- Home
- Sports
- Cricket
- 'ಬೇಕಿದ್ರೆ ಆಯ್ಕೆ ಮಾಡಲಿ...': BCCI ಆಯ್ಕೆ ಸಮಿತಿಗೆ ನೇರವಾಗಿ ಟಾಂಗ್ ಕೊಟ್ಟ RCB ಕ್ಯಾಪ್ಟನ್ ರಜತ್ ಪಾಟೀದಾರ್..!
'ಬೇಕಿದ್ರೆ ಆಯ್ಕೆ ಮಾಡಲಿ...': BCCI ಆಯ್ಕೆ ಸಮಿತಿಗೆ ನೇರವಾಗಿ ಟಾಂಗ್ ಕೊಟ್ಟ RCB ಕ್ಯಾಪ್ಟನ್ ರಜತ್ ಪಾಟೀದಾರ್..!
ಬೆಂಗಳೂರು: ಮುಂಬರುವ ಐರ್ಲೆಂಡ್ ಹಾಗೂ ಇಂಗ್ಲೆಂಡ್ ಎದುರಿನ ಟಿ20 ಸರಣಿಗೆ ಭಾರತ ತಂಡವನ್ನು ಪ್ರಕಟಿಸಲಾಗಿದ್ದು, ಮತ್ತೊಮ್ಮೆ ಆರ್‌ಸಿಬಿ ನಾಯಕ ರಜತ್ ಪಾಟೀದಾರ್ ಅವರನ್ನು ಕಡೆಗಣಿಸಲಾಗಿದೆ. ಇದರ ಬೆನ್ನಲ್ಲೇ ಆಯ್ಕೆ ಸಮಿತಿಗೆ ರಜತ್ ಪಾಟೀದಾರ್ ಟಾಂಗ್ ಕೊಟ್ಟಿದ್ದಾರೆ.

ಐಪಿಎಲ್ 2026: ಆರ್‌ಸಿಬಿ ಮತ್ತೊಮ್ಮೆ ಚಾಂಪಿಯನ್
2026ರ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಮತ್ತೊಮ್ಮೆ ಚಾಂಪಿಯನ್ ಆಗಿ ಹೊರಹೊಮ್ಮಿದೆ. ರಜತ್ ಪಾಟೀದಾರ್ ನಾಯಕತ್ವದಲ್ಲಿ ಆರ್‌ಸಿಬಿ ಸತತ ಎರಡನೇ ಬಾರಿಗೆ ಚಾಂಪಿಯನ್ ಪಟ್ಟ ಅಲಂಕರಿಸುವಲ್ಲಿ ಯಶಸ್ವಿಯಾಗಿದೆ.
ಕಳೆದೆರಡು ಸೀಸನ್ ಐಪಿಎಲ್‌ನಲ್ಲಿ ರಜತ್ ಪಾಟೀದಾರ್ ಶೈನ್
ಕಳೆದೆರಡು ಐಪಿಎಲ್ ಟೂರ್ನಿಗಳಲ್ಲಿ ರಜತ್ ಪಾಟೀದಾರ್ ನಾಯಕನಾಗಿ ಹಾಗೂ ಮಧ್ಯಮ ಕ್ರಮಾಂಕದ ಬ್ಯಾಟರ್ ಆಗಿ ಯಶಸ್ವಿಯಾಗಿದ್ದಾರೆ. 2026ರ ಐಪಿಎಲ್ ಟೂರ್ನಿಯಲ್ಲಿ ರಜತ್ ಪಾಟೀದಾರ್ 15 ಇನ್ನಿಂಗ್ಸ್‌ಗಳನ್ನಾಡಿ 41.75ರ ಬ್ಯಾಟಿಂಗ್ ಸರಾಸರಿಯಲ್ಲಿ 501 ರನ್ ಸಿಡಿಸಿದ್ದರು. ಈ ಮೂಲಕ ಆರ್‌ಸಿಬಿ ತಂಡ ಚಾಂಪಿಯನ್ ಆಗುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು.
ರಜತ್ ಪಾಟೀದಾರ್‌ಗೆ ನಿರಾಸೆ
ಹೀಗಾಗಿ ರಜತ್ ಪಾಟೀದಾರ್ ಟೀಂ ಇಂಡಿಯಾಗೆ ಎಂಟ್ರಿಕೊಡಲಿದ್ದಾರೆ ಎಂದು ಎಲ್ಲರೂ ಭಾವಿಸಿದ್ದರು. ಆದರೆ ಆ ನಿರೀಕ್ಷೆ ಹುಸಿಯಾಗಿದೆ. ಐರ್ಲೆಂಡ್ ಹಾಗೂ ಇಂಗ್ಲೆಂಡ್ ಎದುರಿನ ಟಿ20 ಸರಣಿಗೆ ಮತ್ತೊಮ್ಮೆ ರಜತ್ ಪಾಟೀದಾರ್ ಅವರನ್ನು ಕಡೆಗಣಿಸಲಾಗಿದೆ. ಈ ಕುರಿತಂತೆ ಇದೀಗ ರಜತ್ ಪಾಟೀದಾರ್ ಬಿಸಿಸಿಐ ಆಯ್ಕೆ ಸಮಿತಿಗೆ ಟಾಂಗ್ ಕೊಟ್ಟಿದ್ದಾರೆ.
ಬಿಸಿಸಿಐ ಆಯ್ಕೆ ಸಮಿತಿಗೆ ರಜತ್ ಪಾಟೀದಾರ್ ಟಾಂಗ್
ಆರ್‌ಸಿಬಿ ಪಾಡ್‌ಕಾಸ್ಟ್‌ನಲ್ಲಿ ಟೀಂ ಇಂಡಿಯಾ ಸೆಲೆಕ್ಷನ್ ಕುರಿತಂತೆ ಮಾತನಾಡಿರುವ ರಜತ್ ಪಾಟೀದಾರ್, 'ನಾನು ಭಾರತ ತಂಡದ ಪರ ಆಡುವ ಬಗ್ಗೆ ನಿಜವಾಗಿಯೂ ಯೋಚನೆ ಮಾಡುತ್ತಿಲ್ಲ. ನಾನು ನನ್ನ ಪ್ರದರ್ಶನದ ಮೇಲಷ್ಟೇ ಗಮನ ಹರಿಸುತ್ತೇನೆ. ಅವರು ನನ್ನ ಆಯ್ಕೆ ಮಾಡಲು ಬಯಸಿದ್ರೆ ಆಯ್ಕೆ ಮಾಡಲಿ, ಇಲ್ಲದಿದ್ದರೇ ಬಿಡಲಿ' ಎಂದು ಖಾರವಾಗಿಯೇ ಬಿಸಿಸಿಐ ಆಯ್ಕೆ ಸಮಿತಿಗೆ ಟಾಂಗ್ ಕೊಟ್ಟಿದ್ದಾರೆ.
ಭಾರತ ಟಿ20 ತಂಡಕ್ಕೆ ಶ್ರೇಯಸ್ ಅಯ್ಯರ್ ನಾಯಕ
ಐರ್ಲೆಂಡ್ ಹಾಗೂ ಇಂಗ್ಲೆಂಡ್ ಎದುರಿನ ಟಿ20 ಸರಣಿಗೆ ಇದೀಗ ಭಾರತ ತಂಡ ಆಯ್ಕೆ ಮಾಡಲಾಗಿದ್ದು, ಶ್ರೇಯಸ್ ಅಯ್ಯರ್‌ಗೆ ನಾಯಕತ್ವ ಪಟ್ಟ ಕಟ್ಟಲಾಗಿದೆ. ಇನ್ನು ತಿಲಕ್ ವರ್ಮಾಗೆ ಉಪನಾಯಕ ಪಟ್ಟ ಕಟ್ಟಲಾಗಿದೆ. ಇನ್ನೂ ಇಂಟ್ರೆಸ್ಟಿಂಗ್ ಸಂಗತಿಯೆಂದರೇ ಈ ಬಾರಿ ಐಪಿಎಲ್ ಟ್ರೋಫಿ ಗೆದ್ದ ಆರ್‌ಸಿಬಿ ತಂಡದ ಯಾವೊಬ್ಬ ಆಟಗಾರನಿಗೂ ಭಾರತ ತಂಡದಲ್ಲಿ ಸ್ಥಾನ ಸಿಕ್ಕಿಲ್ಲ.
ಆರ್‌ಸಿಬಿ ಆಟಗಾರರಿಗೆ ಅನ್ಯಾಯ?
19ನೇ ಸೀಸನ್ ಐಪಿಎಲ್ ಟೂರ್ನಿಯಲ್ಲಿ ರಜತ್ ಪಾಟೀದಾರ್ ಮಾತ್ರವಲ್ಲದೇ, ದೇವದತ್ ಪಡಿಕ್ಕಲ್, ಅನುಭವಿ ವೇಗಿ ಭುವನೇಶ್ವರ್ ಕುಮಾರ್, ಆಲ್ರೌಂಡರ್ ಕೃನಾಲ್ ಪಾಂಡ್ಯ ಕೂಡಾ ಅದ್ಭುತ ಪ್ರದರ್ಶನ ತೋರಿದ್ದರು. ಹೀಗಿದ್ದೂ ಈ ಎಲ್ಲಾ ಆಟಗಾರರನ್ನು ಬಿಸಿಸಿಐ ಕಡೆಗಣಿಸುವ ಮೂಲಕ ವ್ಯಾಪಕ ಟೀಕೆಗೆ ಗುರಿಯಾಗಿದೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

