ಟೆಸ್ಟ್ ಕ್ರಿಕೆಟ್‌ನಲ್ಲಿ ಧೋನಿ ಹೆಸರಲ್ಲಿದ್ದ ಅಪರೂಪದ ದಾಖಲೆ ಮುರಿದ ವಿಕೆಟ್ ಕೀಪರ್ ಬ್ಯಾಟರ್ ರಿಷಭ್ ಪಂತ್!
ಟೀಂ ಇಂಡಿಯಾ ವಿಕೆಟ್ ಕೀಪರ್ ಬ್ಯಾಟರ್ ರಿಷಭ್ ಪಂತ್, ನ್ಯೂಜಿಲೆಂಡ್ ಎದುರಿನ ಬೆಂಗಳೂರು ಟೆಸ್ಟ್ ಪಂದ್ಯದಲ್ಲಿ, ಕ್ರಿಕೆಟ್ ದಂತಕಥೆ ಧೋನಿ ಹೆಸರಿನಲ್ಲಿದ್ದ ಅಪರೂಪದ ದಾಖಲೆ ಬ್ರೇಕ್ ಮಾಡಿದ್ದಾರೆ. ಈ ಕುರಿತಾದ ರಿಪೋರ್ಟ್ ಇಲ್ಲಿದೆ ನೋಡಿ
ಪಂತ್ 2500 ರನ್
ಬೆಂಗಳೂರು ಟೆಸ್ಟ್ನಲ್ಲಿ ಭಾರತ ತಂಡ ಮೊದಲ ಇನ್ನಿಂಗ್ಸ್‌ನಲ್ಲಿ ಕಳಪೆ ಪ್ರದರ್ಶನ ನೀಡಿತು. ಆದರೆ, ಎರಡನೇ ಇನ್ನಿಂಗ್ಸ್‌ನಲ್ಲಿ ಅದ್ಭುತವಾಗಿ ಕಮ್‌ಬ್ಯಾಕ್. ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ ಅರ್ಧಶತಕ ಬಾರಿಸಿದರು. ಇನ್ನು ಸರ್ಫರಾಜ್ ಖಾನ್ 150 ರನ್ ಗಳಿಸಿದರೆ, ವಿಕೆಟ್ ಕೀಪರ್ ಬ್ಯಾಟರ್ ರಿಷಭ್ ಪಂತ್ ಶತಕದಿಂದ ಕೇವಲ ಒಂದು ರನ್ನಿಂದ ವಂಚಿತರಾದರು.
ಭಾರತ vs ನ್ಯೂಜಿಲೆಂಡ್
ನ್ಯೂಜಿಲೆಂಡ್ ವಿರುದ್ಧದ ಬೆಂಗಳೂರಿನ ಎಂ.ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಟೆಸ್ಟ್ ಪಂದ್ಯದಲ್ಲಿ ಭಾರತ ತಂಡ ಅದ್ಭುತವಾಗಿ ಚೇತರಿಸಿಕೊಂಡಿದೆ. ಮೊದಲ ಇನ್ನಿಂಗ್ಸ್‌ನಲ್ಲಿ ಕೇವಲ 46 ರನ್ಗಳಿಗೆ ಆಲೌಟ್ ಆದ ಭಾರತ ತಂಡ ಎರಡನೇ ಇನ್ನಿಂಗ್ಸ್‌ನಲ್ಲಿ ಭರ್ಜರಿಯಾಗಿಯೇ ಕಮ್‌ಬ್ಯಾಕ್ ಮಾಡುವಲ್ಲಿ ಯಶಸ್ವಿಯಾಗಿದೆ.
ನ್ಯೂಜಿಲೆಂಡ್ 402 ರನ್ ಗಳಿಸುವ ಮೂಲಕ ಮೊದಲ ಇನ್ನಿಂಗ್ಸ್‌ನಲ್ಲಿ 356 ರನ್ಗಳ ಮುನ್ನಡೆ ಸಾಧಿಸಿತು. ಮೂರನೇ ದಿನ ಭಾರತ ಎರಡನೇ ಇನ್ನಿಂಗ್ಸ್‌ನಲ್ಲಿ ಆಕ್ರಮಣಕಾರಿಯಾಗಿ ಆಡಿತು. ಪಂದ್ಯದ ನಾಲ್ಕನೇ ದಿನವಾದ ಶನಿವಾರ (ಅಕ್ಟೋಬರ್ 19) ರಂದು ಇದು ಮುಂದುವರೆಯಿತು. ಎರಡನೇ ಇನ್ನಿಂಗ್ಸ್‌ನಲ್ಲಿ ಟೀಂ ಇಂಡಿಯಾ 462 ರನ್ ಬಾರಿಸಿ ಸರ್ವಪತನ ಕಂಡಿದೆ.
ಸರ್ಫರಾಜ್ ಖಾನ್, ರಿಷಭ್ ಪಂತ್ 177 ರನ್ಗಳ ಜೊತೆಯಾಟ
ಎರಡನೇ ಇನ್ನಿಂಗ್ಸ್‌ನಲ್ಲಿ ರೋಹಿತ್ ಶರ್ಮಾ (52), ವಿರಾಟ್ ಕೊಹ್ಲಿ (70) ಉತ್ತಮ ಇನ್ನಿಂಗ್ಸ್ಗಳನ್ನು ಆಡಿ ಭಾರತ ತಂಡಕ್ಕೆ ಬಲವಾದ ಅಡಿಪಾಯ ಹಾಕಿದರು. ಸರ್ಫರಾಜ್ ಖಾನ್, ರಿಷಭ್ ಪಂತ್ ಭಾರತದ ಇನ್ನಿಂಗ್ಸ್ ಅನ್ನು ಮುಂದಕ್ಕೆ ಕೊಂಡೊಯ್ದರು. ನಾಲ್ಕನೇ ವಿಕೆಟ್ಗೆ ಈ ಜೋಡಿ 177 ರನ್ಗಳ ಜೊತೆಯಾಟವಾಡುವ ಮೂಲಕ ಇನ್ನಿಂಗ್ಸ್ ಮುನ್ನಡೆ ಸಾಧಿಸಲು ನೆರವಾದರು.
ಪಂತ್, ಭಾರತ vs ನ್ಯೂಜಿಲೆಂಡ್
ನಾಲ್ಕನೇ ದಿನ ಸರ್ಫರಾಜ್ ಖಾನ್ 150 ರನ್ ಗಳಿಸಿ ಔಟಾದರು. ತಮ್ಮ ಇನ್ನಿಂಗ್ಸ್‌ನಲ್ಲಿ ಸರ್ಫರಾಜ್ ಖಾನ್ 18 ಬೌಂಡರಿ, 3 ಸಿಕ್ಸರ್ ಬಾರಿಸಿದರು. ರಿಷಭ್ ಪಂತ್ ಊಟದ ವಿರಾಮದೊಳಗೆ ಅರ್ಧಶತಕ ಬಾರಿಸಿದರು. ಪಂತ್ ತಮ್ಮ ಅರ್ಧಶತಕದ ಇನ್ನಿಂಗ್ಸ್ನೊಂದಿಗೆ ಹಲವು ದಾಖಲೆಗಳನ್ನು ನಿರ್ಮಿಸಿದರು. ನಂತರ ಅವರು ತಮ್ಮ ಅರ್ಧಶತಕವನ್ನು ಶತಕವನ್ನಾಗಿ ಪರಿವರ್ತಿಸಲು ಪ್ರಯತ್ನಿಸಿದರು. ಆದರೆ ಕೇವಲ ಒಂದು ರನ್ನಿಂದ ಶತಕ ವಂಚಿತರಾದರು.
ಧೋನಿ ದಾಖಲೆ ಮುರಿದ ರಿಷಭ್ ಪಂತ್
ಬೆಂಗಳೂರಿನಲ್ಲಿ ನ್ಯೂಜಿಲೆಂಡ್ ವಿರುದ್ಧದ ಪಂದ್ಯದಲ್ಲಿ ರಿಷಭ್ ಪಂತ್ 50 ರನ್ ಗಳಿಸಿದ ನಂತರ ಮತ್ತೊಂದು ಕ್ರಿಕೆಟ್ ದಾಖಲೆ ನಿರ್ಮಿಸಿದರು. ಟೆಸ್ಟ್ ಕ್ರಿಕೆಟ್‌ನಲ್ಲಿ ಅತಿ ವೇಗವಾಗಿ 2,500 ರನ್ ಗಳಿಸಿದ ಭಾರತದ ವಿಕೆಟ್ ಕೀಪರ್ ಬ್ಯಾಟರ್ ಎನಿಸಿಕೊಂಡರು. ಕೇವಲ 62 ಇನ್ನಿಂಗ್ಸ್ಗಳಲ್ಲಿ ಅವರು ಈ ಸಾಧನೆ ಮಾಡಿದರು. ಇದಕ್ಕೂ ಮೊದಲು ಈ ದಾಖಲೆ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ ಹೆಸರಿನಲ್ಲಿತ್ತು.
ಕ್ಯಾಪ್ಟನ್ ಕೂಲ್ ಖ್ಯಾತಿಯ ಧೋನಿ 69 ಇನ್ನಿಂಗ್ಸ್ಗಳಲ್ಲಿ ಈ ಸಾಧನೆ ಮಾಡಿದ್ದರು. ಅದೇ ಸಮಯದಲ್ಲಿ, ಫಾರೂಕ್ ಇಂಜಿನಿಯರ್ 82 ಇನ್ನಿಂಗ್ಸ್ಗಳಲ್ಲಿ ಈ ಸಾಧನೆ ಮಾಡಿದ್ದರು. ಮೊಣಕಾಲು ಗಾಯದಿಂದಾಗಿ ಪಂತ್ ಮೂರನೇ ದಿನ ಫೀಲ್ಡಿಂಗ್ ಮಾಡಲಿಲ್ಲ. ಒಂದು ದಿನ ವಿಶ್ರಾಂತಿ ಪಡೆದ ಅವರು ನಾಲ್ಕನೇ ದಿನ ಬ್ಯಾಟಿಂಗ್ನಲ್ಲಿ ಮಿಂಚಿದರು.