MalayalamNewsableKannadaKannadaPrabhaTeluguTamilBanglaHindiMarathiMyNation
Add Preferred SourceGoogle-icon
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಗ್ಯಾಲರಿ
  • ಮನರಂಜನೆ
  • ಜ್ಯೋತಿಷ್ಯ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ಕ್ರೀಡೆ
  • ಜೀವನಶೈಲಿ
  • ವಾಣಿಜ್ಯ
  • Home
  • Sports
  • Cricket
  • ಮತ್ತೆ ವೈಭವ್ ಸೂರ್ಯವಂಶಿ ಕಡೆಗಣನೆ; ಟೀಂ ಇಂಡಿಯಾಗೆ ಖಡಕ್ ಎಚ್ಚರಿಕೆ ಕೊಟ್ಟ ಸನ್ನಿ!

ಮತ್ತೆ ವೈಭವ್ ಸೂರ್ಯವಂಶಿ ಕಡೆಗಣನೆ; ಟೀಂ ಇಂಡಿಯಾಗೆ ಖಡಕ್ ಎಚ್ಚರಿಕೆ ಕೊಟ್ಟ ಸನ್ನಿ!

ಬೆಂಗಳೂರು: ಇಂಗ್ಲೆಂಡ್ ಎದುರಿನ ಮೊದಲ ಟಿ20 ಪಂದ್ಯದಲ್ಲಿ ವೈಭವ್ ಸೂರ್ಯವಂಶಿ ಟೀಂ ಇಂಡಿಯಾಗೆ ಪಾದಾರ್ಪಣೆ ಮಾಡಬಹುದು ಎನ್ನುವ ನಿರೀಕ್ಷೆ ಹುಸಿಯಾಗಿದೆ. ಇದರ ಬೆನ್ನಲ್ಲೇ ಮಾಜಿ ಕ್ರಿಕೆಟಿಗ ಸುನಿಲ್ ಗವಾಸ್ಕರ್ ಟೀಂ ಇಂಡಿಯಾ ಮ್ಯಾನೇಜ್‌ಮೆಂಟ್‌ಗೆ ಖಡಕ್ ಎಚ್ಚರಿಕೆ ನೀಡಿದ್ದಾರೆ. 

2 Min read
Author : Naveen Kodase
Published : Jul 02 2026, 03:13 PM IST
Share this Photo Gallery
  • FB
  • TW
  • Linkdin
  • Whatsapp
16
ಕಳೆದ ಮೂರು ಪಂದ್ಯಗಳಿಂದ ಬೆಂಚ್ ಕಾಯಿಸಿರುವ ವೈಭವ್ ಸೂರ್ಯವಂಶಿ
Image Credit : stockPhoto

ಕಳೆದ ಮೂರು ಪಂದ್ಯಗಳಿಂದ ಬೆಂಚ್ ಕಾಯಿಸಿರುವ ವೈಭವ್ ಸೂರ್ಯವಂಶಿ

ಭಾರತದ ಪ್ರತಿಭಾನ್ವಿತ ಯುವ ಕ್ರಿಕೆಟಿಗ ವೈಭವ್ ಸೂರ್ಯವಂಶಿ, ಇಂಗ್ಲೆಂಡ್ ಎದುರು ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ಪಾದಾರ್ಪಣೆ ಮಾಡಲು ತುದಿಗಾಲಿನಲ್ಲಿ ನಿಂತಿದ್ದಾರೆ. ಆದರೆ ಟೀಮ್‌ ಮ್ಯಾನೇಜ್‌ಮೆಂಟ್ 2026ರ ಟಿ20 ವಿಶ್ವಕಪ್ ಗೆಲ್ಲಿಸಿಕೊಟ್ಟ ಅಗ್ರಕ್ರಮಾಂಕದ ಬ್ಯಾಟರ್‌ಗಳಾದ ಸಂಜು ಸ್ಯಾಮ್ಸನ್, ಅಭಿಷೇಕ್ ಶರ್ಮಾ ಹಾಗೂ ಇಶಾನ್ ಕಿಶನ್ ಮೇಲೆ ಹೆಚ್ಚಿನ ನಂಬಿಕೆ ಇಟ್ಟುಕೊಂಡಿದೆ. ಇದೇ ಕಾರಣಕ್ಕಾಗಿ 15 ವರ್ಷದ ವೈಭವ್ ಸೂರ್ಯವಂಶಿ ಕಳೆದ ಮೂರು ಪಂದ್ಯಗಳಲ್ಲೂ ಬೆಂಚ್ ಕಾಯಿಸುತ್ತಿದ್ದಾರೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred
26
ಟೀಂ ಇಂಡಿಯಾಗೆ ಎಚ್ಚರಿಕೆ ಕೊಟ್ಟ ಗವಾಸ್ಕರ್
Image Credit : X/@mufaddal_vohra + Getty

ಟೀಂ ಇಂಡಿಯಾಗೆ ಎಚ್ಚರಿಕೆ ಕೊಟ್ಟ ಗವಾಸ್ಕರ್

ಐರ್ಲೆಂಡ್ ಎದುರಿನ ಎರಡೂ ಪಂದ್ಯಗಳಲ್ಲೂ ಭಾರತದ ಅಗ್ರಕ್ರಮಾಂಕದ ಬ್ಯಾಟರ್‌ಗಳಾದ ಸಂಜು ಸ್ಯಾಮ್ಸನ್ ಹಾಗೂ ಇಶಾನ್ ಕಿಶನ್ ಬ್ಯಾಟಿಂಗ್ ವೈಫಲ್ಯ ಅನುಭವಿಸಿದ್ದರು. ಹೀಗಾಗಿ ಇಂಗ್ಲೆಂಡ್‌ ಎದುರಿನ ಸರಣಿಯಲ್ಲಿ ಮೊದಲ ಪಂದ್ಯದಲ್ಲೇ ವೈಭವ್ ಸೂರ್ಯವಂಶಿಗೆ ಆಡುವ ಹನ್ನೊಂದರ ಬಳಗದಲ್ಲಿ ಸ್ಥಾನ ಸಿಗಬಹುದು ಎಂದು ನಿರೀಕ್ಷಿಸಲಾಗಿತ್ತು. ಆದರೆ ಆ ನಿರೀಕ್ಷೆ ಹುಸಿಯಾಗಿದೆ. ಈ ಕುರಿತಂತೆ ಭಾರತದ ದಿಗ್ಗಜ ಮಾಜಿ ಕ್ರಿಕೆಟಿಗ ಸುನಿಲ್ ಗವಾಸ್ಕರ್, ಟೀಮ್‌ ಮ್ಯಾನೇಜ್‌ಮೆಂಟ್‌ಗೆ ಎಚ್ಚರಿಕೆ ನೀಡಿದ್ದಾರೆ.

Related Articles

Related image1
'ಸುಮ್ನೆ ಎಕ್ಸಾಂಗೆ ರೆಡಿಯಾಗು, ಗಲ್ಲಿ ಕ್ರಿಕೆಟ್ ಆಡು': ದೊಡ್ಡ ಕನಸು ಕಾಣುತ್ತಿರುವ ವೈಭವ್ ಸೂರ್ಯವಂಶಿ ಬಗ್ಗೆ ಮಾಜಿ ಕ್ರಿಕೆಟಿಗ ಹೀಗಂದಿದ್ದು ಯಾಕೆ?
Related image2
'ನನಗ್ಯಾವ....' ವೈಭವ್ ಸೂರ್ಯವಂಶಿ ಬಗ್ಗೆ ನಾಯಕ ಶ್ರೇಯಸ್ ಅಯ್ಯರ್ ವ್ಯಂಗ್ಯ? ಹೀಗ್ಯಾಕೆ ಅಂದ್ರು ಟೀಂ ಇಂಡಿಯಾ ಕ್ಯಾಪ್ಟನ್?
36
ವೈಭವ್ ಸೂರ್ಯವಂಶಿ ಬಗ್ಗೆ ಸನ್ನಿ ಹೇಳಿದ್ದೇನು?
Image Credit : instagram

ವೈಭವ್ ಸೂರ್ಯವಂಶಿ ಬಗ್ಗೆ ಸನ್ನಿ ಹೇಳಿದ್ದೇನು?

ವೈಭವ್ ಸೂರ್ಯವಂಶಿಯನ್ನು ಸಾಕಷ್ಟು ಕಾಯಿಸಿದ ಬಳಿಕ ಅವಕಾಶ ನೀಡಿದರೇ, ಅವರಿಗೆ ಉತ್ತಮ ಪ್ರದರ್ಶನ ತೋರಬೇಕು ಎನ್ನುವ ಒತ್ತಡ ಮತ್ತಷ್ಟು ಹೆಚ್ಚಾಗಲಿದೆ. 'ವೈಭವ್ ಸೂರ್ಯವಂಶಿಗೆ ಯಾವಾಗ ಅವಕಾಶ ಸಿಕ್ಕರೂ, ಖಂಡಿತ ಅವರ ಮೇಲೆ ಸಾಕಷ್ಟು ಒತ್ತಡ ಇರಲಿದೆ. ಆದರೆ 15 ವರ್ಷದ ಆಟಗಾರನಾಗಿರುವುದರಿಂದ ಒತ್ತಡದ ಬಗ್ಗೆ ಸಾಕಷ್ಟು ಯೋಚಿಸುವುದಿಲ್ಲ. ಒಂದುವೇಳೆ ಆತನಿಗೆ ಎರಡನೇ ಇಲ್ಲವೇ ಮೂರನೇ ಮ್ಯಾಚ್‌ನಲ್ಲಿ ಅವಕಾಶ ಸಿಕ್ಕಿದರೆ, ಅವರು ಉತ್ತಮ ಪ್ರದರ್ಶನ ತೋರಬೇಕಾಗುತ್ತದೆ. ಅಂತಾರಾಷ್ಟ್ರೀಯ ಕ್ರಿಕೆಟ್ ಆತನಿಂದ ಬಯಸುವುದು ಅದನ್ನೇ. ಹೀಗಾಗಿ ಆದಷ್ಟು ಬೇಗ ಅವರಿಗೆ ಅವಕಾಶ ನೀಡಬೇಕು ಎಂದು ಟೀಮ್‌ ಮ್ಯಾನೇಜ್‌ಮೆಂಟ್‌ಗೆ ಸನ್ನಿ ಎಚ್ಚರಿಸಿದ್ದಾರೆ.

46
ಇದು ವೈಭವ್ ಸೂರ್ಯವಂಶಿಗೆ ಭವಿಷ್ಯದಲ್ಲಿ ಹೆಚ್ಚು ಅನುಕೂಲವಾಗಲಿದೆ
Image Credit : stockPhoto

ಇದು ವೈಭವ್ ಸೂರ್ಯವಂಶಿಗೆ ಭವಿಷ್ಯದಲ್ಲಿ ಹೆಚ್ಚು ಅನುಕೂಲವಾಗಲಿದೆ

ವೈಭವ್ ಸೂರ್ಯವಂಶಿ ಭಾರತ ತಂಡದ ಜತೆಗಿರುವುದು ಅವರ ಕಲಿಕೆಗೆ ಹೆಚ್ಚು ಅನುಕೂಲವಾಗಲಿದೆ. ಡ್ರೆಸ್ಸಿಂಗ್ ರೂಮ್‌ನಲ್ಲಿ ಸಾಕಷ್ಟು ಅನುಭವಿ ಹಾಗೂ ವಿಶ್ವದರ್ಜೆಯ ಆಟಗಾರರಿಂದ ವೈಭವ್ ಸೂರ್ಯವಂಶಿ ಸಾಕಷ್ಟು ಕಲಿಯುವ ಅವಕಾಶ ಸಿಗಲಿದೆ. ಇದು ಅವರ ಭವಿಷ್ಯದಲ್ಲಿ ಹೆಚ್ಚು ಅನುಕೂಲವಾಗಲಿದೆ ಎಂದು ಗವಾಸ್ಕರ್ ಅಭಿಪ್ರಾಯಪಟ್ಟಿದ್ದಾರೆ.

56
2026ರ ಐಪಿಎಲ್‌ನಲ್ಲಿ ಅಬ್ಬರಿಸಿದ್ದ ವೈಭವ್ ಸೂರ್ಯವಂಶಿ:
Image Credit : Getty

2026ರ ಐಪಿಎಲ್‌ನಲ್ಲಿ ಅಬ್ಬರಿಸಿದ್ದ ವೈಭವ್ ಸೂರ್ಯವಂಶಿ:

ಇನ್ನು ವೈಭವ್ ಸೂರ್ಯವಂಶಿ, 19ನೇ ಸೀಸನ್‌ ಐಪಿಎಲ್ ಟೂರ್ನಿಯಲ್ಲಿ ರಾಜಸ್ಥಾನ ರಾಯಲ್ಸ್ ಪರ ವಿಸ್ಪೋಟಕ ಬ್ಯಾಟಿಂಗ್ ನಡೆಸುವ ಮೂಲಕ ಆರೆಂಜ್ ಕ್ಯಾಪ್ ಜಯಿಸುವಲ್ಲಿ ಯಶಸ್ವಿಯಾಗಿದ್ದರು. ಇದರ ಬೆನ್ನಲ್ಲೇ ವೈಭವ್ ಸೂರ್ಯವಂಶಿ, ಐರ್ಲೆಂಡ್, ಇಂಗ್ಲೆಂಡ್ ಹಾಗೂ ಏಷ್ಯನ್ ಗೇಮ್ಸ್ ಟೂರ್ನಿಗೆ ಭಾರತ ತಂಡದಲ್ಲಿ ಸ್ಥಾನ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ. ಇದೀಗ ಭಾರತಕ್ಕೆ ಪಾದಾರ್ಪಣೆ ಮಾಡಲು ಬಿಹಾರ ಮೂಲದ ಆಟಗಾರ ತುದಿಗಾಲಿನಲ್ಲಿ ನಿಂತಿದ್ದಾರೆ.

66
ಸಚಿನ್ ತೆಂಡೂಲ್ಕರ್ ದಾಖಲೆ ಮುರಿಯುವ ನಿರೀಕ್ಷೆಯಲ್ಲಿ ವೈಭವ್:
Image Credit : stockPhoto

ಸಚಿನ್ ತೆಂಡೂಲ್ಕರ್ ದಾಖಲೆ ಮುರಿಯುವ ನಿರೀಕ್ಷೆಯಲ್ಲಿ ವೈಭವ್:

ಭಾರತ ಸೀನಿಯರ್ಸ್ ಪುರುಷರ ಕ್ರಿಕೆಟ್ ತಂಡದ ಪರ ಪಾದಾರ್ಪಣೆ ಮಾಡಿದ ಅತಿಕಿರಿಯ ಕ್ರಿಕೆಟಿಗ ಎನ್ನುವ ದಾಖಲೆ ಸಚಿನ್ ತೆಂಡೂಲ್ಕರ್ ಹೆಸರಿನಲ್ಲಿದೆ. ಸಚಿನ್ 16 ವರ್ಷಕ್ಕೆ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ಪಾದಾರ್ಪಣೆ ಮಾಡಿದ್ದರು. ಇದೀಗ 15 ವರ್ಷದ ವೈಭವ್ ಸೂರ್ಯವಂಶಿ, ಮಾಸ್ಟರ್ ಬ್ಲಾಸ್ಟರ್ ದಾಖಲೆ ಮುರಿಯುವ ಹಾದಿಯಲ್ಲಿದ್ದಾರೆ.

