MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಗ್ಯಾಲರಿ
  • ಮನರಂಜನೆ
  • ಜ್ಯೋತಿಷ್ಯ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ಕ್ರೀಡೆ
  • ಜೀವನಶೈಲಿ
  • ವಾಣಿಜ್ಯ
  • Home
  • Sports
  • Cricket
  • ಯುವಿ ಕ್ರಿಕೆಟ್ ಬದುಕು ಬೇಗ ಮುಗಿದಿದ್ದು ಧೋನಿಯಿಂದಲ್ಲ, ಈ ಕ್ಯಾಪ್ಟನಿಂದ: ಹೊಸ ಬಾಂಬ್ ಸಿಡಿಸಿದ ಉತ್ತಪ್ಪ

ಯುವಿ ಕ್ರಿಕೆಟ್ ಬದುಕು ಬೇಗ ಮುಗಿದಿದ್ದು ಧೋನಿಯಿಂದಲ್ಲ, ಈ ಕ್ಯಾಪ್ಟನಿಂದ: ಹೊಸ ಬಾಂಬ್ ಸಿಡಿಸಿದ ಉತ್ತಪ್ಪ

ಬೆಂಗಳೂರು: ಭಾರತ ಕ್ರಿಕೆಟ್ ಕಂಡ ಅತ್ಯಂತ ಯಶಸ್ವಿ ಆಲ್ರೌಂಡರ್‌ಗಳಲ್ಲಿ ಒಬ್ಬರಾಗಿ ಗುರುತಿಸಿಕೊಂಡಿದ್ದ ಯುವರಾಜ್ ಸಿಂಗ್ ಕ್ರಿಕೆಟ್ ಬದುಕು ಹಾಳಾಗಿದ್ದು, ಧೋನಿಯಿಂದ ಅಲ್ಲ ಬದಲಾಗಿ ಮತ್ತೋರ್ವ ಕ್ಯಾಪ್ಟನ್‌ನಿಂದ ಎಂದು ಟೀಂ ಇಂಡಿಯಾ ಮಾಜಿ ಕ್ರಿಕೆಟಿಗ ರಾಬಿನ್ ಉತ್ತಪ್ಪ ಹೇಳಿದ್ದಾರೆ. 

2 Min read
Author : Naveen Kodase
Published : Jan 10 2025, 05:24 PM IST
Share this Photo Gallery
  • FB
  • TW
  • Linkdin
  • Whatsapp
111

ಯುವರಾಜ್ ಸಿಂಗ್ ಟೀಂ ಇಂಡಿಯಾದ ಅತ್ಯಂತ ಯಶಸ್ವಿ ಆಲ್ರೌಂಡರ್‌ಗಳಲ್ಲಿ ಒಬ್ಬರಾಗಿ ಗುರುತಿಸಿಕೊಂಡಿದ್ದಾರೆ. ಯುವರಾಜ್ ಸಿಂಗ್ 2007ರ ಐಸಿಸಿ ಟಿ20 ವಿಶ್ವಕಪ್ ಹಾಗೂ 2011ರ ಐಸಿಸಿ ಏಕದಿನ ವಿಶ್ವಕಪ್ ಗೆಲ್ಲುವಲ್ಲಿ ಪ್ರಮುಖ ಪಾತ್ರವಹಿಸಿದ್ದರು.
 

211

2007ರ ಐಸಿಸಿ ಟಿ20 ವಿಶ್ವಕಪ್ ಟೂರ್ನಿಯಲ್ಲಿ ಯುವರಾಜ್ ಸಿಂಗ್, ಇಂಗ್ಲೆಂಡ್ ವೇಗಿ ಸ್ಟುವರ್ಟ್ ಬ್ರಾಡ್ ಬೌಲಿಂಗ್‌ನಲ್ಲಿ 6 ಎಸೆತಗಳಲ್ಲಿ 6 ಸಿಕ್ಸರ್ ಸಿಡಿಸಿದ್ದು ಯಾರೂ ಮರೆಯಲು ಸಾಧ್ಯವಿಲ್ಲ. ಅದೇ ರೀತಿ 2011ರ ಏಕದಿನ ವಿಶ್ವಕಪ್ ಟೂರ್ನಿಯಲ್ಲಿ ಅದ್ಭುತ ಪ್ರದರ್ಶನ ತೋರುವ ಮೂಲಕ ಸರಣಿಶ್ರೇಷ್ಠ ಪ್ರಶಸ್ತಿ ಗೆಲ್ಲುವಲ್ಲಿ ಯಶಸ್ವಿಯಾಗಿದ್ದರು.

