- Home
- Sports
- Cricket
- ರ್‍ಯಾಂಕಿಂಗ್‌ನಲ್ಲಿ ರೋಹಿತ್ ಶರ್ಮಾಗಿಲ್ಲ ಸರಿಸಾಟಿ! 18 ವರ್ಷಗಳ ಇತಿಹಾಸದಲ್ಲೇ ಅಪರೂಪದ ದಾಖಲೆ ಬರೆದ ಹಿಟ್‌ಮ್ಯಾನ್
ರ್‍ಯಾಂಕಿಂಗ್‌ನಲ್ಲಿ ರೋಹಿತ್ ಶರ್ಮಾಗಿಲ್ಲ ಸರಿಸಾಟಿ! 18 ವರ್ಷಗಳ ಇತಿಹಾಸದಲ್ಲೇ ಅಪರೂಪದ ದಾಖಲೆ ಬರೆದ ಹಿಟ್‌ಮ್ಯಾನ್
ದುಬೈ: ಟೀಂ ಇಂಡಿಯಾ ಮಾಜಿ ನಾಯಕ ರೋಹಿತ್ ಶರ್ಮಾ, ಅಂತಾರಾಷ್ಟ್ರೀಯ ಏಕದಿನ ಕ್ರಿಕೆಟ್ ರ್‍ಯಾಂಕಿಂಗ್‌ನಲ್ಲಿ ಅಪರೂಪದಲ್ಲೇ ಅಪರೂಪದ ದಾಖಲೆ ಬರೆದಿದ್ದಾರೆ. ಈ ಕುರಿತಾದ ಇಂಟ್ರೆಸ್ಟಿಂಗ್ ಡೀಟೈಲ್ಸ್ ಇಲ್ಲಿದೆ ನೋಡಿ.

ಮೊದಲ ಸಲ ಏಕದಿನ ಶ್ರೇಯಾಂಕದಲ್ಲಿ ರೋಹಿತ್ ನಂ.1
ಟೀಂ ಇಂಡಿಯಾದ ತಾರಾ ಆಟಗಾರ ರೋಹಿತ್ ಶರ್ಮಾ ತಮ್ಮ 18 ವರ್ಷಗಳ ಕ್ರಿಕೆಟ್ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಐಸಿಸಿ ಏಕದಿನ ಬ್ಯಾಟಿಂಗ್ ರ್‍ಯಾಂಕಿಂಗ್ ನಲ್ಲಿ ಅಗ್ರಸ್ಥಾನಕ್ಕೇರಿ ದಾಖಲೆ ನಿರ್ಮಿಸಿದ್ದಾರೆ.
ಈ ಮೊದಲು ಗರಿಷ್ಠ ಎರಡನೇ ಸ್ಥಾನಕ್ಕೇರಿದ್ದ ರೋಹಿತ್
ಈ ಮೊದಲು ರೋಹಿತ್ ಶರ್ಮಾ 2018ರ ಜುಲೈನಲ್ಲಿ ಐಸಿಸಿ ಏಕದಿನ ರ್‍ಯಾಂಕಿಂಗ್‌ನಲ್ಲಿ ವೃತ್ತಿ ಜೀವನದ ಶ್ರೇಷ್ಠ ಎರಡನೇ ಸ್ಥಾನಕ್ಕೇರಿದ್ದರು. ಆದರೆ ಇದೇ ಮೊದಲ ಸಲ
ಐಸಿಸಿ ಏಕದಿನ ರ್‍ಯಾಂಕಿಂಗ್‌ನಲ್ಲಿ ನಂ.1 ಸ್ಥಾನಕ್ಕೇರಿದ ಅತ್ಯಂತ ಹಿರಿಯ ಆಟಗಾರ
ಹೌದು, ಹಿಟ್‌ಮ್ಯಾನ್ ಖ್ಯಾತಿಯ ರೋಹಿತ್ ಶರ್ಮಾ, ಈ ಮೂಲಕ ಐಸಿಸಿ ಏಕದಿನ ರ್‍ಯಾಂಕಿಂಗ್‌ನಲ್ಲಿ ನಂ.1 ಸ್ಥಾನ ಪಡೆದ ಅತ್ಯಂತ ಹಿರಿಯ ಆಟಗಾರ ಎನ್ನುವ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.
ಗಿಲ್ ಹಿಂದಿಕ್ಕಿದ ರೋಹಿತ್
ಆಸ್ಟ್ರೇಲಿಯಾ ವಿರುದ್ಧ ಕೊನೆ ಏಕದಿನ ಪಂದ್ಯದಲ್ಲಿ 121 ರನ್‌ಗಳ ಸಿಡಿಸಿದ ರೋಹಿತ್ ಶರ್ಮಾ, ಶುಭಮನ್ ಗಿಲ್‌ರನ್ನು ಹಿಂದಿಕ್ಕಿ ಪಟ್ಟಿಯಲ್ಲಿ ಮೊದಲ ಸ್ಥಾನಕ್ಕೇರಿದ್ದಾರೆ.
ರೋಹಿತ್ 781 ರೇಟಿಂಗ್ ಅಂಕ
ಈಗ ರೋಹಿತ್ 781 ರೇಟಿಂಗ್ ಅಂಕ ಹೊಂದಿದ್ದರೆ, ಅಫ್ಘಾನಿಸ್ತಾನದ ಇಬ್ರಾಹಿಂ ಜದ್ರಾನ್ 764, ಶುಭ್‌ಮನ್ ಗಿಲ್ 745 ಅಂಕಗಳೊಂದಿಗೆ ಕ್ರಮವಾಗಿ 2 ಮತ್ತು 3ನೇ ಸ್ಥಾನದಲ್ಲಿದ್ದಾರೆ.
ಆರನೇ ಸ್ಥಾನಕ್ಕೆ ಜಾರಿದ ಕೊಹ್ಲಿ
ಇನ್ನು ಆಸ್ಟ್ರೇಲಿಯಾ ಎದುರಿನ ಮೊದಲೆರಡು ಏಕದಿನ ಪಂದ್ಯದಲ್ಲಿ ಶೂನ್ಯ ಸುತ್ತಿ ಕೊನೆಯ ಏಕದಿನ ಪಂದ್ಯದಲ್ಲಿ ಅಜೇಯ ಅರ್ಧಶತಕ ಸಿಡಸಿದ್ದ ಕೊಹ್ಲಿ 6ನೇ ಸ್ಥಾನಕ್ಕೆ ಕುಸಿದಿದ್ದರೆ, ಶ್ರೇಯಸ್ ಅಯ್ಯರ್ 9ನೇ ಸ್ಥಾನಕ್ಕೇರಿದ್ದಾರೆ.
31 ಸ್ಥಾನ ಜಿಗಿದ ಅಕ್ಷರ್ ಪಟೇಲ್
ಇದೇ ವೇಳೆ ತಾರಾ ಆಲ್ರೌಂಡರ್ ಅಕ್ಷರ್ ಪಟೇಲ್ ಬೌಲರ್‌ಗಳ ಪಟ್ಟಿಯಲ್ಲಿ 6 ಸ್ಥಾನ ಮೇಲೇರಿ 31ನೇ ಸ್ಥಾನಕ್ಕೆ ಜಿಗಿದಿದ್ದಾರೆ.