- Home
- Sports
- Cricket
- IPL 2026 ಟೂರ್ನಿಯಲ್ಲಿ ಈ ನಾಲ್ಕು ತಂಡಗಳು ಪ್ಲೇ ಆಫ್ ಪ್ರವೇಶಿಸುತ್ತವೆ: ಮತ್ತೊಮ್ಮೆ ಅಚ್ಚರಿ ಭವಿಷ್ಯ ನುಡಿದ ಶಶಾಂಕ್ ಸಿಂಗ್
IPL 2026 ಟೂರ್ನಿಯಲ್ಲಿ ಈ ನಾಲ್ಕು ತಂಡಗಳು ಪ್ಲೇ ಆಫ್ ಪ್ರವೇಶಿಸುತ್ತವೆ: ಮತ್ತೊಮ್ಮೆ ಅಚ್ಚರಿ ಭವಿಷ್ಯ ನುಡಿದ ಶಶಾಂಕ್ ಸಿಂಗ್
ಬೆಂಗಳೂರು: 19ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಗೆ ಭರ್ಜರಿ ಚಾಲನೆ ಸಿಕ್ಕಿದೆ. ಹೀಗಿರುವಾಗಲೇ ಪಂಜಾಬ್ ಕಿಂಗ್ಸ್ ತಂಡದ ಯುವ ಆಟಗಾರ ಶಶಾಂಕ್ ಸಿಂಗ್ ಈ ಬಾರಿಯ ಐಪಿಎಲ್ ಟೂರ್ನಿಯಲ್ಲಿ ಯಾವೆಲ್ಲಾ ತಂಡಗಳು ಪ್ಲೇ ಆಫ್ ಪ್ರವೇಶಿಸಲಿವೆ ಎನ್ನುವ ಬಗ್ಗೆ ಭವಿಷ್ಯ ನುಡಿದಿದ್ದಾರೆ.
2026ರ ಐಪಿಎಲ್‌ಗೆ ಭರ್ಜರಿ ಚಾಲನೆ
2026ರ ಐಪಿಎಲ್ ಟೂರ್ನಿಗೆ ಭರ್ಜರಿ ಆರಂಭ ಸಿಕ್ಕಿದ್ದು, ಮೊದಲ ಮೂರು ಪಂದ್ಯಗಳು ಅಭಿಮಾನಿಗಳಿಗೆ ಭರಪೂರ ಮನರಂಜನೆ ನೀಡುವಲ್ಲಿ ಯಶಸ್ವಿಯಾಗಿದೆ. ಮೊದಲ ಮೂರು ಪಂದ್ಯಗಳು 200+ ಸ್ಕೋರ್‌ಗೆ ಸಾಕ್ಷಿಯಾಗಿದ್ದವು.
ಯಾವೆಲ್ಲಾ ತಂಡಗಳು ಪ್ಲೇ ಆಫ್ ಪ್ರವೇಶಿಸಲಿವೆ?
ಇನ್ನು ಇದೆಲ್ಲದರ ನಡುವೆ ಈ ಬಾರಿಯ ಐಪಿಎಲ್ ಟೂರ್ನಿಯಲ್ಲಿ ಯಾವೆಲ್ಲಾ ತಂಡಗಳು ಪ್ಲೇ ಆಫ್ ಪ್ರವೇಶಿಸಬಹುದು ಎನ್ನುವ ಕುರಿತಂತೆಯೂ ಲೆಕ್ಕಾಚಾರಗಳು ಶುರುವಾಗಿದ್ದು, ಹಲವು ಮಾಜಿ ಕ್ರಿಕೆಟಿಗರು ಹಾಗೂ ಕ್ರಿಕೆಟ್ ವಿಶ್ಲೇಷಕರು ಭವಿಷ್ಯ ನುಡಿಯುತ್ತಿದ್ದಾರೆ.
ಅಚ್ಚರಿ ಭವಿಷ್ಯ ನುಡಿದ ಶಶಾಂಕ್ ಸಿಂಗ್
ಇದೀಗ ಪಂಜಾಬ್ ಕಿಂಗ್ಸ್‌ನ ಸ್ಟಾರ್ ಕ್ರಿಕೆಟಿಗ ಶಶಾಂಕ್ ಸಿಂಗ್, ಈ ಬಾರಿಯ ಐಪಿಎಲ್ ಟೂರ್ನಿಯಲ್ಲಿ ಪ್ಲೇ ಆಫ್ ಪ್ರವೇಶಿಸಬಲ್ಲ ತಂಡಗಳು ಯಾವುವು ಎನ್ನುವುದರ ಬಗ್ಗೆ ಭವಿಷ್ಯ ನುಡಿದಿದ್ದಾರೆ. ಕಳೆದ ಬಾರಿ ಶಶಾಂಕ್ ಸಿಂಗ್ ನುಡಿದ ಭವಿಷ್ಯ ನಿಜವಾಗಿತ್ತು.
ಆರ್‌ಸಿಬಿ-ಪಂಜಾಬ್ ಕಿಂಗ್ಸ್ ಪ್ಲೇ ಆಫ್ ಪ್ರವೇಶಿಸಲಿವೆ
ಶಶಾಂಕ್ ಸಿಂಗ್ ಪ್ರಕಾರ, ಕಳೆದ ಬಾರಿಯಂತೆ ಈ ಬಾರಿ ಕೂಡ ಹಾಲಿ ಚಾಂಪಿಯನ್ ಚಾಲೆಂಜರ್ಸ್ ಬೆಂಗಳೂರು ಹಾಗೂ ರನ್ನರ್ ಅಪ್ ಪಂಜಾಬ್ ಕಿಂಗ್ಸ್ ತಂಡಗಳು ಪ್ಲೇ ಆಫ್‌ಗೆ ಎಂಟ್ರಿಕೊಡಲಿವೆ ಎಂದು ಹೇಳಿದ್ದಾರೆ.
ಮೂರನೇ ತಂಡವಾಗಿ ಮುಂಬೈ ಇಂಡಿಯನ್ಸ್ ಪ್ಲೇ ಆಫ್ ಪ್ರವೇಶ
ಇನ್ನುಳಿದಂತೆ ಮೂರನೇ ತಂಡವಾಗಿ ಮುಂಬೈ ಇಂಡಿಯನ್ಸ್ ತಂಡವು ಪ್ಲೇ ಆಫ್‌ಗೆ ಎಂಟ್ರಿಕೊಡಲಿದ್ದು, ನಾಲ್ಕನೇ ಸ್ಥಾನಕ್ಕಾಗಿ ಡೆಲ್ಲಿ ಕ್ಯಾಪಿಟಲ್ಸ್ ಹಾಗೂ ಲಖನೌ ಸೂಪರ್ ಜೈಂಟ್ಸ್ ನಡುವೆ ಪೈಪೋಟಿ ಏರ್ಪಡಲಿದೆ ಎಂದು ಶಶಾಂಕ್ ಸಿಂಗ್ ಭವಿಷ್ಯ ನುಡಿದಿದ್ದಾರೆ.
ಪಂಜಾಬ್ ಕಿಂಗ್ಸ್ ಈ ಸಲ ಕಪ್ ಗೆಲ್ಲಲಿದೆ ಎಂದ ಶಶಾಂಕ್ ಸಿಂಗ್
ಇಷ್ಟಕ್ಕೆ ಸುಮ್ಮನಾಗದ ಶಶಾಂಕ್ ಸಿಂಗ್, ಈ ಬಾರಿ ಫೈನಲ್‌ಗೆ ಯಾವುದೇ ತಂಡ ಬಂದರೂ ಕಪ್ ಗೆಲ್ಲುವುದು ಮಾತ್ರ ಪಂಜಾಬ್ ಕಿಂಗ್ಸ್ ಎಂದು ದಿಟ್ಟ ಭವಿಷ್ಯ ನುಡಿದಿದ್ದಾರೆ. ಕಳೆದ ಬಾರಿ ಪಂಜಾಬ್ ಕಿಂಗ್ಸ್ ಫೈನಲ್ ಪ್ರವೇಶಿಸಿತ್ತಾದರೂ, ಆರ್‌ಸಿಬಿ ಎದುರು ರೋಚಕ ಸೋಲು ಕಾಣುವ ಮೂಲಕ ರನ್ನರ್ ಅಪ್ ಸ್ಥಾನಕ್ಕೆ ತೃಪ್ತಿಪಟ್ಟುಕೊಂಡಿತ್ತು.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