311

2011ರ ಐಸಿಸಿ ಏಕದಿನ ವಿಶ್ವಕಪ್ ಟೂರ್ನಿಯಲ್ಲಿ ಯುವರಾಜ್ ಸಿಂಗ್ ಒಂದು ಶತಕ ಸಹಿತ 362 ರನ್ ಬಾರಿಸಿದ್ದರು. ಇನ್ನು ಬೌಲಿಂಗ್‌ನಲ್ಲಿ 15 ಬಲಿ ಪಡೆಯುವ ಮೂಲಕ ಟೀಂ ಇಂಡಿಯಾ 28 ವರ್ಷಗಳ ಬಳಿಕ ಏಕದಿನ ವಿಶ್ವಕಪ್ ಗೆಲ್ಲುವಲ್ಲಿ ಪ್ರಮುಖ ಪಾತ್ರವಹಿಸಿದ್ದರು.

411

ಭಾರತದ ಅತ್ಯಂತ ನಂಬಿಗಸ್ಥ ಆಟಗಾರನಾಗಿ ಗುರುತಿಸಿಕೊಂಡಿದ್ದ ಯುವರಾಜ್ ಸಿಂಗ್‌ಗೆ ಕ್ಯಾನ್ಸರ್ ಮಹಾಮಾರಿ ತಗುಲಿದ ವಿಚಾರ ಅವರ ಅಭಿಮಾನಿಗಳನ್ನು ಬೆಚ್ಚಿಬೀಳಿಸಿತ್ತು. ಕ್ಯಾನ್ಸರ್‌ ವಿರುದ್ಧ ಕೆಚ್ಚೆದೆಯ ಹೋರಾಟ ತೋರಿದ ಯುವಿ, ಕ್ಯಾನ್ಸರ್ ಮಣಿಸಿ ಕ್ರಿಕೆಟ್ ಅಂಗಳಕ್ಕೆ ಮರಳಿದ್ದು ಹಲವು ಕ್ಯಾನ್ಸರ್ ರೋಗಿಗಳಿಗೆ ಸ್ಪೂರ್ತಿ ಎನಿಸಿಕೊಂಡಿತು.

511

ಯುವಿ ಕ್ಯಾನ್ಸರ್ ಮಣಿಸಿ 2012ರ ಡಿಸೆಂಬರ್‌ನಲ್ಲಿ ಭಾರತಕ್ಕೆ ಮತ್ತೆ ಕಮ್‌ಬ್ಯಾಕ್ ಮಾಡಿದರು. ಹೀಗಿದ್ದೂ ಯುವರಾಜ್ ಸಿಂಗ್ ಅವರಿಗೆ 2013ರ ಐಸಿಸಿ ಚಾಂಪಿಯನ್ಸ್ ಟ್ರೋಫಿ ಟೂರ್ನಿಯಲ್ಲಿ ಭಾರತ ತಂಡದೊಳಗೆ ಸ್ಥಾನ ಸಿಗಲಿಲ್ಲ.

611

ಆದರೆ ಛಲಬಿಡದ ಯುವರಾಜ್ ಸಿಂಗ್, 2017ರ ಐಸಿಸಿ ಚಾಂಪಿಯನ್ಸ್ ಟ್ರೋಫಿ ಟೂರ್ನಿಗೆ ಭಾರತ ತಂಡದಲ್ಲಿ ಸ್ಥಾನ ಪಡೆಯುವಲ್ಲಿ ಯಶಸ್ವಿಯಾದರು. ಆದರೆ ಸಾಧಾರಣ ಪ್ರದರ್ಶನ ತೋರಿದ ಯುವರಾಜ್ ಸಿಂಗ್ ಅವರನ್ನು ತಂಡದಿಂದ ಕೈಬಿಡಲಾಯಿತು. ಆ ಸಂದರ್ಭದಲ್ಲಿ ಟೀಂ ಇಂಡಿಯಾ ನಾಯಕರಾಗಿದ್ದವರು ವಿರಾಟ್ ಕೊಹ್ಲಿ.

711

ಇದೀಗ ಯುವರಾಜ್ ಸಿಂಗ್ ಕುರಿತಂತೆ ಟೀಂ ಇಂಡಿಯಾ ಮಾಜಿ ಕ್ರಿಕೆಟಿಗ ರಾಬಿನ್ ಉತ್ತಪ್ಪ ಮನಬಿಚ್ಚಿ ಮಾತನಾಡಿದ್ದಾರೆ. ಯುವಿ ಕ್ರಿಕೆಟ್ ಬದುಕು ಮುಂಚಿತವಾಗಿ ಕೊನೆಯಾಗಲು ಕಾರಣ ಧೋನಿಯಲ್ಲ ಬದಲಾಗಿ ವಿರಾಟ್ ಕೊಹ್ಲಿ ಎಂದು ಅಚ್ಚರಿಯ ಹೇಳಿಕೆ ನೀಡಿದ್ದಾರೆ.

