MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಕ್ರೀಡೆ
  • ವೀಡಿಯೋ
  • ಮನರಂಜನೆ
  • ಜೀವನಶೈಲಿ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ತಂತ್ರಜ್ಞಾನ
  • ವಾಣಿಜ್ಯ
  • Home
  • Sports
  • Cricket
  • ಮ್ಯಾಂಚೆಸ್ಟರ್ ಟೆಸ್ಟ್‌: ರಿಷಭ್ ಪಂತ್ ಗಾಯದ ಕುರಿತಂತೆ ಮಹತ್ವದ ಅಪ್‌ಡೇಟ್ ಕೊಟ್ಟ ಬಿಸಿಸಿಐ!

ಮ್ಯಾಂಚೆಸ್ಟರ್ ಟೆಸ್ಟ್‌: ರಿಷಭ್ ಪಂತ್ ಗಾಯದ ಕುರಿತಂತೆ ಮಹತ್ವದ ಅಪ್‌ಡೇಟ್ ಕೊಟ್ಟ ಬಿಸಿಸಿಐ!

ಮ್ಯಾಂಚೆಸ್ಟರ್: ಭಾರತ ಹಾಗೂ ಇಂಗ್ಲೆಂಡ್ ನಡುವಿನ ಆಂಡರ್‌ಸನ್-ತೆಂಡುಲ್ಕರ್ ಟ್ರೋಫಿ ಟೂರ್ನಿಯ ನಾಲ್ಕನೇ ಟೆಸ್ಟ್ ಪಂದ್ಯದ ಮೊದಲ ದಿನದಾಟದಲ್ಲೇ ರಿಷಭ್ ಪಂತ್ ಗಾಯಕ್ಕೆ ಒಳಗಾಗಿದ್ದಾರೆ. ಈ ಕುರಿತಂತೆ ಬಿಸಿಸಿಐ ಮಹತ್ವದ ಅಪ್‌ಡೇಟ್ ನೀಡಿದೆ. ಏನದು? 

2 Min read
Naveen Kodase
Published : Jul 24 2025, 11:44 AM IST
Share this Photo Gallery
  • FB
  • TW
  • Linkdin
  • Whatsapp
19
Image Credit : Getty

ಭಾರತ ಹಾಗೂ ಇಂಗ್ಲೆಂಡ್ ನಡುವಿನ ನಾಲ್ಕನೇ ಟೆಸ್ಟ್ ಪಂದ್ಯವು ಇಲ್ಲಿನ ಓಲ್ಡ್ ಟ್ರಾಫರ್ಡ್‌ ಮೈದಾನದಲ್ಲಿ ಆರಂಭವಾಗಿದ್ದು ಟಾಸ್ ಸೋತ ಟೀಂ ಇಂಡಿಯಾ ಮೊದಲು ಬ್ಯಾಟಿಂಗ್ ಮಾಡುತ್ತಿದೆ.

29
Image Credit : Getty

ಮೊದಲ ದಿನದಾಟದಂತ್ಯಕ್ಕೆ ಟೀಂ ಇಂಡಿಯಾ 4 ವಿಕೆಟ್ ಕಳೆದುಕೊಂಡು 264 ರನ್ ಬಾರಿಸಿದೆ. ಸದ್ಯ ಆಲ್ರೌಂಡರ್‌ಗಳಾದ ರವೀಂದ್ರ ಜಡೇಜಾ ಹಾಗೂ ಶಾರ್ದೂಲ್ ಠಾಕೂರ್ ತಲಾ 19 ರನ್ ಬಾರಿಸಿದ್ದು ಎರಡನೇ ದಿನಕ್ಕೆ ಬ್ಯಾಟಿಂಗ್ ಕಾಯ್ದುಕೊಂಡಿದ್ದಾರೆ.

Related Articles

Related image1
ಮ್ಯಾಂಚೆಸ್ಟರ್ ಟೆಸ್ಟ್‌: ಗಾಯದ ಹೊರತಾಗಿಯೂ ಅಪರೂಪದ ದಾಖಲೆ ಬರೆದ ರಿಷಭ್ ಪಂತ್!
Related image2
ಮ್ಯಾಂಚೆಸ್ಟರ್ ಭದ್ರಕೋಟೆ ಪುಡಿ ಮಾಡುತ್ತಾ ಟೀಂ ಇಂಡಿಯಾ? ಗಿಲ್ ಪಡೆಗೆ ಮಾಡು ಇಲ್ಲವೇ ಮಡಿ ಟೆಸ್ಟ್
39
Image Credit : Getty

ಇನ್ನು ಮೊದಲ ದಿನದಾಟದಲ್ಲಿ ಟೀಂ ಇಂಡಿಯಾ ಸ್ಟಾರ್ ವಿಕೆಟ್ ಕೀಪರ್ ಬ್ಯಾಟರ್ ರಿಷಭ್ ಪಂತ್, 48 ಎಸೆತಗಳಲ್ಲಿ ಆಕರ್ಷಕ 37 ರನ್ ಗಳಿಸಿದ್ದಾಗ ರಿಟೈರ್ಡ್‌ ಹರ್ಟ್ ಆಗಿ ಕಾರ್ಟ್‌ನಲ್ಲಿ ಕರೆದೊಯ್ಯಲಾಯಿತು.

49
Image Credit : Getty

ಇದು ಇಂಗ್ಲೆಂಡ್ ವಿರುದ್ಧದ ನಾಲ್ಕನೇ ಟೆಸ್ಟ್‌ನಲ್ಲಿ ಭಾರತಕ್ಕೆ ದೊಡ್ಡ ಹಿನ್ನಡೆಯಾಗಿದೆ. ಫಾರ್ಮ್‌ನಲ್ಲಿರುವ ವಿಕೆಟ್ ಕೀಪರ್ ರಿಷಭ್ ಪಂತ್ ಗಾಯಗೊಂಡು ಹೊರ ನಡೆದಿದ್ದಾರೆ.

59
Image Credit : Social Media

37 ರನ್ ಗಳಿಸಿದ್ದಾಗ ಕ್ರಿಸ್ ವೋಕ್ಸ್ ಎಸೆತದಲ್ಲಿ ರಿವರ್ಸ್ ಸ್ವೀಪ್ ಮಾಡಲು ಯತ್ನಿಸುವಾಗ ರಿಷಭ್ ಪಂತ್ ಕಾಲಿಗೆ ಪೆಟ್ಟಾಯಿತು. ಪಂತ್ ಕಾಲಿನ ಬೆರಳಿಗೆ ಪೆಟ್ಟಾಗಿದ್ದು, ಊದಿಕೊಂಡು ರಕ್ತ ಸೋರಿತು. ನಡೆಯಲು ಕಷ್ಟಪಟ್ಟ ಪಂತ್‌ರನ್ನು ಕಾರ್ಟ್‌ನಲ್ಲಿ ಕರೆದೊಯ್ಯಲಾಯಿತು.

69
Image Credit : Getty

ಇದೀಗ ಈ ಕುರಿತಂತೆ ಬಿಸಿಸಿಐ ಮಹತ್ವದ ಅಪ್‌ಡೇಟ್ ನೀಡಿದೆ. ಮ್ಯಾಂಚೆಸ್ಟರ್ ಟೆಸ್ಟ್‌ ಪಂದ್ಯದ ಮೊದಲ ದಿನ ರಿಷಭ್ ಪಂತ್ ಅವರ ಬಲಗಾಲಿನ ಪಾದಕ್ಕೆ ಚೆಂಡು ಬಡಿದಿದ್ದು, ಗಾಯವಾಗಿದೆ.

79
Image Credit : ANI

ಅವರನ್ನು ಸ್ಟೇಡಿಯಂನಿಂದ ಸ್ಕ್ಯಾನ್‌ಗಾಗಿ ಕರೆದೊಯ್ಯಲಾಗಿದೆ. ಬಿಸಿಸಿಐ ವೈದ್ಯಕೀಯ ಸಿಬ್ಬಂದಿಯು ಅವರ ಆರೋಗ್ಯದ ಮೇಲೆ ನಿಗಾಯಿಟ್ಟಿದ್ದಾರೆ ಎಂದು ಬಿಸಿಸಿಐ ತಿಳಿಸಿದೆ.

𝗨𝗽𝗱𝗮𝘁𝗲:

Rishabh Pant was hit on his right foot while batting on Day 1 of the Manchester Test. 

He was taken for scans from the stadium. 

The BCCI Medical Team is monitoring his progress.

— BCCI (@BCCI) July 23, 2025

89
Image Credit : Getty

ಇನ್ನು ರಿಷಭ್ ಪಂತ್ ಅವರ ಗಾಯದ ತೀವ್ರತೆಯ ಬಗ್ಗೆ ಇನ್ನಷ್ಟೇ ಮಾಹಿತಿ ಹೊರಬೀಳಬೇಕಿದೆ. ಸದ್ಯ ರಿಟೈರ್ಡ್ ಹರ್ಟ್ ಆಗಿರುವ ರಿಷಭ್ ಪಂತ್ ಮೊದಲ ಇನ್ನಿಂಗ್ಸ್‌ನಲ್ಲಿ ಮತ್ತೆ ಬ್ಯಾಟಿಂಗ್ ಮಾಡಲು ಇಳಿಯುತ್ತಾರೆಯೇ ಅಥವಾ ಇಲ್ಲವೇ ಎನ್ನುವುದನ್ನು ಕಾದು ನೋಡಬೇಕಿದೆ.

99
Image Credit : Getty

ಲಾರ್ಡ್‌ ಟೆಸ್ಟ್ ಪಂದ್ಯದ ವೇಳೆಯಲ್ಲಿಯೇ ರಿಷಭ್ ಪಂತ್ ಕೈಬೆರಳಿನ ಗಾಯಕ್ಕೆ ಒಳಗಾಗಿದ್ದರು. ಹೀಗಾಗಿ ಕೇವಲ ಬ್ಯಾಟರ್ ಆಗಿ ಮಾತ್ರ ಕಾಣಿಸಿಕೊಂಡಿದ್ದರು. ಧೃವ್ ಜುರೆಲ್ ವಿಕೆಟ್ ಕೀಪರ್ ಆಗಿ ಕಾರ್ಯ ನಿರ್ವಹಿಸಿದ್ದರು.

About the Author

NK
Naveen Kodase
ನವೀನ್ ಕೊಡಸೆ ಏಷ್ಯಾನೆಟ್ ಕನ್ನಡದಲ್ಲಿ ಮುಖ್ಯ ಉಪಸಂಪಾದಕ. ಕಳೆದ 9 ವರ್ಷಗಳಿಂದಲೂ ಮಾಧ್ಯಮ ಜಗತ್ತಿನಲ್ಲಿದ್ದೇನೆ. ಅಪ್ಪಟ ಮಲೆನಾಡಿನ ಹುಡುಗ. ಕುವೆಂಪು ವಿವಿಯ ಪತ್ರಿಕೋದ್ಯಮ ಪದವಿ ಇದೆ. ರಾಜ್‌ ನ್ಯೂಸ್‌ ಮೂಲಕ ಮಾಧ್ಯಮ ಲೋಕಕ್ಕೆ ಕಾಲಿಟ್ಟವನು. ಡಿಜಿಟಲ್‌ ಮಾಧ್ಯಮ ಲೋಕದಲ್ಲಿ ಪಳಗಿದರೂ, ಕಲಿಯೋದಿದೆ ಅಪಾರ. ಕ್ರೀಡೆ, ರಾಜಕೀಯ, ಸಾಹಿತ್ಯದಲ್ಲಿದೆ ಆಸಕ್ತಿ. ಕ್ರೀಡಾ ಸುದ್ದಿಯೇ ನನ್ನ ಜೀವಾಳ.
ಕ್ರಿಕೆಟ್
ಟೀಮ್ ಇಂಡಿಯಾ
ರಿಷಭ್ ಪಂತ್
ಬಿಸಿಸಿಐ
ಇಂಗ್ಲೆಂಡ್ ಕ್ರಿಕೆಟ್

Latest Videos
Recommended Stories
Related Stories
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2025 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved