- Home
- Sports
- Cricket
- ಬೆಂಗಳೂರು ಫ್ಯಾನ್ಸ್‌ಗೆ ಬಿಗ್ ಶಾಕ್: ಎಂ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಆಡಲು ಆರ್‌ಸಿಬಿಯೇ ಹಿಂದೇಟು?
ಬೆಂಗಳೂರು ಫ್ಯಾನ್ಸ್‌ಗೆ ಬಿಗ್ ಶಾಕ್: ಎಂ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಆಡಲು ಆರ್‌ಸಿಬಿಯೇ ಹಿಂದೇಟು?
ನವದೆಹಲಿ: 19ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್‌ಗೆ ಭರದ ಸಿದ್ದತೆಗಳು ಶುರುವಾಗಿರುವ ಬೆನ್ನಲ್ಲೇ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಅಭಿಮಾನಿಗಳಿಗೆ ಬಿಗ್ ಶಾಕ್ ಎದುರಾಗುವ ಸಾಧ್ಯತೆ ದಟ್ಟವಾಗಿದೆ. ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಆಡಲು ಆರ್‌ಸಿಬಿ ಹಿಂದೇಟು ಹಾಕುತ್ತಿದೆ ಎಂದು ವರದಿಯಾಗಿದೆ.

ಬೆಂಗಳೂರಿನಲ್ಲಿ ಆಡದಿರಲು ಆರ್‌ಸಿಬಿ ತೀರ್ಮಾನ?
ಹಾಲಿ ಐಪಿಎಲ್ ಚಾಂಪಿಯನ್ ಆರ್‌ಸಿಬಿ, 2026ರ ಆವೃತ್ತಿಯಲ್ಲಿ ತನ್ನ ತವರಿನ ಪಂದ್ಯಗಳನ್ನು ಬೆಂಗಳೂರಲ್ಲಿ ಆಡದಿರಲು ನಿರ್ಧರಿಸಿದೆ ಎಂದು ರಾಷ್ಟ್ರೀಯ ಮಾಧ್ಯಮವೊಂದು ವರದಿ ಮಾಡಿದೆ.
5 ಪಂದ್ಯಗಳಿಗೆ ಡಿ.ವೈ. ಪಾಟೀಲ್ ಸ್ಟೇಡಿಯಂ ಆತಿಥ್ಯ
ಆರ್‌ಸಬಿ ತಂಡ 5 ಪಂದ್ಯಗಳನ್ನು ನವಿ ಮುಂಬೈನ ಡಿ.ವೈ.ಪಾಟೀಲ್ ಕ್ರೀಡಾಂಗಣ, 2 ಪಂದ್ಯಗಳನ್ನು ರಾಯ್ಪುರದ ವೀರ್ ನಾರಾಯಣ್ ಸಿಂಗ್ ಕ್ರೀಡಾಂಗಣದಲ್ಲಿ ಆಡಲು ನಿರ್ಧರಿಸಿದೆ ಎಂದು ಹೇಳಲಾಗುತ್ತಿದೆ.
ಆರ್‌ಸಿಬಿಯಿಂದ ಅಧಿಕೃತ ಘೋಷಣೆಯೊಂದೇ ಬಾಕಿ
ಈ ಬಗ್ಗೆ ಫ್ರಾಂಚೈಸಿ ಇನ್ನೂ ಅಧಿಕೃತ ಪ್ರಕಟಣೆ ಹೊರಡಿಸದೆ ಇದ್ದರೂ, ಈಗಾಗಲೇ ಈ ಕುರಿತು ನಿರ್ಧಾರ ಕೈಗೊಂಡಾಗಿದೆ. ಇನ್ನು ಅಧಿಕೃತ ಘೋಷಣೆಯೊಂದೇ ಬಾಕಿ ಉಳಿದಿದೆ ಎನ್ನಲಾಗುತ್ತಿದೆ.
ಆರ್‌ಸಿಬಿ ಪಂದ್ಯಗಳಿಗೆ ಆತಿಥ್ಯ ವಹಿಸಲು ಒಲವು ತೋರಿದ್ದ ಪುಣೆ
ಇದಕ್ಕೂ ಮೊದಲು ಆರ್‌ಸಿಬಿ ತವರಿನ ಪಂದ್ಯಗಳಿಗೆ ಆತಿಥ್ಯ ವಹಿಸಲು ಮಹಾರಾಷ್ಟ್ರ ಕ್ರಿಕೆಟ್ ಸಂಸ್ಥೆಯು ಒಲವು ತೋರಿತ್ತು. ಪುಣೆಯಲ್ಲಿ ನಾವು ಆರ್‌ಸಿಬಿ ಪಂದ್ಯಗಳಿಗೆ ಆತಿಥ್ಯ ವಹಿಸಲು ರೆಡಿಯಿದ್ದೇವೆ ಎಂದು ಎಂಸಿಎ ಓಪನ್ ಆಫರ್ ನೀಡಿತ್ತು.
ನವಿ ಮುಂಬೈ, ರಾಯ್ಪುರದಲ್ಲಿ ಆಡಲು ಆರ್‌ಸಿಬಿ ಆಸಕ್ತಿ
ಆದರೆ ಹೊಸ ಬೆಳವಣಿಗೆಯೊಂದರಲ್ಲಿ ಆರ್‌ಸಿಬಿ ಫ್ರಾಂಚೈಸಿಯು ತನ್ನ ಪಾಲಿನ ತವರಿನ ಪಂದ್ಯಗಳನ್ನು ನವಿ ಮುಂಬೈ ಹಾಗೂ ರಾಯ್ಪುರದಲ್ಲಿ ಆಡಲು ಆಸಕ್ತಿ ತೋರಿಸಿದೆ ಎಂದು ವರದಿಯಾಗಿದೆ.
ಆರ್‌ಸಿಬಿ ಅಭಿಮಾನಿಗಳಿಗೆ ಶಾಕ್
ಕಳೆದ ಆವೃತ್ತಿಯಲ್ಲಿ ಆರ್‌ಸಿಬಿ ತಂಡವು ಚೊಚ್ಚಲ ಬಾರಿಗೆ ಐಪಿಎಲ್ ಟ್ರೋಫಿ ಗೆದ್ದು ಬೀಗಿತ್ತು. ಇದೀಗ ಬೆಂಗಳೂರಿನ ಎಂ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಹಾಲಿ ಚಾಂಪಿಯನ್ನರ ಆಟವನ್ನು ಕಣ್ತುಂಬಿಕೊಳ್ಳಬೇಕು ಎಂದು ಕುತೂಹಲದಿಂದ ಕಾಯುತ್ತಿದ್ದ ಆರ್‌ಸಿಬಿ ಅಭಿಮಾನಿಗೆ ಈ ಸುದ್ದಿ ಬಿಗ್ ಶಾಕ್ ಎನಿಸಲಿದೆ.
ಆರ್‌ಸಿಬಿ ಕಾಡುತ್ತಿದೆ ಕಾಲ್ತುಳಿತದ ನೋವು
ಕಳೆದ ವರ್ಷ ಆರ್‌ಸಿಬಿ ಸಂಭ್ರಮಾಚರಣೆ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣ ಬಳಿ ಕಾಲ್ತುಳಿತದಿಂದಾಗಿ 11 ಮಂದಿ ಮೃತಪಟ್ಟಿದ್ದರು. ಈ ಘಟನೆಯು ತಂಡವನ್ನು ಬಲವಾಗಿ ಕಾಡುತ್ತಿದ್ದು, ಇದೇ ಕಾರಣಕ್ಕೆ ಫ್ರಾಂಚೈಸಿಯು ಚಿನ್ನಸ್ವಾಮಿಯಲ್ಲಿ ಆಡಲು ಹಿಂದೇಟು ಹಾಕುತ್ತಿದೆ ಎನ್ನಲಾಗಿದೆ.
ಐಪಿಎಲ್ ಆಯೋಜನೆ ಕುರಿತಂತೆ ಡಿಕೆಶಿ ಮಾತು
ಈ ಮೊದಲು ಕರ್ನಾಟಕ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಐಪಿಎಲ್ ಟೂರ್ನಿ ಆಯೋಜನೆಯ ಕುರಿತಂತೆ ನಮ್ಮ ಚಿನ್ನಸ್ವಾಮಿ ಸ್ಟೇಡಿಯಂನಲ್ಲೇ ಸೂಕ್ತ ಮುನ್ನೆಚ್ಚರಿಕೆ ತೆಗೆದುಕೊಂಡ ಟೂರ್ನಿ ಆಯೋಜಿಸುವ ಬಗ್ಗೆ ಆಶಾವಾದ ವ್ಯಕ್ತಪಡಿಸಿದ್ದರು. ಕೊನೆಗೂ ಸರ್ಕಾರ ಹಾಗೂ ಆರ್‌ಸಿಬಿ ಫ್ರಾಂಚೈಸಿ ಯಾವ ತೀರ್ಮಾನ ತೆಗೆದುಕೊಳ್ಳಲಿದೆ ಎನ್ನುವುದನ್ನು ಕಾದು ನೋಡಬೇಕಿದೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