811

ಯುವರಾಜ್ ಸಿಂಗ್ ಕ್ಯಾನ್ಸರ್ ಸೋಲಿಸಿ ತಂಡಕ್ಕೆ ಕಮ್‌ಬ್ಯಾಕ್ ಮಾಡಿದ್ದರು. ಅವರು ನಮ್ಮ ಸಹ ಆಟಗಾರರ ಜತೆ ಸೇರಿಕೊಂಡು ಭಾರತಕ್ಕೆ ಎರಡು ವಿಶ್ವಕಪ್ ಗೆಲ್ಲಿಸಿಕೊಟ್ಟಿದ್ದಾರೆ. ಹೀಗಿದ್ದಾಗ ನಾಯಕರಾದವರು ಅಂತಹ ಆಟಗಾರ ತಂಡಕ್ಕೆ ಕಮ್‌ಬ್ಯಾಕ್ ಮಾಡಿದಾಗ ಆತನ ಜತೆಗೆ ನಿಲ್ಲಬೇಕು. ನಾಯಕರಾಗಿದ್ದವರು ಒಂದು ರೀತಿಯ ಸ್ಟ್ಯಾಂಡರ್ಡ್‌ ಕಾಯ್ದುಕೊಳ್ಳಬೇಕು ಎಂದು ಉತ್ತಪ್ಪ ಹೇಳಿದ್ದಾರೆ.

911

ಕೆಲವೊಮ್ಮೆ ನಿಯಮಗಳನ್ನು ಕೆಲವು ಸಂದರ್ಭಗಳಲ್ಲಿ ಸಡಿಲಗೊಳಿಸಿಕೊಳ್ಳಬೇಕು. ಯಾಕೆಂದರೆ ಯುವರಾಜ್ ಕೇವಲ ಟ್ರೋಫಿ ಮಾತ್ರ ಗೆಲ್ಲಿಸಿಲ್ಲ, ಕ್ಯಾನ್ಸರ್ ಅನ್ನು ಸಹ ಸೋಲಿಸಿದ್ದರು. ಅವರು ತಮ್ಮ ಜೀವನದ ಕಠಿಣ ಪರಿಸ್ಥಿತಿಯನ್ನು ಎದುರಿಸಿ ಬಂದಿದ್ದರು. ಯುವರಾಜ್ ಸಿಂಗ್ ಫಿಟ್ನೆಸ್ ಟೆಸ್ಟ್‌ನಲ್ಲಿ ತಮಗೆ 2 ಅಂಕ ಕಡಿಮೆ ಮಾಡಲು ಕೇಳಿಕೊಂಡಿದ್ದರು. ಆದರೆ ನಾಯಕ ಅದಕ್ಕೆ ಒಪ್ಪಲಿಲ್ಲ ಎಂದು ಉತ್ತಪ್ಪ ಹೇಳಿದ್ದಾರೆ.

1011

ಇದಾದ ಬಳಿಕ ಯುವರಾಜ್ ಸಿಂಗ್ ಫಿಟ್ನೆಸ್ ಟೆಸ್ಟ್ ಪಾಸ್ ಮಾಡಿದರು. ತಂಡಕ್ಕೂ ಕಮ್‌ಬ್ಯಾಕ್ ಮಾಡಿದರು. ಆದರೆ ಅವರ ಪ್ರದರ್ಶನ ಅಷ್ಟೇನೂ ಉತ್ತಮವಾಗಿರಲಿಲ್ಲ. ಹೀಗಾಗಿ ಅವರನ್ನು ತಂಡದಿಂದ ಸಂಪೂರ್ಣವಾಗಿ ಹೊರಗಿಡಲಾಯಿತು. ಇದಾದ ಅವರಿಗೆ ತಂಡದಲ್ಲಿ ಅವಕಾಶವೇ ಸಿಗಲಿಲ್ಲ ಎಂದು ಉತ್ತಪ್ಪ ಹೇಳಿದ್ದಾರೆ.

1111

ಯಾರು ಲೀಡರ್‌ಶಿಪ್ ಗ್ರೂಪ್‌ನಲ್ಲಿದ್ದರೋ ಅವರು ಮತ್ತೆ ಯುವರಾಜ್ ಸಿಂಗ್‌ಗೆ ಅವಕಾಶ ನೀಡಲಿಲ್ಲ. ಆ ಸಮಯದಲ್ಲಿ ವಿರಾಟ್ ಕೊಹ್ಲಿ ಕ್ಯಾಪ್ಟನ್ ಆಗಿದ್ದರು. ಅವರ ಕಠಿಣ ವ್ಯಕ್ತಿತ್ವದಿಂದಾಗಿ ಎಲ್ಲವೂ ಅವರು ಅಂದುಕೊಂಡಂತೆ ನಡೆಯುತ್ತಿತ್ತು ಎಂದು ರಾಬಿನ್ ಉತ್ತಪ್ಪ ಹೇಳಿದ್ದಾರೆ.

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

About the Author

NK
Naveen Kodase
ನವೀನ್ ಕೊಡಸೆ ಏಷ್ಯಾನೆಟ್ ಕನ್ನಡದಲ್ಲಿ ಮುಖ್ಯ ಉಪಸಂಪಾದಕ. ಕಳೆದ 9 ವರ್ಷಗಳಿಂದಲೂ ಮಾಧ್ಯಮ ಜಗತ್ತಿನಲ್ಲಿದ್ದೇನೆ. ಅಪ್ಪಟ ಮಲೆನಾಡಿನ ಹುಡುಗ. ಕುವೆಂಪು ವಿವಿಯ ಪತ್ರಿಕೋದ್ಯಮ ಪದವಿ ಇದೆ. ರಾಜ್‌ ನ್ಯೂಸ್‌ ಮೂಲಕ ಮಾಧ್ಯಮ ಲೋಕಕ್ಕೆ ಕಾಲಿಟ್ಟವನು. ಡಿಜಿಟಲ್‌ ಮಾಧ್ಯಮ ಲೋಕದಲ್ಲಿ ಪಳಗಿದರೂ, ಕಲಿಯೋದಿದೆ ಅಪಾರ. ಕ್ರೀಡೆ, ರಾಜಕೀಯ, ಸಾಹಿತ್ಯದಲ್ಲಿದೆ ಆಸಕ್ತಿ. ಕ್ರೀಡಾ ಸುದ್ದಿಯೇ ನನ್ನ ಜೀವಾಳ.
ಕ್ರಿಕೆಟ್
ರಾಬಿನ್ ಉತ್ತಪ್ಪ
ಟೀಮ್ ಇಂಡಿಯಾ
ವಿರಾಟ್ ಕೊಹ್ಲಿ
ಯುವರಾಜ್ ಸಿಂಗ್
ಎಂ.ಎಸ್. ಧೋನಿ

Latest Videos
Recommended Stories
Recommended image1
ಮತ್ತೆ ಇಂಡೋ-ಪಾಕ್ ಪಂದ್ಯ, ಐಸಿಸಿ ಟಿ20 ವಿಶ್ವಕಪ್ ಮಹಿಳಾ ಟೂರ್ನಿ ವೇಳಾಪಟ್ಟಿ ಪ್ರಕಟ
Recommended image2
ಅ-19 ವಿಶ್ವಕಪ್ ಹೀರೋ ವೈಭವ್ ಸೂರ್ಯವಂಶಿಗೆ ದುಬಾರಿ ಕಾರು ಗಿಫ್ಟ್ ಕೊಟ್ಟ ಟಾಟಾ
Recommended image3
ಸಚಿನ್ ತೆಂಡೂಲ್ಕರ್‌ಗೆ ಮಾಡಿದ್ದ ಅನ್ಯಾಯ ಒಪ್ಪಿಕೊಂಡ ಅಂಪೈರ್ ಸ್ಟೀವ್ ಬಕ್ನರ್; 22 ವರ್ಷಗಳ ಬಳಿಕ ರಹಸ್ಯ ಬಹಿರಂಗ!
News
kannada newslatest kannada newskarnataka newsbengaluru newsMysore newsindia news in kannadainternational news in kannada
Entertainment News
Kannada Cinema Newskannada movies reviewsandalwood newskannada tv shows
Sports News
sports news in kannadacricket news in kannadaOther Sports News in Kannada
Business News
Business news in kannadashare market news in kannadabusiness ideas in kannada
Science & Technology
technology news in kannadamobile tech newsscience and tech news
Astrology
rashi bhavishya in kannadadina bhavishyavara bhavishyavastu shastra in kannadakarnataka festivals
Lifestyle
Lifestyle news in kannadafood recipes in kannadahealth tips in kannadakitchen tips in kannada
Education & Career
job news in kannadaPrivate Jobsbank jobs in karnatakaGovernment jobs in karnatakaCentral Govt Jobs in KannadaIT Jobs
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2026 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved