ಮಾಜಿ ಕ್ರಿಕೆಟರ್ ಶಿಖರ್ ಧವನ್‌ಗೆ ಸಮನ್ಸ್ ಜಾರಿ!
ಬೆಂಗಳೂರು: ಟೀಂ ಇಂಡಿಯಾ ಮಾಜಿ ಕ್ರಿಕೆಟಿಗ ಶಿಖರ್ ಧವನ್‌ಗೆ ಜಾರಿ ನಿರ್ದೇಶನಾಲಯ ಸಮನ್ಸ್ ಜಾರಿ ಮಾಡಿದೆ. ಈ ಕುರಿತಾದ ಮಹತ್ವದ ಅಪ್‌ಡೇಟ್ಸ್ ಇಲ್ಲಿದೆ ನೋಡಿ.

ಇತ್ತೀಚೆಗಷ್ಟೇ ಎಲ್ಲಾ ಮಾದರಿಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ್ದ ಗಬ್ಬರ್ ಸಿಂಗ್ ಖ್ಯಾತಿಯ ಶಿಖರ್ ಧವನ್‌ಗೆ ಸಂಕಷ್ಟ ಎದುರಾಗಿದೆ. ಜಾರಿ ನಿರ್ದೇಶನಾಲಯ ಎಡಗೈ ಬ್ಯಾಟರ್‌ಗೆ ವಿಚಾರಣೆಗೆ ಹಾಜರಾಗಲು ಸಮನ್ಸ್ ನೀಡಿದೆ.
ಹೌದು, ಅಕ್ರಮ ಹಣ ವರ್ಗಾವಣೆಯ ಸಂಬಂಧ ಕಾನೂನುಬಾಹಿರ ಬೆಟ್ಟಿಂಗ್ ಆಪ್ ಜತೆಗೆ ಶಿಖರ್ ಧವನ್ ಹೆಸರು ಥಳುಕು ಹಾಕಿಕೊಂಡಿತ್ತು. ಈ ಕುರಿತಂತೆ ವಿಚಾರಣೆಗೆ ಹಾಜರಾಗಲು ಶಿಖರ್ ಧವನ್‌ಗೆ ಇ.ಡಿ. ಸಮನ್ಸ್ ನೀಡಿದೆ.
ದಿ ಎನ್‌ಫೋರ್ಸ್‌ಮೆಂಟ್ ಡೈರೆಕ್ಟರೇಟ್ ಇದೀಗ ಪ್ರಿವೆನ್ಷನ್ ಆಫ್ ಮನಿ ಲಾಂಡ್ರಿಂಗ್ ಆಕ್ಟ್ ಪ್ರಕಾರ ಶಿಖರ್ ಧವನ್ ಅವರ ಹೇಳಿಕೆಯನ್ನು ರೆಕಾರ್ಡ್ ಮಾಡಿಕೊಳ್ಳಲಿದೆ ಎಂದು ಮೂಲಗಳು ತಿಳಿಸಿರುವುದಾಗಿ ಎನ್‌ಡಿಟಿವಿ ವೆಬ್‌ಸೈಟ್ ವರದಿ ಮಾಡಿದೆ.
39 ವರ್ಷದ ಕ್ರಿಕೆಟಿಗ ಶಿಖರ್ ಧವನ್ ಈ ಹಿಂದೆ ಒಂದು ಬೆಟ್ಟಿಂಗ್ ಆಪ್ ಬಗ್ಗೆ ಜಾಹಿರಾತಿನಲ್ಲಿ ಕಾಣಿಸಿಕೊಂಡಿದ್ದರು. ಹೀಗಾಗಿ ಜಾರಿ ನಿರ್ದೇಶನಾಲಯವು ಈ ಆಪ್‌ಗೂ ಹಾಗೂ ಧವನ್‌ಗೂ ಇರುವ ಲಿಂಕ್ ಕುರಿತಂತೆ ವಿಚಾರಣೆ ನಡೆಸಲು ಮುಂದಾಗಿದೆ ಎಂದು ವರದಿಯಾಗಿದೆ.
ಅಕ್ರಮ ಬೆಟ್ಟಿಂಗ್ ಅಪ್ಲಿಕೇಶನ್‌ಗಳು ಕೋಟ್ಯಂತರ ರೂಪಾಯಿ ಮೌಲ್ಯದ ಹಲವಾರು ಜನರನ್ನು ಮತ್ತು ಹೂಡಿಕೆದಾರರನ್ನು ವಂಚಿಸಿದೆ ಹಾಗೂ ಭಾರಿ ಪ್ರಮಾಣದ ತೆರಿಗೆಯನ್ನು ವಂಚಿಸಿದೆ. ಹೀಗಾಗಿ ಜಾರಿ ನಿರ್ದೇಶನಾಲಯವು ಈ ಬಗ್ಗೆ ಬಿರುಸಿನ ತನಿಖೆ ನಡೆಸುತ್ತಿದೆ
ಕಳೆದ ತಿಂಗಳು ಮಾಜಿ ಕ್ರಿಕೆಟಿಗ ಸುರೇಶ್ ರೈನಾ ಅವರನ್ನು ಜಾರಿ ನಿರ್ದೇಶನಾಲಯವು ವಿಚಾರಣೆಗೆ ಒಳಪಡಿಸಿತ್ತು.
ಹಣದಾಟದ ಆನ್‌ಲೈನ್ ಗೇಮಿಂಗ್ ನಿಷೇಧ ಕಾಯ್ದೆಯನ್ನು ಸಂಸತ್ತು ಅಂಗೀಕರಿಸಿದ ಬೆನ್ನಲ್ಲೇ ಬಿಸಿಸಿಐ ಜತೆಗಿನ ಡ್ರೀಮ್11 ಒಪ್ಪಂದ ಅಧಿಕೃತವಾಗಿ ಕೊನೆಗೊಂಡಿತ್ತು.