ರೋಹಿತ್ ಶರ್ಮಾ ಸೇರಿ ಐವರ ವಿರುದ್ಧ ತನಿಖೆಗೆ ಆದೇಶಿಸಿದ BCCI; ಸಂಕಷ್ಟದಲ್ಲಿ ಟೀಂ ಇಂಡಿಯಾ!
ಆಸ್ಟ್ರೇಲಿಯಾ ವಿರುದ್ಧದ 3ನೇ ಟೆಸ್ಟ್ ಪಂದ್ಯಕ್ಕೆ ತಯಾರಿ ನಡೆಸಿರುವ ಟೀಂ ಇಂಡಿಯಾಗೆ ಇದೀಗ ಸಂಕಷ್ಟ ಎದುರಾಗಿದೆ. ಕ್ವಾರಂಟೈನ್ ಮುಗಿಸಿ ಟೀಂ ಇಂಡಿ ಸೇರಿಕೊಂಡಿದ್ದ ರೋಹಿತ್ ಶರ್ಮಾ ಸೇರಿದಂತೆ ಐವರು ಕ್ರಿಕೆಟಿಗರನ್ನು ಐಸೋಲೇಶನ್ ಮಾಡಲಾಗಿದೆ. ಬಿಸಿಸಿಐ ಹಾಗೂ ಕ್ರಿಕೆಟ್ ಆಸ್ಟ್ರೇಲಿಯಾ ಜಂಟಿಯಾಗಿ ತನಿಖೆ ನಡೆಸುತ್ತಿದ್ದು ಮುಂದಿನ ಟೆಸ್ಟ್ ಪಂದ್ಯಕ್ಕೆ ಅವರ ಲಭ್ಯತೆ ಕುರಿತು ಯಾವುದೇ ಖಚಿತತೆ ಇಲ್ಲದಾಗಿದೆ. ಈ ಘಟನೆ ಕುರಿತ ಹೆಚ್ಚಿನ ಮಾಹಿತಿ ಇಲ್ಲಿದೆ.

ಆಸ್ಟ್ರೇಲಿಯಾ ವಿರುದ್ಧದ ಟೆಸ್ಟ್ ಸರಣಿ ಸದ್ಯ 1-1 ರಲ್ಲಿ ಸಮಬಲಗೊಂಡಿದೆ. ಹೀಗಾಗಿ 3ನೇ ಟೆಸ್ಟ್ ಪಂದ್ಯ ಅತ್ಯಂತ ಮಹತ್ವದ್ದಾಗಿದೆ. ಪಂದ್ಯಕ್ಕೂ ಮೊದಲೇ ಟೀಂ ಇಂಡಿಯಾಗೆ ಆಘಾತ ಎದುರಾಗಿದೆ.

ಕ್ವಾರಂಟೈನ್ ಮುಗಿಸಿ ಟೀಂ ಇಂಡಿಯಾ ಸೇರಿಕೊಂಡಿದ್ದ ರೋಹಿತ್ ಶರ್ಮಾ ಸೇರಿದಂತೆ ಟೀಂ ಇಂಡಿಯಾದ ಐವರು ಕ್ರಿಕೆಟಿಗರು ನಿಯಮ ಉಲ್ಲಂಘಿಸಿದ ಆರೋಪಕ್ಕೆ ಗುರಿಯಾಗಿದ್ದಾರೆ.

ರೋಹಿತ್ ಶರ್ಮಾ, ನವದೀಪ್ ಸೈನಿ, ರಿಷಬ್ ಪಂತ್, ಶುಬಮನ್ ಗಿಲ್ ಸೇರಿದಂತೆ ಐವರು ಕೊರೋನಾ ನಿಯಮ ಉಲ್ಲಂಘಿಸಿ ಹೊಟೆಲ್‌ಗೆ ತೆರಳಿ ತಿನಿಸುಗಳನ್ನು ಸೇವಿಸಿದ್ದಾರೆ. ನಿಯಮ ಪ್ರಕಾರ ಕ್ರೀಡಾಂಗಣ ಹಾಗೂ ತಂಗುವ ಹೊಟೆಲ್ ಬಿಟ್ಟು ಬೇರೆಡೆ ತೆರಳುವಂತಿಲ್ಲ.

