ಸಚಿನ್, ರೋಹಿತ್ ಶರ್ಮಾ ಸೇರಿ ಟೀಂ ಇಂಡಿಯಾ ಕ್ರಿಕೆಟಿಗರ ಸ್ವಾತಂತ್ರ್ಯ ದಿನಾಚರಣೆ ಹೇಗಿತ್ತು?
ಅಮೃತ ಮಹೋತ್ಸವ ಸಂಭ್ರಮದಲ್ಲಿರುವ ಭಾರತ ಇಂದು ವಿಜೃಂಭಣೆಯಿಂದ ಸ್ವಾತಂತ್ರ್ಯ ದಿನಾಚರಿಸಿದೆ. ಕೆಎಲ್ ರಾಹುಲ್ ನೇತೃತ್ವದ ಟೀಂ ಇಂಡಿಯಾ ಜಿಂಬಾಬ್ವೆಯಲ್ಲಿ ಸ್ವಾತಂತ್ಯ ದಿನಾಚರಣೆ ಮಾಡಿದರೆ, ಸಚಿನ್ ತೆಂಡೂಲ್ಕರ್, ರೋಹಿತ್ ಶರ್ಮಾ ಸೇರಿದಂತೆ ಕ್ರಿಕೆಟಿಗರು ಧ್ವಜಾರೋಹಣ ಮಾಡಿ ದೇಶ ಪ್ರೇಮ ಮೆರೆದಿದ್ದಾರೆ.
ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡುಲ್ಕರ್ ತಮ್ಮ ಮನೆಯಲ್ಲಿ ಧ್ವಜಾರೋಹಣ ನೆರವೇರಿಸಿದ್ದಾರೆ. ಬಳಿಕ ಧ್ವಜದ ಜೊತೆಗಿನ ಫೋಟೋವನ್ನು ಟ್ವೀಟರ್ ಮೂಲಕ ಹಂಚಿಕೊಂಡಿದ್ದಾರೆ.
ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ ಸದ್ಯ ಜಿಂಬಾಬ್ವೆ ಪ್ರವಾಸದಿಂದ ವಿಶ್ರಾಂತಿ ಪಡೆದುಕೊಂಡಿದ್ದಾರೆ. ಮುಂಬೈನಲ್ಲಿರುವ ರೋಹಿತ್ ಶರ್ಮಾ ಧ್ವಜದ ಜೊತೆಗಿನ ಫೋಟೋ ಹಾಕಿಕೊಂಡಿದ್ದಾರೆ. ಸಮಸ್ತ ಭಾರತೀಯರಿಗೆ ಸ್ವಾತಂತ್ರ್ಯ ದಿನಾಚರೆ ಶುಭಾಶಕೋರಿದ್ದಾರೆ.
ಮಾಜಿ ಕ್ರಿಕೆಟಿಗ ಮೊಹಮ್ಮದ್ ಕೈಫ್ ಕೂಡ ತಮ್ಮ ಮನೆಯಲ್ಲಿ ತ್ರಿವರ್ಣ ಧ್ವಜ ಹಾರಿಸಿದ್ದಾರೆ. ಟೀಂ ಇಂಡಿಯಾದ ಬಹುತೇಕ ಕ್ರಿಕೆಟಿಗರು ತಿರಂಗ ಹಾರಿಸಿದ್ದಾರೆ. ಇದೇ ವೇಳೆ ಸಮಸ್ತ ಭಾರತೀಯರಿಗೆ ಸ್ವಾತಂತ್ರ್ಯ ದಿನಾಚರಣೆ ಶುಭಕೋರಿದ್ದಾರೆ.
ಮಾಜಿ ಕ್ರಿಕೆಟಿಗ ಇರ್ಫಾನ್ ಪಠಾಣ್ ಹಾಗೂ ಯೂಸೂಫ್ ಪಠಾಣ್ ತಮ್ಮ ಮನೆಯಲ್ಲಿ ಧ್ವಜಾರೋಹಣ ನೆರವೇರಿಸಿದ್ದಾರೆ. ಇರ್ಫಾನ್ ಪಠಾಣ್ ಕುಟುಂಬಸ್ಥರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.
ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ಬಂಗಾಳ ಕ್ರಿಕೆಟ್ ಸಂಸ್ಥೆಯಲ್ಲಿ ಧ್ವಜಾರೋಹಣ ನೆರವೇರಿಸಿದ್ದಾರೆ. ಬಂಗಾಳ ಕ್ರಿಕೆಟ್ ಸಂಸ್ಥೆಯ ಸಿಬ್ಬಂದಿಗಳು, ಕ್ರಿಕೆಟಿಗರು ಸೇರಿದಂತೆ ಹಲವು ಧ್ವಜಾರೋಹಣ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.
ಟೀಂ ಇಂಡಿಯಾ ಪ್ರತಿ ಪಂದ್ಯದಲ್ಲಿ ತಿರಂಗ ಹಾರಾಡುತ್ತಲೇ ಇರುತ್ತದೆ. ಟೀಂ ಇಂಡಿಯಾ ಮುಂದಿನ ದಿನಗಳಲ್ಲಿ ಪ್ರತಿ ಸರಣಿಯಲ್ಲಿ ಭರ್ಜರಿ ಗೆಲುವಿನ ಮೂಲಕ ಭಾರತ ತಿರಂಗವನ್ನು ಮತ್ತಷ್ಟು ಎತ್ತರಕ್ಕೆ ಹಾರಿಸುವಂತಾಗಲಿ ಎಂದು ಸೌರವ್ ಗಂಗೂಲಿ ಹೇಳಿದ್ದಾರೆ.
ಭಾರತ ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮದಲ್ಲಿದೆ. ಪ್ರಧಾನಿ ನರೇಂದ್ರ ಮೋದಿ ದೆಹಲಿಯ ಕೆಂಪು ಕೋಟೆಯಲ್ಲಿ ಧ್ವಜಾರೋಹಣ ನೆರವೇರಿಸಿದ್ದಾರೆ. ದೇಶದ ನಗರ, ಪಟ್ಟಣ ಸೇರಿದಂತೆ ಇಡೀ ಭಾರತದಲ್ಲಿ ಧ್ವಜಾರೋಹಣ ನೆರವೇರಿದೆ. ಜಿಂಬಾಬ್ವೆ ಪ್ರವಾಸದಲ್ಲಿರುವ ಟೀಂ ಇಂಡಿಯಾ ಸ್ವಾತಂತ್ರ್ಯ ದಿನಾಚರಣೆ ಆಚರಿಸಿದೆ.
ಜಿಂಬಾಬ್ವೆಯಲ್ಲಿರುವ ಭಾರತೀಯ ರಾಯಭಾರಿ ಕಚೇರಿಗೆ ಭೇಟಿ ನೀಡಿರುವ ಕೆಎಲ್ ರಾಹುಲ್ ಪಡೆ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದೆ. ಆಗಸ್ಟ್ 18 ರಿಂದ 3 ಪಂದ್ಯಗಳ ಏಕದಿನ ಸರಣಿ ಆರಂಭಗೊಳ್ಳಲಿದೆ. ಹೀಗಾಗಿ ಟೀಂ ಇಂಡಿಯಾ ಜಿಂಬಾಬ್ವೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ ಆಚರಿಸಿದೆ.