MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಗ್ಯಾಲರಿ
  • ಮನರಂಜನೆ
  • ಜ್ಯೋತಿಷ್ಯ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ಕ್ರೀಡೆ
  • ಜೀವನಶೈಲಿ
  • ವಾಣಿಜ್ಯ
  • Home
  • Sports
  • Cricket
  • ಸಿಎಸ್‌ಕೆ ಬೌಲರ್‌ಗಳನ್ನು ಅಟ್ಟಾಡಿಸಿ ಹೊಡೆದ ಆರ್‌ಸಿಬಿ! ಈ ಸೀಸನ್‌ನಲ್ಲಿ ಹೊಸ ದಾಖಲೆ ನಿರ್ಮಾಣ

ಸಿಎಸ್‌ಕೆ ಬೌಲರ್‌ಗಳನ್ನು ಅಟ್ಟಾಡಿಸಿ ಹೊಡೆದ ಆರ್‌ಸಿಬಿ! ಈ ಸೀಸನ್‌ನಲ್ಲಿ ಹೊಸ ದಾಖಲೆ ನಿರ್ಮಾಣ

ಬೆಂಗಳೂರು: 19ನೇ ಸೀಸನ್‌ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ಬದ್ದ ಎದುರಾಳಿ ಚೆನ್ನೈ ಸೂಪರ್ ಕಿಂಗ್ಸ್ ಎದುರು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಬೃಹತ್ ಮೊತ್ತ ಕಲೆಹಾಕಿದೆ. ಈ ಮೂಲಕ ಆರ್‌ಸಿಬಿ ಅಪರೂಪದ ದಾಖಲೆ ಬರೆದಿದೆ. 

1 Min read
Author : Naveen Kodase
Published : Apr 05 2026, 10:13 PM IST
Share this Photo Gallery
  • FB
  • TW
  • Linkdin
  • Whatsapp
16
ಚಿನ್ನಸ್ವಾಮಿಯಲ್ಲಿ ರನ್ ಮಳೆ
Image Credit : Asianet News

ಚಿನ್ನಸ್ವಾಮಿಯಲ್ಲಿ ರನ್ ಮಳೆ

2026ರ ಐಪಿಎಲ್ ಟೂರ್ನಿಯ 11ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ತಂಡಗಳು ಮುಖಾಮುಖಿಯಾಗಿದ್ದು, ಇಲ್ಲಿನ ಎಂ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಅಕ್ಷರಶಃ ರನ್ ಮಳೆಯೇ ಹರಿದಿದೆ.

26
20 ಓವರ್‌ಗಳಲ್ಲಿ 250 ರನ್ ಬಾರಿಸಿದ ಆರ್‌ಸಿಬಿ
Image Credit : X@IPL/ANI

20 ಓವರ್‌ಗಳಲ್ಲಿ 250 ರನ್ ಬಾರಿಸಿದ ಆರ್‌ಸಿಬಿ

ಟಾಸ್ ಸೋತು ಮೊದಲು ಬ್ಯಾಟ್ ಮಾಡಲಿಳಿದ ಆರ್‌ಸಿಬಿ ತಂಡಕ್ಕೆ ಎಲ್ಲಾ ಬ್ಯಾಟರ್‌ಗಳು ಉಪಯುಕ್ತ ರನ್ ಕಾಣಿಕೆ ನೀಡಿದರು. ಚೆನ್ನೈ ಬೌಲರ್‌ಗಳನ್ನು ಮನಬಂದಂತೆ ದಂಡಿಸಿದ ಆರ್‌ಸಿಬಿ ತಂಡವು ನಿಗದಿತ 20 ಓವರ್‌ಗಳಲ್ಲಿ 3 ವಿಕೆಟ್ ಕಳೆದುಕೊಂಡು 250 ರನ್‌ಗಳ ಬೃಹತ್ ಮೊತ್ತ ಕಲೆಹಾಕಿದೆ.

Related Articles

Related image1
RCB ಕೈಬಿಟ್ಟು ಈ 4 ತಂಡಗಳೇ ಐಪಿಎಲ್ ಪ್ಲೇ ಆಫ್ ಪ್ರವೇಶಿಸಲಿವೆ ಎಂದು ಅಚ್ಚರಿ ಭವಿಷ್ಯ ನುಡಿದ ಕೆವಿನ್ ಪೀಟರ್‌ಸನ್‌!
Related image2
ಆರ್‌ಸಿಬಿ ಅಬ್ಬರಕ್ಕೆ ಕುಣಿದು ಕುಪ್ಪಳಿಸಿದ ಫ್ಯಾನ್ಸ್, ಸಿಎಸ್‌ಕ್‌ಗೆ 251 ರನ್ ಟಾರ್ಗೆಟ್ ನೀಡಿ ದಾಖಲೆ
36
ಈ ಸೀಸನ್‌ ಐಪಿಎಲ್‌ನಲ್ಲಿ ಗರಿಷ್ಠ ಮೊತ್ತ ಕಲೆಹಾಕಿದ ಆರ್‌ಸಿಬಿ
Image Credit : ANI

ಈ ಸೀಸನ್‌ ಐಪಿಎಲ್‌ನಲ್ಲಿ ಗರಿಷ್ಠ ಮೊತ್ತ ಕಲೆಹಾಕಿದ ಆರ್‌ಸಿಬಿ

ಈ ಮೂಲಕ 19ನೇ ಸೀಸನ್ ಐಪಿಎಲ್ ಟೂರ್ನಿಯಲ್ಲಿ ಇನ್ನಿಂಗ್ಸ್‌ವೊಂದರಲ್ಲಿ ಗರಿಷ್ಠ ಮೊತ್ತ ಕಲೆಹಾಕಿದ ತಂಡ ಎನ್ನುವ ಅಪರೂಪದ ದಾಖಲೆಗೆ ಆರ್‌ಸಿಬಿ ಪಾತ್ರವಾಗಿದೆ. ಈ ಮೊದಲು ಕೆಕೆಆರ್ ಎದುರು ಸನ್‌ರೈಸರ್ಸ್ ಹೈದರಾಬಾದ್ 226 ರನ್ ಬಾರಿಸಿದ್ದೇ ಈ ಸೀಸನ್‌ನ ಗರಿಷ್ಠ ಸ್ಕೋರ್ ಎನಿಸಿಕೊಂಡಿತ್ತು.

46
ಉತ್ತಮ ಆರಂಭ ಪಡೆದ ಆರ್‌ಸಿಬಿ
Image Credit : X/RCBTweets

ಉತ್ತಮ ಆರಂಭ ಪಡೆದ ಆರ್‌ಸಿಬಿ

ಆರ್‌ಸಿಬಿ ಪರ ಆರಂಭದಲ್ಲಿ ವಿರಾಟ್ ಕೊಹ್ಲಿ 28 ರನ್ ಸಿಡಿಸಿದರೆ, ಫಿಲ್ ಸಾಲ್ಟ್ 46 ರನ್ ಬಾರಿಸಿ ಕೇವಲ 4 ರನ್ ಅಂತರದಲ್ಲಿ ಅರ್ಧಶತಕ ವಂಚಿತರಾದರು. ಆದರೆ ದೇವದತ್ ಪಡಿಕ್ಕಲ್ ಕೇವಲ 29 ಎಸೆತಗಳಲ್ಲಿ 5 ಬೌಂಡರಿ ಹಾಗೂ 2 ಸಿಕ್ಸರ್ ಸಹಿತ 50 ರನ್ ಸಿಡಿಸಿ ಜೇಮಿ ಓವರ್‌ಟನ್‌ಗೆ ವಿಕೆಟ್ ಒಪ್ಪಿಸಿದರು.

56
ಟಿಮ್ ಡೇವಿಡ್-ರಜತ್ ಪಾಟೀದಾರ್ ಸ್ಪೋಟಕ ಜತೆಯಾಟ
Image Credit : ANI

ಟಿಮ್ ಡೇವಿಡ್-ರಜತ್ ಪಾಟೀದಾರ್ ಸ್ಪೋಟಕ ಜತೆಯಾಟ

ಇದಾದ ಬಳಿಕ ನಾಲ್ಕನೇ ವಿಕೆಟ್‌ಗೆ ಜತೆಯಾದ ನಾಯಕ ರಜತ್ ಪಾಟೀದಾರ್ ಹಾಗೂ ಟಿಮ್ ಡೇವಿಡ್ ಕೇವಲ 35 ಎಸೆತಗಳಲ್ಲಿ ಮುರಿಯದ 99 ರನ್ ಸಿಡಿಸುವ ಮೂಲಕ ತಂಡದ ಮೊತ್ತ 250ರ ಗಡಿ ದಾಟಿಸುವಲ್ಲಿ ಯಶಸ್ವಿಯಾದರು. ರಜತ್ ಪಾಟೀದಾರ್ ಕೇವಲ 19 ಎಸೆತಗಳಲ್ಲಿ ಒಂದು ಬೌಂಡರಿ ಆರು ಸಿಕ್ಸರ್ ಸಹಿತ ಅಜೇಯ 48 ರನ್ ಬಾರಿಸಿದರು.

66
ಚೆನ್ನೈ ಬೌಲರ್‌ಗಳ ಧ್ವಂಸ ಮಾಡಿದ ಟಿಮ್ ಡೇವಿಡ್
Image Credit : X/RCBTweets

ಚೆನ್ನೈ ಬೌಲರ್‌ಗಳ ಧ್ವಂಸ ಮಾಡಿದ ಟಿಮ್ ಡೇವಿಡ್

ಇನ್ನು ಚೆನ್ನೈ ಬೌಲರ್‌ಗಳನ್ನು ಅಟ್ಟಾಡಿಸಿ ಹೊಡೆದ ಟಿಮ್ ಡೇವಿಡ್ ಕೇವಲ 25 ಎಸೆತಗಳಲ್ಲಿ 3 ಬೌಂಡರಿ ಹಾಗೂ 8 ಮುಗಿಲೆತ್ತರದ ಸಿಕ್ಸರ್‌ಗಳ ನೆರವಿನಿಂದ ಅಜೇಯ 70 ರನ್ ಬಾರಿಸಿ, ಸಿಎಸ್‌ಕೆ ಎದುರು ಆರ್‌ಸಿಬಿ ಗರಿಷ್ಠ ಸ್ಕೋರ್ ದಾಖಲಿಸಲು ನೆರವಾದರು.

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

About the Author

NK
Naveen Kodase
ನವೀನ್ ಕೊಡಸೆ ಏಷ್ಯಾನೆಟ್ ಕನ್ನಡದಲ್ಲಿ ಮುಖ್ಯ ಉಪಸಂಪಾದಕ. ಕಳೆದ 9 ವರ್ಷಗಳಿಂದಲೂ ಮಾಧ್ಯಮ ಜಗತ್ತಿನಲ್ಲಿದ್ದೇನೆ. ಅಪ್ಪಟ ಮಲೆನಾಡಿನ ಹುಡುಗ. ಕುವೆಂಪು ವಿವಿಯ ಪತ್ರಿಕೋದ್ಯಮ ಪದವಿ ಇದೆ. ರಾಜ್‌ ನ್ಯೂಸ್‌ ಮೂಲಕ ಮಾಧ್ಯಮ ಲೋಕಕ್ಕೆ ಕಾಲಿಟ್ಟವನು. ಡಿಜಿಟಲ್‌ ಮಾಧ್ಯಮ ಲೋಕದಲ್ಲಿ ಪಳಗಿದರೂ, ಕಲಿಯೋದಿದೆ ಅಪಾರ. ಕ್ರೀಡೆ, ರಾಜಕೀಯ, ಸಾಹಿತ್ಯದಲ್ಲಿದೆ ಆಸಕ್ತಿ. ಕ್ರೀಡಾ ಸುದ್ದಿಯೇ ನನ್ನ ಜೀವಾಳ.
ಆರ್‌ಸಿಬಿ
ಐಪಿಎಲ್
ಚೆನ್ನೈ ಸೂಪರ್ ಕಿಂಗ್ಸ್

Latest Videos
Recommended Stories
Recommended image1
ಆರ್‌ಸಿಬಿ ಅಬ್ಬರಕ್ಕೆ ಕುಣಿದು ಕುಪ್ಪಳಿಸಿದ ಫ್ಯಾನ್ಸ್, ಸಿಎಸ್‌ಕ್‌ಗೆ 251 ರನ್ ಟಾರ್ಗೆಟ್ ನೀಡಿ ದಾಖಲೆ
Recommended image2
ಸಿಎಸ್‌ಕೆ ಎದುರು ಅಪರೂಪದ ದಾಖಲೆ ಬರೆಯಲು ವಿರಾಟ್ ಕೊಹ್ಲಿಗೆ ಬೇಕಿದೆ ಜಸ್ಟ್ 14 ರನ್!
Recommended image3
ಇಂದಿನ ಆರ್‌ಸಿಬಿ-ಸಿಎಸ್‌ಕೆ ನಡುವಿನ ಮ್ಯಾಚ್ ಗೆಲ್ಲೋದು ಯಾರು? ಅಚ್ಚರಿ ಭವಿಷ್ಯ ನುಡಿದ ರವಿಚಂದ್ರನ್ ಅಶ್ವಿನ್
Related Stories
Recommended image1
RCB ಕೈಬಿಟ್ಟು ಈ 4 ತಂಡಗಳೇ ಐಪಿಎಲ್ ಪ್ಲೇ ಆಫ್ ಪ್ರವೇಶಿಸಲಿವೆ ಎಂದು ಅಚ್ಚರಿ ಭವಿಷ್ಯ ನುಡಿದ ಕೆವಿನ್ ಪೀಟರ್‌ಸನ್‌!
Recommended image2
ಆರ್‌ಸಿಬಿ ಅಬ್ಬರಕ್ಕೆ ಕುಣಿದು ಕುಪ್ಪಳಿಸಿದ ಫ್ಯಾನ್ಸ್, ಸಿಎಸ್‌ಕ್‌ಗೆ 251 ರನ್ ಟಾರ್ಗೆಟ್ ನೀಡಿ ದಾಖಲೆ
News
kannada newslatest kannada newskarnataka newsbengaluru newsMysore newsindia news in kannadainternational news in kannada
Entertainment News
Kannada Cinema Newskannada movies reviewsandalwood newskannada tv shows
Sports News
sports news in kannadacricket news in kannadaOther Sports News in Kannada
Business News
Business news in kannadashare market news in kannadabusiness ideas in kannada
Science & Technology
technology news in kannadamobile tech newsscience and tech news
Astrology
rashi bhavishya in kannadadina bhavishyavara bhavishyavastu shastra in kannadakarnataka festivals
Lifestyle
Lifestyle news in kannadafood recipes in kannadahealth tips in kannadakitchen tips in kannada
Education & Career
job news in kannadaPrivate Jobsbank jobs in karnatakaGovernment jobs in karnatakaCentral Govt Jobs in KannadaIT Jobs
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2026 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved