ಪ್ಲೇ ಆಫ್ ಮ್ಯಾಚ್‌ನಲ್ಲಿ ಸಪ್ರೈಸ್‌ಗೆ ರೆಡಿಯಾಗಿ: ಜಿತೇಶ್ ಶರ್ಮಾ ಹೀಗಂದಿದ್ದೇಕೆ?
ಲಖನೌ: 18ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯು ನಿರ್ಣಾಯಕ ಘಟ್ಟ ತಲುಪಿದೆ. ಈಗಾಗಲೇ ಲೀಗ್ ಹಂತದ ಪಂದ್ಯಗಳು ಮುಕ್ತಾಯವಾಗಿದ್ದು, ಪ್ಲೇ ಆಫ್‌ಗೆ ಕ್ಷಣಗಣನೆ ಆರಂಭವಾಗಿದೆ. ಹೀಗಿರುವಾಗಲೇ ಆರ್‌ಸಿಬಿ ಹಂಗಾಮಿ ನಾಯಕ ಜಿತೇಶ್ ಶರ್ಮಾ ಅಚ್ಚರಿ ಹೇಳಿಕೆ ನೀಡಿ ಗಮನ ಸೆಳೆದಿದ್ದಾರೆ.

ಐಪಿಎಲ್ ಲೀಗ್ ಹಂತದ ಕೊನೆಯ ಪಂದ್ಯದಲ್ಲಿ ಲಖನೌ ಸೂಪರ್ ಜೈಂಟ್ಸ್ ಎದುರು 6 ವಿಕೆಟ್ ಅಂತರದ ಭರ್ಜರಿ ಜಯ ಸಾಧಿಸಿದ ಆರ್‌ಸಿಬಿ ತಂಡವು ಕ್ವಾಲಿಫೈಯರ್ 1 ಗೆ ಅರ್ಹತೆ ಪಡೆದುಕೊಂಡಿದೆ.
ಚೊಚ್ಚಲ ಐಪಿಎಲ್ ಟ್ರೋಫಿ ಗೆಲ್ಲುವ ಕನವರಿಕೆಯಲ್ಲಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಟಾಪ್ 2 ಪಟ್ಟಿಯಲ್ಲಿ ಸ್ಥಾನ ಪಡೆದಿದ್ದು, ಆತ್ಮವಿಶ್ವಾಸದಿಂದ ಬೀಗುತ್ತಿದೆ. ಹೀಗಿರುವಾಗಲೇ ಆರ್‌ಸಿಬಿ ಹಂಗಾಮಿ ನಾಯಕ ಜಿತೇಶ್ ಶರ್ಮಾ ಅಚ್ಚರಿಯ ಹೇಳಿಕೆ ನೀಡಿ ಗಮನ ಸೆಳೆದಿದ್ದಾರೆ.
ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಲೀಗ್ ಹಂತದ ಕೊನೆಯ ಪಂದ್ಯದಲ್ಲಿ ಟಿಮ್ ಡೇವಿಡ್, ಜೋಶ್ ಹೇಜಲ್‌ವುಡ್ ಅವರಂತಹ ಮ್ಯಾಚ್ ವಿನ್ನಿಂಗ್ ಆಟಗಾರರಲಿಲ್ಲದೇ ಕಣಕ್ಕಿಳಿದಿತ್ತು. ಹೀಗಿದ್ದೂ ಆರ್‌ಸಿಬಿ ಗೆಲುವಿನ ನಗೆ ಬೀರುವಲ್ಲಿ ಯಶಸ್ವಿಯಾಗಿತ್ತು.
ಇನ್ನು ಲಖನೌ ಎದುರಿನ ಟಾಸ್ ವೇಳೆ ಮಾತನಾಡಿದ ಜಿತೇಶ್ ಶರ್ಮಾ, ನನ್ನ ಪ್ರಕಾರ, ಮುಂದಿನ ಮ್ಯಾಚ್‌ನಲ್ಲಿ ಎಲ್ಲರಿಗೂ ಅಚ್ಚರಿ ಕಾದಿದೆ. ಜೋಶ್ ಹೇಜಲ್‌ವುಡ್ ಹಾಗೂ ಟಿಮ್ ಡೇವಿಡ್ ಮುಂದಿನ ಪಂದ್ಯದಲ್ಲಿ ಕಾಣಿಸಿಕೊಳ್ಳಲಿದ್ದಾರೆ ಎಂದು ಜಿತೇಶ್ ಹೇಳಿದ್ದಾರೆ.
ಜೋಶ್ ಹೇಜಲ್‌ವುಡ್ ಅನುಪಸ್ಥಿತಿಯಲ್ಲಿ ಆರ್‌ಸಿಬಿ ಬೌಲಿಂಗ್ ವಿಭಾಗ ಕೊಂಚ ಮಂಕಾದಂತೆ ಕಂಡುಬರುತ್ತಿದ್ದು, ಕಳೆದೆರಡು ಪಂದ್ಯದಲ್ಲೂ ಆರ್‌ಸಿಬಿ ಬೌಲರ್‌ಗಳು 200+ ರನ್ ಬಿಟ್ಟುಕೊಟ್ಟಿದ್ದರು. ಹೇಜಲ್‌ವುಡ್ ಆರ್‌ಸಿಬಿ ತಂಡ ಕೂಡಿಕೊಂಡರೇ ಮತ್ತಷ್ಟು ಬಲ ಬರಲಿದೆ.
ಆರ್‌ಸಿಬಿ ತಂಡವು ಮೇ 29ರಂದು ನಡೆಯಲಿರುವ ಕ್ವಾಲಿಫೈಯರ್ 1 ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ತಂಡವನ್ನು ಎದುರಿಸಲಿದೆ. ಈ ಪಂದ್ಯದಲ್ಲಿ ಜಯಿಸುವ ತಂಡವು ನೇರವಾಗಿ ಫೈನಲ್ ಪ್ರವೇಶಿಸಲಿದೆ. ಸೋತ ತಂಡಕ್ಕೂ ಫೈನಲ್ ಪ್ರವೇಶಿಸಲು ಮತ್ತೊಂದು ಅವಕಾಶ ಸಿಗಲಿದೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.