- Home
- Sports
- Cricket
- ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಹೊಸ ವಿಶ್ವದಾಖಲೆ ಬರೆದ ರೋಹಿತ್ ಶರ್ಮಾ; ಈ ದಾಖಲೆ ಮುರಿಯಲು ಕೊಹ್ಲಿ, ಬಟ್ಲರ್‌ಗೂ ಸಾಧ್ಯವಿಲ್ಲ!
ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಹೊಸ ವಿಶ್ವದಾಖಲೆ ಬರೆದ ರೋಹಿತ್ ಶರ್ಮಾ; ಈ ದಾಖಲೆ ಮುರಿಯಲು ಕೊಹ್ಲಿ, ಬಟ್ಲರ್‌ಗೂ ಸಾಧ್ಯವಿಲ್ಲ!
ವಡೋದರಾ: ಭಾರತ ಹಾಗೂ ನ್ಯೂಜಿಲೆಂಡ್ ನಡುವಿನ ಮೊದಲ ಏಕದಿನ ಪಂದ್ಯದಲ್ಲಿ ಟೀಂ ಇಂಡಿಯಾ ಭರ್ಜರಿ ಶುಭಾರಂಭ ಮಾಡಿದೆ. ಇದೇ ಪಂದ್ಯದಲ್ಲಿ ಹಿಟ್‌ಮ್ಯಾನ್ ಖ್ಯಾತಿಯ ರೋಹಿತ್ ಶರ್ಮಾ ಹೊಸ ಮೈಲಿಗಲ್ಲಿನ ಮೂಲಕ ಮತ್ತೊಂದು ವಿಶ್ವದಾಖಲೆ ತಮ್ಮದಾಗಿಸಿಕೊಂಡಿದ್ದಾರೆ. ಈ ದಾಖಲೆ ಬ್ರೇಕ್ ಆಗೋದು ಸದ್ಯಕ್ಕಂತೂ ಅನುಮಾನ.

ಟೀಂ ಇಂಡಿಯಾ ಶುಭಾರಂಭ
ಬೌಲರ್‌ಗಳ ಸಂಘಟಿತ ಪ್ರದರ್ಶನ ಹಾಗೂ ಚೇಸ್ ಮಾಸ್ಟರ್ ವಿರಾಟ್ ಕೊಹ್ಲಿ(93) ಶತಕವಂಚಿತ ಬ್ಯಾಟಿಂಗ್ ನೆರವಿನಿಮದ ಟೀಂ ಇಂಡಿಯಾ ಮೊದಲ ಏಕದಿನ ಪಂದ್ಯದಲ್ಲಿ 4 ವಿಕೆಟ್ ಜಯ ಸಾಧಿಸಿದೆ. ಇದರೊಂದಿಗೆ ಹೊಸ ವರ್ಷದ ಮೊದಲ ಪಂದ್ಯದಲ್ಲೇ ಭಾರತ ಗೆಲುವಿನೊಂದಿಗೆ ಶುಭಾರಂಭ ಮಾಡಿದೆ.
ಸದ್ದಿಲ್ಲದೇ ಹೊಸ ಮೈಲಿಗಲ್ಲು ನೆಟ್ಟ ರೋಹಿತ್ ಶರ್ಮಾ
ಇನ್ನು ಇದೇ ಪಂದ್ಯದಲ್ಲಿ ಟೀಂ ಇಂಡಿಯಾ ಮಾಜಿ ನಾಯಕ ರೋಹಿತ್ ಶರ್ಮಾ, ಸದ್ದಿಲ್ಲದೇ ಹೊಸದೊಂದು ಮೈಲಿಗಲ್ಲು ನೆಟ್ಟಿದ್ದಾರೆ. ಮೊದಲ ಏಕದಿನ ಪಂದ್ಯದಲ್ಲಿ ರೋಹಿತ್ ಶರ್ಮಾ 3 ಬೌಂಡರಿ ಹಾಗೂ 2 ಸಿಕ್ಸರ್ ಸಹಿತ 26 ರನ್ ಬಾರಿಸಿ ಕೈಲ್ ಜೇಮಿಸನ್‌ಗೆ ವಿಕೆಟ್ ಒಪ್ಪಿಸಿದರು.
ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ 650 ಸಿಕ್ಸರ್ ಬಾರಿಸಿದ ಮೊದಲಿಗ
ರೋಹಿತ್ ಶರ್ಮಾ ಎರಡನೇ ಸಿಕ್ಸರ್ ಸಿಡಿಸುತ್ತಿದ್ದಂತೆಯೇ ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ 650 ಸಿಕ್ಸರ್ ಸಿಡಿಸಿದ ಜಗತ್ತಿನ ಮೊದಲ ಬ್ಯಾಟರ್ ಎನ್ನುವ ಅಪರೂಪದ ವಿಶ್ವದಾಖಲೆಯನ್ನು ತಮ್ಮದಾಗಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ.
148 ವರ್ಷಗಳ ಕ್ರಿಕೆಟ್ ಇತಿಹಾಸದಲ್ಲೇ ಅಪರೂಪದ ದಾಖಲೆ
148 ವರ್ಷಗಳ ಸುದೀರ್ಘ ಇತಿಹಾಸವಿರುವ ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಯಾವೊಬ್ಬ ಬ್ಯಾಟರ್ ಕೂಡಾ 650 ಸಿಕ್ಸರ್ ಸಿಡಿಸಿಲ್ಲ. ಅಂದಹಾಗೆ 600 ಸಿಕ್ಸರ್ ಸಿಡಿಸಿದ ಮೊದಲ ಹಾಗೂ ಏಕೈಕ ಬ್ಯಾಟರ್ ಎಂದರೆ ಅದು ರೋಹಿತ್ ಶರ್ಮಾ.
ಕ್ರಿಸ್ ಗೇಲ್‌ಗೆ ಎರಡನೇ ಸ್ಥಾನ
ಇನ್ನು ಯೂನಿವರ್ಸಲ್ ಬಾಸ್ ಖ್ಯಾತಿಯ ಕ್ರಿಸ್ ಗೇಲ್ 553 ಸಿಕ್ಸರ್ ಹಾಗೂ ಪಾಕಿಸ್ತಾನದ ಶಾಹಿದ್ ಅಫ್ರಿದಿ 476 ಸಿಕ್ಸರ್ ಸಿಡಿಸುವ ಮೂಲಕ ಕ್ರಮವಾಗಿ ಎರಡು ಹಾಗೂ ಮೂರನೇ ಸ್ಥಾನದಲ್ಲಿದ್ದಾರೆ. ಸದ್ಯ ಈ ಇಬ್ಬರು ಕ್ರಿಕೆಟಿಗರು ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ವಿದಾಯ ಹೇಳಿದ್ದಾರೆ.
ಜೋಸ್ ಬಟ್ಲರ್‌ಗೂ ಅಸಾಧ್ಯ
ಇನ್ನು ಅಂತಾರಾಷ್ಟ್ರೀಯ ಕ್ರಿಕೆಟ್‌ನ ಸಕ್ರಿಯ ಆಟಗಾರರ ಪೈಕಿ ಇಂಗ್ಲೆಂಡ್‌ನ ಜೋಸ್ ಬಟ್ಲರ್ 387 ಸಿಕ್ಸರ್ ಸಿಡಿಸಿದ್ದಾರೆ. ಈ ಮೂಲಕ ಒಟ್ಟಾರೆ ಗರಿಷ್ಠ ಸಿಕ್ಸರ್ ಸಿಡಿಸಿದ ಬ್ಯಾಟರ್‌ಗಳ ಪಟ್ಟಿಯಲ್ಲಿ ಐದನೇ ಸ್ಥಾನದಲ್ಲಿದ್ದು, ರೋಹಿತ್ ದಾಖಲೆ ಬ್ರೇಕ್ ಮಾಡಲು ಇನ್ನೂ 264 ಸಿಕ್ಸರ್ ಸಿಡಿಸಬೇಕಿದೆ. ಈ ದಾಖಲೆ ಬ್ರೇಕ್ ಮಾಡೋದು ಅನುಮಾನ.
ರೋಹಿತ್ ದಾಖಲೆ ಮುರಿಯಲು ಕೊಹ್ಲಿಗೂ ಸಾಧ್ಯವಿಲ್ಲ
ಇದಾದ ಬಳಿಕ ಸಕ್ರಿಯ ಆಟಗಾರರ ಪೈಕಿ ವಿರಾಟ್ ಕೊಹ್ಲಿ ಇದ್ದು, ಕಿಂಗ್ ಕೊಹ್ಲಿ ಇದುವರೆಗೂ ಒಟ್ಟಾರೆ 319 ಸಿಕ್ಸರ್ ಸಿಡಿಸಿದ್ದಾರೆ. ವಿರಾಟ್ ಕೂಡಾ ರೋಹಿತ್ ದಾಖಲೆ ಬ್ರೇಕ್ ಮಾಡಲು ಸಾಧ್ಯವೇ ಇಲ್ಲ.
ರೋಹಿತ್ ದಾಖಲೆ ಬ್ರೇಕ್ ಮಾಡೋರು ಯಾರು?
ನಿಮ್ಮ ಪ್ರಕಾರ ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಅತಿಹೆಚ್ಚು ಸಿಕ್ಸರ್ ಸಿಡಿಸಿರುವ ರೋಹಿತ್ ಶರ್ಮಾ ವಿಶ್ವದಾಖಲೆಯನ್ನು ಯಾರು ಬ್ರೇಕ್ ಮಾಡಬಹುದು ಕಮೆಂಟ್ ಮಾಡಿ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

