- Home
- Sports
- Cricket
- ಆರ್‌ಸಿಬಿ ತಂಡದಲ್ಲಿಂದು ಒಂದಲ್ಲ ಎರಡು ಮೇಜರ್ ಚೇಂಜ್..! SRH ಎದುರಿನ ಪಂದ್ಯಕ್ಕೆ RCB ಬಲಿಷ್ಠ ಸಂಭಾವ್ಯ ತಂಡವಿದು
ಆರ್‌ಸಿಬಿ ತಂಡದಲ್ಲಿಂದು ಒಂದಲ್ಲ ಎರಡು ಮೇಜರ್ ಚೇಂಜ್..! SRH ಎದುರಿನ ಪಂದ್ಯಕ್ಕೆ RCB ಬಲಿಷ್ಠ ಸಂಭಾವ್ಯ ತಂಡವಿದು
ಬೆಂಗಳೂರು: ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವಿಂದು ಹೈದರಬಾದ್‌ನ ರಾಜೀವ್ ಗಾಂಧಿ ಅಂತಾರಾಷ್ಟ್ರೀಯ ಕ್ರಿಕೆಟ್ ಮೈದಾನದಲ್ಲಿ ಸನ್‌ರೈಸರ್ಸ್ ಹೈದರಾಬಾದ್ ತಂಡವನ್ನು ಎದುರಿಸಲಿದೆ. ಈ ಹೈವೋಲ್ಟೇಜ್ ಪಂದ್ಯದಲ್ಲಿ ಆರ್‌ಸಿಬಿ ಎರಡು ಪ್ರಮುಖ ಬದಲಾವಣೆಗಳೊಂದಿಗೆ ಕಣಕ್ಕಿಳಿಯಲು ಸಜ್ಜಾಗಿದೆ.

RCB vs SRH ಹೈವೋಲ್ಟೇಜ್ ಮ್ಯಾಚ್‌ಗೆ ಕ್ಷಣಗಣನೆ
ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಸನ್‌ರೈಸರ್ಸ್ ಹೈದರಾಬಾದ್ ತಂಡಗಳು ಲೀಗ್ ಹಂತದಲ್ಲಿ ಒಂದು ಪಂದ್ಯ ಬಾಕಿ ಇರುವಾಗಲೇ ಪ್ಲೇ ಆಫ್ ಸ್ಥಾನವನ್ನು ಖಚಿತಪಡಿಸಿಕೊಂಡಿವೆ. ಇದೀಗ ಲೀಗ್ ಹಂತದ ಕೊನೆಯ ಪಂದ್ಯದಲ್ಲಿ ದೊಡ್ಡ ಗೆಲುವು ದಾಖಲಿಸಿ ಆತ್ಮವಿಶ್ವಾಸದಿಂದ ಪ್ಲೇ ಆಫ್‌ಗೆ ಎಂಟ್ರಿಕೊಡಲು ಎದುರು ನೋಡುತ್ತಿವೆ. ಹೀಗಾಗಿ ಇಂದು ಎರಡು ಬಲಿಷ್ಠ ತಂಡಗಳ ನಡುವೆ ಹೈವೋಲ್ಟೇಜ್ ಕದನವನ್ನು ನಿರೀಕ್ಷಿಸಲಾಗಿದೆ.

ಆರಂಭಿಕ ವಿಭಾಗದಲ್ಲಿ ಬದಲಾವಣೆ
ಇಂದಿನ ಪಂದ್ಯದಲ್ಲಿ ಆರ್‌ಸಿಬಿ ತಂಡವು ಪ್ರಮುಖ ಎರಡು ಬದಲಾವಣೆಗಳೊಂದಿಗೆ ಕಣಕ್ಕಿಳಿಯುವ ಸಾಧ್ಯತೆಯಿದೆ. ಅದರಲ್ಲಿ ಮೊದಲನೆಯದ್ದು ಆರಂಭಿಕ ವಿಭಾಗದ್ದು. ಫಿಲ್ ಸಾಲ್ಟ್ ಅನುಪಸ್ಥಿತಿಯಲ್ಲಿ ಜೇಕಬ್ ಬೆಥೆಲ್‌ಗೆ ಸಾಕಷ್ಟು ಅವಕಾಶ ನೀಡಲಾಗಿತ್ತು. ಆದರೆ ಬೆಥೆಲ್ ಸಿಕ್ಕ ಅವಕಾಶ ಬಳಸಿಕೊಂಡಿಲ್ಲ. ಹೀಗಾಗಿ ಕಳೆದ ಪಂದ್ಯದಲ್ಲಿ ಆಕರ್ಷಕ ಅರ್ಧಶತಕ ಸಿಡಿಸಿ ತಂಡವನ್ನು ಗೆಲ್ಲಿಸಿದ್ದ ವೆಂಕಟೇಶ್ ಅಯ್ಯರ್, ಇಂದು ವಿರಾಟ್ ಕೊಹ್ಲಿ ಜತೆ ಇನ್ನಿಂಗ್ಸ್ ಆರಂಭಿಸುವ ಸಾಧ್ಯತೆಯಿದೆ ಎನ್ನಲಾಗುತ್ತಿದೆ.
ಮಧ್ಯಮ ಕ್ರಮಾಂಕದಲ್ಲೂ ಬದಲಾವಣೆ!
ಪಂಜಾಬ್ ಕಿಂಗ್ಸ್ ಎದುರಿನ ಕಳೆದ ಪಂದ್ಯದಲ್ಲಿ ಫಿಟ್ನೆಸ್ ಸಮಸ್ಯೆಯಿಂದ ರಜತ್ ಪಾಟೀದಾರ್ ತಂಡದಿಂದ ಹೊರಗುಳಿದಿದ್ದರು. ಇದೀಗ ನಾಯಕ ಪಾಟೀದಾರ್ ಸಂಪೂರ್ಣ ಫಿಟ್ ಆಗಿದ್ದು ತಂಡಕ್ಕೆ ಕಮ್‌ಬ್ಯಾಕ್ ಮಾಡಲಿದ್ದಾರೆ. ಮಧ್ಯಮ ಕ್ರಮಾಂಕದಲ್ಲಿ ದೇವದತ್ ಪಡಿಕ್ಕಲ್, ರಜತ್ ಪಾಟೀದಾರ್, ಜಿತೇಶ್ ಶರ್ಮಾ ಹಾಗೂ ಟಿಮ್ ಡೇವಿಡ್ ರನ್ ಮಳೆ ಹರಿಸಲು ರೆಡಿಯಾಗಿದ್ದಾರೆ.
ಆರ್‌ಸಿಬಿ ತಂಡದಲ್ಲಿದ್ದಾರೆ ಇಬ್ಬರು ಸ್ಟಾರ್ ಆಲ್ರೌಂಡರ್:
ಆರ್‌ಸಿಬಿ ತಂಡದಲ್ಲಿ ಕೃನಾಲ್ ಪಾಂಡ್ಯ ಹಾಗೂ ರೊಮ್ಯಾರಿಯೋ ಶೆಫರ್ಡ್ ಹೀಗೆ ಇಬ್ಬರು ವಿಶ್ವದರ್ಜೆಯ ಸ್ಟಾರ್ ಆಲ್ರೌಂಡರ್‌ಗಳಿದ್ದಾರೆ. ಈ ಇಬ್ಬರು ಆಟಗಾರರು ಬೌಲಿಂಗ್ ಜತೆಗೆ ಬ್ಯಾಟಿಂಗ್‌ನಲ್ಲೂ ತಂಡಕ್ಕೆ ಆಸರೆಯಾಗಬಲ್ಲ ಕ್ಷಮತೆ ಹೊಂದಿದ್ದಾರೆ.
ಬೌಲಿಂಗ್ ವಿಭಾಗದಲ್ಲೂ ಕೊಂಚ ಬದಲಾವಣೆ?
ಬೆಥೆಲ್ ಹೊರಗುಳಿದರೆ, ವಿದೇಶಿ ಆಟಗಾರನ ರೂಪದಲ್ಲಿ ನೀಳಕಾಯದ ವೇಗಿ ಜೆಕಬ್ ಡಫಿಗೆ ಮತ್ತೆ ಆರ್‌ಸಿಬಿ ತಂಡದಲ್ಲಿ ಸ್ಥಾನ ಸಿಗುವ ಸಾಧ್ಯತೆಯಿದೆ. ಡಫಿ ಸುಯಾಶ್ ಶರ್ಮಾ ಬದಲಿಗೆ ಬೌಲಿಂಗ್ ವಿಭಾಗದಲ್ಲಿ ಕಾಣಿಸಿಕೊಳ್ಳುವ ನಿರೀಕ್ಷೆಯಿದೆ. ಇನ್ನುಳಿದಂತೆ ಭುವನೇಶ್ವರ್ ಕುಮಾರ್ ಹಾಗೂ ಜೋಶ್ ಹೇಜಲ್‌ವುಡ್ ವೇಗದ ದಾಳಿಯನ್ನು ಮುನ್ನಡೆಸಲಿದ್ದು, ಇಂಪ್ಯಾಕ್ಟ್ ಆಟಗಾರನಾಗಿ ರಸಿಕ್ ಸಲಂ ಧರ್ ತಂಡ ಕೂಡಿಕೊಳ್ಳುವ ನಿರೀಕ್ಷೆಯಿದೆ.
ಸನ್‌ರೈಸರ್ಸ್ ಹೈದರಾಬಾದ್ ಎದುರಿನ ಪಂದ್ಯಕ್ಕೆ ಆರ್‌ಸಿಬಿ ಸಂಭಾವ್ಯ ಸಂಭಾವ್ಯ ತಂಡ:
ವೆಂಕಟೇಶ್ ಅಯ್ಯರ್, ವಿರಾಟ್ ಕೊಹ್ಲಿ, ದೇವದತ್ ಪಡಿಕ್ಕಲ್, ರಜತ್ ಪಾಟೀದಾರ್(ನಾಯಕ), ಜಿತೇಶ್ ಶರ್ಮಾ(ವಿಕೆಟ್ ಕೀಪರ್), ಟಿಮ್ ಡೇವಿಡ್, ಕೃನಾಲ್ ಪಾಂಡ್ಯ, ರೊಮ್ಯಾರಿಯೋ ಶೆಫರ್ಡ್, ಭುವನೇಶ್ವರ್ ಕುಮಾರ್, ಜೇಕಬ್ ಡಫಿ, ಜೋಶ್ ಹೇಜಲ್‌ವುಡ್(ಇಂಪ್ಯಾಕ್ಟ್ ಪ್ಲೇಯರ್: ರಸಿಕ್ ಸಲಂ ಧರ್)
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