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

About the Author

NK
Naveen Kodase
ನವೀನ್ ಕೊಡಸೆ ಏಷ್ಯಾನೆಟ್ ಕನ್ನಡದಲ್ಲಿ ಮುಖ್ಯ ಉಪಸಂಪಾದಕ. ಕಳೆದ 9 ವರ್ಷಗಳಿಂದಲೂ ಮಾಧ್ಯಮ ಜಗತ್ತಿನಲ್ಲಿದ್ದೇನೆ. ಅಪ್ಪಟ ಮಲೆನಾಡಿನ ಹುಡುಗ. ಕುವೆಂಪು ವಿವಿಯ ಪತ್ರಿಕೋದ್ಯಮ ಪದವಿ ಇದೆ. ರಾಜ್‌ ನ್ಯೂಸ್‌ ಮೂಲಕ ಮಾಧ್ಯಮ ಲೋಕಕ್ಕೆ ಕಾಲಿಟ್ಟವನು. ಡಿಜಿಟಲ್‌ ಮಾಧ್ಯಮ ಲೋಕದಲ್ಲಿ ಪಳಗಿದರೂ, ಕಲಿಯೋದಿದೆ ಅಪಾರ. ಕ್ರೀಡೆ, ರಾಜಕೀಯ, ಸಾಹಿತ್ಯದಲ್ಲಿದೆ ಆಸಕ್ತಿ. ಕ್ರೀಡಾ ಸುದ್ದಿಯೇ ನನ್ನ ಜೀವಾಳ.
ಕ್ರಿಕೆಟ್
ವೈಭವ್ ಸೂರ್ಯವಂಶಿ
ಟೀಮ್ ಇಂಡಿಯಾ
ಇಂಗ್ಲೆಂಡ್ ಕ್ರಿಕೆಟ್

Latest Videos
Recommended Stories
Recommended image1
ಹೆಣ್ಮಕ್ಕಳ ಹಾಟ್‌ ಫೇವರಿಟ್‌ ಕ್ರಿಕೆಟರ್‌ ಆಗಿದ್ದ ಈ ಪ್ಲೇಯರ್‌ ಈಗ ಏನ್ಮಾಡ್ತಿದ್ದಾರೆ?
Recommended image2
Viabhav Sooryavanashi: ವೈಭವ್‌ಗಿಂತ ಜಾಸ್ತಿ‌ ಈ ಸ್ಟಾರ್ ಕ್ರಿಕೆಟರ್‌ಗೆ ಆಯ್ತಾ ಅನ್ಯಾಯ? ಉತ್ತರಿಸ್ತಾರಾ ಗಂಭೀರ್ ?
Recommended image3
ಪೋರ್ಚುಗಲ್‌ ಕ್ರಿಕೆಟ್‌ ಟೀಮ್‌ ಸೇರಿದ RCB ಮಾಜಿ ಆಲ್ರೌಂಡರ್‌, ಹೊಸ ಇನ್ನಿಂಗ್ಸ್‌ಗೆ ರೆಡಿ
Related Stories
Recommended image1
'ಸುಮ್ನೆ ಎಕ್ಸಾಂಗೆ ರೆಡಿಯಾಗು, ಗಲ್ಲಿ ಕ್ರಿಕೆಟ್ ಆಡು': ದೊಡ್ಡ ಕನಸು ಕಾಣುತ್ತಿರುವ ವೈಭವ್ ಸೂರ್ಯವಂಶಿ ಬಗ್ಗೆ ಮಾಜಿ ಕ್ರಿಕೆಟಿಗ ಹೀಗಂದಿದ್ದು ಯಾಕೆ?
Recommended image2
'ನನಗ್ಯಾವ....' ವೈಭವ್ ಸೂರ್ಯವಂಶಿ ಬಗ್ಗೆ ನಾಯಕ ಶ್ರೇಯಸ್ ಅಯ್ಯರ್ ವ್ಯಂಗ್ಯ? ಹೀಗ್ಯಾಕೆ ಅಂದ್ರು ಟೀಂ ಇಂಡಿಯಾ ಕ್ಯಾಪ್ಟನ್?
News
kannada newslatest kannada newskarnataka newsbengaluru newsMysore newsindia news in kannadainternational news in kannada
Entertainment News
Kannada Cinema Newskannada movies reviewsandalwood newskannada tv shows
Sports News
sports news in kannadacricket news in kannadaOther Sports News in Kannada
Business News
Business news in kannadashare market news in kannadabusiness ideas in kannada
Science & Technology
technology news in kannadamobile tech newsscience and tech news
Astrology
rashi bhavishya in kannadadina bhavishyavara bhavishyavastu shastra in kannadakarnataka festivals
Lifestyle
Lifestyle news in kannadafood recipes in kannadahealth tips in kannadakitchen tips in kannada
Education & Career
job news in kannadaPrivate Jobsbank jobs in karnatakaGovernment jobs in karnatakaCentral Govt Jobs in KannadaIT Jobs
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2026 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved