MalayalamNewsableKannadaKannadaPrabhaTeluguTamilBanglaHindiMarathiMyNation
Add Preferred SourceGoogle-icon
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಗ್ಯಾಲರಿ
  • ಮನರಂಜನೆ
  • ಜ್ಯೋತಿಷ್ಯ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ಕ್ರೀಡೆ
  • ಜೀವನಶೈಲಿ
  • ವಾಣಿಜ್ಯ
TRENDING :
Ganesh Chaturthi 2026 Date & Time
Duleep Trophy Final
Sirsi-Haveri Highway
ED Raids Satish Jarkiholi
Bengaluru Flyovers
Valmiki Corporation Scam
Cauvery Water Issue
Bhadra Irrigation Project
Shivaraj Tangadagi vs Janardhan Reddy
Leelamma Ninna Ganda Yaramma
Karnataka Government Schools
Karnataka Gramanubhava Programme
  • Home
  • Sports
  • Cricket
  • ಅಷ್ಟಕ್ಕೂ ಟೀಂ ಇಂಡಿಯಾ ಕ್ರಿಕೆಟಿಗ ರಿಂಕು ಸಿಂಗ್ ತಂದೆಗೆ ಏನಾಗಿದೆ? ರಿಂಕು ದಿಢೀರ್ ತಂಡ ತೊರೆದಿದ್ದೇಕೆ?

ಅಷ್ಟಕ್ಕೂ ಟೀಂ ಇಂಡಿಯಾ ಕ್ರಿಕೆಟಿಗ ರಿಂಕು ಸಿಂಗ್ ತಂದೆಗೆ ಏನಾಗಿದೆ? ರಿಂಕು ದಿಢೀರ್ ತಂಡ ತೊರೆದಿದ್ದೇಕೆ?

ಬೆಂಗಳೂರು: ಐಸಿಸಿ ಟಿ20 ವಿಶ್ವಕಪ್ ಟೂರ್ನಿಯಲ್ಲಿ ಭಾರತ ತಂಡದ ಭಾಗವಾಗಿರುವ ರಿಂಕು ಸಿಂಗ್, ಇದೀಗ ದಿಢೀರ್ ಎನ್ನುವಂತೆ ಭಾರತ ತಂಡ ತೊರೆದು ಮನೆಗೆ ವಾಪಾಸ್ಸಾಗಿದ್ದಾರೆ. ಅವರ ತಂದೆ ಅನಾರೋಗ್ಯಕ್ಕೆ ತುತ್ತಾಗಿದ್ದಾರೆ. ಈ ಕುರಿತಾದ ಮಹತ್ವದ ಅಪ್‌ಡೇಟ್ಸ್ ಇಲ್ಲಿದೆ ನೋಡಿ. 

1 Min read
Author : Naveen Kodase
Published : Feb 25 2026, 11:27 AM IST
Share this Photo Gallery
  • FB
  • TW
  • Linkdin
  • Whatsapp
16
ಒತ್ತಡದಲ್ಲಿದೆ ಟೀಂ ಇಂಡಿಯಾ
Image Credit : ANI

ಒತ್ತಡದಲ್ಲಿದೆ ಟೀಂ ಇಂಡಿಯಾ

ಐಸಿಸಿ ಟಿ20 ವಿಶ್ವಕಪ್ ಟೂರ್ನಿಯ ಸೂಪರ್-8 ಹಂತದ ಮೊದಲ ಪಂದ್ಯದಲ್ಲಿ ಟೀಂ ಇಂಡಿಯಾ, ದಕ್ಷಿಣ ಆಫ್ರಿಕಾ ಎದುರು ಹೀನಾಯ ಸೋಲು ಅನುಭವಿಸಿದೆ. ಹೀಗಾಗಿ ಸೆಮಿಫೈನಲ್ ಪ್ರವೇಶಿಸುವ ಕನಸು ಜೀವಂತವಾಗಿಟ್ಟುಕೊಳ್ಳಬೇಕಿದ್ದರೇ ಇನ್ನುಳಿದ ಎರಡು ಪಂದ್ಯಗಳನ್ನು ಗೆಲ್ಲಲೇಬೇಕಾದ ಒತ್ತಡಕ್ಕೆ ಟೀಂ ಇಂಡಿಯಾ ಸಿಲುಕಿದೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred
26
ಮಹತ್ವದ ಪಂದ್ಯಕ್ಕೂ ಮುನ್ನ ತಂಡ ತೊರೆದ ರಿಂಕು ಸಿಂಗ್
Image Credit : ANI

