- Home
- Sports
- Cricket
- T20 World Cup 2026 ಅಭಿಷೇಕ್‌ಗೆ ಗೇಟ್‌ಪಾಸ್? ಸಂಜುಗೆ ಚಾನ್ಸ್? ಟೀಂ ಇಂಡಿಯಾದಲ್ಲಿ ಮಹತ್ವದ ಬದಲಾವಣೆ!
T20 World Cup 2026 ಅಭಿಷೇಕ್‌ಗೆ ಗೇಟ್‌ಪಾಸ್? ಸಂಜುಗೆ ಚಾನ್ಸ್? ಟೀಂ ಇಂಡಿಯಾದಲ್ಲಿ ಮಹತ್ವದ ಬದಲಾವಣೆ!
ಟಿ20 ವಿಶ್ವಕಪ್ 2026ರ ಸೂಪರ್-8 ಹಂತದ ಪಂದ್ಯದಲ್ಲಿ ಭಾರತ ತಂಡ ಫೆಬ್ರವರಿ 22 ರಂದು ದಕ್ಷಿಣ ಆಫ್ರಿಕಾವನ್ನು ಎದುರಿಸಲಿದೆ. ಸತತ ಮೂರು ಬಾರಿ ಡಕೌಟ್ ಆಗಿರುವ ಆರಂಭಿಕ ಆಟಗಾರ ಅಭಿಷೇಕ್ ಶರ್ಮಾ ಬದಲಿಗೆ ಸಂಜು ಸ್ಯಾಮ್ಸನ್‌ಗೆ ಆಡುವ ಹನ್ನೊಂದರ ಬಳಗದಲ್ಲಿ ಸ್ಥಾನ ಸಿಗುವ ಸಾಧ್ಯತೆ ದಟ್ಟವಾಗಿದೆ.

ಸೂಪರ್-8 ಹಂತಕ್ಕೆ ಭಾರತ ಲಗ್ಗೆ
ಹ್ಯಾಟ್ರಿಕ್ ಶೂನ್ಯ ಸುತ್ತಿರುವ ಅಭಿಷೇಕ್ ಶರ್ಮಾ
ಸಂಜು ಸ್ಯಾಮ್ಸನ್‌ಗೆ ಅವಕಾಶ?
ಬೌಲಿಂಗ್‌ನಲ್ಲೂ ಬದಲಾವಣೆ ಸಾಧ್ಯತೆ
ಭಾರತ ತಂಡದ ಬೌಲಿಂಗ್
ಭಾರತ ಸತತ ಗೆಲುವುಗಳನ್ನು ದಾಖಲಿಸುತ್ತಿದ್ದರೂ, ಬೌಲಿಂಗ್ ವಿಭಾಗದಲ್ಲಿ ಕೊಂಚ ಅಸ್ಥಿರತೆ ಕಾಣಿಸುತ್ತಿದೆ. ವರುಣ್ ಚಕ್ರವರ್ತಿ ಹೊರತುಪಡಿಸಿ ಉಳಿದ ಬೌಲರ್‌ಗಳು ಸ್ಥಿರ ಪ್ರದರ್ಶನ ನೀಡಲು ವಿಫಲರಾಗುತ್ತಿದ್ದಾರೆ. ಜಸ್ಪ್ರೀತ್ ಬುಮ್ರಾ ಮತ್ತು ಅರ್ಷದೀಪ್ ಸಿಂಗ್ ತಮ್ಮ ಅತ್ಯುತ್ತಮ ಆಟವನ್ನು ಪ್ರದರ್ಶಿಸಬೇಕಿದೆ. ಸೂಪರ್-8 ಹಂತದಲ್ಲಿ ದಕ್ಷಿಣ ಆಫ್ರಿಕಾ, ಜಿಂಬಾಬ್ವೆ ಮತ್ತು ವೆಸ್ಟ್ ಇಂಡೀಸ್‌ನಂತಹ ಬಲಿಷ್ಠ ತಂಡಗಳನ್ನು ಎದುರಿಸಬೇಕಾಗಿರುವುದರಿಂದ ಬೌಲರ್‌ಗಳ ಪ್ರದರ್ಶನ ನಿರ್ಣಾಯಕವಾಗಲಿದೆ. ಭಾರತವು ದಕ್ಷಿಣ ಆಫ್ರಿಕಾ ಎದುರಿನ ಪಂದ್ಯದ ಬಳಿಕ ಫೆಬ್ರವರಿ 26ರಂದು ಚೆನ್ನೈನಲ್ಲಿ ಜಿಂಬಾಬ್ವೆ ವಿರುದ್ಧ ಮತ್ತು ಮಾರ್ಚ್ 1ರಂದು ಕೋಲ್ಕತ್ತಾದಲ್ಲಿ ವೆಸ್ಟ್ ಇಂಡೀಸ್ ವಿರುದ್ಧ ಸೆಣಸಲಿದೆ.
ದಕ್ಷಿಣ ಆಫ್ರಿಕಾ ಎದುರಿನ ಪಂದ್ಯಕ್ಕೆ ಭಾರತ ಸಂಭಾವ್ಯ ತಂಡ
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