ರೋಹಿತ್ ಶರ್ಮಾ ಸೇರಿದಂತ ಐವರು ಕ್ರಿಕೆಟಿಗರು ಮಧ್ಯಾಹ್ನ ಮೆಲ್ಪೋರ್ನ್ ನಗರದ ಹೊಟೆಲ್ ತೆರಳಿ ಊಟ ಮಾಡಿದ್ದಾರೆ. 119 ಡಾಲರ್ ಮೊತ್ತದ ಈ ಊಟ ಇದೀಗ ಮತ್ತಷ್ಟು ದುಬಾರಿಯಾಗಿದೆ.

ಈ ಪ್ರಕರಣ ಬೆಳಕಿಗೆ ಬಂದಿದ್ದು, ಅಭಿಮಾನಿಯಿಂದ. ತನ್ನ ಪಕ್ಕದ ಟೇಬಲ್‌ನಲ್ಲಿದ್ದ ಟೀಂ ಇಂಡಿಯಾ ಕ್ರಿಕೆಟಿಗನ್ನು ನೋಡಿದ ಅಭಿಮಾನಿ ನವಲ್‌ದೀಪ್ ಸಿಂಗ್, ಕ್ರಿಕೆಟಿಗರ ಪಡೆದ ತನಿಸುಗಳ 6,000 ರೂಪಾಯಿ ಬಿಲ್ ಪಾವತಿ ಮಾಡಿದ್ದಾನೆ.

ಈ ವಿಚಾರ ತಿಳಿದ ರೋಹಿತ್ ಶರ್ಮಾ, ಹಣ ಸ್ವೀಕರಿಸುವಂತೆ ಕೇಳಿಕೊಂಡಿದ್ದಾರೆ. ಆದರೆ ಅಭಿಮಾನಿ ಹಣ ಸ್ವೀಕರಿಸಲು ನಿರಾಕರಿಸಿದ್ದಾರೆ. ಬಳಿಕ ಕ್ರಿಕೆಟಿಗ ಜೊತೆ ಫೋಟೋ ತೆಗೆಸಿಕೊಂಡ ಅಭಿಮಾನಿ ಸಾಮಾಜಿಕ ಜಾಲತಾಣದಲ್ಲಿ ಸಂತಸ ಹಂಚಿಕೊಂಡಿದ್ದಾನೆ.

ರೋಹಿತ್ ಸೇರಿದಂತೆ ಐವರು ವಿರುದ್ಧ ಬಿಸಿಸಿಐ ಹಾಗೂ ಕ್ರಿಕೆಟ್ ಆಸ್ಟ್ರೇಲಿಯಾ ತನಿಖೆ ನಡೆಸಲು ಮುಂದಾಗಿದೆ. ಕೊರೋನಾ ಪ್ರೊಟೋಕಾಲ್ ಉಲ್ಲಂಘಿಸಿದ ರೋಹಿತ್ ಸೇರಿದಂತೆ ನಾಲ್ವರನ್ನು ಐಸೋಲೇಶನ್ ಮಾಡಲಾಗಿದೆ.

ಪ್ರಕರಣ ತನಿಖೆ, ಕೊರೋನಾ ಪರೀಕ್ಷೆ ಸೇರಿದಂತೆ ಹಲವು ಪ್ರಕ್ರಿಯೆಗಳು ನಡೆಯಬೇಕಿದೆ. ಹೀಗಾಗಿ ಮುಂದಿನ ಟೆಸ್ಟ್ ಪಂದ್ಯಕ್ಕೆ ಈ ಐವರು ಕ್ರಿಕೆಟಿಗರ ಲಭ್ಯತೆ ಕುರಿತು ಯಾವುದೇ ಮಾಹಿತಿ ಬಹಿರಂಗವಾಗಿಲ್ಲ.

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.