ಮಹತ್ವದ ಪಂದ್ಯಕ್ಕೂ ಮುನ್ನ ತಂಡ ತೊರೆದ ರಿಂಕು ಸಿಂಗ್

ಟೀಂ ಇಂಡಿಯಾ ಸೂಪರ್-8 ಹಂತದಲ್ಲಿ ಜಿಂಬಾಬ್ವೆ ಹಾಗೂ ವೆಸ್ಟ್ ಇಂಡೀಸ್ ತಂಡವನ್ನು ಎದುರಿಸಲಿದೆ. ಈ ಎರಡು ಪಂದ್ಯಗಳನ್ನು ಜಯಿಸಿದರಷ್ಟೇ ಸೆಮೀಸ್ ಪ್ರವೇಶಿಸಲು ಸಾಧ್ಯ. ಇದರ ಜತೆಗೆ ಅದೃಷ್ಟ ಕೂಡಾ ಕೈ ಹಿಡಿಯಬೇಕಷ್ಟೆ. ಹೀಗಿರುವಾಗಲೇ ರಿಂಕು ಸಿಂಗ್ ಕೂಡಾ ದಿಢೀರ್ ಎನ್ನುವಂತೆ ತಂಡ ತೊರೆದಿದ್ದಾರೆ.

Related Articles

Related image1
ಜಿಂಬಾಬ್ವೆ ಎದುರಿನ ಮಹತ್ವದ ಪಂದ್ಯಕ್ಕೂ ಮುನ್ನ ಮನೆಯತ್ತ ಓಡಿದ ಟೀಂ ಇಂಡಿಯಾ ಸ್ಟಾರ್ ಕ್ರಿಕೆಟಿಗ! ಅಷ್ಟಕ್ಕೂ ಆಗಿದ್ದೇನು?
Related image2
ಟೀಂ ಇಂಡಿಯಾ 2 ಪಂದ್ಯ ಗೆದ್ದರೂ ಸೆಮಿಗೇರುವುದು ಗ್ಯಾರಂಟಿ ಇಲ್ಲ! ಭಾರತಕ್ಕೆ ವಿಲನ್ ಆದ ನೆಟ್ ರನ್‌ರೇಟ್!
36
ರಿಂಕು ಸಿಂಗ್ ತಂದೆಗೆ ಲಿವರ್ ಕ್ಯಾನ್ಸರ್
Image Credit : Getty

ರಿಂಕು ಸಿಂಗ್ ತಂದೆಗೆ ಲಿವರ್ ಕ್ಯಾನ್ಸರ್

ಹೌದು, ಮಾಧ್ಯಮಗಳ ವರದಿಗಳ ಪ್ರಕಾರ, ರಿಂಕು ಸಿಂಗ್ ಅವರ ತಂದೆ ನಾಲ್ಕನೇ ಹಂತದ ಲಿವರ್ ಕ್ಯಾನ್ಸರ್‌ನಿಂದ ಬಳಲುತ್ತಿದ್ದು, ಸದ್ಯ ಅವರನ್ನು ವೆಂಟಿಲೇಟರ್‌ನಲ್ಲಿ ಇರಿಸಲಾಗಿದೆ ಎನ್ನಲಾಗುತ್ತದೆ. ಇದೇ ಕಾರಣಕ್ಕಾಗಿ ರಿಂಕು ಭಾರತ ತಂಡವನ್ನು ತೊರೆದು ಆಸ್ಪತ್ರೆಗೆ ದೌಡಾಯಿಸಿದ್ದಾರೆ ಎನ್ನಲಾಗಿದೆ.

46
ನೆಟ್ ಪ್ರಾಕ್ಟೀಸ್‌ನಿಂದ ಹೊರಗುಳಿದ ರಿಂಕು ಸಿಂಗ್
Image Credit : ANI

ನೆಟ್ ಪ್ರಾಕ್ಟೀಸ್‌ನಿಂದ ಹೊರಗುಳಿದ ರಿಂಕು ಸಿಂಗ್

ನಿನ್ನೆಯಷ್ಟೇ ಮೈದಾನದಲ್ಲಿ ಹಾರ್ದಿಕ್ ಪಾಂಡ್ಯ, ಇಶಾನ್ ಕಿಶನ್, ಅರ್ಶದೀಪ್ ಸಿಂಗ್, ಸಂಜು ಸ್ಯಾಮ್ಸನ್, ಅಭಿಷೇಕ್ ಶರ್ಮಾ, ಇನ್ನಿತರ ಆಟಗಾರರು ಭರ್ಜರಿ ನೆಟ್ ಪ್ರಾಕ್ಟೀಸ್ ನಡೆಸಿದ್ದರು. ಆದರೆ ಈ ವೇಳೆ ರಿಂಕು ಸಿಂಗ್ ಕಾಣಿಸಿಕೊಂಡಿರಲಿಲ್ಲ.

56
ನಿರೀಕ್ಷಿತ ಪ್ರದರ್ಶನ ತೋರಲು ರಿಂಕು ವಿಫಲ
Image Credit : Getty

ನಿರೀಕ್ಷಿತ ಪ್ರದರ್ಶನ ತೋರಲು ರಿಂಕು ವಿಫಲ

ಈ ಬಾರಿಯ ಟಿ20 ವಿಶ್ವಕಪ್ ಟೂರ್ನಿಯಲ್ಲಿ ರಿಂಕು ಸಿಂಗ್ ಪರಿಣಾಮಕಾರಿ ಪ್ರದರ್ಶನ ತೋರಲು ವಿಫಲವಾಗಿದ್ದಾರೆ. ಐದು ಇನ್ನಿಂಗ್ಸ್‌ಗಳಿಂದ ರಿಂಕು ಕೇವಲ 24 ರನ್ ಗಳಿಸಲಷ್ಟೇ ಶಕ್ತರಾಗಿದ್ದಾರೆ. ಈ ವರ್ಷ 10 ಟಿ20 ಪಂದ್ಯಗಳನ್ನಾಡಿರುವ ರಿಂಕು ಸಿಂಗ್, 28.75ರ ಸರಾಸರಿಯಲ್ಲಿ ಕೇವಲ 115 ರನ್ ಗಳಿಸಲಷ್ಟೇ ಶಕ್ತರಾಗಿದ್ದಾರೆ.

66
ರಿಂಕು ಸಿಂಗ್ ಅಲಭ್ಯರಾದರೇ?
Image Credit : Getty

ರಿಂಕು ಸಿಂಗ್ ಅಲಭ್ಯರಾದರೇ?

ಒಂದು ವೇಳೆ ರಿಂಕು ಸಿಂಗ್ ಅಲಭ್ಯರಾದರೇ, ಅವರ ಸ್ಥಾನಕ್ಕೆ ಸಂಜು ಸ್ಯಾಮ್ಸನ್ ಆಡುವ ಹನ್ನೊಂದರ ಬಳಗ ಕೂಡಿಕೊಳ್ಳುವ ಸಾಧ್ಯತೆಯಿದೆ. ಭಾರತ ತಂಡವು ಸೂಪರ್-8 ಹಂತದ ಮುಂದಿನ ಪಂದ್ಯದಲ್ಲಿ ಜಿಂಬಾವ್ವೆ ತಂಡವನ್ನು ಎದುರಿಸಲಿದೆ.

