- Home
- Sports
- Cricket
- 'ಮೊಹಮ್ಮದ್ ಶಮಿ ಅನ್ಯಾಯ ಮಾಡುತ್ತಿದ್ದಾರೆ': ಟೀಂ ಇಂಡಿಯಾ ಸೆಲೆಕ್ಷನ್ ಬಗ್ಗೆ ಕಿಡಿ ಕಾರಿದ ಹೆಡ್ ಕೋಚ್!
'ಮೊಹಮ್ಮದ್ ಶಮಿ ಅನ್ಯಾಯ ಮಾಡುತ್ತಿದ್ದಾರೆ': ಟೀಂ ಇಂಡಿಯಾ ಸೆಲೆಕ್ಷನ್ ಬಗ್ಗೆ ಕಿಡಿ ಕಾರಿದ ಹೆಡ್ ಕೋಚ್!
ಮುಂಬೈ: ನ್ಯೂಜಿಲೆಂಡ್ ಎದುರಿನ ಮೂರು ಪಂದ್ಯಗಳ ಏಕದಿನ ಸರಣಿಗೆ ಭಾರತ ಕ್ರಿಕೆಟ್ ತಂಡವನ್ನು ಪ್ರಕಟಿಸಲಾಗಿದ್ದು, ಮತ್ತೊಮ್ಮೆ ವೇಗಿ ಮೊಹಮ್ಮದ್ ಶಮಿ ಅವರನ್ನು ಕಡೆಗಣಿಸಲಾಗಿದೆ. ಈ ಕುರಿತಂತೆ ಹೆಡ್‌ಕೋಚ್ ಕಿಡಿಕಾರಿದ್ದಾರೆ.

ಕಿವೀಸ್ ಎದುರಿನ ಸರಣಿಗೆ ಭಾರತ ತಂಡ ಪ್ರಕಟ
ಭಾರತ ಹಾಗೂ ನ್ಯೂಜಿಲೆಂಡ್ ನಡುವಿನ ಮೂರು ಪಂದ್ಯಗಳ ಏಕದಿನ ಸರಣಿಯು ಜನವರಿ 11ರಿಂದ ಆರಂಭವಾಗಲಿದ್ದು, ಈ ಮಹತ್ವದ ಸರಣಿಗೆ ಜನವರಿ 03ರಂದು ಅಜಿತ್ ಅಗರ್ಕರ್ ನೇತೃತ್ವದ ಆಯ್ಕೆ ಸಮಿತಿ ತಂಡವನ್ನು ಪ್ರಕಟಿಸಿದೆ.
ಶ್ರೇಯಸ್ ಅಯ್ಯರ್-ಶುಭ್‌ಮನ್ ಗಿಲ್ ಕಮ್‌ಬ್ಯಾಕ್
ಗಾಯದ ಸಮಸ್ಯೆಯಿಂದಾಗಿ ದಕ್ಷಿಣ ಆಫ್ರಿಕಾ ಎದುರಿನ ಏಕದಿನ ಸರಣಿಗೆ ತಂಡದಿಂದ ಹೊರಬಿದ್ದಿದ್ದ ನಾಯಕ ಶುಭ್‌ಮನ್ ಗಿಲ್ ಹಾಗೂ ಉಪನಾಯಕ ಶ್ರೇಯಸ್ ಅಯ್ಯರ್ ತಂಡಕ್ಕೆ ಕಮ್‌ಬ್ಯಾಕ್ ಮಾಡಿದ್ದಾರೆ.
ಶಮಿಗೆ ಶಾಕ್ ಕೊಟ್ಟ ಆಯ್ಕೆ ಸಮಿತಿ
ಆದರೆ ಅನುಭವಿ ವೇಗಿ ಮೊಹಮ್ಮದ್ ಶಮಿ ಅವರನ್ನು ಮತ್ತೊಮ್ಮೆ ಕಡೆಗಣಿಸಲಾಗಿದೆ. ಶಮಿ ಕಿವೀಸ್ ಎದುರಿನ ಸರಣಿಗೆ ತಂಡ ಕೂಡಿಕೊಳ್ಳಬಹುದು ಎನ್ನುವ ನಿರೀಕ್ಷೆ ಹುಸಿಯಾಗಿದೆ.
ಆಯ್ಕೆ ಸಮಿತಿ ಮೇಲೆ ಕಿಡಿಕಾರಿದ ಬಂಗಾಳ ಹೆಡ್ ಕೋಚ್
ಇದೀಗ ಮಾಜಿ ಟೀಂ ಇಂಡಿಯಾ ಕ್ರಿಕೆಟಿಗ ಹಾಗೂ ಶಮಿ ಪ್ರತಿನಿಧಿಸುವ ಬಂಗಾಳ ಕ್ರಿಕೆಟ್ ತಂಡದ ಹೆಡ್‌ಕೋಚ್ ಲಕ್ಷ್ಮಿ ರತನ್ ಶುಕ್ಲಾ ಬಿಸಿಸಿಐ ಆಯ್ಕೆ ಸಮಿತಿಯ ಮೇಲೆ ಕಿಡಿಕಾರಿದ್ದು, ಶಮಿಗೆ ಅನ್ಯಾಯ ಮಾಡುತ್ತಿದೆ ಎಂದು ಗಂಭೀರ ಆರೋಪ ಮಾಡಿದ್ದಾರೆ.
ಶಮಿಗೆ ಅನ್ಯಾಯವಾಗುತ್ತಿದೆ ಎಂದ ಶುಕ್ಲಾ
ಆಯ್ಕೆ ಸಮಿತಿಯು ಶಮಿಗೆ ಅನ್ಯಾಯ ಮಾಡುತ್ತಿದೆ. ಯಾವೊಬ್ಬ ಅಂತಾರಾಷ್ಟ್ರೀಯ ಕ್ರಿಕೆಟಿಗನೂ ಗಾಯದ ಸಮಸ್ಯೆಯ ಬಳಿಕ ಇಷ್ಟೊಂದು ದೇಶಿ ಕ್ರಿಕೆಟ್ ಪಂದ್ಯಗಳನ್ನು ಆಡಿಲ್ಲ. ದೇಶಿ ಕ್ರಿಕೆಟ್‌ನಲ್ಲಿ ಇಷ್ಟೆಲ್ಲಾ ಪಂದ್ಯಗಳನ್ನಾಡಿದ ಬಳಿಕವೂ ಶಮಿ ಅವರನ್ನು ಕಡೆಗಣಿಸಿದ್ದರ ಬಗ್ಗೆ ಆಯ್ಕೆ ಸಮಿತಿಗೆ ನಾಚಿಕೆಯಾಗಬೇಕು ಎಂದು ಲಕ್ಷ್ಮಿ ರತನ್ ಶುಕ್ಲಾ ಕಿಡಿಕಾರಿದ್ದಾರೆ.
ಚಾಂಪಿಯನ್ಸ್ ಟ್ರೋಫಿಯಲ್ಲಿ ಮಿಂಚಿದ್ದ ಶಮಿ
2025ರ ಐಸಿಸಿ ಚಾಂಪಿಯನ್ಸ್ ಟ್ರೋಫಿ ಫೈನಲ್‌ನಲ್ಲಿ ಮೊಹಮ್ಮದ್ ಶಮಿ ಕೊನೆಯ ಬಾರಿಗೆ ಭಾರತ ತಂಡವನ್ನು ಕೊನೆಯ ಬಾರಿಗೆ ಪ್ರತಿನಿಧಿಸಿದ್ದರು. ಆ ಟೂರ್ನಿಯಲ್ಲಿ 9 ವಿಕೆಟ್ ಕಬಳಿಸುವ ಮೂಲಕ ಭಾರತದ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದ್ದರು.
ನಿರೀಕ್ಷೆ ಹುಸಿ ಮಾಡಿದ ಆಯ್ಕೆ ಸಮಿತಿ
ಇದಾದ ಬಳಿಕ ಆಸ್ಟ್ರೇಲಿಯಾ ಎದುರಿನ ಸರಣಿ, ದಕ್ಷಿಣ ಆಫ್ರಿಕಾ ಎದುರಿನ ಸೀಮಿತ ಓವರ್‌ಗಳ ಸರಣಿಯಿಂದ ಶಮಿ ಅವರನ್ನು ಕೈಬಿಡಲಾಗಿತ್ತು. ಇದೀಗ ಬುಮ್ರಾ ಅನುಪಸ್ಥಿತಿಯಲ್ಲಿ ಶಮಿ ಕಿವೀಸ್ ಎದುರಿನ ಸರಣಿಯಲ್ಲಿ ಭಾರತ ತಂಡದಲ್ಲಿ ಸ್ಥಾನ ಪಡೆಯಬಹುದು ಎನ್ನುವ ನಿರೀಕ್ಷೆ ಹುಸಿಯಾಗಿದೆ.
ದೇಶಿ ಕ್ರಿಕೆಟ್‌ನಲ್ಲಿ ಅದ್ಭುತ ಪ್ರದರ್ಶನ
ದೇಶಿ ಕ್ರಿಕೆಟ್‌ನಲ್ಲಿ ಶಮಿ ವಿಜಯ್ ಹಜಾರೆ ಟ್ರೋಫಿ ಟೂರ್ನಿಯಲ್ಲಿ 5 ಪಂದ್ಯಗಳನ್ನಾಡಿ 11 ವಿಕೆಟ್ ಕಬಳಿಸಿ ಮಿಂಚಿದ್ದಾರೆ. ಇದಕ್ಕೂ ಮೊದಲು ಸಯ್ಯದ್ ಮುಷ್ತಾಕ್ ಅಲಿ ಟಿ20 ಟೂರ್ನಿಯಲ್ಲಿ 5 ಪಂದ್ಯಗಳನ್ನಾಡಿ 13 ವಿಕೆಟ್ ಕಬಳಿಸಿದ್ದಾರೆ.
ಅಭಿಮಾನಿಗಳಿಗೆ ಆಕ್ರೋಶ
ದೇಶಿ ಕ್ರಿಕೆಟ್‌ನಲ್ಲಿ ಅದ್ಭುತ ಲಯ ಹಾಗೂ ಫಿಟ್ನೆಸ್ ಹೊಂದಿದ್ದರೂ ಶಮಿ ಅವರನ್ನು ಕಡೆಗಣಿಸಿರುವುದು ಅಭಿಮಾನಿಗಳ ಆಕ್ರೋಶಕ್ಕೆ ಕಾರಣವಾಗಿದೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

