುದ್ದದ ಪಿಂಕ್‌ ಬಾಲ್‌ ಟೆಸ್ಟ್‌ಗೆ ಭಾರತ ಸಂಭಾವ್ಯ ತಂಡ ಪ್ರಕಟ

First Published Feb 23, 2021, 12:46 PM IST

ಅಹಮದಾಬಾದ್‌: ಭಾರತ-ಇಂಗ್ಲೆಂಡ್‌ ನಡುವಿನ ಮೂರನೇ ಟೆಸ್ಟ್ ಪಂದ್ಯಕ್ಕೆ ಕ್ಷಣಗಣನೆ ಆರಂಭವಾಗಿದ್ದು, ಫೆಬ್ರವರಿ 24ರಂದು ಅಹಮದಾಬಾದ್‌ನ ಮೊಟೇರಾ ಸ್ಟೇಡಿಯಂನಲ್ಲಿ ಪಿಂಕ್‌ ಬಾಲ್ ಟೆಸ್ಟ್‌ ಪಂದ್ಯ ನಡೆಯಲಿದೆ. 

ಭಾರತದಲ್ಲಿ ನಡೆಯುತ್ತಿರುವ ಎರಡನೇ ಹಗಲು-ರಾತ್ರಿ ಟೆಸ್ಟ್‌ ಪಂದ್ಯ ಇದಾಗಿದ್ದು, ವಿಶ್ವದ ಅತಿದೊಡ್ಡ ಕ್ರಿಕೆಟ್‌ ಸ್ಟೇಡಿಯಂನಲ್ಲಿ ಹೈವೋಲ್ಟೇಜ್‌ ಪಂದ್ಯ ಕಣ್ತುಂಬಿಕೊಳ್ಳಲು ಅಭಿಮಾನಿಗಳು ತುದಿಗಾಲಿನಲ್ಲಿ ನಿಂತಿದ್ದಾರೆ. 4 ಪಂದ್ಯಗಳ ಟೆಸ್ಟ್‌ ಸರಣಿಯಲ್ಲಿ ಉಭಯ ತಂಡಗಳು ತಲಾ ಒಂದೊಂದು ಪಂದ್ಯಗಳನ್ನು ಜಯಿಸಿದ್ದು, ಇದೀಗ ಮೂರನೇ ಪಂದ್ಯ ಸಾಕಷ್ಟು ಕುತೂಹಲ ಮೂಡಿಸಿದೆ. 3ನೇ ಟೆಸ್ಟ್‌ ಪಂದ್ಯದಲ್ಲಿ ಭಾರತದ ಸಂಭಾವ್ಯ ತಂಡ ಹೀಗಿದೆ ನೋಡಿ.