ರೋಹಿತ್ ಶರ್ಮಾ ನಾಯಕನಾಗಿ ಟೆಸ್ಟ್ ರೆಕಾರ್ಡ್ ಹೇಗಿದೆ? ಇಲ್ಲಿದೆ ಇಂಟ್ರೆಸ್ಟಿಂಗ್ ಮಾಹಿತಿ
ಬೆಂಗಳೂರು: ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ, ಭಾರತದ ಯಶಸ್ವಿ ಟೆಸ್ಟ್ ಕ್ಯಾಪ್ಟನ್ ಆಗುವತ್ತ ದಿಟ್ಟ ಹೆಜ್ಜೆಯಿಟ್ಟಿದ್ದಾರೆ. ನಾವಿಂದು ರೋಹಿತ್ ಶರ್ಮಾ ಅವರು ನಾಯಕನಾಗಿ ಟೆಸ್ಟ್ ರೆಕಾರ್ಡ್ ಹೇಗಿದೆ ಎನ್ನುವುದನ್ನು ನೋಡೋಣ ಬನ್ನಿ.
ರೋಹಿತ್ ಶರ್ಮಾ ನೇತೃತ್ವದ ಟೀಂ ಇಂಡಿಯಾ, ರಾಂಚಿ ಟೆಸ್ಟ್ ಪಂದ್ಯದಲ್ಲಿ ಇಂಗ್ಲೆಂಡ್ ಎದುರು 5 ವಿಕೆಟ್ ಭರ್ಜರಿ ಜಯ ಸಾಧಿಸಿದೆ. ಈ ಮೂಲಕ ಇನ್ನೊಂದು ಪಂದ್ಯ ಬಾಕಿ ಇರುವಂತೆಯೇ ಭಾರತ ಗೆಲುವಿನ ನಗೆ ಬೀರಿದೆ.
ಇದು ಟೀಂ ಇಂಡಿಯಾ ತವರಿನಲ್ಲಿ ದಾಖಲಿಸುತ್ತಿರುವ ಸತತ 17ನೇ ಟೆಸ್ಟ್ ಸರಣಿ ದಾಖಲಿಸಿದೆ. ರೋಹಿತ್ ಶರ್ಮಾ ನಾಯಕತ್ವದಲ್ಲಿ ಟೀಂ ಇಂಡಿಯಾ ಮತ್ತೊಂದು ಹಂತ ತಲುಪಿದೆ. ರೋಹಿತ್ ಶರ್ಮಾ ನಾಯಕನಾಗಿ ಟೆಸ್ಟ್ ಜರ್ನಿ ಹೇಗಿದೆ ಎನ್ನುವುದನ್ನು ನೋಡೋಣ ಬನ್ನಿ.
2022ರಲ್ಲಿ ಮೊದಲ ಬಾರಿಗೆ ಪೂರ್ಣ ಪ್ರಮಾಣದ ಟೆಸ್ಟ್ ನಾಯಕರಾದ ರೋಹಿತ್ ಶರ್ಮಾ ಶ್ರೀಲಂಕಾ ಎದುರು ತವರಿನಲ್ಲಿ ತಂಡವನ್ನು ಮುನ್ನಡೆಸಿ 2-0 ಅಂತರದಲ್ಲಿ ಟೆಸ್ಟ್ ಸರಣಿ ಜಯಿಸುವಲ್ಲಿ ಯಶಸ್ವಿಯಾದರು.
ಇದಾದ ಬಳಿಕ ರೋಹಿತ್ ಶರ್ಮಾ ಪಡೆ ತವರಿನಲ್ಲಿ ಬಲಿಷ್ಠ ಆಸ್ಟ್ರೇಲಿಯಾವನ್ನು ಎದುರಿಸಿತು. 4 ಪಂದ್ಯಗಳ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯನ್ನು ಟೀಂ ಇಂಡಿಯಾ 2-1 ಅಂತರದಲ್ಲಿ ಜಯಿಸುವಲ್ಲಿ ಯಶಸ್ವಿಯಾಯಿತು.
ಇನ್ನು ಇದಾದ ಬಳಿಕ 2023ರ ಜೂನ್‌ನಲ್ಲಿ ರೋಹಿತ್ ಶರ್ಮಾ ನೇತೃತ್ವದ ಟೀಂ ಇಂಡಿಯಾ, ಇಂಗ್ಲೆಂಡ್‌ನಲ್ಲಿ ಆಸ್ಟ್ರೇಲಿಯಾ ಎದುರು ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್ ಆಡಿತು. ಓವೆಲ್‌ನಲ್ಲಿ ನಡೆದ ಫೈನಲ್‌ನಲ್ಲಿ ಆಸ್ಟ್ರೇಲಿಯಾಗೆ ರೋಹಿತ್ ಪಡೆ ಶರಣಾಗಿತ್ತು.
ಇದಾದ ನಂತರ 2023ರ ಜುಲೈನಲ್ಲಿ ವೆಸ್ಟ್ ಇಂಡೀಸ್ ಎದುರಿನ ಎರಡು ಪಂದ್ಯಗಳ ಟೆಸ್ಟ್ ಸರಣಿಯನ್ನು ರೋಹಿತ್ ಶರ್ಮಾ ನೇತೃತ್ವದ ಟೀಂ ಇಂಡಿಯಾ 1-0 ಅಂತರದಲ್ಲಿ ಜಯಿಸುವಲ್ಲಿ ಯಶಸ್ವಿಯಾಗಿತ್ತು.
Rohit Sharma
ಇನ್ನು 2024ರ ಆರಂಭದಲ್ಲಿ ದಕ್ಷಿಣ ಆಫ್ರಿಕಾ ಪ್ರವಾಸ ಕೈಗೊಂಡಿದ್ದ ಭಾರತ 1-1 ಅಂತರದಲ್ಲಿ ಟೆಸ್ಟ್ ಸರಣಿಯನ್ನು ಡ್ರಾ ಮಾಡಿಕೊಳ್ಳುವಲ್ಲಿ ಯಶಸ್ವಿಯಾಯಿತು. ಹರಿಣಗಳ ನಾಡಿನಲ್ಲಿ ಟೆಸ್ಟ್ ಗೆಲ್ಲುವ ಕನಸು ಕನಸಾಗೆ ಉಳಿಯಿತು.
ಸದ್ಯ ತವರಿನಲ್ಲಿ ಇಂಗ್ಲೆಂಡ್ ಎದುರಿನ 5 ಪಂದ್ಯಗಳ ಟೆಸ್ಟ್ ಸರಣಿ ಸಾಗುತ್ತಿದ್ದು, ಮೊದಲ 4 ಪಂದ್ಯಗಳು ಮುಕ್ತಾಯವಾಗಿದ್ದು, ಇನ್ನೂ ಒಂದು ಪಂದ್ಯ ಬಾಕಿ ಇರುವಂತೆಯೇ ಟೀಂ ಇಂಡಿಯಾ 3-1 ಅಂತರದಲ್ಲಿ ಟೆಸ್ಟ್ ಸರಣಿ ಕೈವಶ ಮಾಡಿಕೊಳ್ಳುವಲ್ಲಿ ಯಶಸ್ವಿಯಾಗಿದೆ.