ಕೊನೆಗೂ ಮುಗಿಯಿತಾ ಈ ಟೀಂ ಇಂಡಿಯಾ ಸ್ಟಾರ್ ಕ್ರಿಕೆಟಿಗನ ವೃತ್ತಿಬದುಕು?
ಇಂದೋರ್: ಭಾರತ ಹಾಗೂ ನ್ಯೂಜಿಲೆಂಡ್ ನಡುವಿನ ಮೂರು ಪಂದ್ಯಗಳ ಏಕದಿನ ಸರಣಿಯನ್ನು ಟೀಂ ಇಂಡಿಯಾ ಕೈಚೆಲ್ಲಿದೆ. ಇದರ ಬೆನ್ನಲ್ಲೇ ಟೀಂ ಇಂಡಿಯಾ ಪ್ರದರ್ಶನದ ಬಗ್ಗೆ ಪ್ರಶ್ನೆಗಳು ಏಳಲಾರಂಭಿಸಿದ್ದು, ಸ್ಟಾರ್ ಆಲ್ರೌಂಡರ್ ರವೀಂದ್ರ ಜಡೇಜಾ ಕ್ರಿಕೆಟ್ ವೃತ್ತಿಜೀವನ ಮುಗಿಯಿತಾ ಎನ್ನುವ ಪ್ರಶ್ನೆಗಳು ಕಾಡಲಾರಂಭಿಸಿವೆ.

ತವರಿನಲ್ಲೇ ಟೀಂ ಇಂಡಿಯಾಗೆ ಮುಖಭಂಗ
ನ್ಯೂಜಿಲೆಂಡ್ ವಿರುದ್ಧದ ಏಕದಿನ ಸರಣಿಯಲ್ಲಿ ಭಾರತ ತಂಡಕ್ಕೆ ಕಹಿ ಅನುಭವವಾಗಿದೆ. ತವರಿನಲ್ಲಿ ನಡೆದ ಈ ಸರಣಿಯನ್ನು 1-2 ಅಂತರದಿಂದ ಸೋತು ಟೀಂ ಇಂಡಿಯಾ ಮುಖಭಂಗ ಅನುಭವಿಸಿದೆ.
ರವೀಂದ್ರ ಜಡೇಜಾ ಮೇಲೆ ಎಲ್ಲರ ಕಣ್ಣು
ಈ ಸರಣಿ ಸೋಲಿನ ನಂತರ, ಟೀಂ ಇಂಡಿಯಾ ಸ್ಟಾರ್ ಆಲ್ರೌಂಡರ್ ರವೀಂದ್ರ ಜಡೇಜಾ ಅವರ ವೃತ್ತಿಜೀವನ ಮುಗಿಯಿತಾ ಎನ್ನುವ ಪ್ರಶ್ನೆಗಳು ಕಾಡಲಾರಂಭಿಸಿವೆ. ಅವರ ಕಳಪೆ ಪ್ರದರ್ಶನವೇ ತಂಡದ ಸೋಲಿಗೆ ಕಾರಣ ಎನ್ನಲಾಗುತ್ತಿದೆ.
ಜಡ್ಡು ಮೇಲೆ ಕೃಷ್ಣಮಾಚಾರಿ ಶ್ರೀಕಾಂತ್ ಕಿಡಿ
ಟೀಂ ಇಂಡಿಯಾ ತವರಿನಲ್ಲಿ ಏಕದಿನ ಸರಣಿ ಸೋಲುತ್ತಿದ್ದಂತೆಯೇ ಭಾರತ ಕ್ರಿಕೆಟ್ ತಂಡದ ಮಾಜಿ ಆಟಗಾರ ಕೃಷ್ಣಮಾಚಾರಿ ಶ್ರೀಕಾಂತ್, ಕಳಪೆ ಪ್ರದರ್ಶನ ತೋರುತ್ತಿರುವ ರವೀಂದ್ರ ಜಡೇಜಾಗೆ ಮತ್ತೆ ಮತ್ತೆ ಅವಕಾಶ ನೀಡುತ್ತಿರುವುದೇಕೆ ಎಂದು ಪ್ರಶ್ನಿಸಿದ್ದಾರೆ.
ಕಳೆದ ಆರು ಪಂದ್ಯಗಳಲ್ಲಿ ಜಡೇಜಾ ನೀರಸ ಪ್ರದರ್ಶನ
ದಕ್ಷಿಣ ಆಫ್ರಿಕಾ ಮತ್ತು ನ್ಯೂಜಿಲೆಂಡ್ ವಿರುದ್ಧದ ಒಟ್ಟು 6 ಏಕದಿನ ಪಂದ್ಯಗಳಲ್ಲಿ ಜಡೇಜಾ ಕಳಪೆ ಪ್ರದರ್ಶನ ನೀಡಿದ್ದಾರೆ. ಈ 6 ಪಂದ್ಯಗಳಲ್ಲಿ ಅವರು ಕೇವಲ 1 ವಿಕೆಟ್ ಪಡೆದಿದ್ದಾರೆ. ಬ್ಯಾಟಿಂಗ್‌ನಲ್ಲೂ ನಿರಾಸೆ ಮೂಡಿಸಿದ್ದು, ಕ್ರಮವಾಗಿ 32, 24*, 4, 27, 12 ರನ್ ಗಳಿಸಲಷ್ಟೇ ಶಕ್ತರಾಗಿದ್ದಾರೆ.
ಕಿವೀಸ್ ಎದುರು ಒಂದೂ ವಿಕೆಟ್ ಪಡೆಯದ ಜಡೇಜಾ
ನ್ಯೂಜಿಲೆಂಡ್ ಸರಣಿಯ ಮೂರು ಪಂದ್ಯಗಳಲ್ಲಿ ರವೀಂದ್ರ ಜಡೇಜಾ ಒಂದೂ ವಿಕೆಟ್ ಪಡೆಯಲಿಲ್ಲ. ನಿರ್ಣಾಯಕ ಪಂದ್ಯದಲ್ಲಿ ಕೇವಲ 12 ರನ್ ಗಳಿಸಿ ಔಟಾದರು. 37 ವರ್ಷದ ಜಡೇಜಾಗೆ ಏಕದಿನ ಮಾದರಿಯಿಂದ ಗೇಟ್‌ಪಾಸ್ ನೀಡುವ ಸಾಧ್ಯತೆಗಳು ಹೆಚ್ಚಾಗಿವೆ.
ತಂಡಕ್ಕೆ ಹೊರೆಯಾದ ಜಡೇಜಾ ಪ್ರದರ್ಶನ
ಟಿ20 ವಿಶ್ವಕಪ್ 2024ರ ನಂತರ ಜಡೇಜಾ ಈಗಾಗಲೇ ಟಿ20 ಮಾದರಿಗೆ ನಿವೃತ್ತಿ ಘೋಷಿಸಿದ್ದಾರೆ. ಟೆಸ್ಟ್‌ನಲ್ಲಿ ಉತ್ತಮ ಪ್ರದರ್ಶನ ನೀಡುತ್ತಿದ್ದರೂ, ಏಕದಿನ ಪಂದ್ಯಗಳಲ್ಲಿ ಅವರ ಪ್ರದರ್ಶನ ತೀರಾ ಕಳಪೆಯಾಗಿದೆ. ಇದು ತಂಡಕ್ಕೆ ಹೊರೆಯಾಗಿ ಪರಿಣಮಿಸಿದೆ.
ಭಾರತ ಕಂಡ ದಿಗ್ಗಜ ಆಲ್ರೌಂಡರ್ ಜಡೇಜಾ
ಭಾರತ ಕಂಡ ದಿಗ್ಗಜ ಆಲ್ರೌಂಡರ್‌ಗಳಲ್ಲಿ ಒಬ್ಬರಾದ ರವೀಂದ್ರ ಜಡೇಜಾ, ಟೀಂ ಇಂಡಿಯಾ ಪರ 209 ಏಕದಿನ ಪಂದ್ಯಗಳನ್ನಾಡಿ ಹತ್ತಿರಹತ್ತಿರ 2900 ರನ್ ಹಾಗೂ 232 ವಿಕೆಟ್ ಕಬಳಿಸಿ ಮಿಂಚಿದ್ದಾರೆ.
ಇದೇ ಜಡೇಜಾ ಕೊನೆಯ ಏಕದಿನ ಸರಣಿ?
ಅಕ್ಷರ್ ಪಟೇಲ್ ಮತ್ತು ವಾಷಿಂಗ್ಟನ್ ಸುಂದರ್ ಅವರಂತಹ ಯುವ ಆಲ್‌ರೌಂಡರ್‌ಗಳು ಅವಕಾಶಕ್ಕಾಗಿ ಕಾಯುತ್ತಿದ್ದಾರೆ. ಹೀಗಾಗಿ, ರವೀಂದ್ರ ಜಡೇಜಾ ಅವರನ್ನು ತಂಡದಿಂದ ಕೈಬಿಡುವ ಸಾಧ್ಯತೆ ಹೆಚ್ಚಿದೆ. ಇದು ಅವರ ಕೊನೆಯ ಏಕದಿನ ಸರಣಿಯಾಗಿರಬಹುದು ಎಂದು ಹೇಳಲಾಗುತ್ತಿದೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

