ಆರ್‌ಸಿಬಿಗೆ ಗುಡ್‌ ಬೈ ಹೇಳಿ ಮುಂಬೈ ಇಂಡಿಯನ್ಸ್ ಕೂಡಿಕೊಂಡ ಸ್ಟಾರ್ ಆಟಗಾರ..!

First Published Dec 11, 2020, 2:33 PM IST

ಮುಂಬೈ: ಯುಎಇನಲ್ಲಿ ನಡೆದ 13ನೇ ಆವೃತ್ತಿಯ ಐಪಿಎಲ್ ಟೂರ್ನಿ ಅದ್ಧೂರಿಯಾಗಿಯೇ ಮುಕ್ತಾಯವಾಗಿದೆ. ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು ಮಣಿಸಿ ಮುಂಬೈ ಇಂಡಿಯನ್ಸ್‌ ತಂಡ ಚಾಂಪಿಯನ್ ಆಗಿ ಹೊರಹೊಮ್ಮಿರುವುದು ಎಲ್ಲರಿಗೂ ಗೊತ್ತೇ ಇದೆ.
ಆದ್ರೆ ಹೊಸ ವಿಚಾರ ಏನಪ್ಪಾ ಅಂದ್ರೆ ಕಳೆದ ಮೂರು ವರ್ಷಗಳಿಂದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಭಾಗವಾಗಿದ್ದ ಸ್ಟಾರ್ ಆಟಗಾರ ಆರ್‌ಸಿಬಿ ತಂಡಕ್ಕೆ ಗುಡ್‌ಬೈ ಹೇಳಿ ಹಾಲಿ ಚಾಂಪಿಯನ್ ಮುಂಬೈ ಇಂಡಿಯನ್ಸ್‌ ಕೂಡಿಕೊಂಡಿದ್ದಾರೆ.

13ನೇ ಆವೃತ್ತಿಯ ಐಪಿಎಲ್‌ ಟೂರ್ನಿಯಲ್ಲಿ ಡೆಲ್ಲಿ ಕ್ಯಾಪಿಟಲ್ಸ್‌ ತಂಡವನ್ನು ಮಣಿಸಿ ರೋಹಿತ್ ಶರ್ಮಾ ನೇತೃತ್ವದ ಮುಂಬೈ ಇಂಡಿಯನ್ಸ್‌ ತಂಡ ಚಾಂಪಿಯನ್ ಆಗಿ ಹೊರಹೊಮ್ಮಿದೆ.

13ನೇ ಆವೃತ್ತಿಯಲ್ಲೂ ವಿರಾಟ್ ಕೊಹ್ಲಿ ನೇತೃತ್ವದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಚೊಚ್ಚಲ ಐಪಿಎಲ್ ಟ್ರೋಫಿ ಗೆಲುವಿನ ಕನಸು ಭಗ್ನವಾಗಿದೆ.

ಇದೆಲ್ಲದರ ನಡುವೆ ಕಳೆದ 3 ವರ್ಷಗಳಿಂದ ರಾಯಲ್ ಚಾಲೆಂಜರ್ಸ್‌ ಬೆಂಗಳೂರು ತಂಡದಲ್ಲಿದ್ದ ಆಟಗಾರನೊಬ್ಬ ಹಾಲಿ ಚಾಂಪಿಯನ್ ಮುಂಬೈ ಇಂಡಿಯನ್ಸ್‌ ತೆಕ್ಕೆಗೆ ಜಾರಿದ್ದಾರೆ.

ಹೌದು, ಕೆಲ ದಿನಗಳ ಹಿಂದಷ್ಟೇ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ವಿದಾಯ ಹೇಳಿದ್ದ ಟೀಂ ಇಂಡಿಯಾ ವಿಕೆಟ್‌ ಕೀಪರ್‌ ಬ್ಯಾಟ್ಸ್‌ಮನ್ ಪಾರ್ಥಿವ್ ಪಟೇಲ್  ಇದೀಗ ಸದ್ದಿಲ್ಲದೇ  ಮುಂಬೈ ಇಂಡಿಯನ್ಸ್‌ ತಂಡ ಕೂಡಿಕೊಂಡಿದ್ದಾರೆ.

2015ರಿಂದ 2017ರ ಅವಧಿಯಲ್ಲಿ ರೋಹಿತ್ ಶರ್ಮಾ ನೇತೃತ್ವದ ಮುಂಬೈ ಇಂಡಿಯನ್ಸ್‌ ತಂಡವನ್ನು ಪಾರ್ಥಿವ್ ಪಟೇಲ್ ಪ್ರತಿನಿಧಿಸಿದ್ದರು.

18 ವರ್ಷಗಳ ಕಾಲ ಕ್ರಿಕೆಟ್‌ನಲ್ಲಿ ಸಕ್ರಿಯರಾಗಿದ್ದ ಪಟೇಲ್‌, ದೇಸಿ ಕ್ರಿಕೆಟಿಗರು ಹಾಗೂ ಟೂರ್ನಿಗಳ ಬಗ್ಗೆ ಉತ್ತಮ ಜ್ಞಾನ ಹೊಂದಿದ್ದು, ಮುಂಬೈ ತಂಡಕ್ಕೆ ಪ್ರತಿಭಾನ್ವಿತ ಆಟಗಾರರನ್ನು ಹುಡುಕಿಕೊಳ್ಳುವಲ್ಲಿ ಪ್ರಮುಖ ಪಾತ್ರ ವಹಿಸಲಿದ್ದಾರೆ ಎಂದು ತಂಡದ ಮಾಲಿಕ ಆಕಾಶ್‌ ಅಂಬಾನಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪಾರ್ಥಿವ್ ಪಟೇಲ್ 2018ರಿಂದ 2020ರ ಐಪಿಎಲ್‌ವರೆಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಸದಸ್ಯರಾಗಿದ್ದರು. ಆದರೆ 13ನೇ ಆವೃತ್ತಿಯ ಐಪಿಎಲ್ ಟೂರ್ನಿಯಲ್ಲಿ ಪಾರ್ಥಿವ್‌ಗೆ ಒಂದೇ ಒಂದು ಪಂದ್ಯವನ್ನಾಡಲು ಅವಕಾಶ ಸಿಕ್ಕಿರಲಿಲ್ಲ.

13ನೇ ಆವೃತ್ತಿಯ ಐಪಿಎಲ್ ಟೂರ್ನಿಯ ಬಹುತೇಕ ಪಂದ್ಯಗಳಲ್ಲಿ ರಾಯಲ್‌ ಚಾಲೆಂಜರ್ಸ್ ಬೆಂಗಳೂರು ತಂಡದ ಪರ ವಿಕೆಟ್‌ ಕೀಪರ್‌ ಆಗಿ ಎಬಿ ಡಿವಿಲಿಯರ್ಸ್ ಹಾಗೂ ಜೋಸುವಾ ಫಿಲಿಫ್ಪಿ ಕಾಣಿಸಿಕೊಂಡಿದ್ದರು.

ಇನ್ನು ಮುಂಬೈ ಇಂಡಿಯನ್ಸ್‌ 2015 ಹಾಗೂ 2017ರಲ್ಲಿ ಐಪಿಎಲ್ ಚಾಂಪಿಯನ್ ಆಗಿದ್ದಾಗ, ಪಾರ್ಥಿವ್ ಪಟೇಲ್ ಮುಂಬೈ ಇಂಡಿಯನ್ಸ್‌ ತಂಡದ ಆಟಗಾರರಾಗಿದ್ದರು.

ಮತ್ತೆ ಮುಂಬೈ ಇಂಡಿಯನ್ಸ್‌ ತಂಡ ಕೂಡಿಕೊಂಡಿರುವುದಕ್ಕೆ ಖುಷಿಯಾಗುತ್ತಿದೆ. ಈ ಹಿಂದೆ ಮುಂಬೈ ಇಂಡಿಯನ್ಸ್‌ 2 ಬಾರಿ ಚಾಂಪಿಯನ್ ಆಗಿದ್ದಾಗ, ನಾನೂ ಆ ತಂಡದ ಸದಸ್ಯನಾಗಿದ್ದ ಕ್ಷಣಗಳನ್ನು ಮರೆಯಲು ಸಾಧ್ಯವಿಲ್ಲ ಎಂದು ಪಾರ್ಥಿವ್ ಪಟೇಲ್ ಹೇಳಿದ್ದಾರೆ

ಇನ್ನು ಕೆಲವು ದಿನಗಳ ಹಿಂದಷ್ಟೇ ಪಾರ್ಥಿವ್ ಪಟೇಲ್ ಆರ್‌ಸಿಬಿ ನಾಯಕ ವಿರಾಟ್ ಕೊಹ್ಲಿಗಿಂತ ರೋಹಿತ್ ಶರ್ಮಾ ಬೆಸ್ಟ್‌ ನಾಯಕ ಎನ್ನುವ ಮೂಲಕ ಹೊಸ ಚರ್ಚೆ ಹುಟ್ಟುಹಾಕಿದ್ದನ್ನು ಸ್ಮರಿಸಬಹುದಾಗಿದೆ.

Today's Poll

ಎಷ್ಟು ಜನರೊಂದಿಗೆ ಆನ್‌ಲೈನ್ ಗೇಮ್ ಆಡಲು ಇಚ್ಛಿಸುತ್ತೀರಿ?