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

About the Author

NK
Naveen Kodase
ನವೀನ್ ಕೊಡಸೆ ಏಷ್ಯಾನೆಟ್ ಕನ್ನಡದಲ್ಲಿ ಮುಖ್ಯ ಉಪಸಂಪಾದಕ. ಕಳೆದ 9 ವರ್ಷಗಳಿಂದಲೂ ಮಾಧ್ಯಮ ಜಗತ್ತಿನಲ್ಲಿದ್ದೇನೆ. ಅಪ್ಪಟ ಮಲೆನಾಡಿನ ಹುಡುಗ. ಕುವೆಂಪು ವಿವಿಯ ಪತ್ರಿಕೋದ್ಯಮ ಪದವಿ ಇದೆ. ರಾಜ್‌ ನ್ಯೂಸ್‌ ಮೂಲಕ ಮಾಧ್ಯಮ ಲೋಕಕ್ಕೆ ಕಾಲಿಟ್ಟವನು. ಡಿಜಿಟಲ್‌ ಮಾಧ್ಯಮ ಲೋಕದಲ್ಲಿ ಪಳಗಿದರೂ, ಕಲಿಯೋದಿದೆ ಅಪಾರ. ಕ್ರೀಡೆ, ರಾಜಕೀಯ, ಸಾಹಿತ್ಯದಲ್ಲಿದೆ ಆಸಕ್ತಿ. ಕ್ರೀಡಾ ಸುದ್ದಿಯೇ ನನ್ನ ಜೀವಾಳ.
ಕ್ರಿಕೆಟ್
ಟೀಮ್ ಇಂಡಿಯಾ
ಐಸಿಸಿ ಟಿ20 ವಿಶ್ವಕಪ್

Latest Videos
Recommended Stories
Recommended image1
ಏಷ್ಯನ್ ಗೇಮ್ಸ್ ಹೋಟೆಲ್ ವಿವಾದ: ಕೊನೆಗೂ ಮೌನ ಮುರಿದ ಬಿಸಿಸಿಐ
Recommended image2
BCCI ಖಜಾನೆಗೆ ಕುಬೇರನ ಕೃಪೆ: ChatGPT ಜೊತೆ ಬಿಗ್ ಡೀಲ್, ಒಂದೊಂದು ಪಂದ್ಯಕ್ಕೂ ಕೋಟಿ ಕೋಟಿ ಹಣ
Recommended image3
ದುಲೀಪ್‌ ಟ್ರೋಫಿ ಫೈನಲ್‌ನಿಂದ ಹೊರಬಿದ್ದ ಬೆನ್ನಲ್ಲೇ ಕರುಣ್‌ ನಾಯರ್‌ ಶತಕ; ತಿಲಕ್‌ ವರ್ಮಾಗೆ ಸೋಷಿಯಲ್‌ ಮೀಡಿಯಾದಲ್ಲಿ ಟಾಂಗ್‌
Related Stories
Recommended image1
ಜಿಂಬಾಬ್ವೆ ಎದುರಿನ ಮಹತ್ವದ ಪಂದ್ಯಕ್ಕೂ ಮುನ್ನ ಮನೆಯತ್ತ ಓಡಿದ ಟೀಂ ಇಂಡಿಯಾ ಸ್ಟಾರ್ ಕ್ರಿಕೆಟಿಗ! ಅಷ್ಟಕ್ಕೂ ಆಗಿದ್ದೇನು?
Recommended image2
ಟೀಂ ಇಂಡಿಯಾ 2 ಪಂದ್ಯ ಗೆದ್ದರೂ ಸೆಮಿಗೇರುವುದು ಗ್ಯಾರಂಟಿ ಇಲ್ಲ! ಭಾರತಕ್ಕೆ ವಿಲನ್ ಆದ ನೆಟ್ ರನ್‌ರೇಟ್!
News
kannada newslatest kannada newskarnataka newsbengaluru newsMysore newsindia news in kannadainternational news in kannada
Entertainment News
Kannada Cinema Newskannada movies reviewsandalwood newskannada tv shows
Sports News
sports news in kannadacricket news in kannadaOther Sports News in Kannada
Business News
Business news in kannadashare market news in kannadabusiness ideas in kannada
Science & Technology
technology news in kannadamobile tech newsscience and tech news
Astrology
rashi bhavishya in kannadadina bhavishyavara bhavishyavastu shastra in kannadakarnataka festivals
Lifestyle
Lifestyle news in kannadafood recipes in kannadahealth tips in kannadakitchen tips in kannada
Education & Career
job news in kannadaPrivate Jobsbank jobs in karnatakaGovernment jobs in karnatakaCentral Govt Jobs in KannadaIT Jobs
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2026 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved