RCB ಸ್ಟಾರ್ ಕ್ರಿಕೆಟಿಗನ ಮೇಲೆ FIR ದಾಖಲು, ಮುಖ್ಯಮಂತ್ರಿಗೆ ದೂರು ಸಲ್ಲಿಸಿದ್ದ ಸಂತ್ರಸ್ತೆ!
ಬೆಂಗಳೂರು: ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಯುವ ವೇಗಿ ಯಶ್ ದಯಾಳ್ ಮೇಲೆ ಎಫ್‌ಐಆರ್ ದಾಖಲಾಗಿದೆ. ಯಶ್ ದಯಾಳ್ ಮೇಲೆ ಯಾವ ಸೆಕ್ಷನ್ ಹಾಕಲಾಗಿದೆ ಎನ್ನುವುದನ್ನು ನೋಡೋಣ ಬನ್ನಿ.

ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ (ಆರ್‌ಸಿಬಿ) ಆಟಗಾರ ಹಾಗೂ ಯುವ ಕ್ರಿಕೆಟಿಗ ಯಶ್ ದಯಾಳ್ ಮೇಲೆ ಎಫ್‌ಐಆರ್ ದಾಖಲಾಗಿದೆ.
ಎಡಗೈ ವೇಗಿ ಯಶ್ ದಯಾಳ್, ಯುವತಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಎದುರಿಸುತ್ತಿದ್ದು, ಇದೀಗ ಎಫ್‌ಐಆರ್ ದಾಖಲಾಗಿದೆ.
ಉತ್ತರ ಪ್ರದೇಶ ಮೂಲದ 27 ವರ್ಷದ ಯಶ್ ದಯಾಳ್ ವಿರುದ್ಧ ಯುಪಿಯ ಇಂದಿರಾಪುರಂ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.
ಬಿಎನ್‌ಎಸ್ ಸೆಕ್ಷನ್ 69 (ವಿವಾಹದ ಸುಳ್ಳು ಭರವಸೆ, ಮೋಸದ ವಿಧಾನಗಳಿಂದ ಲೈಂಗಿಕ ದೌರ್ಜನ್ಯ) ಅಡಿಯಲ್ಲಿ ಎಫ್‌ಐಆರ್ ದಾಖಲಾಗಿದೆ
ಜೂನ್ 21 ರಂದು ಮಹಿಳೆಯೊಬ್ಬರು ಐಜಿಆರ್‌ಎಸ್ (ಸಮಗ್ರ ದೂರು ಪರಿಹಾರ ವ್ಯವಸ್ಥೆ) ಮೂಲಕ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರಿಗೆ ದೂರು ನೀಡಿದ್ದರು.
ಐದು ವರ್ಷಗಳ ಕಾಲ ಸಂಬಂಧ ಹೊಂದಿದ್ದ ಕ್ರಿಕೆಟಿಗನಿಂದ ದೈಹಿಕವಾಗಿ ಶೋಷಣೆ ಮಾಡಲಾಗಿದೆ ಎಂದು ದೂರಿನಲ್ಲಿ ಸಂತ್ರಸ್ಥೆ ಆರೋಪ ಮಾಡಿದ್ದರು. ಇದರ ಜತೆಗೆ ಯಶ್ ದಯಾಳ್ ಯುವತಿಯ ಜತೆ ನಡೆಸಿದ ಚಾಟ್ ಹಿಸ್ಟ್ರಿ ಕೂಡಾ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿತ್ತು.
2025ರ ಐಪಿಎಲ್ ಟೂರ್ನಿಯಲ್ಲಿ ರಜತ್ ಪಾಟೀದಾರ್ ನೇತೃತ್ವದ ಟೀಂ ಇಂಡಿಯಾ, ಚೊಚ್ಚಲ ಬಾರಿಗೆ ಐಪಿಎಲ್ ಚಾಂಪಿಯನ್ ಆಗಿ ಹೊರಹೊಮ್ಮಿತ್ತು.
ಆರ್‌ಸಿಬಿ ಗೆಲುವಿನಲ್ಲಿ ಯಶ್ ದಯಾಳ್ ಪ್ರಮುಖ ಪಾತ್ರ ವಹಿಸಿದ್ದರು. ಆರ್‌ಸಿಬಿ ಪರ 15 ಪಂದ್ಯಗಳನ್ನಾಡಿ 13 ಪ್ರಮುಖ ವಿಕೆಟ್ ಕಬಳಿಸಿ ಮಿಂಚಿದ್ದರು.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

